Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಆಗಸ್ಟ್ 28: ಶುಭ ಬುಧವಾರ, ಈ ದಿನ ಯಾರಿಗೆ ಶುಭ, ಯಾರಿಗಲ್ಲ?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ದಿನದದ ರಾಶಿಫಲ ನೋಡೋಣ:
ಮೇಷ ರಾಶಿ
ಕೆಲಸದ ಸ್ಥಳದಲ್ಲಿ ನೀವು ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗಬಹುದು. ನೀವು ಕೆಲಸದ ಮೇಲೆ ಹೆಚ್ಚು ಗಮನ ಹರಿಸಬೇಕು. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು. ನಿರ್ಲಕ್ಷ್ಯ ಮಾಡಬೇಡಿ . ವೈವಾಹಿಕ ಬದುಕಿನಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ವ್ಯಾಪಾರಿಗಳು ನಷ್ಟ ಉಂಟಾಗದಂತೆ ಜಾಗ್ರತೆವಹಿಸಬೇಕು.

ವೃಷಭ ರಾಶಿ
ಕೆಲಸದ ಒತ್ತಡ ತುಂಬಾ ಇರಲಿದೆ, ನಿಮ್ಮ ದಿನ ಯೋಜನೆಗಳನ್ನು ಮುಂಚಿತವಾಗಿ ಮಾಡಿದರೆ ಒಳ್ಳೆಯದು. ಆರ್ಥಿಕವಾಗಿ ಹೇಳುವುದಾದರೆ ಆತುರದ ನಿರ್ಧಾರಗಳು ನಷ್ಟವನ್ನು ಉಂಟು ಮಾಡಬಹುದು. ಕುಟುಂಬ ಸದದಸ್ಯರ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ಕಣ್ಣಗಳುಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆವಿರರಬಹುದು.
ಮಿಥುನ ರಾಶಿ
ಈ ದಿನ ನಿಮಗೆಎ ಶುಭವಾಗಿದೆ, ಕೆಲಸದಲ್ಲಿ ನೀವು ವಿರೋಧಿಗಳ ಬಗ್ಗೆ ಜಾಗ್ರತೆವಹಿಸಬೇಕು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯವು ಸುಧಾರಿಸುತ್ತದೆ. ಈ ದಿನ ಖರ್ಚು ಹೆಚ್ಚಿರಬಹುದು. ಯಾವುದೇ ಕಾಯಿಲೆ ಇದ್ದರೆ ಜಾಗ್ರತೆವಹಿಸಿ.
ಕರ್ಕ ರಾಶಿ
ವೃತ್ತಿ ಜೀವನದಲ್ಲಿ ದೊಡ್ಡ ಬದಲಾವಣೆ ಆಗಲಿದೆ.ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶ ಸಿಗಲಿದೆ. ವ್ಯಾಪಾರಿಗಳು ಯಾವುದೇ ರೀತಿಯ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಸಮಯವು ಅನುಕೂಲಕರವಾಗಿರುತ್ತದೆ. ಮನೆಯ ವಾತಾವರಣ ಚೆನ್ನಾಗಿರುತ್ತದೆ, ಆರೋಗ್ಯ ಚೆನ್ನಾಗಿರುತ್ತದೆ. ಅದರೆ ವೈವಾಹಿಕ ಬದುಕಿನಲ್ಲಿ ನಂಬಿಕೆ ತುಂಬಾ ಮುಖ್ಯ.
ಸಿಂಹ ರಾಶಿ
ಈ ದಿನ ನಮಗೆ ಅಷ್ಟೊಂದು ಅನುಕೂಲಕರವಲ್ಲ. ಪ್ರತಿಕೂಲ ಸಂದರ್ಭಗಳಲ್ಲಿ ನೀವು ತುಂಬಾ ತಾಳ್ಮೆಯಿಂದಿರಬೇಕು, ಇಲ್ಲದಿದ್ದರೆ ನಿಮ್ಮ ಸಮಸ್ಯೆಗಳು ಹೆಚ್ಚಾಗಬಹುದು. ಆರ್ಥಿಕ ಪರಿಸ್ಥಿತಿ ಹದಗೆಡುವ ಸಾಧ್ಯತೆ ಇದೆ. ಸರ್ಕಾರಿ ಕೆಲಸ ಮಾಡುವವರಿಗೆ ಈ ದಿನವು ತುಂಬಾ ಕಾರ್ಯನಿರತವಾಗಿರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಸ್ನಾಯು ಸಂಬಂಧಿ ಸಮಸ್ಯೆಗಳಿರಬಹುದು.
ಕನ್ಯಾ ರಾಶಿ
ನಿಮ್ಮ ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಉದ್ಯೋಗದ ನಿರೀಕ್ಷೆಯಲ್ಲಿರುವ ಜನರು ಉತ್ತಮ ಅವಕಾಶಗಳನ್ನು ಪಡೆಯಬಹುದು. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ವ್ಯಾಪಾರದ ಕಡೆಗೆ ಗಮನಹರಿಸಿ. ನಿಮ್ಮ ಸಂಗಾತಿಯು ನಿಮಗೆ ಆಶ್ಚರ್ಯವನ್ನು ನೀಡಲು ಬಯಸಿದರೆ, ಅದಕ್ಕೆ ದಿನವು ಅನುಕೂಲಕರವಾಗಿರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ಮಂಗಳಕರವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಬಗೆಹರಿಯುತ್ತವೆ. ಹಣದ ವಿಷಯದಲ್ಲಿ ತುಂಬಾ ಅದೃಷ್ಟದ ದಿನ. ನೀವು ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಹಣಕಾಸಿನ ಸಮಸ್ಯೆಗಳಿಂದಾಗಿ ನಿಮ್ಮ ಪ್ರಮುಖ ಕೆಲಸವು ಅಡಚಣೆಯಾಗಿದ್ದರೆ, ನಿಮ್ಮ ಸಮಸ್ಯೆಯನ್ನು ಪರಿಹರಿಸಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆಹಾರಕ್ರಮದ ಕಡೆಗೆ ಗಮನಹರಿಸಬೇಕು.
ವೃಶ್ಚಿಕ ರಾಶಿ
ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಹಠಾತ್ ಕೆಲಸಕ್ಕೆ ಸಂಬಂಧಿಸಿದ ಪ್ರಯಾಣದ ಸಾಧ್ಯತೆಗಳಿವೆ, ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ದಿನವು ಪ್ರಯೋಜನಕಾರಿಯಾಗಿದೆ. ನಿಮ್ಮ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂಗಾತಿ ಜೊತೆಗೆ ಹೆಚ್ಚಿನ ಗಮನಹರಿಸಬೇಕು, ಆರೋಗ್ಯವು ಉತ್ತಮವಾಗಿರುತ್ತದೆ.
ಧನು ರಾಶಿ
ನಿಮ್ಮ ಯಾವುದೇ ಬಾಕಿ ಉಳಿದಿರುವ ಪ್ರಮುಖ ಕೆಲಸಗಳು ಪೂರ್ಣಗೊಳ್ಳಬಹುದು, ನಿಮ್ಮ ಪ್ರಮುಖ ಚಿಂತೆಗಳು ದೂರವಾಗುತ್ತವೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆಯಿದೆ . ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗುತ್ತದೆ. ಹಣಕಾಸಿನ ವ್ಯವಹಾರವನ್ನು ಚಿಂತನಶೀಲವಾಗಿ ಮಾಡಬೇಕು. ಅಸಡ್ಡೆ ವರ್ತನೆ ನಿಮ್ಮ ಪ್ರೀತಿಪಾತ್ರರನ್ನು ನಿಮ್ಮಿಂದ ದೂರ ಮಾಡಬಹುದು ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಬೇಕು. ಆರೋಗ್ಯ ಸುಧಾರಿಸಬಹುದು.
ಮಕರ ರಾಶಿ
ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ಹಣಕ್ಕೆ ಸಂಬಂಧಿಸಿದ ಚಿಂತೆಗಳು ಆಳವಾಗಿರಬಹುದು. ಹಣಕಾಸಿನ ಅಡೆತಡೆಗಳಿಂದಾಗಿ, ದೈನಂದಿನ ಖರ್ಚುಗಳನ್ನು ಪೂರೈಸುವಲ್ಲಿ ಕೆಲ ಸಸಮಸ್ಯೆಎಗಳನ್ನು ಎದುರಿಸಬಹುದು. ಈ ದಿನ ನೀವು ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಸರಿಯಾದ ಫಲಿತಾಂಶಗಳನ್ನು ಪಡೆಯುತ್ತೀರಿ. ಸಂಬಂಧ ಚೆನ್ನಾಗಿರಲಿದೆ, ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.
ಕುಂಭ ರಾಶಿ
ಈ ದಿನ ಉತ್ತಮವಾಗಿರಲಿದೆ. ಪ್ರೀತಿ ಜೀವನ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಬೇಕು. ಸಹೋದರ ಅಥವಾ ಸಹೋದರಿಯರ ಮದುವೆಯಲ್ಲಿ ಯಾವುದೇ ಅಡಚಣೆ ಉಂಟಾಗಿದ್ದರೆ ಈ ಸಮಸ್ಯೆ ಪರಿಹರಿಸಬಹುದು. ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯವು ಉತ್ತಮವಾಗಿರುತ್ತದೆ.
ಮೀನ ರಾಶಿ
ನಿಮ್ಮ ಜೀವನದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಲಾಭ ಗಳಿಸುವ ಅವಕಾಶವಿರುತ್ತದೆ. ವೈವಾಹಿಕ ಜೀವನದಲ್ಲಿ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ಪರಿಸರದಲ್ಲಿ ಸ್ವಲ್ಪ ಸುಧಾರಣೆ ಕಂಡುಬರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಈ ದಿನ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










