ದಿನ ಭವಿಷ್ಯ: ಜುಲೈ 18: ಗುರುವಾರದ ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?

ಶುಭ ದಿನ, ಜುಲೈ 18ರ ದ್ವಾದಶ ರಾಶಿಗಳ ರಾಶಿಫಲ....

ಮೇಷ ರಾಶಿ

ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರಲಿದೆ. ಯಾರಿಗೂ ಹಣ ಸಾಲ ನೀಡಲು ಹೋಗಬೇಡಿ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಪ್ರೇಮಿಗಳು ಸುಳ್ಳು ಆಶ್ರಯ ಮಾಡದಂತೆ ಸಲಹೆ ನೀಡಲಾಗುವುದು.

Dina Bhavishya

ವೃಷಭ ರಾಶಿ

ವ್ಯಾಪಾರಿಗಳು ಏನಾದರೂ ಹೊಸ ವ್ಯವಹಾರ ಮಾಡುವುದಾದರೆ ಅದರ ದಾಖಲೆಗಳ ಬಗ್ಗೆ ಜಾಗ್ರತೆವಹಿಸಿ, ಉದ್ಯೋಗಿಗಳು ಮೇಲಾಧಿಕಾರಿಗಳ ಸಲಹೆ ನಿರ್ಲಕ್ಷ್ಯ ಮಾಡದಿದ್ದರೆ ಒಳ್ಳೆಯದು. ವೈವಾಹಿಕ ಜೀವನ ಚೆನ್ನಾಗಿರಲಿದೆ, ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಬರಬಹುದು. ಆರೋಗ್ಯ ಚೆನ್ನಾಗಿರಲಿದೆ.

ಮಿಥುನ ರಾಶಿ

ಈ ದಿನ ಕೆಲಸದಲ್ಲಿ ನೀವು ಸವಾಲುಗಳನ್ನು ಎದುರಿಸಬೇಕಾಗಬಹುದು, ಆದರೆ ನೀವು ಧನಾತ್ಮಕವಾಗಿರಬೇಕು. ವ್ಯಾಪಾರಿಗಳು ಕಾನೂನು ಬಾಹಿರ ಕೆಲಸ ಮಾಡದಂತೆ ಸಲಹೆ ನೀಡಲಾಗುವುದು. ನಿಮ್ಮ ಕೆಲಸ ಕಾರ್ಯವು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

ಕರ್ಕ ರಾಶಿ

ಈ ದಿನ ನೀವು ಭಾವನಾತ್ಮಕವಾಗಿ ದುರ್ಬಲರಾಗುತ್ತೀರಿ. ಇದು ಆರೋಗ್ಯದ ಮೇಲೂ ಪರಿಣಾಮ ಬೀರುವುದು, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಉದ್ಯೋಗಿಗಳು ಕೆಲಸದ ಕಡೆಗೆ ಗಮನಹರಿಸಿ. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಕುಟುಂಬ ಸದಸ್ಯರಿಂದ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು. ನೀವು ವೈದ್ಯರನ್ನು ಸಂಪರ್ಕಿಸಬೇಕು.

ಸಿಂಹ ರಾಶಿ

ಈ ದಿನ ಯಾವುದೇ ಪ್ರಮುಖ ಸಮಸ್ಯೆಯು ಪರಿಹರಿಸಲ್ಪಡುತ್ತದೆ. ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ಮಾಡುವಾಗ ಆತುರಪಡಬೇಡಿ, ಆರ್ಥಿಕ ಸಮಸ್ಯೆಗಳು ಬಗೆಹರಿಯಲಿವೆ. ಈ ದಿನ ನಿಮ್ಮ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.

ಕನ್ಯಾ ರಾಶಿ

ಈ ದಿನ ನೀವು ಕೆಲಸದ ಕಡೆಗೆ ಗಮನಹರಿಸಬೇಕು, ವೈಯಕ್ತಿಕ ಸಮಸ್ಯೆ ಕೆಲಸದ ಮೇಲೆ ಪ್ರಭಾವ ಬೀರಲು ಬಿಡಬೇಡಿ. ವ್ಯಾಪಾರಿಗಳಿಗೆ ಈ ದಿನ ಅಷ್ಟೊಂದು ಚುರುಚುರುಕಾಗಿ ಇರುವುದಿಲ್ಲ. ಪ್ರೇಮಿಗಳಿಗೆ ಈ ದಿನ ಏರಿಳಿತಗಳಿರಬಹುದು, ನೀವು ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು. ವಿವಾಹಿತರ ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ನೋಡುವುದಾದರೆ ಅಲರ್ಜಿ, ಸೋಂಕು ಸಮಸ್ಯೆವಿರಬಹುದು.

ತುಲಾ ರಾಶಿ'

ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಈ ದಿನ ತುಂಬಾನೇ ಚೆನ್ನಾಗಿರಲಿದೆ, ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯುವುದರಿಂದ ಮನೆಯ ವಾತಾವರಣ ಚೆನ್ನಾಗಿರಲಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.

ವೃಶ್ಚಿಕ ರಾಶಿ

ಅವಸರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ, ಆದರೆ ಅಗತ್ಯಕ್ಕಿಂತ ಹೆಚ್ಚಾಗಿ ಯಾರನ್ನೂ ನಂಬಬೇಡಿ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಿದರೆ ಕಷ್ಟ.

ಧನು ರಾಶಿ

ಈ ಅವಧಿ ನಿಮಗೆ ಉತ್ತಮವಾಗಿದೆ, ನಿಮ್ಮ ಕೆಲಸ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ, ಆರ್ಥಿಕ ಪರಿಸ್ಥಿತಿಯಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ. ನಿಮ್ಮ ಸಂಗಾತಿ ಜೊತೆ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ, ಆರೋಗ್ಯ ಸಮಸ್ಯೆಗಳಿರಬಹುದು.

ಮಕರ ರಾಶಿ

ಯಾವುದೇ ಹೊಸ ಕೆಲಸ ಪ್ರಾರಂಭಿಸುವ ಮುನ್ನ ಅದರ ಪ್ಲಸ್‌-ಮೈನಸ್‌ ನೋಡುವುದು ಒಳ್ಳೆಯದು. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ನಿಮ್ಮ ಕೆಲಸವನ್ನು ಎಚ್ಚರಿಕೆ ಮಾಡಿ, ತಪ್ಪುಗಳಾದರೆ ನಷ್ಟ ಉಂಟಾಗುವುದು. ವೈವಾಹಿಕ ಜೀವನ ಚೆನ್ನಾಗಿರಲಿದೆ, ಈ ದಿನ ಮನಸ್ಸು ಸ್ವಲ್ಪ ದುರ್ಬಲವಾಗಿರಬಹುದು.

ಕುಂಭ ರಾಶಿ

ಈ ಅವಧಿಯಲ್ಲಿ ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ವಿಯಾಗುತ್ತೀರಿ. ಸಂಬಂಧದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗದಂತೆ ಜಾಗ್ರತೆವಹಿಸಿ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ, ಇನ್ನು ಕುಟುಮಬದ ನೆಮ್ಮದಿಗಾಗಿ ಹೊರಗಡೆಯ ವಿಷಯ ಮನೆಗೆ ತರಬೇಡಿ, ಕೆಲಸದಲ್ಲಿ ಹೆಚ್ಚು ಒತ್ತಡ ಇರಲಿದೆ, ಇದರಿಂದಾಗಿ ಆಯಾದ ಕೂಡ ಇರಲಿದೆ.

ಮೀನ ರಾಶಿ

ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ಸಮಯದಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಆರ್ಥಿಕವಾಗಿ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಪ್ರೇಮಿಗಳಿಗೆ ವಿಶೇಷವಾಗಿರಲಿದೆ, ಕೆಲಸದಲ್ಲಿ ಒತ್ತಡ ಇರಲಿದೆ. ಈ ದಿನ ಸ್ವಲ್ಪ ದಣಿವಿರಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope Prediction for 18th July 2024: Dina Bhavishya for All Zodiac Signs

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Wednesday, July 17, 2024, 22:33 [IST]
X
Desktop Bottom Promotion