Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಜುಲೈ 19: ಆಷಾಢ ಶುಕ್ರವಾರ, 12 ರಾಶಿಗಳಿಗೆ ಹೇಗಿರಲಿದೆ?
ಶುಭ ದಿನ, ಜುಲೈ 19ರ ದ್ವಾದಶ ರಾಶಿಗಳ ರಾಶಿಫಲ....
ಮೇಷ ರಾಶಿ
ಈ ದಿನ ಪ್ರಮುಖ ನಿರ್ದಾರ ತೆಗೆದುಕೊಲ್ಲುವುದಾದರೆ ನೀವು ಬುದ್ಧಿವಂತಿಕೆಯಿಂದ ವರ್ತಿಸಬೇಕು.ವ್ಯಾಪಾರಿಗಳಿಗೆ ಈ ದಿನ ಧನಾತ್ಮಕವಾಗಿದೆ. ಕೆಲ ಪ್ರಮುಖ ಡಾಕ್ಯೂಮೆಂಟ್ ಕಳೆದು ಹೋಗದಂತೆ ಜಾಗ್ರತೆವಹಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ನಿಮ್ಮ ಸಂಬಂಧ ಸುಧಾರಿಸಲಿದೆ, ನಿಮ್ಮ ನಡುವೆ ಎಲ್ಲಾ ಭಿನ್ನಾಭಿಪ್ರಾಯ ದೂರಾಗಲಿದೆ. ಈ ದಿನ ಆರ್ಥಿಕ ಸಮಸ್ಯೆ ಬಗೆಹರಿಯಲಿದೆ , ಹಾಗಾಗಿ ಹಣದ ಕಾರಣದಿಂದ ಅಪೂರ್ಣವಾಗಿದ್ದ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಾರಿಗಳು ಅವಸರದಲ್ಲಿ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಜಾಗ್ರತೆವಹಿಸಿ.
ಮಿಥುನ ರಾಶಿ
ನಿಮ್ಮೆಲ್ಲಾ ಚಿಂತೆ ದೂರಾಗಲಿದೆ, ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗಬಹುದು. ಆರ್ಥಿಕವಾಗಿ ಪ್ರಗತಿ ಕಂಡು ಬರಲಿದೆ.
ವ್ಯಾಪಾರಿಗಳು ಈ ದಿನ ಲಾಭ ಗಳಿಸುತ್ತೀರಿ. ಮನೆಯ ಹಿರಿಯರ ಆರೋಗ್ಯದ ಕಡೆಗೆ ಗಮನಹರಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣಿಗೆ ಸಮಬಂಧಿಸಿದ ಸಮಸ್ಯೆವಿರಬಹುದು.
ಕರ್ಕ ರಾಶಿ
ನಿಮ್ಮ ಸಮಸ್ಯೆಗೆ ತಂದೆ ನೀಡುವ ಉತ್ತರ ಉತ್ತಮ ಪರಿಹಾರ ನೀಡಲಿದೆ, ನಿಮ್ಮ ಹಣಕಾಸಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮಾತ್ರ ಖರ್ಚು ಮಾಡಿ, ವ್ಯಾಪಾರಿಗಳಿಗೆ ಈ ದಿನ ಒತ್ತಡದಿಂದ ಕೂಡಿರಲಿದೆ. ಸಂಗಾತಿ ಜೊತೆ ಸಂತೋಷದಿಂದ ಇರುತ್ತೀರಿ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಕೆಲಸದಲ್ಲಿ ಈ ದಿನ ಶುಭವಾಗಿದೆ. ವ್ಯಾಪಾರಿಗಳಿಗೂ ಉತ್ತಮವಾಗಿದೆ. ಯಾವುದೇ ದಾಖಲೆಗೆ ತರಾತುರಿಯಲ್ಲಿ ಸಹಿ ಮಾಡುವುದನ್ನು ತಪ್ಪಿಸಿ. ವೈವಾಹಿಕ ಸಂಬಂಧ ಇರಲಿದೆ. ಪ್ರೇಮಿಗಳು ಅನಗ್ಯತ ಭಿನ್ನಾಭಿಪ್ರಾಯ ಸುಧಾರಿಸುವುದು ಒಳ್ಳೆಯದು. ಚಿಂತೆ, ಮಾನಸಿಕ ಒತ್ತಡ ಆರೋಗ್ಯದ ಮೇಲು ಪರಿಣಾಮ ಬೀರುವುದು.
ಕನ್ಯಾ ರಾಶಿ
ಬೇಡದ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡಬೇಡಿ. ಈ ದಿನ ಹಣದ ವಿಚಾರದಲ್ಲಿ ಜಾಗರೂಕರಾಗಿರಿ. ನಿಮ್ಮ ವೈಯಕ್ತಿಕ ವಿಷಯಗಳನ್ನು ಕಛೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಬೇಡಿ. ಕೆಲಸದ ಕಡೆಗೆ ಗಮನ ನೀಡಿ. ಮೈಗ್ರೇನ್ ಸಮಸ್ಯೆ ಇದ್ದರೆ ನಿಮ್ಮ ಸಮಸ್ಯೆ ಹೆಚ್ಚಾಗಬಹುದು.
ತುಲಾ ರಾಶಿ
ಕಾಡಿದ ಸಮಸ್ಯೆಗೆ ಬುದ್ಧಿವಂತಿಕೆಯಿಂದ ಪರಿಹಾರವನ್ನು ಕಂಡುಕೊಳ್ಳುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಇತರರ ವಿಷಯಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ, ಇಲ್ಲದಿದ್ದರೆ ಆರ್ಥಿಕ ನಷ್ಟ ಉಂಟಾಗಬಹುದು. ಕಾನೂನು ಬಾಹಿರವಾಗಿ ಏನನ್ನೂ ಮಾಡಬೇಡಿ, ಇಲ್ಲದಿದ್ದರೆ ಆರ್ಥಿಕ ನಷ್ಟ ಉಂಟಾಗುವುದು. ಮನೆಯ ಹಿರಿಯರ ಮಾತುಗಳನ್ನು ನಿರರ್ಲಕ್ಷ್ಯ ಮಾಡಬೇಡಿ. ಆರೋಗ್ಯ ಸಮಸ್ಯೆ ಇದ್ದರೆ ಕೂಡಲೇ ವೈದ್ಯರನ್ನು ಕಾಣಬೇಕು, ನಿರ್ಲಕ್ಷ್ಯ ದುಬಾರಿಯಾಗಬಹುದು.
ವೃಶ್ಚಿಕ ರಾಶಿ
ವೃತ್ತಿ ಬದುಕಿನ ಕಡೆಗೆ ಅಜಾಗರೂಕತೆಯು ಭವಿಷ್ಯದಲ್ಲಿ ನಿಮಗೆ ತೊಂದರೆ ಉಂಟುಮಾಡಬಹುದು. ಕಷ್ಟದ ಸಮಯದಲ್ಲಿ ತಾಳ್ಮೆಯಿಂದಿರಬೇಕು. ನಿಮ್ಮ ಇಚ್ಛಾಶಕ್ತಿಯನ್ನು ಬಲಗೊಳಿಸಿ. ವ್ಯಾಪಾರಿಗಳು ಅಪೂರ್ಣ ಕಾರ್ಯಗಳನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಲು ಪ್ರಯತ್ನಿಸಿ. ಸಂಬಂಧ ಮತ್ತಷ್ಟು ಬಲವಾಗಲಿದೆ.
ಧನು ರಾಶಿ
ಕೋಪವೇ ನಿಮ್ಮ ಪ್ರಮುಖ ಶತ್ರು, ಹಾಗಾಗಿ ಕೋಪ ನಿಯಂತ್ರಿಸಿದರೆ ಒಳ್ಳೆಯದು. ವ್ಯಾಪಾರಿಗಳು ಯಾರಿಗೂ ಸಾಲ ನೀಡಲು ಹೊಗಬೇಡಿ. ಸರ್ಕಾರಿ ಕೆಲಸ ಮಾಡುವವರಿಗೆ ಬಡ್ತಿ ಮತ್ತು ವರ್ಗಾವಣೆಯ ಸಾಧ್ಯತೆಗಳಿವೆ. ಸಂಬಂಧದಲ್ಲಿ ಸಾಮರಸ್ಯ ಇರಲಿದೆ.ಆರೋಗ್ಯವಾಗಿರಲು ಪ್ರತಿದಿನ ಯೋಗ, ಧ್ಯಾನ ಮಾಡಿದರೆ ಒಳ್ಳೆಯದು.
ಮಕರ ರಾಶಿ
ನೀವು ನಿಮ್ಮ ಕೆಲಸವನ್ನು ಯೋಜಿತ ರೀತಿಯಲ್ಲಿ ಮಾಡುವಿರಿ ಮತ್ತು ನಿಮ್ಮ ಗುರಿಯನ್ನು ಸುಲಭವಾಗಿ ಸಾಧಿಸಲು ಸಾಧ್ಯವಾಗುತ್ತದೆ. ಹಣಕಾಸಿನ ವಿಷಯಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ತಲೆನೋವು ಸಮಸ್ಯೆಗಳಿರಬಹುದು.
ಕುಂಭ ರಾಶಿ
ನೀವು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳಲು ತಯಾರಿ ನಡೆಸುತ್ತಿದ್ದರೆ ನಂತರ ನಿಮ್ಮ ಸಂಪೂರ್ಣ ಗಮನವನ್ನು ಅಧ್ಯಯನದ ಮೇಲೆ ಕೇಂದ್ರೀಕರಿಸಿ. ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಬೇಕು. ಮನೆಯಲ್ಲಿ ಕೆಲವು ಶುಭ ಕಾರ್ಯಗಳನ್ನು ಯೋಜಿಸಬಹುದು. ನಿಮ್ಮ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ.
ಹವಾಮಾನದ ಕಾರಣ ಆರೋಗ್ಯ ಸಮಸ್ಯೆಗಳಿರಬಹುದು.
ಮೀನ ರಾಶಿ
ನೀವು ಕೆಲವೊಂದು ವಿಚಾರದಲ್ಲಿ ತಪ್ಪು ಸರಿಗಳ ಬಗ್ಗೆ ಅವಲೋಕನ ಮಾಡುವುದು ಒಳ್ಳೆಯದು. ಹೊಸ ಕೆಲಸವನ್ನು ಪ್ರಾರಂಭಿಸಲು ದಿನವು ಅನುಕೂಲಕರವಾಗಿದೆ.
ಉದ್ಯೋಗಿಗಳು ಯಾವುದೇ ರೀತಿಯಲ್ಲಿ ನಿರ್ಲಕ್ಷ್ಯ ತೋರಬೇಡಿ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಆರೋಗ್ಯದ ಬಗ್ಗೆ ಹೆಳುವುದಾದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications