Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಆಗಸ್ಟ್ 23, ಈ ದಿನದ 12 ರಾಶಿಗಳ ರಾಶಿಫಲ
ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 23) ಭವಿಷ್ಯ ನೋಡೋಣ:
ಮೇಷ ರಾಶಿ
ಕೆಲಸದಲ್ಲಿ ಕೆಲ ಸಮಸ್ಯೆ ಇರಬಹುದು, ಆದರೆ ಚಿಂತೆ ಮಾಡಬೇಡಿ, ಶೀಘ್ರವೇ ಪರಿಹಾರವಾಗಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ವ್ಯಾಪಾರಿಗಳು ಹಣದ ವಿಚಾರದಲ್ಲಿ ಜಾಗ್ರತೆವಹಿಸಬೇಕು, ಅವಸರದಿಂದ ಹೂಡಿಕೆ ಮಾಡಬೇಡಿ. ವಹಿಸಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಆರೋಗ್ಯ ಸಮಸ್ಯೆಗಳಿರಬಹುದು.

ವೃಷಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆಯು ಉತ್ತಮವಾಗಿರುತ್ತದೆ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಅಜಾಗರೂಕತೆ ಬೇಡ. ಇತರರ ಸಲಹೆಯ ಮೇರೆಗೆ ನಿಮ್ಮ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕ ಪ್ರಯತ್ನಗಳು ಫಲ ನೀಡಲಿದೆ, ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಸಂಗಾತಿಯೊಂದಿಗೆಎ ಖುಷಿಯಾಗಿರುತ್ತೀರಿ, ಈ ದಿನ ಆರೋಗ್ಯ ಕೂಡ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ಖುಷಿಯಾಗಿರುತ್ತೀರಿ, ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಕೆಲಸಕ್ಕಾಗಿ ಕೈಗೊಂಡ ಪ್ರಯಾಣ ಯಶಸ್ವಿಯಾಗಲಿದೆ. ಉದ್ಯೋಗಿಗಳ ಕೆಲಸ ಕಾರ್ಯವು ಉತ್ತಮವಾಗಿ ಪೂರ್ಣಗೊಳ್ಳಲಿದೆ. ಸಂಗಾತಿ ಭಿನ್ನಾಭಿಪ್ರಾಯ ಹೆಚ್ಚಾಗದಂತೆ ನೋಡಿಕೊಳ್ಳಿ ಆರೋಗ್ಯದ ಬಗ್ಗೆ ಹೇಳುವುದಾದರೆ ನೆಗಡಿ, ಕೆಮ್ಮು ಮೊದಲಾದ ಸಮಸ್ಯೆಗಳು ಬರಬಹುದು.
ಸಿಂಹ ರಾಶಿ
ಕೆಲಸದಲ್ಲಿ ಅಧಿಕ ಒತ್ತಡ ತೆಗೆದುಕೊಳ್ಳಬೇಡಿ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ವ್ಯಾಪಾರಿಗಳು ಗ್ರಾಹಕರ ಜೊತೆ ಜಗಳವಾಡಬೇಡಿ.
ಕೆಲಸದ ವಿಷಯದಲ್ಲಿ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ಮನೆಯಲ್ಲಿ ಶಾಂತಿ ಮತ್ತು ಸಂತೋಷವನ್ನು ಕಾಪಾಡಿಕೊಳ್ಳಲು ಚಿಕ್ಕ ಪುಟ್ಟ ವಿಷಯವನ್ನು ದೊಡ್ಡದು ಮಾಡಬೇಡಿ.
ಕನ್ಯಾ ರಾಶಿ
ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ, ಅದು ಇತ್ಯರ್ಥವಾಗುವ ಸಾಧ್ಯತೆಯಿದೆ. ವೃತ್ತಿ ಬದುಕಿನಲ್ಲಿ ಕೆಲ ಒತ್ತಡಗಳಿರಬಹುದು, ಇನ್ನು ಈ ದಿನ ಆರೋಗ್ಯ ಸಂಬಂಧಿತ ಸಮಸ್ಯೆ ಎದುರಿಸುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಪ್ರೇಮಿಗಳು ತಮ್ಮ ಪ್ರೀತಿ ಬಗ್ಗೆ ಮನೆಯವರಿಗೆ ತಿಳಿಸಲು ಈ ದಿನ ಉತ್ತಮವಾಗಿದೆ.
ತುಲಾ ರಾಶಿ
ಕೆಲಸ-ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಹಣಕ್ಕೆ ಸಂಬಂಧಿಸಿದ ಯಾವುದೇ ವಹಿವಾಟು ಬಾಕಿ ಉಳಿದಿದ್ದರೆ ಅದು ಪೂರ್ಣವಾಗಲಿದೆ.
ಕಾನೂನು ವಿಷಯಗಳಲ್ಲಿ ನಿರ್ಲಕ್ಷ್ಯ ಬೇಡ, ದೊಡ್ಡ ಸಮಸ್ಯೆಯಾಗಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಲ್ಲ.ಹಣಕ್ಕೆ ಸಂಬಂಧಿಸಿದ ಚಿಂತೆಗಳು ಆಳವಾಗಿರಬಹುದು. ಕುಟುಂಬದಲ್ಲಿಯೂ ಈ ಅವಧಿ ಉತ್ತಮವಾಗಿದೆ.
ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಿವಿ ನೋವಿನ ಸಮಸ್ಯೆವಿರಬಹುದು.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುತ್ತೀರಿ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುವ ಸಾಧ್ಯತೆಯಿದೆ. ನಿಮ್ಮ ಸಂಗಾತಿಯೊಂದಿಗೆ ನಡೆಯುತ್ತಿರುವ ಭಿನ್ನಾಭಿಪ್ರಾಯ ಕೊನೆಯಾಗುವುದು. ಆರೋಗ್ಯ ಚೆನ್ನಾಗಿರಲಿದೆ.
ಮಕರ ರಾಶಿ
ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ನಿಮ್ಮ ಸಮಸ್ಯೆ ಬಗೆಹರಿಯಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ.
ಕೆಲಸದ ಸ್ಥಳದಲ್ಲಿ ಹೊಸ ಅವಕಾಶಗಳು ಸಿಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ವಿಶ್ರಾಂತಿಗೆ ಹೆಚ್ಚು ಗಮನ ಕೊಡಿ.
ಕುಂಭ ರಾಶಿ
ಆಸ್ತಿಗೆ ಸಂಬಂಧಿಸಿದ ಯಾವುದೇ ವಿವಾದ ಮತ್ತು ಜಗಳಗಳನ್ನು ತಪ್ಪಿಸಬೇಕು. ನೀವು ಇಂದೇ ಪೂರ್ಣಗೊಳಿಸಲು ಪ್ರಯತ್ನಿಸಬೇಕಾದ ಕೆಲವು ಪ್ರಮುಖ ಕಾರ್ಯಗಳಿವೆ. ನಿರ್ಲಕ್ಷ್ಯವು ದುಬಾರಿಯಾಗಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಕಾರ್ಯಕ್ಷಮತೆಯಲ್ಲಿ ದೊಡ್ಡ ಸುಧಾರಣೆ ಇರುತ್ತದೆ. ನಿಮ್ಮ ಕುಟುಂಬ ಸದಸ್ಯರೊಂದಿಗೆ ನೀವು ವಿವಾದವನ್ನು ಹೊಂದಿದ್ದರೆ ತವಾಗಿ ಕುಳಿತು ಸಮಸ್ಯೆ ಬಗೆಹರಿಸಿ. ಸಂಗಾತಿಯ ವರ್ತನೆ ನಿಮ್ಮ ಮನಸ್ಸಿಗೆ ಬೇಸರ ತರಬಹುದು. ಆರೋಗ್ಯದ ಬಗ್ಗೆ ವಿಶೇಷ ಕಾಳಜಿವಹಿಸಿ.
ಮೀನ ರಾಶಿ
ವಿದ್ಯಾರ್ಥಿಗಳು ತಮ್ಮ ಅಧ್ಯಯನದತ್ತ ಗಮನ ಹರಿಸಬೇಕು. ಈ ದಿನ ನೀವು ಕೆಲಸದಲ್ಲಿ ತುಂಬಾ ನಿರತರಾಗಿರುತ್ತೀರಿ. ಇದ್ದಕ್ಕಿದ್ದಂತೆ ನೀವು ಕೆಲಸದ ನಿಮಿತ್ತ ಪ್ರಯಾಣಿಸಬೇಕಾಗುವುದು. ಸಣ್ಣ ವ್ಯಾಪಾರಸ್ಥರು ಬಯಸಿದ ಲಾಭವನ್ನು ಪಡೆಯುತ್ತಾರೆ. ವೃತ್ತಿಯಲ್ಲಿ ಬದಲಾವಣೆ ಕಂಡುಬರಲಿದೆ. ದಾಂಪತ್ಯದಲ್ಲಿ ಸಮಸ್ಯೆ ಇದ್ದರೆ ಸಮಸ್ಯೆ ಬಗೆಹರಿಯಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications