Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಜುಲೈ 25, ಈ ದಿನ 12 ರಾಶಿಗಳ ರಾಶಿಫಲ ನೋಡೋಣ
ಶುಭ ದಿನ, ಈ ದಿನ ದ್ವಾದಶ ರಾಶಿಗಳ ರಾಶಿಫಲ ನೋಡೋಣ
ಮೇಷ ರಾಶಿ
ಹಣದ ಸಮಸ್ಯೆವಿರಬಹುದು, ಆರ್ಥಿಕ ನಿರ್ವಹಣೆ ಮಾಡದಿದ್ದರೆ ಕಷ್ಟ. ವ್ಯಾಪಾರಿಗಳು ವ್ಯವಹಾರದ ಬಗ್ಗೆ ಜಾಗ್ರತೆವಹಿಸಿ. ಆರ್ಥಿಕವಾಗಿ ಈ ದಿನ ಜಾಗ್ರತೆವಹಿಸಿ. ನಿಮ್ಮ ಸಮಸ್ಯೆ ಪರಿಹಾರಕ್ಕೆ ಕುಟುಂಬದವರ ಬೆಂಬಲ ಇರಲಿದೆ. ನಿಮ್ಮ ಸಂಗಾತಿ ಜೊತೆಗೆ ಅಹಂನಿಂದ ವರ್ತಿಸಬೇಡಿ. ಆರೋಗ್ಯದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ನಿಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳಬೇಡಿ. ನಿಮ್ಮ ಸಾಮರ್ಥ್ಯಗಳನ್ನು ನೀವು ಗುರುತಿಸಬೇಕು. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳು ಯಾವುದೆ ಅಡೆತಡೆಯಿಲ್ಲದೆ ನಡೆಯಲಿದೆ. ವೈವಾಹಿಕ ಜಿವನ ಚೆನ್ನಾಗಿರಲಿದೆ. ತುಂಬಾ ಹೊತ್ತು ಹಸಿವಿನಿಂದ ಇರಬೇಡಿ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ಕುಟುಂಬದ ಕೆಲವರ ವರ್ತನೆ ನಿಮಗೆ ಬೇಸರ ಉಂಟು ಮಾಡುವುದು. ಯಾರ ವಿಷಯದ ಬಗ್ಗೆಯೂ ಯೋಚಿಸದೆ ಮಾತನಾಡುವುದನ್ನು ತಪ್ಪಿಸಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ನಿಮ್ಮ ಕೆಲಸದ ಕಡೆಗೆ ಗಮನಹರಿಸದೆ ಬೇರೆಯವರ ಕೆಲಸದ ಕಡೆಗೆ ಗಮನಹರಿಸಲು ಹೋಗಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಕರ್ಕ ರಾಶಿ
ಆರ್ಥಿಕ ಸಮಸ್ಯೆವಿರುತ್ತದೆ, ಹಾಗಂತ ತುಂಬಾ ಸಾಲ ಮಾಡಬೇಡಿ. ಉದ್ಯೋಗಿಗಳು ಬೇಡದ ವಿಷಯದ ಕಡೆಗೆ ಗಮನಹರಿಸುವ ಬದಲಿಗೆ ಪ್ರಮುಖ ಕೆಲಸ ಕಾರ್ಯದತ್ತ ಗಮನಹರಿಸಿ. ಇಲ್ಲದಿದ್ದರೆ ನಿಮ್ಮ ಕೆಲವು ಪ್ರಮುಖ ಕೆಲಸಗಳು ಇಂದು ಅಪೂರ್ಣವಾಗಿ ಉಳಿಯುತ್ತವೆ. ನೀವು ಕೋಪ ಕಡಿಮೆ ಮಾಡಿದರೆ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಸಿಂಹ ರಾಶಿ
ಇಂದು ಕೆಲಸದ ಒತ್ತಡದ ಕಾರಣ ಮನೆಯ ಕಡೆಗೆ ಗಮನಹರಿಸಲು ಸಾಧ್ಯವಾಗುವುದಿಲ್ಲ, ಆದರೆ ಕೆಲಸದಲ್ಲಿ ಈ ದಿನ ಉತ್ತಮವಾಗಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಪ್ರೇಮಿಗಳಿಗೆ ಅನುಕೂಲಕರವಾಗಿದೆ. ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ಈ ಅವಧಿಯಲ್ಲಿ ಜಾಗ್ರತೆವಹಿಸಿ.
ಕನ್ಯಾ ರಾಶಿ
ಇಂದು ನಿಮ್ಮ ಪ್ರಮುಖ ಸಮಸ್ಯೆಗೆ ಪರಿಹಾರ ಸಿಗಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ಯಾವುದೇ ಹಳೆಯ ಸಾಲವನ್ನು ತೀರಿಸುವಲ್ಲಿ ಶೀಘ್ರದಲ್ಲೇ ನೀವು ಯಶಸ್ವಿಯಾಗುತ್ತೀರಿ. ವ್ಯಾಪಾರಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ಮನೆಯ ವಾತಾವರಣ ಖುಷಿಯಿಂದ ಕೂಡಿರಲಿದೆ, ಆರೋಗ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಯಶಸ್ಸು ಸಿಗಲಿದ. ಆರ್ಥಿಕ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಗಮನಹರಿಸದಿದ್ದರೆ ಕಷ್ಟ, ನಿಮ್ಮ ಕಾರ್ಯನಿರ್ವಹಣೆಯಲ್ಲಿ ದೊಡ್ಡ ಸುಧಾರಣೆ ಕಂಡುಬರುತ್ತದೆ. ಪ್ರೇಮಿಗಳು ಮದುವೆ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ನೀವು ಕೆಲಸಕ್ಕೆ ಸಂಬಂಧಿಸಿದ ಬದಲಾವಣೆಗಳ ಬಗ್ಗೆ ಯೋಚಿಸುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿದೆ, ಆರ್ಥಿಕವಾಗಿಯೂ ಉತ್ತಮವಾಗಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ವ್ಯಾಪಾರಿಗಳು ಜಾಗ್ರತೆವಹಿಸದಿದ್ದರೆ ನಷ್ಟವನ್ನು ಅನುಭವಿಸುವ ಸಾಧ್ಯತೆಯಿದೆ. ಕುಟುಂಬದ ಜೊತೆಗೆ ಸಮಯ ಕಳೆಯಿರಿ, ನಿಮ್ಮ ವೈಯಕ್ತಿಕ ಜೀವನದ ಕಡೆಗೆ ಗಮನಹರಿಸಿ. ಆರೋಗ್ಯದ ಕಡೆಗೆ ಗಮನಹರಿಸಿ.
ಧನು ರಾಶಿ
ಈ ದಿನ ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಯಾವುದೇ ಕಷ್ಟಕರವಾದ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಬಹುದು.
ದಂಪತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು. ನಿಮ್ಮ ಸಂಬಂಧಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ. ಆರೋಗ್ಯಕ್ಕಾಗಿ ಜೀವನಶೈಲಿ ಕಡೆಗೆ ಗಮನಹರಿಸಿ.
ಮಕರ ರಾಶಿ
ನಿಮ್ಮ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ಭಾವನಾತ್ಮಕವಾಗಿ ತೆಗೆದುಕೊಳ್ಳುವ ಬದಲಿಗೆ . ಕೆಲಸಕ್ಕೆ ಸಂಬಂಧಿಸಿದ ಚುನಾವಣಾ ಸವಾಲುಗಳು ಎದುರಾಗುತ್ತವೆ, ಆದರೆ ನೀವು ತಾಳ್ಮೆಯಿಂದಿರಬೇಕು. ಆಸ್ತಿಗೆ ಸಂಬಂಧಿಸಿದ ಕೆಲವು ವಿಷಯಗಳು ಬಗೆಹರಿಯುವ ಸಾಧ್ಯತೆಯಿದೆ. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಕೆಲಸದ ಹೊರೆ ಹೆಚ್ಚಿರಲಿದೆ.ಆರೋಗ್ಯದಲ್ಲಿ ಏರಳಿತವಿರಲಿದೆ.
ಕುಂಭ ರಾಶಿ
ಈ ದಿನ ನಿಮಗೆ ಮುಖ್ಯವಾಗಿದೆ, ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯುತ್ತವೆ , ನಿಮ್ಮ ಕೆಲಸವನ್ನು ಸಂಪೂರ್ಣ ಜವಾಬ್ದಾರಿ ಮತ್ತು ಕಠಿಣ ಪರಿಶ್ರಮದಿಂದ ಮಾಡುತ್ತೀರಿ. ಕುಟುಂಬ ಜಿವನ ಚೆನ್ನಾಗಿರಲಿದೆ. ಸಂಗಾತಿಯೊಂದಿಗೆ ಈ ಅವಧಿ ಉತ್ತಮವಾಗಿದೆ, ಆರೋಗ್ಯ ಸಂಬಂಧಿತ ಸಮಸ್ಯೆಗಳಿದ್ದರೆ ಜಾಗ್ರತೆವಹಿಸಿ.
ಮೀನ ರಾಶಿ
ವ್ಯಾಪಾರಸ್ಥರು ಈ ದಿನ ಜಾಗ್ರತೆವಹಿಸಿ. ತರಾತುರಿಯಲ್ಲಿ ಯಾವುದೇ ಒಪ್ಪಂದವನ್ನು ಅಂತಿಮಗೊಳಿಸಬೇಡಿ. ವ್ಯಾಪಾರಿಗಳು ದೊಡ್ಡ ಲಾಭವನ್ನು ನಿರೀಕ್ಷಿಸಬೇಡಿ. ಇಂದು ನಿಮ್ಮ ವ್ಯವಹಾರ ನಿರ್ಧಾರಗಳನ್ನು ಚಿಂತನಶೀಲವಾಗಿ ತೆಗೆದುಕೊಳ್ಳಿ. ಕೆಲಸದ ಜಾಗದಲ್ಲಿ ಕೋಪ ನಿಯಂತ್ರಿಸಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications