Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ: ಆಗಸ್ಟ್ 22, ಈ ದಿನದ 12 ರಾಶಿಗಳ ರಾಶಿಫಲ
ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 22) ಭವಿಷ್ಯ ನೋಡೋಣ:
ಮೇಷ ರಾಶಿ
ಕೆಲ ಪ್ರತಿಕೂಲ ಸಂದರ್ಭದಲ್ಲಿ ನೀವು ತಾಳ್ಮೆಯಿಂದಿರಬೇಕು. ಹಣಕಾಸಿನ ವಿಷಯಗಳಲ್ಲಿ ಆತುರಪಡಬೇಡಿ, ಇಲ್ಲದಿದ್ದರೆ ಲಾಭದ ಬದಲು ನಷ್ಟವಾಗಬಹುದು. ಕೆಲಸವನ್ನು ಸಮಯಕ್ಕೆ ಪೂ್ಣಗೊಳಿಸಲು ಪ್ರಯತ್ನಿಸಿ. ವೈವಾಹಿಕ ಜೀವನ, ಕುಟುಂಬ ಜೀವನ ಚೆನ್ನಾಗಿರಲಿದೆ. ತುಂಬಾ ಸಮಯದಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಅನುಭವಿಸುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಯಾವುದೇ ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗಬಹುದು. ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಸಂಬಂಧದ ಬಗ್ಗೆ ಹೇಳುವುದಾದರೆ ನೀವು ಕೋಪವನ್ನು ನಿಯಂತ್ರಿಸಿದರೆ ಒಳ್ಳೆಯದು. ಆರೋಗ್ಯ ಉತ್ತಮವಾಗಿರುತ್ತದೆ.
ಮಿಥುನ ರಾಶಿ
ಯಾವುದೇ ಆಸ್ತಿ ಸಂಬಂಧಿತ ವಿಷಯಗಳು ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ, ವಕೀಲರಿಂದ ಕಾನೂನು ಸಲಹೆ ಪಡೆಯಲು ದಿನವು ಅನುಕೂಲಕರವಾಗಿರುತ್ತದೆ. ನಿಮ್ಮ ಕೆಲಸದ ಬಗ್ಗೆ ಹೆಚ್ಚು ಮಾತನಾಡಬೇಡಿ. ಸಹೋದ್ಯೋಗಿಗಳನ್ನು ಅತಿಯಾಗಿ ನಂಬುವುದನ್ನು ತಪ್ಪಿಸಿ. ಪ್ರೇಮಿಗಳಿಗೆ, ವಿವಾಹಿತರಿಗೆ ಈ ದಿನ ವಿಶೇಷವಾಗಿರಲಿದೆ. ವಿಶ್ರಾಂತಿ ಕಡೆಗೆ ಗಮನಹರಿಸಿ.
ಕರ್ಕ ರಾಶಿ
ನೀವು ನಿಮ್ಮ ಮಾತಿನ ಮೇಲೆ ಗಮನಹರಿಸಬೇಕು. ಯೋಚಿಸದೆ ಮಾತನಾಡುವ ನಿಮ್ಮ ಅಭ್ಯಾಸವು ಇಂದು ನಿಮ್ಮನ್ನು ಮುಜುಗರಕ್ಕೀಡುಮಾಡಬಹುದು. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯವು ಹೆಚ್ಚು ಗಂಭೀರವಾಗಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ, ನಿಮ್ಮ ಪಾಲುದಾರರೊಂದಿಗೆ ನಡೆಯುತ್ತಿರುವ ವಿವಾದವನ್ನು ಪರಿಹರಿಸಲು ಪ್ರಯತ್ನಿಸಿ, ಇಲ್ಲದಿದ್ದರೆ ಅದು ನಿಮ್ಮ ಕೆಲಸದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ವೈವಾಹಿಕ ಬದುಕಿನಲ್ಲಿ ಕೆಲ ಭಿನ್ನಾಭಿಪ್ರಾಯ ಬರಬಹುದು, ಆರೋಗ್ಯದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಈ ದಿನ ಕೆಲಸದ ಒತ್ತಡ ಹೆಚ್ಚಿರಲಿದೆ. ನಿಮ್ಮ ದಿನದ ಯೋಜನೆಗಳನ್ನು ನೀವು ಮುಂಚಿತವಾಗಿ ಮಾಡಿದರೆ ಅದು ಉತ್ತಮವಾಗಿರುತ್ತದೆ. ಈ ದಿನ ಆಯಾಸ ಹೆಚ್ಚಿರಲಿದೆ. ಕೆಲಸವನ್ನು ಚೆನ್ನಾಗಿ ಮಾಡಿ ಮುಗಿಸಲು ಸಾಧ್ಯವಾಗುವುದು. ಆರೋಗ್ಯದ ಕಡೆಗೆ ಗಮನಹರಿಸಬೇಕು, ದಿನ ಬೆಳಗ್ಗೆ ಸ್ವಲ್ಪ ನಡೆಯುವುದು ಒಳ್ಳೆಯದು.
ಕನ್ಯಾ ರಾಶಿ
ಈ ದಿನ ತುಂಬಾ ಶುಭವಾಗಿರರಲಿ. ಈ ದಿನ ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಕಾಣುತ್ತೀರಿ. ಪಾಲುದಾರಿಕೆಯ ವ್ಯವಹಾರದಲ್ಲಿ ಲಾಭ ಗಳಿಸುತ್ತೀರಿ. ಇಂದು
ನೀವು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಂಡರೆ, ನೀವು ಅವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಸಂಗಾತಿಯೊಂದಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಬೆನ್ನು ಅಥವಾ ಸೊಂಟ ನೋವಿನ ಸಮಸ್ಯೆವಿರಬಹುದು.
ತುಲಾ ರಾಶಿ
ನಿಮಗೆ ಯಾವುದೇ ವೃತ್ತಿ ಸಂಬಂಧಿತ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಅದಕ್ಕೆ ಪರಿಹಾರ ಪಡೆಯುತ್ತೀರಿ. ಈ ದಿನ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ಈ ದಿನ ಖರ್ಚು ಅಧಿಕವಿರಲಿದೆ, ಆದರೆ ತುಂಬಾ ಖರ್ಚು ಮಾಡಲು ಹೋಗದಿರಿ. ಸಂಬಂಧಗಳಲ್ಲಿ ಅಂತರ ಹೆಚ್ಚಾಗಬಹುದು. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಒಳ್ಳೆಯದು.
ವೃಶ್ಚಿಕ ರಾಶಿ
ಈ ದಿನ ಹಣದ ಬಗ್ಗೆ ಜಾಗ್ರತೆವಹಿಸಬೇಕು, ಸಾಲ ಪಡೆಯುವುದಾದರೆ ಅಗ್ಯತಕ್ಕಿಂತ ಹೆಚ್ಚು ಸಾಲ ಪಡೆಯಬೇಡಿ. ಇನ್ನು ಕೆಲಸದಲ್ಲಿ ತುಂಬಾ ಒತ್ತಡ ತೆಗೆದುಕೊಳ್ಳಬೇಡಿ. ಆರೋಗ್ಯದ ಕಡೆಗೆ ಗಮನಹರಿಸಬೇಕು. ವ್ಯಾಪಾರಿಗಳು ನಿಮ್ಮ ವ್ಯಾಪಾರ ಯೋಜನೆಗಳನ್ನು ರಹಸ್ಯವಾಗಿಡಿ. ಹಣಕ್ಕೆ ಸಂಬಂಧಿಸಿದ ದೊಡ್ಡ ವ್ಯವಹಾರಗಳನ್ನು ಮಾಡಲು ದಿನವು ಸೂಕ್ತವಲ್ಲ. ಅಲ್ಲದೆ ಹಣಕ್ಕೆ ಸಂಬಂಧಿಸಿದಂತೆ ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯ ದುರ್ಬಲವಾಗಿರುತ್ತದೆ.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಧನ ಲಾಭವಾಗಲಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಮಾಡಬಹುದು, ಕುಟುಂಬ ಜೀವನದಲ್ಲಿ
ಹೊರಗಿನವರ ಹಸ್ತಕ್ಷೇಪದಿಂದ ನಿಮ್ಮ ಮನೆಯ ಶಾಂತಿ ಭಂಗವಾಗಬಹುದು ಆ ರೀತಿ ಆಗದಂತೆ ನೋಡಿಕೊಳ್ಳಿ, ಆರೋಗ್ಯ ಸಮಸ್ಯೆ ಇದ್ದರೆ ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ.
ಮಕರ ರಾಶಿ
ಮನೆಯಲ್ಲಿ ಯಾವುದೇ ಸಮಸ್ಯೆ ಇದ್ದರೆ, ಅದನ್ನು ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೋರ್ಣಗೊಳ್ಳಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಪ್ರತಿದಿನ ಯೋಗ ಮತ್ತು ಧ್ಯಾನವನ್ನು ಸೇರಿಸಿ.
ಕುಂಭ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ. ವೃತ್ತಿಪರ ಜೀವನದಲ್ಲಿ ಧನಾತ್ಮಕ ಬದಲಾವಣೆಗಳು ಕಂಡು ಬರುವುದು. ವ್ಯಾಪಾರ ಮಾಡುವ ಜನರು ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಕುಟುಂಬದ ಇತರ ಸದಸ್ಯರ ಜೊತೆಗೆ ಕೋಪದಿಂದ ನಡೆದುಕೊಳ್ಳಬೇಡಿ. ಆರೋಗ್ಯ ಚೆನ್ನಾಗಿರಲಿದೆ.
ಮೀನ ರಾಶಿ
ಈ ದಿನ ಆರ್ಥಿಕ ಪರಿಸ್ಥಿತಿ ಹದಗೆಡುವ ಸಾಧ್ಯತೆ ಇದೆ. ಹಣಕ್ಕೆ ಸಂಬಂಧಿಸಿದ ಕೆಲಸಗಳನ್ನು ತರಾತುರಿಯಲ್ಲಿ ಮಾಡಬೇಡಿ.ನೀವು ಇತ್ತೀಚೆಗೆ ಯಾವುದೇ ಹೂಡಿಕೆ ಮಾಡಿದ್ದರೆ ಅದರ ಲಾಭ ಪಡೆಯುತ್ತೀರಿ. ಉದ್ಯೋಗಿಗಳ ಕೆಲಸ ಕಾರ್ಯ ಪೂರ್ಣಗೊಳ್ಳಲಿದೆ. ಈ ದಿನ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










