Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ: ಆಗಸ್ಟ್ 24, ಈ ದಿನದ 12 ರಾಶಿಗಳ ರಾಶಿಫಲ
ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 24) ಭವಿಷ್ಯ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ, ನಿಮ್ಮ ಕೆಲಸದಲ್ಲಿನ ಅಡೆತಡೆಗಳು ದೂರಾಗುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ, ಕುಟುಂಬ ಸದಸ್ಯರ ಜೊತೆ ಉತ್ತಮ ಸಮಯ ಕಳೆಯಲು ಸಾಧ್ಯವಾಗುವುದು. ಆರೋಗ್ಯ ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವ್ಯಾಪಾರಿಗಳು ಈ ದಿನ ಬಯಸಿದ ಲಾಭವನ್ನು ಪಡೆಯುತ್ತಾರೆ. ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಇನ್ನು ಆಹಾರಕ್ರಮದ ಕಡೆಗೆ ತುಂಬಾನೇ ಗಮನಹರಿಸಿ.
ಮಿಥುನ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಕೆಲಸದ ಸ್ಥಳದಲ್ಲಿ ನೀವು ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ.
ಯಾವುದೇ ಅಕ್ರಮ ಕೆಲಸ ಮಾಡುವುದನ್ನು ತಪ್ಪಿಸಿ. ಇತರರಿಂದ ದಾರಿತಪ್ಪಿಸಬೇಡಿ. ಕುಟುಂಬದಲ್ಲಿ ಒತ್ತಡವಿರಲಿದೆ, ನೀವು ಆರೋಗ್ಯದ ಬಗ್ಗೆ ತುಂಬಾ ಕಾಳಜಿವಹಿಸಬೇಕು.
ಕೋಪದಿಂದ ಮಾತನಾಡುವಾಗ ಸಂಗಾತಿ ಮನಸ್ಸಿಗೆ ಘಾಸಿ ಮಾಡದಂತೆ ಜಾಗ್ರತೆವಹಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಿ.
ಕರ್ಕ ರಾಶಿ
ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಆದರೆ ಇ ದಿನ ನೀವು ನಿಮ್ಮ ಅಮೂಲಕ್ಯ ವಸ್ತುಗಳು ಕಳ್ಳತನವಾಗದಂತೆ ಜಾಗ್ರತೆವಹಿಸಬೇಕು. ಮನೆಗೆ ಅತಿಥಿಯ ಆಗಮನ ಸಂತೋಷ ತರಲಿದೆ. ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿದೆ. ಅಲ್ಲದೆ ಕುಟುಂಬಕ್ಕೆ ನೀವು ಕುಟುಂಬಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದರಿಂದ ಕುಟುಂಬದಲ್ಲಿ ಕೂಡ ಸಂತೋಷದ ವಾತಾವರಣ ಇರಲಿದೆ, ಅರೋಗ್ಯದ ಬಗ್ಗೆ ಹೇಳುವುದಾದರೆ ಜ್ವರ, ತಲೆನೋವು, ದೇಹ ನೋವು ಮೊದಲಾದ ಸಮಸ್ಯೆಗಳು ಎದುರಾಗಬಹುದು.
ಸಿಂಹ ರಾಶಿ
ವಿದ್ಯಾರ್ಥಿಗಳಿಗೆ ಸಮಯ ಅನುಕೂಲಕರವಾಗಿದೆ. ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗುತ್ತದೆ. ಈ ದಿನ ಹಣದ ಬಗ್ಗೆ ಜಾಗ್ರತೆವಹಿಸಿ. ಸಂಬಂಧದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ. ನಿಮ್ಮ ಎಲ್ಲಾ ಕೆಲಸಗಳು ಸಮಯಕ್ಕೆ ಪೂ್ಣವಾಗಲಿದೆ. ಚಿಕ್ಕ ಪುಟ್ಟ ವಿಷಯಗಳಿಗೆ ಕೋಪಗೊಳ್ಳುವ ಸ್ವಭಾವ ಒಳ್ಳೆಯದಲ್ಲ. ಇನ್ನು ಅಸ್ತಮಾ ಸಮಸ್ಯೆಯಿದ್ದರೆ ಈ ದಿನ ಜಾಗ್ರತೆವಹಿಸಬೇಕು.
ಕನ್ಯಾ ರಾಶಿ
ಈ ದಿನ ಕೆಲಸದಲ್ಲಿ ತುಂಬಾ ಬ್ಯುಸಿಯಾಗಿರುತ್ತೀರಿ. ವ್ಯಾಪಾರಿಗಳು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ನಿಮ್ಮ ಬಜೆಟ್ ಗಮನದಲ್ಲಿಡುವುದು ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ. ಖಾಲಿ ಹೊಟ್ಟೆಯಲ್ಲಿ ಚಹಾ ಸೇವಿಸಬೇಡಿ.
ತುಲಾ ರಾಶಿ
ಕೆಲಸದ ಸ್ಥಳದಲ್ಲಿ ಉತ್ತಮ ಅವಕಾಶ ಸಿಗಲಿದೆ. ನಿಮ್ಮ ಸ್ಥಾನವು ಬಲಗೊಳ್ಳುವ ಬಲವಾದ ಸಾಧ್ಯತೆಯಿದೆ.ಕೆಲಸದ ಸ್ಥಳದಲ್ಲಿ ಗುಣಮಟ್ಟವನ್ನು ಹೆಚ್ಚಿಸಲು ಹೆಚ್ಚಿನ ಗಮನ ನೀಡುವ ಅಗತ್ಯವಿದೆ. ಅಗ್ಯತಕ್ಕಿಂತ ಹೆಚ್ಚಿನ ಸಾಲ ನೀಡಬೇಡಿ. ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಈ ಅವಧಿಯಲ್ಲಿ ಕೆಲಸ ಸಿಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.ಆರೋಗ್ಯದಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಯಾವುದೇ ನಿರ್ಧಾರವಾಗಲಿ ಆಲೋಚಿಸಿ ತೆಗೆದುಕೊಳ್ಳಬೇಕು. ನೀವು ಇದ್ದಕ್ಕಿದ್ದಂತೆ ಕೆಲಸಕ್ಕಾಗಿ ದೂರ ಪ್ರಯಾಣ ಮಾಡಬೇಕಾಗುತ್ತದೆ. ಯಾವುದೇ ರೀತಿಯ ರಿಸ್ಕ್ ತೆಗೆದುಕೊಳ್ಳುವುದನ್ನು ತಪ್ಪಿಸಿ . ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ಜನರು ಹೆಚ್ಚು ಶ್ರಮಿಸಬೇಕಾಗುತ್ತದೆ. ಕೋಪ ಮತ್ತು ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ.ಅಲರ್ಜಿ ಅಥವಾ ಸೋಂಕಿನ ಸಮಸ್ಯೆವಿರಬಹುದು.
ಧನು ರಾಶಿ
ನೀವು ಸಂಬಂಧಗಳನ್ನು ಸುಧಾರಿಸಲು ಪ್ರಯತ್ನಿಸುವುದನ್ನು ಮುಂದುವರಿಸಿ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ.ಆರೋಗ್ಯದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬೇಡಿ. ಉದ್ಯೋಗದಲ್ಲಿ ಶತ್ರುಗಳ ಬಗ್ಗೆ ಜಾಗ್ರತೆ ಮೂಡಿಸಬೇಕು. ಆರೋಗ್ಯಕ್ಕಾಗಿ ಆಹಾರಕ್ರಮದತ್ತ ಗಮನಹರಿಸಿ.
ಮಕರ ರಾಶಿ
ಈ ದಿನ ನೀವು ಕೆಲ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಅಗತ್ಯವಿರುವವರಿಗೆ ಸಹಾಯ ಮಾಡಲು ನಿಮಗೆ ಅವಕಾಶ ಸಿಕ್ಕರೆ, ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ನೀವು ಅವರಿಗೆ ಸಹಾಯ ಮಾಡಬೇಕು. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎಚ್ಚರಿಕೆಯಿಂದ ಯೋಚಿಸಿ. ಈ ದಿನ ಕೆಲಸದ ಒತ್ತಡ ಹೆಚ್ಚಿರಲಿದೆ. ಈ ದಿನ ಆರೋಗ್ಯ ಉತ್ತಮವಾಗಿರುತ್ತದೆ.
ಕುಂಭ ರಾಶಿ
ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ. ಯುವಕರು ಹಾಳು ಮಾಡದೆ ತಮ್ಮ ವೃತ್ತಿಯತ್ತ ಗಮನ ಹರಿಸಬೇಕು. ನೀವು ಹಣಕಾಸಿನ ಅಡಚಣೆಯನ್ನು ಎದುರಿಸುತ್ತಿದ್ದರೆ ನಿಮ್ಮ ಸಮಸ್ಯೆ ಬಗೆಹರಿಯಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ, ಅನಗ್ಯತ ಭಿನ್ನಾಭಿಪ್ರಾಯಗಳಿಂದ ದೂರವಿರಿ.
ಮೀನ ರಾಶಿ
ನಿಮ್ಮ ಕಠಿಣ ಪರಿಶ್ರಮದ ಉತ್ತಮ ಫಲಿತಾಂಶ ಪಡೆಯುತ್ತೀರಿ. ಖರ್ಚು ಹೆಚ್ಚಿರಲಿದೆ, ಆದರೆ ಶಾಪಿಂಗ್ ಅಂತ ಅಹಣ ಖರ್ಚು ಮಾಡುವಿರಿ. ವೈವಾಹಿಕ ಜೀವನ, ಕುಟುಂಬ ಜೀವನ ಚೆನ್ನಾಗಿರಲಿದೆ, ವ್ಯಾಪಾರಿಗಳು ನಿಮ್ಮ ವ್ಯಾಪಾರ ಯೋಜನೆಗಳನ್ನು ರಹಸ್ಯವಾಗಿಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










