Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ, ಆಗಸ್ಟ್ 21: ಈ ದಿನದ ರಾಶಿಫಲ ಹೇಗಿದೆ?
ವೈದಿಕಶಾಸ್ತ್ರದ ಪ್ರಕಾರ ಆಗಸ್ಟ್ 21 ದ್ವಾದಶ ರಾಶಿಗಳಿಗೆ ಹೇಗಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ಆದರೆ ಆರೋಗ್ಯದಲ್ಲಿ ಕುಸಿತ ಕಂಡು ಬರುವುದು. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಕುಟುಂಬ ಸದಸ್ಯರ ಜೊತೆಗೆ ಕೆಲ ಭಿನ್ನಾಭಿಪ್ರಾಯವಿರಬಹುದು.

ವೃಷಭ ರಾಶಿ
ಕೆಲಸಕ್ಕೆ ಸಂಬಂಧಿಸಿದಂತೆ ಮಾಡುವ ಪ್‌ರಯಾಣ ನಿಮಗೆ ಅನುಕೂಲಕರವಾಗಿದೆ. ಆರ್ಥಿಕ ಸಮಸ್ಯೆಗೆ ಪರಿಹಾರ ಸಿಗಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವ ಜನರು ಬಯಸಿದ ಲಾಭವನ್ನು ಪಡೆಯಬಹುದು. ನಿಮ್ಮ ಸಂಗಾತಿಯೊಂದಿಗಿನ ಹೊಂದಾಣಿಕೆಯೂ ಉತ್ತಮವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
ಮಿಥುನ ರಾಶಿ
ನೀವು ಅಗ್ಯತಕ್ಕಿಂತ ಹೆಚ್ಚಾಗಿ ಯಾರನ್ನೂ ನಂಬಬೇಡಿ. ವ್ಯಾಪಾರಿಗಳಿಗೆ ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಚಿಂತನಶೀಲವಾಗಿ ತೆಗೆದುಕೊಳ್ಳಿ, ಇಲ್ಲದಿದ್ದರೆ ನೀವು ಕೆಲವು ಬುದ್ಧಿವಂತ ಹಣಕಾಸಿನ ಯೋಜನೆಯಲ್ಲಿ ಸಿಕ್ಕಿಬೀಳಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು.
ಆರೋಗ್ಯದ ಬಗ್ಗೆ ಅತಿಯಾದ ನಿರ್ಲಕ್ಷ್ಯ ಒಳ್ಳೆಯದಲ್ಲ.
ಕರ್ಕ ರಾಶಿ
ಯಾವುದೋ ಚಿಂತೆ ನಿಮ್ಮನ್ನು ಕಾಡಬಹುದು, ವ್ಯಾಪಾರಿಗಳಿಗೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು. ಕೆಲಸಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಆಹಾರಕ್ರಮದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ವೈವಾಹಿಕ ಜೀವನ ಚೆನ್ನಾಗಿರಲಿದೆ. ಹಣಕ್ಕೆ ಸಂಬಂಧಿಸಿದ ದೊಡ್ಡ ವ್ಯವಹಾರಗಳನ್ನು ಮಾಡಲು ಸಮಯವು ಸೂಕ್ತವಲ್ಲ. ನಷ್ಟ ಉಂಟಾಗಬಹುದು. ಉದ್ಯೋಗವಾಗಲಿ, ವ್ಯಾಪಾರವಾಗಲಿ ನಿಮ್ಮ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ಕನ್ಯಾ ರಾಶಿ
ಈ ದಿನ ನೀವು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ಕೆಲಸ ಕಾರ್ಯದಲ್ಲಿ ಈ ದಿನ ಉತ್ತಮವಾಗಿದೆ.
ಕುಟುಂಬ ಜೀವನದಲ್ಲಿ ಸಂತೋಷ, ಶಾಂತಿ ಇರುತ್ತದೆ, ಆರೋಗ್ಯ ಚೆನ್ನಾಗಿರಲಿದೆ, ವೈವಾಹಿಕ ಜೀವನದಲ್ಲಿನ ಸಮಸ್ಯೆ ಬಗೆಹರಿಯಲಿದೆ.
ತುಲಾ ರಾಶಿ
ಈ ದಿನ ನಿಮಗೆ ಮಂಗಳಕರವಾಗಿದೆ. ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಆರೋಗ್ಯದ ವಿಷಯದಲ್ಲಿ ನೀವು ಹೆಚ್ಚು ಜಾಗರೂಕರಾಗಿರಬೇಕು. ಇನ್ನು ಸಂಗಾತಿ ಜೊತೆ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯಬೇಡ.
ವೃಶ್ಚಿಕ ರಾಶಿ
ಈ ದಿನ ಒತ್ತಡದಿಂದ ಕೂಡಿರಲಿದೆ, ಅನಗತ್ಯ ವಿಷಯಗಳ ನಂತರ ವಿವಾದಗಳಿಂದ ದೂರವಿರಿ ,ವ್ಯಾಪಾರಿಗಳ ಆರ್ಥಿಕ ವ್ಯವಹಾರಗಳು ಪೂರ್ಣಗೊಳ್ಳಲಿವೆ. ಬಿಡುವಿಲ್ಲದ ದಿನಚರಿಯಿಂದಾಗಿ, ನಿಮ್ಮ ಸಂಗಾತಿಗೆ ಸಾಕಷ್ಟು ಸಮಯವನ್ನು ನೀಡಲು ನಿಮಗೆ ಸಾಧ್ಯವಾಗುವುದಿಲ್ಲ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯಬೇಡ.
ಧನು ರಾಶಿ
ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಕೆಲ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಈ ದಿನ
ಯಾವುದೇ ದೊಡ್ಡ ನಷ್ಟವನ್ನು ಸರಿದೂಗಿಸಬಹುದು. ಪ್ರೇಮಿಗಳ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು. ನಿಮ್ಮ ಸಂಬಂಧದಲ್ಲಿ ಮೂರನೇ ವ್ಯಕ್ತಿ ಹಸ್ತಕ್ಷೇಪ ಮಾಡಲು ಬಿಡಬೇಡಿ.
ಮಕರ ರಾಶಿ
ಕೆಲಸ ಕಾರ್ಯಗಳು ತುಂಬಾ ಉತ್ತಮವಾಗಿ ನಡೆಯಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ನೀವು ಕುಟುಂಬದ ಸದಸ್ಯರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದುವ ಸಾಧ್ಯತೆಯಿದೆ. ವವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಕುಂಭ ರಾಶಿ
ವೃತ್ತಿ ಜೀವನದಲ್ಲಿ ದೊಡ್ಡ ಬದಲಾವಣೆ ಕಂಡು ಬರುವುದು. ವೃತ್ತಿ ಬದುಕಿಗೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ.
ನೀವು ಖರ್ಚುಗಳನ್ನು ನಿಯಂತ್ರಿಸಿದರೆ ತುಂಬಾ ಒಳ್ಳೆಯದು.ನಿಮ್ಮ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳಲಿವೆ. ಸಂಬಂಧದಲ್ಲಿ ಭಿನ್ನಾಭಿಪ್ರಾಯ ಮೂಡದಿರಲು ನಂಬಿಕೆ ಮುಖ್ಯ ಎಂದು ಸಲಹೆ ನೀಡಲಾಗುವುದು, ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುವುದು. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿವೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಅಲರ್ಜಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications