Latest Updates
-
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ!
ದಿನ ಭವಿಷ್ಯ: ಜುಲೈ 23, ಈ ದಿನದ 12 ರಾಶಿಗಳ ರಾಶಿಫಲ
ಜ್ಯೋತಿಷ್ಯ ಪ್ರಕಾರ ಈ ದಿನದ (ಜುಲೈ 23) ಭವಿಷ್ಯ ನೋಡೋಣ:
ಮೇಷ ರಾಶಿ
ಆರ್ಥಿಕ ನಿರ್ಧಾರದಲ್ಲಿ ಅತುರ ಪಡಬೇಡಿ. ಈ ದಿನ ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಬಯಸಿದ ಫಲ ಸಿಗುವುದು ಕಷ್ಟವಾಗಬಹುದು, ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯವೂ ಸರಾಸರಿಯಾಗಿರಲಿದೆ.

ವೃಷಭ ರಾಶಿ
ಹೆಚ್ಚಿನ ಕೆಲಸದ ಒತ್ತಡ ತೆಗೆದುಕೊಳ್ಳಬೇಡಿ, ಎಲ್ಲಾ ಕೆಲಸ ಒಟ್ಟಿಗೆ ಮಾಡಿ ಮುಗಿಸುವ ಪ್ರಯತ್ನವೂ ಬೇಡ. ಶಾಂತ ಮನಸ್ಸಿನಿಂದ ನಿಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ವ್ಯಾಪಾರಿಗಳಿಗೆ ಈ ದಿನ ನಿರೀಕ್ಷೆ ಮಾಡಿದಷ್ಟು ಫಲವು ಸಿಗದೆ ಇರಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ಮಿಥುನ ರಾಶಿ
ಯಾವುದೇ ಪ್ರಮುಖ ನಿರ್ಧಾರವನ್ನು ನೀವು ಇತರರ ಮಾತು ಕೇಳಿ ತೆಗೆದುಕೊಳ್ಳಬೇಡಿ. ಆರ್ಥಿಕವಾಗಿ ಉತ್ತಮವಾಗಿದೆ, ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯಬೇಡ, ಮೇಲಾಧಿಕಾರಿಗಳ ಸಲಹೆ ಸೂಚನೆ ಪಾಲಿಸಿ. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯುವುದರಿಂದ ನೆಮ್ಮದಿ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಕರ್ಕ ರಾಶಿ
ನಿವು ಬೇಡದ ವಿಷಯಗಳ ಕಡೆಗೆ ಗಮನಹರಿಸಿ, ಅನಗತ್ಯ ವಿಷಯಗಳ ಗಮನ ಕೊಡಬೇಡಿ . ಮಕ್ಕಳಿಗೆ ಸಂಬಂಧಿಸಿದ ಯಾವುದೇ ಪ್ರಮುಖ ಚಿಂತೆ ದೂರಾಗಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಅತಿಯಾದ ಒತ್ತಡ ತೆಗೆದುಕೊಂಡರೆ ಅದು ಆರೋಗ್ಯದ ಮೇಲೂ ಪರಿಣಾಮ ಬೀರುವುದು.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಈ ದಿನ ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಫಲ ಸಿಗಲಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಿದೆ, ಹೂಡಿಕೆಯ ಕಾರಣಕ್ಕೆ ಖರ್ಚು ಕೂಡ ಇರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ನಿಮಗೆ ಉತ್ತಮವಾಗಿದೆ.
ಕನ್ಯಾ ರಾಶಿ
ಹಿಂದೆ ತೆಗೆದುಕೊಂಡ ಯಾವುದೇ ಪ್ರಮುಖ ನಿರ್ಧಾರದ ಸರಿಯಾದ ಫಲಿತಾಂಶ ಪಡೆಯುತ್ತೀರಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬದಲ್ಲಿನ ಭಿನ್ನಾಭಿಪ್ರಾಯಗಳನ್ನು ಶಾಂತ ರೀತಿಯಲ್ಲಿ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯದಲ್ಲಿ ಏರಳಿತವಿರಬಹುದು.
ತುಲಾ ರಾಶಿ
ಸ್ವಲ್ಪ ಸಮಯದಿಂದ ಕೆಲಸಕ್ಕೆ ಸಂಬಂಧಿಸಿದಂತೆ ಕಾಡುತ್ತಿರುವ ಚಿಂತೆ ದೂರಾಗಲಿದೆ. ಆರ್ತಿಕವಾಗಿ ನಿಮಗೆ ಒಳ್ಳೆಯದಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಅಲ್ಲದೆ ಸಂಬಂಧಕ್ಕೆ ಪ್ರಾಮುಖ್ಯತೆ ನೀಡುತ್ತೀರಿ. ಆರೋಗ್ಯಕ್ಕಾಗಿ ಮಾನಸಿಕ ಒತ್ತಡ ಹೊರಹಾಕಿ.
ವೃಶ್ಚಿಕ ರಾಶಿ
ನೀವು ಹಿರಿಯರ ಮಾತುಗಳನ್ನು ನಿರ್ಲಕ್ಷ್ಯ ಮಾಡಬೇಡಿ. ಅವರ ಸಲಹೆ ನಿಮಗೆ ಲಾಭವಾಗುತ್ತದೆ. ಕೋಪ ಮತ್ತು ಅಹಂಕಾರದಂತಹ ನಕಾರಾತ್ಮಕ ಭಾವನೆಗಳಿಂದ ದೂರವಿರಿ.
ನೀವು ಸಾಲ ತೆಗೆದುಕೊಳ್ಳುವುದಾದರೆ ಅಗ್ಯತಕ್ಕಿಂತ ಹೆಚ್ಚು ತೆಗೆದುಕೊಳ್ಳಬೇಡಿ. ಸಂಗಾತಿ ಜೊತೆಗೆ ಕೋಪಗೊಳ್ಳಬೇಡಿ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಈ ದಿನ ಉತ್ತಮ ದಿನವಾಗಿರುತ್ತದೆ. ಕೆಲಸದ ಮೇಲೆ ಸರಿಯಾಗಿ ಗಮನ ಹರಿಸಲು ಸಾಧ್ಯವಾಗುತ್ತದೆ. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಪ್ರೇಮಿಗಳಿಗೆ, ವಿವಾಹಿತರಿಗೆ ಈ ದಿನ ಉತ್ತಮವಾಗಿದೆ. ಯೋಗ ಮತ್ತು ಧ್ಯಾನದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಿ.
ಮಕರ ರಾಶಿ
ನೀವು ಹೊಸ ಸವಾಲುಗಳನ್ನು ಎದುರಿಸಬಹುದು. ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗಬಹುದು. ಕುಟುಂಬ ಜೀವನದ ಖುಷಿಯಾಗಿ ಸಮಯ ಕಳೆಯುತ್ತೀರಿ. ನೀವು ಅನಗತ್ಯ ಚಿಂತೆಗಳಿಂದ ದೂರವಿರಬೇಕು , ಆಹಾರಕ್ರಮದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ಸೋಮಾರಿತನ ಬಿಡಿ, ಸಮಯದ ಮೌಲ್ಯವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು, ಅದರ ಬಗ್ಗೆ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಪಡೆದು ಮಾಡುವುದು ಒಳ್ಳೆಯದು. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.
ಮೀನ ರಾಶಿ
ಈ ದಿನ ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ಹಣಕಾಸಿನ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿರುತ್ತದೆ, ಆದರೆ ನೀವು ಬುದ್ಧಿವಂತಿಕೆಯಿಂದ ಖರ್ಚು ಮಾಡಬೇಕಾಗುತ್ತದೆ. ವ್ಯವಹಾರದಲ್ಲಿ ಕೆಲವು ಸಮಸ್ಯೆಗಳಿರಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications