Latest Updates
-
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ?
ಜುಲೈ 24, ಈ ದಿನ 12 ರಾಶಿಗಳ ರಾಶಿಫಲ ನೋಡೋಣ
ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಜುಲೈ 24ರಂದು ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಮೇಷ ರಾಶಿ
ಬೇರೆಯವರ ಮಾತಿನಿಂದ ಪ್ರಭಾವಿತರಾಗಿ ನಿರ್ಧಾರ ತೆಗೆದುಕೊಳ್ಳಬೇಡಿ, ನೀವು ಯಾವುದೇ ವಿಷಯವಾಗಲಿ ಸ್ವಂತ ನಿರ್ಧಾರ ತೆಗೆದುಕೊಳ್ಳಿ. ವೃತ್ತಿ ಬದುಕಿನಲ್ಲಿ ಧನಾತ್ಮಕ ಬದಲಾವಣೆ ಕಂಡು ಬರಲಿದೆ. ವ್ಯಾಪಾರಿಗಳು ಈ ಅವಧಿಯಲ್ಲಿ ಯಾವುದೇ ಹೊಸ ಹೂಡಿಕೆ ಮಾಡಲು ಹೋಗಬೇಡಿ. ಮನೆಯ ವಿಷಯಗಳಲ್ಲಿ ಹೊರಗಿನವರು ಹೆಚ್ಚು ಹಸ್ತಕ್ಷೇಪ ಮಾಡಲು ಬಿಡಬೇಡಿ, ಆರೋಗ್ಯದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಹೊಸ ವ್ಯಕ್ತಿಗಳನ್ನು ಸುಲಭವಾಗಿ ನಂಬಬೇಡಿ, ಆದಾಯವನ್ನು ಹೆಚ್ಚಿಸುವ ಪ್ರಯತ್ನಗಳು ಫಲ ನೀಡುತ್ತವೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬದಲ್ಲಿನ ಸಮಸ್ಯೆಯನ್ನು ತಾಳ್ಮೆಯಿಮದ ಬಗೆಹರಿಸಲು ಪ್ರಯತ್ನಿಸಿ, ಕೋಪಗೊಳ್ಳಬೇಡಿ. ಆರೋಗ್ಯ ಚೆನ್ನಾಗಿರಲಿದೆ, ಅರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರಲಿದೆ.
ಮಿಥುನ ರಾಶಿ
ಆರೋಗ್ಯ ಬಗ್ಗೆ ನಿರ್ಲಕ್ಷ್ಯ ಬೇಡ, ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ವ್ಯಾಪಾರಿಗಳು ಜಾಗ್ರತೆವಹಿಸಬೆಕು, ಇಲ್ಲದಿದ್ದರೆ ನಷ್ಟವಾಗಬಹುದು, ಉದ್ಯೋಗಿಗಲಿಗೆ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು, ಅರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಬೇಡ.
ಕರ್ಕ ರಾಶಿ
ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ನಕಾರಾತ್ಮಕ ಆಲೋಚನೆಯಿಂದ ದೂರವಿರಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯಿರಿ, ಇದರಿಂದ ಅವರ ಬಗ್ಗೆ ತಿಳಿಯಲು ಸಹಾಯವಾಗುವುದು. ಆರೋಗ್ಯದ ಬಗ್ಗೆ ನೋಡುವುದಾದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಸಿಂಹ ರಾಶಿ
ಈ ದಿನ ಉತ್ತಮವಾಗಿದೆ, ರಿಲ್ಯಾಕ್ಸ್ ಆಗಿ ಸಮಯ ಕಳೆಯುತ್ತೀರಿ, ಆದರೆ ಆದರೆ ನಿಮ್ಮ ಪ್ರಮುಖ ಕಾರ್ಯಗಳನ್ನು ನಿರ್ಲಕ್ಷಿಸುವುದನ್ನು ತಪ್ಪಿಸಿ. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿದೆ. ನಿಮ್ಮ ವ್ಯಾಪಾರವು ಶೀಘ್ರದಲ್ಲೇ ಎರಡು ಪಟ್ಟು ವೇಗವಾಗಿ ಬೆಳೆಯುತ್ತದೆ. ಹಣದ ವಿಷಯದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ. ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಬೇಡ.
ಕನ್ಯಾ ರಾಶಿ
ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳು ದೂರವಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಅಲ್ಲಿಯವರೆಗೆ ತಾಳ್ಮೆಯಿಂದ ಕಾಯಿರಿ. ಹಣದ ಸಮಸ್ಯೆ ಶೀಘ್ರದಲ್ಲಿಯೇ ದೂರಾಗಲಿದೆ. ವ್ಯಾಪಾರಿಗಳು ನಿರೀಕ್ಷೆ ಮಾಡಿದ ಲಾಭ ಪಡೆಯುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ನೋಡುವುದಾದರೆ ಸರಾಸರಿಯಾಗಿರಲಿದೆ.
ತುಲಾ ರಾಶಿ
ಕಷ್ಟಕರ ಸಂದರ್ಭಗಳಲ್ಲಿಯೂ ಸಹ ಧನಾತ್ಮಕವಾಗಿರಲು ಪ್ರಯತ್ನಿಸಿ, ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಿಗಳು ಕೆಲಸಗಳಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ, ಕುಟುಂಬದ ವಾತಾವರಣ ಸುಧಾರಿಸಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆಹಾರಕ್ರಮದ ಬಗ್ಗೆ ನಿರ್ಲಕ್ಷ್ಯ ಬೇಡ.
ವೃಶ್ಚಿಕ ರಾಶಿ
ನೀವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ನೀವು ಯಶಸ್ವಿಯಾಗಬಹುದು. ಹಣದ ವಿಷಯದಲ್ಲಿ ಆತುರಪಡಬೇಡಿ, ಈ ದಿನ ನೀವು ಧನಾತ್ಮಕವಾಗಿರುತ್ತೀರಿ , ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ನಿಮ್ಮ ಮಾತಿನಿಂದ ಯಾರನ್ನೂ ನೋಯಿಸಬೇಡಿ. ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಹೊರಟಿದ್ದರೆ ತುಂಬಾ ಆತುರಪಡಬೇಡಿ. ಸಹೋದ್ಯೋಗಿಯೊಂದಿಗೆ ಮನಸ್ತಾಪ ಉಂಟಾಗಬಹುದು. ಕುಟುಂಬ ಜೀವನದಲ್ಲಿ ಕೋಪ, ಅಹಂ ತೋರಿಸಬೇಡಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ವ್ಯಾಪಾರಿಗಳು ಡಾಕ್ಯೂಮೆಂಟ್ ಕಡೆ ಗಮನಹರಿಸಿ. ನಿಮ್ಮ ಸಂಗಾತಿಯ ಮನಸ್ಥಿತಿ ಚೆನ್ನಾಗಿರುವುದಿಲ್ಲ. ಅವರ ಜೊತೆ ತರ್ಕಕ್ಕೆ ಹೋಗಬೇಡಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯಬೇಡ.
ಕುಂಭ ರಾಶಿ
ಕೆಲಸ ಕಾರ್ಯದ ಕಡೆಗೆ ಗಮನಹರಿಸಿ.ನಿಮ್ಮ ಯಾವುದೇ ಕೆಲಸವನ್ನು ನಾಳೆಗೆ ಮುಂದೂಡಬೇಡಿ. ಹಣಕಾಸಿನ ಪರಿಸ್ಥಿತಿ ಹದಗೆಡಬಹುದು. ವ್ಯಾಪಾರಿಗಳಿಗೆ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಲು ದಿನವು ಉತ್ತಮವಾಗಿಲ್ಲ. ಆರೋಗ್ಯ ಸಮಸ್ಯೆವಿದ್ದರೆ ಸೂಕ್ತ ವೈದ್ಯರನ್ನು ಕಾಣಿ. ಕುಟುಂಬ, ವೈವಾಹಿಕ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ಕೆಲಸದ ಒತ್ತಡ ಅಧಿಕವಿರಲಿದೆ, ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ,
ಉದ್ಯೋಗಿಗಳಿಗೆ ಧನ ಲಾಭವಾಗಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











