ದಿನ ಭವಿಷ್ಯ: ಜುಲೈ 4 ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?

ಶುಭ ದಿನ, ಗ್ರಹಗತಿಗಳ ಸ್ಥಾನದ ಪ್ರಕಾರ ಗುರುವಾರ ನಿಮ್ಮ ರಾಶಿಫಲ ಹೇಗಿದೆ ನೋಡೋಣ...

ಮೇಷ ರಾಶಿ

ಏನೇ ಬರಲಿ ಧನಾತ್ಮಕವಾಗಿರಿ, ಆವಾಗ ಸವಾಲುಗಳನ್ನು ಸುಲಭವಾಗಿ ಜಯಿಸಲು ಸಾಧ್ಯವಾಗುವುದು. ಇನ್ನು ನೀವು ಬೇರೆ ಕಡೆ ಕೆಲ ಹುಡುಕುತ್ತಿದ್ದರೆ ನಿಮ್ಮ ಪ್ರಯತ್ನ ಚುರುಕುಗೊಳಿಸಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಕುಟುಂಬ ಸದಸ್ಯರಿಂದ ನೀವು ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ವಿವಾಹಿತರು ಪರಸ್ಪರ ಮಾತನಾಡಿ ಸಮಸ್ಯೆ ಬಗೆಹರಿಸಿ. ಆರೋಗ್ಯದ ಬಗ್ಗೆ ಗಮನಹರಿಸಿ.

Dina Bhavishya

ವೃಷಭ ರಾಶಿ

ನೀವು ವೃತ್ತಿ ಜೀವನದಲ್ಲಿನ ಸಮಸ್ಯೆ ಬಗೆಹರಿಸುವಲ್ಲಿ ಯಶಸ್ವಿಯಾಗುತ್ತೀರಿ, ವ್ಯಾಪಾರಿಗಳಿಗೆ ಈ ದಿನ ಸರಾಸರಿಯಾಗಿದೆ. ನೀವು ಪಾರ್ಟನರ್ ಶಿಪ್‌ನಲ್ಲಿ ಉದ್ಯೋಗ ನಡೆಸುತ್ತಿದ್ದರೆ ವ್ಯವಹಾರದ ಕಡೆಗೆ ಗಮನಹರಿಸಿ. ಮಕ್ಕಳಿಗೆ ಸಂಬಂಧಿಸಿದ ಚಿಂತೆ ಕಾಡಬಹುದು. ಪ್ರೇಮಿಗಳಿಗೆ ಈ ದಿನ ಅನುಕೂಲಕರವಲ್ಲ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷಿಸಬೇಡಿ.

ಮಿಥುನ ರಾಶಿ

ನೀವು ಯಾವುದೇ ಕಾನೂನುಬಾಹಿರ ಕೆಲಸ ಮಾಡದಂತೆ ಜಾಗ್ರತೆವಹಿಸಿ. ವ್ಯಾಪಾರಿಗಳು ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ತೊಂದರೆ ಅನುಭವಿಸಬಹುದು.
ಉದ್ಯೋಗಿಗಳಿಗೆ ಕೆಲಸವನ್ನು ಅಪೂರ್ಣವಾಗಿ ಬಿಡದಂತೆ ಸಲಹೆ ನೀಡಲಾಗುವುದು. ವಿವಾಹಿತರು ತಮ್ಮ ಸಂಬಂಧದ ಕಡೆಗೆ ಗಮನಹರಿಸಬೇಕು, ಹೊರಗಿನ ಆಕರ್ಷಣೆಯಿಂದ ದೂರವಿರಿ. ಆರೋಗ್ಯಕ್ಕಾಗಿ ಲಘು ವ್ಯಾಯಾಮ ಮತ್ತು ಯೋಗವನ್ನು ಮಾಡಿದರೆ ಒಳ್ಳೆಯದು.

ಕರ್ಕ ರಾಶಿ

ಈ ದಿನ ನಿಮಗೆ ಶುಭವಾಗಿದೆ, ನೀವು ಬಯಸಿದ ಫಲಿತಾಂಶವನ್ನು ಪಡೆಯಬಹುದು. ಆರ್ಥಿಕವಾಗಿಯೂ ಈ ದಿನ ಅನುಕೂಲಕರವಾಗಿದೆ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಆತುರಪಡಬೇಡಿ. ಉದ್ಯೋಗ ಹುಡುಕುತ್ತಿರುವವರೆಗೆ ಈ ದಿನ ಶುಭವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಸಂಗಾತಿಯ ಮೇಲೆ ಪ್ರೀತಿ ಹೆಚ್ಚುವುದು. ಆರೋಗ್ಯ ಕೂಡ ಚೆನ್ನಾಗಿರಲಿದೆ.

ಸಿಂಹ ರಾಶಿ

ಹಣದ ವಿಷಯದಲ್ಲಿ ಅದೃಷ್ಟದ ದಿನ . ನಿಮ್ಮ ಆದಾಯ ಹೆಚ್ಚಾಗಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವುದಾದರೆ ಅನುಭವಿಗಳ ಮಾರ್ಘದರ್ಶನ ಪಡೆಯಿರಿ.
ವ್ಯಾಪಾರಿಗಳಿಗ ಈ ದಿನ ಪ್ರಾರಂಭದಲ್ಲಿ ಸ್ವಲ್ಪ ನಿಧಾನ ಅನಿಸಿದರೆ ಎರಡನೇ ಭಾಗ ಉತ್ತಮವಾಗಿರಲಿದೆ. ಕುಟುಂಬ ಜೀವನದಲ್ಲಿ ನೆಮ್ಮದಿ ಇರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯಕ್ಕಾಗಿ ಆರೋಗ್ಯಕರ ದಿನಚರಿಯತ್ತ ಗಮನಹರಿಸಿ.

ಕನ್ಯಾ ರಾಶಿ

ಈ ದಿನ ನಿಮಗೆ ಶುಭವಾಗಿದೆ, ಹಣಕಾಸಿನ ವಿಚಾರದಲ್ಲಿ ನಿಷ್ಕಾಳಜಿ ವಹಿಸಬೇಡಿ ಇಲ್ಲದಿದ್ದರೆ ನಷ್ಟ ಉಂಟಾಗಬಹುದು. ವ್ಯಾಪಾರಿಗಳು ಯಾವುದೇ ಅಡ್ಡಪರಿಣಾಮ ಮಾಡದಿರಿ. ನೀವು ಪೋಷಕರಾಗಿದ್ದರೆ ಮಕ್ಕಳಿಗೆ ಯಾವುದೇ ಭರವಸೆಗಳನ್ನು ನೀಡಬೇಡಿ ಇಲ್ಲದಿದ್ದರೆ ನೀವು ಅವರನ್ನು ಅಸಮಾಧಾನಗೊಳಿಸಬಹುದು. ದಂಪತಿ ನಡುವೆ ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನಿದ್ದೆ ಕಡಿಮೆಯಾದರೆ ಕಷ್ಟ.

ತುಲಾ ರಾಶಿ

ಹಳೆಯ ವಿಷಯ ಸಂಬಂಧದಲ್ಲಿ ಸಮಸ್ಯೆಯನ್ನುಂಟು ಮಾಡಬಹುದು. ಕೆಲಸದಲ್ಲಿಯೂ ಒತ್ತಡ ಹೆಚ್ಚಿರಲಿದೆ. ವ್ಯಾಪಾರಿಗಳು ಉತ್ತಮ ಫಲಿತಾಂಶ ಪಡೆಯುತ್ತೀರಿ, ವ್ಯಾಪಾರಿಗಳು ಅತಿಯಾದ ಆತ್ಮವಿಶ್ವಾಸವನ್ನು ತಪ್ಪಿಸಿ. ಮನೆ ವಾತಾವರಣ ಚೆನ್ನಾಗಿರಲಿದೆ, ನೀವು ಕೋಪ ನಿಯಂತ್ರಿಸಿ. ಆರೋಗ್ಯ ದುರ್ಬಲವಾಗಿರುತ್ತದೆ.

ವೃಶ್ಚಿಕ ರಾಶಿ

ಹೆಚ್ಚುತ್ತಿರುವ ಖರ್ಚು ನಿಮ್ಮ ಚಿಂತೆಗೆ ಕಾರಣವಾಗಿರಬಹುದು, ಇನ್ನು ಮನೆಯಲ್ಲಿಯೂ ನಿಮ್ಮ ಹಠ, ಕೋಪ ಸಮಸ್ಯೆ ಹೆಚ್ಚಿಸಬಹುದು, ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಿ. ವ್ಯಾಪಾರಿಗಳಿಗೆ ಈ ದಿನ ಸವಾಲಿನ ದಿನ. ವೈವಾಹಿಕ ಜೀವನದಲ್ಲಿ ಸಮಸ್ಯೆಗಳಿರಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಅನಗತ್ಯ ಕೋಪ ಸಂಗಾತಿಯ ಮನಸ್ಸಿಗೆ ನೆಮ್ಮದಿ ತರಲಿದೆ.
ಆರೋಗ್ಯ ಚೆನ್ನಾಗಿರಲಿದೆ.

ಧನು ರಾಶಿ

ಈ ದಿನ ಪ್ರಮುಖ ಕೆಲಸವು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ, ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಹೊಸ ಕೆಲಸಕ್ಕಾಗಿ ಹುಡುಕುತ್ತಿದ್ದರೆ ಅದಕ್ಕೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಸಿಗಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ವಿಶ್ರಾಂತಿಯತ್ತ ಗಮನಹರಿಸಿ.

ಮಕರ ರಾಶಿ

ಕೆಲಸಕ್ಕೆ ಸಂಬಂಧಿಸಿದ ಒತ್ತಡ ಇರಬಹುದು, ಅತಿಯಾಗಿ ಚಿಂತೆ ಮಾಡದಿರಿ. ವ್ಯಾಪಾರಿಗಳು ತಮ್ಮ ವ್ಯವಹಾರ ಬಲಪಡಿಸಲು ಗಮನಹರಿಸಬೇಕು. ಕೆಲ ದೊಡ್ಡ ಜವಾಬ್ದಾರಿ ನಿಭಾಯಿಸಲು ನೀವು ಪೂರ್ಣ ಶಕ್ತಿ ಮತ್ತು ಆತ್ಮವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಬೇಕಾಗುತ್ತದೆ. ಆರೋಗ್ಯ ಚೆನ್ನಾಗಿರಲಿದೆ.

ಕುಂಭ ರಾಶಿ

ನೀವು ಬೇರೆ ಕಡೆ ವಿಚಲಿತರಾಗದೆ ನಿಮ್ಮ ಗುರಿಯತ್ತ ಗಮನಹರಿಸಬೇಕು, ಹಣಕ್ಕೆ ಸಂಬಂಧಿಸಿದ ಚಿಂತೆಗಳು ದೂರವಾಗುತ್ತವೆ. ಪಾಲುದಾರಿಕೆ ವ್ಯಹಾರ ಮಾಡುತ್ತಿದ್ದರೆ ಭಿನ್ನಾಭಿಪ್ರಾಯ ಆಗದಂತೆ ನೋಡಿಕೊಳ್ಳಿ, ಉದ್ಯೋಗಿಗಳಿಗೆ ಈ ದಿನ ಅನುಕೂಲಕರ. ವಿವಾಹಿತರಿಗೆ , ಪ್ರೇಮಿಗಳಿಗೆ ಶುಭವಾಗಿದೆ.

ಮೀನ ರಾಶಿ

ನೀವು ಕೆಲಸದ ಕಡೆಗೆ ಗಮನಹರಿಸಬೇಕು, ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ನಿಮ್ಮಿಂದ ತಪ್ಪಾಗದಂತೆ ಜಾಗ್ರತೆವಹಿಸಿ. ವ್ಯಾಪಾರಿಗಳು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ, ನೀವು ಸೂಕ್ತ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯೋಗಗಳಿಗೆ ಬಡ್ತಿಗೆ ಅವಕಾಶ ಸಿಗಲಿದೆ. ಪ್ರೀತಿಪಾತ್ರರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ.
ಆರೋಗ್ಯದ ಬಗ್ಗೆ ಹೇಳುವುದಾದರೆ ಈ ದಿನ ಉತ್ತಮವಾಗಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope Prediction for 2024 July 4: Dina Bhavishya for All Zodiac Signs

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada:
X
Desktop Bottom Promotion