Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ದಿನ ಭವಿಷ್ಯ, ಆಗಸ್ಟ್ 19: ರಕ್ಷಾಬಂಧನದ ಶುಭಾಶಯಗಳು, ಈ ದಿನದ ರಾಶಿಫಲ ಹೇಗಿದೆ?
ವೈದಿಕಶಾಸ್ತ್ರದ ಪ್ರಕಾರ ಆಗಸ್ಟ್ 19 ದ್ವಾದಶ ರಾಶಿಗಳಿಗೆ ಹೇಗಿದೆ ಎಂದು ನೋಡೋಣ:
ಮೇಷ ರಾಶಿ
ಶುಭ ಸುದ್ದಿಯಿಂದ ಈ ದಿನ ಪ್ರಾರಂಭವಾಗುವುದು, ಹೀಗಾಗಿ ತುಂಬಾ ಖುಷಿಯಾಗಿ ಇರುತ್ತೀರಿ, ಆರ್ಥಿಕವಾಗಿಯು ಈ ದಿನ ಉತ್ತಮವಾಗಿದೆ, ಇನ್ನು ಈ ಸಮಯದಲ್ಲಿ ಯಾವುದೇ ಹೂಡಿಕೆ ಮಾಡುವ ಮುನ್ನ ಜಾಗ್ರತೆವಹಿಸಿ. ಕೆಲಸದಲ್ಲಿ ಹೆಚ್ಚಿನ ಜಾಗ್ರತೆ ತೋರಿ. ಸಂಗಾತಿಯು ನಿಮ್ಮ ಮೇಲೆ ಕೋಪಗೊಳ್ಳದಂತೆ ನೋಡಿಕೊಳ್ಳಿ, ಅವರಿಗೆ ಹುಸಿ ಭರವಸೆ ನೀಡಬೇಡಿ. ಧ್ಯಾನ, ಯೋಗ ನಿಮ್ಮ ಆರೋಗ್ಯವನ್ನು ಉತ್ತಮವಾಗಿಸುತ್ತದೆ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಭಾವನಾತ್ಮಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ, ಇನ್ನು ಆರ್ಥಿಕ ಪ್ರಯತ್ನಗಳಲ್ಲಿ ಯಶಸ್ಸು ದೊರೆಯಲಿದೆ, ಹೀಗಾಗಿ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಪರಿಹಾರ ಪಡೆಯುತ್ತೀರಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಈ ದಿನ ಲಾಭ ಗಳಿಸಲು ಕಷ್ಟವಾಗಬಹುದು, ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆವಿದ್ದರೆ ಅದನ್ನು ಶಾಂತವಾಗಿ ಬಗೆಹರಿಸಲು ಪ್ರಯತ್ನಿಸಿ, ಅವಸರ ಪಡಬೇಡಿ.
ಮಿಥುನ ರಾಶಿ
ಈ ದಿನ ದೂರ ಪ್ರಯಾಣ ತಪ್ಪಿಸಿದರೆ ಒಳ್ಳೆಯದು, ಇಲ್ಲದಿದ್ದರೆ ಸುಮ್ಮನೆ ವ್ಯರ್ಥ. ಆರ್ಥಿಕವಾಗಿ ಒಳ್ಳೆಯದಿದೆ, ವ್ಯಾಪಾರಿಗಳಿಗೆ ಆರ್ಥಿಕ ಕಾರಣದಿಂದ ಅಪೂರ್ಣವಾಗಿದ್ದ ಕೆಲಸ ಪೂರ್ಣವಾಗಲಿದೆ. ವಿವಾಹಿತರಿಗೆ ಈ ದಿನ ಉತ್ತಮವಾಗಿದೆ, ಅವಾಹಿತರ ಮದುವೆ ಮಾತುಕತೆ ಬರಬಹುದು. ಆರೋಗ್ಯದ ಬಗ್ಗೆ ನೋಡುವುದಾದರೆ ಕೆಲವರಿಗೆ ಕಾಲು ನೋವಿನ ಸಮಸ್ಯೆವಿರಬಹುದು.
ಕರ್ಕ ರಾಶಿ
ನಿಮ್ಮ ಪ್ರಮುಖ ನಿರ್ಧಾರ ಬಹಲ ಅಲೋಚಿಸಿ ತೆಗೆದುಕೊಳ್ಳಬೇಕು, ದುಡುಕಿನ ನಿರ್ಧಾರ ಬೇಡ, ಬೇರೆಯವರ ಅಭಿಪ್ರಾಯವನ್ನು ನಿಮ್ಮ ನಿರ್ಧಾರವಾಗಿ ತೆಗೆದುಕೊಳ್ಳುವುದು ಕೂಡ ಬೇಡ. ವ್ಯಾಪಾರಿಗಳ ವ್ಯಾಪಾರ ವಹಿವಾಟು ಚೆನ್ನಾಗಿರಲಿದೆ. ವೈಯಕ್ತಿಕ ಸಮಸ್ಯೆ ಕೆಲಸದ ಮೇಲೆ ಪ್ರಭಾವ ಬೀರಲು ಬಿಡಬೇಡಿ. ಸಂಗಾತಿಯೊಂದಿಗೆ ಬಾಂಧವ್ಯ ಚೆನ್ನಾಗಿರಲಿದೆ. ತುಂಬಾ ಹೊತ್ತು ಹಸಿವಿನಿಂದ ಇರಬೇಡಿ.
ಸಿಂಹ ರಾಶಿ
ಕೆಲಸದ ಕಾರಣದಿಂದ ಪ್ರಯಾಣ ಮಾಡಬೇಕಾಗಿ ಬರಬಹುದು. ಈ ದಿನ ಆಯಾಸ ಹೆಚ್ಚಿರಲಿದೆ, ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ತುಂಬಾ ಮುಖ್ಯ. ಈ ಸಮಯದಲ್ಲಿ ಯಾರಿಗೂ ಹಣ ಸಾಲ ನೀಡಬೇಡಿ. ವೃತ್ತಿ ಸಂಬಂಧಿತ ಸಮಸ್ಯೆ ಬಗೆಹರಿಯಲಿದೆ. ಸಂಗಾತಿಯೊಂದಿಗೆಎ ಸಮಯ ಕಳೆಯಲು ಸಾಧ್ಯವಾಗುವುದು. ಬಿಪಿ ಸಮಸ್ಯೆ ಇರುವವರು ಹೆಚ್ಚಿನ ಒತ್ತಡ ತೆಗೆದುಕೊಳ್ಳಬೇಡಿ.
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ಆರ್ಥಿಕವಾಗಿ ನಿಮಗೆ ಈ ದಿನ ಉತ್ತಮವಾಗಿದೆ. ಆದಾಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಕೆಲಸದ ಜಾಗದಲ್ಲಿ ಇರುವ ಸಮಸ್ಯೆಯನ್ನು ಬುದ್ಧಿವಂತಿಕೆಯನ್ನು ಬಗೆಹರಿಸಲು ಪ್ರಯತ್ನಿಸಬೇಕು. ತಂದೆಗೆ ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಬೇಡಿ. ಅವಾಹಿತರು ಅಥವಾ ಪ್ರೇಮಿಗಳ ಮದುವೆಗೆ ಕೆಲ ಅಡೆತಡೆ ಇರಬಹುದು.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ದಿನ ಉತ್ತಮವಾಗಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಕೆಲಸಕ್ಕೆ ಸಂಬಂಧಿಸಿದ ಹೊಸ ಯೋಜನೆಗಳನ್ನು ಮಾಡಲು ಸಮಯ ಅನುಕೂಲಕರವಾಗಿದೆ. ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಕೆಲಸದಲ್ಲಿ ತುಂಬಾ ಒತ್ತಡ ತೆಗೆದುಕೊಳ್ಳಬೇಡಿ, ಎಲ್ಲಾ ಕೆಲಸ ಒಟ್ಟಿಗೆ ಮಾಡಲು ಹೋಗಬೇಡಿ. ಪ್ರೇಮ ಪಸ್ತಾಪ ಮಾಡಲು ಈ ದಿನ ಸೂಕ್ತವಲ್ಲ, ವಿವಾಹಿತರಿಗೆ ಸಾಧಾರಣವಾಗಿರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರಲಿದೆ.
ವೃಶ್ಚಿಕ ರಾಶಿ
ಅಗತ್ಯಕ್ಕಿಂತ ಹೆಚ್ಚಾಗಿ ಯಾರನ್ನೂ ನಂಬಬೇಡಿ.ಕೆಲಸದ ಸ್ಥಳದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ನೀವು ಪಡೆಯುತ್ತೀರಿ. ಯಾವುದೇ ಬೆಲೆಬಾಳುವ ವಸ್ತುವನ್ನು ಖರೀದಿಸುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ಸವಾಲಿನ ದಿನ. ಸಮಯವನ್ನು ವ್ಯರ್ಥ ಮಾಡಬೇಡಿ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ನಿಮ್ಮ ಬಜೆಟ್ ಅಸಮತೋಲನವಾಗಬಹುದು. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ನಿಮ್ಮ ಸಂಗಾತಿಯ ನಡವಳಿಕೆಯಲ್ಲಿ ಸ್ವಲ್ಪ ಬದಲಾವಣೆ ಇದೆ ಅನಿಸಬಹುದು, ಅಲ್ಲದೆ ಕೆಲಸದ ಜಾಗದಲ್ಲಿಯೂ ಜಾಗ್ರತೆವಹಿಸಬೇಕು.
ಆರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವು, ಕೆಮ್ಮು, ನೆಗಡಿ ಮುಂತಾದ ಸಮಸ್ಯೆಗಳಿರಬಹುದು
ಮಕರ ರಾಶಿ
ಈ ದಿನ ವೃತ್ತಿಗೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವಾಗ ಕೆಲ ಗೊಂದಲಗಳು ಇರಬಹುದು. ವ್ಯಾಪಾರಿಗಳು ಉತ್ತಮ ಪ್ರಯೋಜನ ಪಡೆಯುತ್ತಾರೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಸಂಗಾತಿಯ ಭಾವನೆಗಳನ್ನು ನಿರ್ಲಕ್ಷ್ಯ ಮಾಡಬೇಡಿ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಕುಂಭ ರಾಶಿ
ಕೆಲಸದಲ್ಲಿ ತುಂಬಾ ನಿರತರಾಗಿರುತ್ತೀರಿ. ಕೆಲಸದ ಮೇಲೆ ಸಂಪೂರ್ಣವಾಗಿ ಗಮನಹರಿಸಿ. ವ್ಯಾಪಾರಿಗಳು ಯಾವುದೇ ರಿಸ್ಕ್ ತೆಗೆದುಕೊಳ್ಳಬೇಡಿ. ನಿಮ್ಮ ಸಂಗಾತಿಯ ಜೊತೆ ಯಾವುದೇ ವಿಷಯ ಬಚ್ಚಿಡಬೇಡಿ, ಅವರ ನಂಬಿಕೆಗಳಿಸಲು ಪ್ರಯತ್ನಿಸಬೇಕು. ಆರೋಗ್ಯ ಚೆನ್ನಾಗಿರಲಿದೆ.
ಮೀನ ರಾಶಿ
ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳಲಿದೆ. ಆಸ್ತಿ ವ್ಯವಹಾರ ಮಾಡಿದ್ದರೆ ದೊಡ್ಡ ಲಾಭ ಸಿಗಲಿದೆ. ನಿಮ್ಮ ಸಾಮರ್ಥ್ಯ ಮತ್ತು ಕಠಿಣ ಪರಿಶ್ರಮದ ಆಧಾರದ ಮೇಲೆ ನೀವು ಉತ್ತಮ ಯಶಸ್ಸನ್ನು ಸಾಧಿಸುವಿರಿ. ನೀವು ಉತ್ತಮ ಪ್ರಗತಿಯನ್ನು ಸಾಧಿಸಬಹುದು. ಮನೆಯ ವಾತಾವರಣ ಅಷ್ಟು ಸರಿಯಿರಲ್ಲ, ನೀವು ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











