ದಿನ ಭವಿಷ್ಯ: ಜುಲೈ 17: ಶುಭ ಬುಧವಾರ, ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?

ಶುಭ ದಿನ, ಜುಲೈ 17ರ ದ್ವಾದಶ ರಾಶಿಗಳ ರಾಶಿಫಲ....

ಮೇಷ ರಾಶಿ

ಈ ದಿನ ನಿಮಗೆ ಶುಭವಾಗಿರಲಿದೆ, ಈ ದಿನ ಖುಷಿಯಿಂದ ದಿನ ಕಳೆಯುತ್ತೀರಿ, ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ.
ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ಆರೋಗ್ಯವೂ ಉತ್ತಮವಾಗಿರಲಿದೆ.

Dina Bhavishya

ವೃಷಭ ರಾಶಿ

ಈ ದಿನ ನಿಮಗೆ ಶುಭವಾಗಿದೆ, ನಿಮ್ಮ ಕೆಲಸ ಕಾರ್ಯಗಳಲ್ಲಿ ಖಂಡಿತ ಯಶಸ್ಸು ಪಡೆಯುತ್ತೀರಿ, ಆರ್ಥಿಕವಾಗಿ ಉತ್ತಮವಾಗಿದೆ. ವ್ಯಾಪಾರಿಗಳು ಈ ಅವಧಿ ಹೊಸ ವ್ಯವಹಾರಕ್ಕೆ ಕೈ ಹಾಕಬೇಡಿ. ಹೆಚ್ಚಿನ ಶ್ರಮ ಹಾಕಿ ಕೆಲಸ ಮಾಡಬೇಕು, ನೀವು ಕುಟುಂಬದ ಕಡೆಗೆ ಗಮನಹರಿಸಬೇಕು, ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.

ಮಿಥುನ ರಾಶಿ

ನೀವು ಕೆಲಸದ ಕಡೆಗೆ ಗಮನಹರಿಸಬೇಕು, ದೊಡ್ಡ ಹೂಡಿಕೆಯನ್ನು ಮಾಡಲು ಯೋಜಿಸುತ್ತಿದ್ದರೆ ಈ ಅವಧಿ ನಿಮಗೆ ಒಳ್ಳೆಯದಿದೆ, ಈ ದಿನ ಕೆಲಸ ಕಾರ್ಯಗಳು ಸುಲಭವಾಗಿ ಪೂರ್ಣಗೊಳ್ಳಲಿದೆ. ನಿಮ್ಮ ಸಂಗಾತಿಯೊಂದಿಗೆ ಸಂಬಂಧ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವು, ಆಯಾಸದಂಥ ಸಮಸ್ಯೆವಿರಬಹುದು,

ಕರ್ಕ ರಾಶಿ

ಈ ದಿನ ನೀವು ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಚೆನ್ನಾಗಿ ಯೋಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು.
ವ್ಯಾಪಾರಿಗಳು ಜಾಗ್ರತೆವಹಿಸಬೇಕು, ಮನೆಯಲ್ಲಿ ಸದಸ್ಯರ ಜೊತೆಗೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ಸಿಂಹ ರಾಶಿ

ಈ ದಿನ ನಿಮಗೆ ಉತ್ತಮವಾಗಿದೆ, ಆದರೆನೀವು ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನ ಹರಿಸಬೇಕು. ವ್ಯಾಪಾರಿಗಳು ತಮಗೆ ಬಂದ ಸವಾಲುಗಳನ್ನು ಬಗೆಹರಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತೀರಿ. ಈ ದಿನ ಪ್ರತಿಕೂಲ ಸಂದರ್ಭಗಳಲ್ಲಿ, ನಿಮ್ಮ ಪ್ರೀತಿಪಾತ್ರರು ನಿಮ್ಮ ನೈತಿಕತೆಯನ್ನು ಹೆಚ್ಚಿಸುತ್ತಾರೆ. ಪ್ರೇಮಿಗಳು ನಿಮ್ಮ ಸಂಬಂಧದಲ್ಲಿ ಹೊಸತನವನ್ನು ಅನುಭವಿಸುವಿರಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಯಾಸ ಇರಲಿದೆ.

ಕನ್ಯಾ ರಾಶಿ

ನೀವು ಅನಗ್ಯತ ವಿಷಯಗಳ ಕಡೆಗೆ ಗಮನಹರಿಸಿ, ಯಾವುದೇ ಬಾಕಿಯಿರುವ ಕೆಲಸವನ್ನು ಪೂರ್ಣಗೊಳಿಸಬಹುದು, ನೀವು ಆರ್ಥಿಕ ಲಾಭವನ್ನು ಪಡೆಯುತ್ತೀರಿ. ವ್ಯಾಪಾರಿಗಳು ಈ ಅವಧಿಯಲ್ಲಿ ಯಾವುದೇ ರಿಸ್ಕ್‌ ತೆಗೆದುಕೊಳ್ಳದಂತೆ ಸಲಹೆ ನೀಡಲಾಗುವುದು. ಸಂಗಾತಿಯ ಜೊತೆಗೆ ಏನಾದರೂ ಮನಸ್ತಾಪವಿದ್ದರೆ ಮೌನವಾಗಿ ಇರಬೇಡಿ, ಮುಕ್ತವಾಗಿ ಮಾತನಾಡಿದರೆ ಮಾತ್ರ ಸಮಸ್ಯೆ ಬಗೆಹರಿಸಲು ಸಾಧ್ಯ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಅಸಿಡಿಟಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.

ತುಲಾ ರಾಶಿ

ಈ ದಿನ ನಿಮಗೆ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆರ್ಥಿವಾಗಿಯೂ ಉತ್ತಮವಾಗಿದೆ, ಕುಟುಂಬ ಜೀವನದಲ್ಲಿ ಸಂಬಂಧಗಳಲ್ಲಿ ಸಾಮರಸ್ಯ ಇರಲಿದೆ. ನಿಮ್ಮ ಹಾಗೂ ಸಂಗಾತಿಯ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.

ವೃಶ್ಚಿಕ ರಾಶಿ

ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ, ಇನ್ನು ಬರಬೇಕಾಗಿರುವ ಹಣ ಕೈ ಸೇರಲಿದೆ. ಕೆಲಸದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಸಂಬಂಧ ಚೆನ್ನಾಗಿರಲಿದೆ, ವಿವಾಹೇತರ ಸಂಬಂಧಗಳಿಂದ ದೂರವಿರಿ. ಆರೋಗ್ಯಕ್ಕಾಗಿ ಫಿಟ್ನೆಸ್ ಹಾಗೂ ಆಹಾರಕ್ರಮದ ಕಡೆಗೆ ಗಮನಹರಿಸಿ.

ಧನು ರಾಶಿ

ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ಈ ದಿನ ದೂರ ಪ್ರಯಾಣ ತಪ್ಪಿಸಿದರೆ ಒಳ್ಳೆಯದು, ಉದ್ಯೋಗಿಗಳು ನಿಮ್ಮ ಕೆಲಸದಲ್ಲಿ ನಿರ್ಲಕ್ಷ್ಯ ಮಾಡದಂತೆ ಸಲಹೆ ನೀಡಲಾಗುವುದು. ನಿಮ್ಮ ವೈಯಕ್ತಿಕ ವಿಷಯಗಳಲ್ಲಿ ಕುಟುಂಬದ ಸದಸ್ಯರ ಅತಿಯಾದ ಹಸ್ತಕ್ಷೇಪವು ನಿಮಗೆ ಒತ್ತಡವನ್ನು ಉಂಟುಮಾಡಬಹುದು. ಆದರೆ ನಿಮ್ಮ ಹಾಗೂ ಸಂಗಾತಿಯ ಬಾಂಧವ್ಯ ಚೆನ್ನಾಗಿರಲಿದೆ. ಲಿವರ್ ಸಂಬಂಧಿತ ಯಾವುದೇ ಸಮಸ್ಯೆ ಇದ್ದರೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಮಕರ ರಾಶಿ

ನೀವು ನಿಮ್ಮ ವರ್ತನೆ ಕಡೆಗೆ ಗಮನಹರಿಸಬೇಕು, ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡಬೇಡಿ. ಶೀಘ್ರದಲ್ಲೇ ನಿಮ್ಮ ಎಲ್ಲಾ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಆನ್‌ಲೈನ್ ವ್ಯಾಪಾರ ಮಾಡುವವರಿಗೆ ದಿನವು ಅನುಕೂಲಕರವಾಗಿರುತ್ತದೆ. ನೀವು ವೃತ್ತಿಗೆ ಸಂಬಂಧಿಸಿದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಬೆನ್ನು ಅಥವಾ ಸೊಂಟಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು.

ಕುಂಭ ರಾಶಿ

ಈ ದಿನ ಕೋಪವೇ ನಿಮಗೆ ಸಮಸ್ಯೆಗಳನ್ನು ತರುತ್ತದೆ, ಹಾಗಾಗಿ ಕೋಪ ನಿಯಂತ್ರಿಸಿ. ಹಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ, ನಿಮ್ಮ ಆರ್ಥಿಕ ಯೋಜನೆಗಳನ್ನು ಇತರರ ಜೊತೆಗೆ ಹಂಚಿಕೊಳ್ಳಲು ಹೋಗಬೇಡಿ. ಕುಟುಂಬ ಬೆಂಬಲ ನಿಮಗೆ ಸಿಗಲಿದೆ, ವಿವಾಹಿತರ ನಡುವೆ ಕೆಲ ಭಿನ್ನಾಭಿಪ್ರಾಯವಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.

ಮೀನ ರಾಶಿ

ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಂಡರೆ ಜೀವನ ಚೆನ್ನಾಗಿರಲಿದೆ. ಕುಟುಂಬವನ್ನು ನಿರ್ಲಕ್ಷಿಸಬೇಡಿ. ಕೆಲಸದಲ್ಲಿ ಹೆಚ್ಚಿನ ಗಮನಹರಿಸಬೇಕು. ಆರ್ಥಿಕ ಸಮಸ್ಯೆ ಕುಟುಂಬದಲ್ಲಿಯೂ ಭಿನ್ನಾಭಿಪ್ರಾಯ ಉಂಟು ಮಾಡಬಹುದು, ಕೆಲಸದ ಜೊತೆಗೆ ಆರೋಗ್ಯ ಕಡೆಯೂ ಗಮನಹರಿಸಬೇಕು.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope Prediction for 17th July 2024: Dina Bhavishya for All Zodiac Signs

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada:
Story first published: Tuesday, July 16, 2024, 21:10 [IST]
X
Desktop Bottom Promotion