Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗುರು ಪೂರ್ಣಿಮೆ ಶುಭಾಶಯಗಳು: ಜುಲೈ 21, ಈ ದಿನ 12 ರಾಶಿಗಳ ರಾಶಿಫಲ ನೋಡೋಣ
ಗುರು ಪೂರ್ಣಿಮಾ ದಿನ, ನಮ್ಮ ಬದುಕಿನ ಗುರುಗಳಿಗೆ ವಂದಿಸುತ್ತಾ ಈ ದಿನದ ರಾಶಿಫಲ ನೋಡೋಣ
ಮೇಷ ರಾಶಿ
ಕೆಲಸ ಕಾರ್ಯಗಳಲ್ಲಿ ಈ ದಿನ ಶುಭವಾಗಲಿದೆ. ವ್ಯಾಪಾರಿಗಲು ಈ ಹಿಂದೆ ಮಾಡಿದ ಹೂಡಿಕೆಯಿಂದ ದುಪ್ಪಟ್ಟು ಲಾಭ ಪಡೆಯಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ, ಸಂಗಾತಿ ಜೊತೆ ಜಗಳವಾಡಬೇಡಿ, ಅವರನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ, ಅರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ವೃತ್ತಿ ಬದುಕಿಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರಪಡಬೇಡಿ. ಈ ದಿನ ಆರ್ಥಿಕವಾಗಿ ಉತ್ತಮವಲ್ಲ, ಖರ್ಚು ಅಧಿಕವಿರಲಿದೆ. ಕೆಲಸದ ಜಾಗದಲ್ಲಿ ನಿಮ್ಮ ಮಾತಿನ ಕಡೆಗೆ ಗಮನಹರಿಸಿ, ಕೋಪವನ್ನು ನಿಯಂತ್ರಿಸಿ. ಪ್ರೇಮಿಗಳಿಗೆ ಈ ದಿನ ವಿಶೇಷವಾಗಿದೆ, ಅರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಮಿಥುನ ರಾಶಿ
ಆರ್ಥಿಕವಾಗಿ ಈ ದಿನ ಅಷ್ಟೊಂದು ಅನುಕೂಲಕರವಲ್ಲ, ನೀವು ಯೋಚಿಸಿದಂತೆ ಯಾವುದೂ ನಡೆಯಲ್ಲ, ಅಂಥ ಸಂದರ್ಭಗಳಲ್ಲಿ ನೀವು ತಾಳ್ಮೆಯಿಂದ ವರ್ತಿಸಬೇಕು. ಎಲ್ಲವನ್ನು ಮರೆತು ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನ ಹರಿಸಿ. ವ್ಯಾಪಾರಿಗಳಿಗೆ ಈ ದಿನ ಸಾಧಾರಣವಾಗಿರಲಿದೆ. ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ನಿಮ್ಮ ಕಾರ್ಯಕ್ಷಮತೆಯನ್ನು ನೀವು ಸುಧಾರಿಸಬೇಕಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಅರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಕರ್ಕ ರಾಶಿ
ನೀವೇನಾದರೂ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಉದ್ಯೋಗಿಗಳು ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಎದುರಿಸಬೇಕಾಗುವುದು. ನಿಮ್ಮ ಸಂಗಾತಿಯ ಮನಸ್ಸು ನೋಯಿಸಬೇಡಿ. ಆರೋಗ್ಯದ ವಿಷ್ಯದಲ್ಲಿ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ನೀವು ಒತ್ತಡವನ್ನು ಅನುಭವಿಸುವಿರಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ನೀವು ದೊಡ್ಡ ಆರ್ಥಿಕ ಪ್ರಯೋಜನಗಳನ್ನು ಶೀಘ್ರದಲ್ಲಿಯೇ ಪಡೆಯಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ, ತುಂಬಾನೇ ನಿದ್ದೆಗೆಡಬೇಡಿ.
ಕನ್ಯಾ ರಾಶಿ
ಆಸ್ತಿಗೆ ಸಂಬಂಧಿಸಿದ ಯಾವುದೇ ವಿವಾದಗಳು ನಡೆಯುತ್ತಿದ್ದರೆ ಅದು ಬಗೆಹರಿಯುವ ಸಾಧ್ಯತೆಯಿದೆ. ವ್ಯಾಪಾರಿಗಳು ಲಾಭಕ್ಕಾಗಿ ಶಾರ್ಟ್‌ಕಟ್ ಅನುಸರಿಸದಂತೆ ಸಲಹೆ ನೀಡಲಾಗುವುದು. ಆರೋಗ್ಯ ಚೆನ್ನಾಗಿರಲಿದದೆ, ಅದರೆ ಅತಿಯಾದ ಓಡಾಟ ಆಯಾಸ ಉಂಟು ಮಾಡುವುದು.
ತುಲಾ ರಾಶಿ
ದೈನಂದಿನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ನಿಮ್ಮ ಸಂಗಾತಿಯಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡಬೇಕಾಗುತ್ತದೆ. ಕೆಲಸದಲ್ಲಿ ಒತ್ತಡ ಇರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಮೈಗ್ರೇನ್ ಮಸಸ್ಯೆ ಇರುವವರು ಜಾಗ್ರತೆವಹಿಸಿ.
ವೃಶ್ಚಿಕ ರಾಶಿ
ಸಂಬಂಧದಲ್ಲಿ ತಪ್ಪು ಕಲ್ಪನೆ ಉಂಟಾಗಿದ್ದರೆ ಅದನ್ನು ಸರಿಪಡಿಸಲು ಪ್ರಯತ್ನಿಸಬೇಕು. ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಮುಖ ದಾಖಲೆಗಳನ್ನು ತರಾತುರಿಯಲ್ಲಿ ಮಾಡಬೇಡಿ. ನಿಮ್ಮ ಸಂಬಂಧಗಳಿಗೆ ಪ್ರಾಮುಖ್ಯತೆ ನೀಡಿ, ಅವರ ಜೊತೆಗಿನ ಬಾಂಧವ್ಯ ಗಟ್ಟಿಯಾಗಿಸಲು ಪ್ರಯತ್ನಿಸಿ. ಅಸ್ತಮಾ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಆರ್ಥಿಕವಾಗಿ ಉತ್ತಮವಾಗಿದೆ, ವ್ಯಾಪಾರಿಗಳು ಧನ ಲಾಭ ಪಡೆಯುತ್ತೀರಿ. ಕೆಲಸದ ಜಾಗದಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ. ಅನಗತ್ಯ ವಿಷಯಗಳಿಗೆ ನಿಮ್ಮ ಸಂಗಾತಿಯೊಂದಿಗೆ ವಾದ ಮಾಡಲು ಹೋಗಬೇಡಿ.
ಮಕರ ರಾಶಿ
ಪರಿಸ್ಥಿತಿಗೆ ಅನುಗುಣವಾಗಿ ನೀವು ನಿಮ್ಮೊಳಗೆ ಬದಲಾವಣೆಗಳನ್ನು ತರಬೇಕಾಗಿದೆ. ಯಾವುದೇ ಬೆಲೆಬಾಳುವ ವಸ್ತುವನ್ನು ಖರೀದಿಸುವ ಮೊದಲು, ನಿಮ್ಮ ಆರ್ಥಿಕ ಸ್ಥಿತಿಯನ್ನು ನೆನಪಿನಲ್ಲಿಡಿ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಮನೆಯ ವಾತಾವರಣವು ಶಾಂತಿಯುತವಾಗಿರಲಿದದೆ, ಆದರೆ ಸಂಗಾತಿ ಜೊತೆಗೆ ಅನಗ್ಯತ ವಾದ ಮಾಡಲು ಹೋಗಬೇಡಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಅತಿಯಾದ ಚಿಂತೆಯಿಂದ ಹೊರಬನ್ನಿ.
ಕುಂಭ ರಾಶಿ
ನೀವು ವು ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಸರಿಯಾದ ಫಲಿತಾಂಶವನ್ನು ಪಡೆಯಬಹುದು. ವ್ಯಾಪಾರಿಗಳು ಹಣದ ವಿಷಯಗಳಲ್ಲಿ ಯಾವುದೇ ರೀತಿಯ ರಿಸ್ಕ್ ತೆಗೆದುಕೊಳ್ಳಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ದಾಂಪತ್ಯ ಜೀವನದಲ್ಲಿ ಸಂಗಾತಿಯ ಕಡೆಗೆ ಹೆಚ್ಚಿನ ಗಮನಹರಿಸುತ್ತೀರಿ, ಇದರಿಂದ ಬಾಂಧವ್ಯ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.
ಮೀನ ರಾಶಿ
ಅತಿಯಾದ ಆತ್ಮವಿಶ್ವಾಸ ಮತ್ತು ಅಹಂಕಾರದಿಂದ ವರ್ತನೆಯಿಂದ ನಿಮ್ಮ ಆಪ್ತರ ಮನಸ್ಸು ನೋಯಿಸಬೇಡಿ. ಕೌಟುಂಬಿಕ ಸಮಸ್ಯೆಗಳು ಬಗೆಹರಿದ ನಂತರ ಮನೆಯ ವಾತಾವರಣ ಸುಧಾರಿಸುತ್ತದೆ. ಕುಟುಂಬ ಜೀವನ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈ ಕೈ ನೋವಿನ ಸಮಸ್ಯೆವಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications