ದಿನ ಭವಿಷ್ಯ: ಕೃಷ್ಣ ಜನ್ಮಾಷ್ಟಮಿ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 26) ಭವಿಷ್ಯ ನೋಡೋಣ:

ಮೇಷ ರಾಶಿ

ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ. ಆರೋಗ್ಯ ಚಿಂತೆ ಬಿಡಿ, ಬೇಗನೆ ಗುಣಮುಖರಾಗುತ್ತೀರಿ. ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರಪಡಬೇಡಿ, ಇಲ್ಲದಿದ್ದರೆ ಲಾಭದ ಬದಲು ನಷ್ಟವಾಗಬಹುದು. ಆರ್ತಿಕ ಸ್ಥಿತಿ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವೈವಾಹಿಕ ಬದುಕುಮ ಕುಟುಂಬ ಬದುಕು ಚೆನ್ನಾಗಿರಲಿದೆ.

Dina Bhavishya

ವೃಷಭ ರಾಶಿ

ಕುಟುಂಬದ ಸದಸ್ಯರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು, ಆದರೆ ಶೀಘ್ರವೇ ಎಲ್ಲವೇ ಸರಿಯಾಗಲಿದೆ. ವೃತ್ತಿ ಬದುಕು ಚೆನ್ನಾಗಿರಲಿದೆ, ವೈವಾಹಿಕ ಜೀವನದಲ್ಲಿ ಕೆಲವು ಧನಾತ್ಮಕ ಬದಲಾವಣೆಗಳಿರಬಹುದು. ಮಧುಮೇಹಿಗಳಿಗೆ ಆಹಾರಕ್ರಮದತ್ತ ಗಮನಹರಿಸಿದರೆ ಒಳ್ಳೆಯದು.

ಮಿಥುನ ರಾಶಿ

ಈ ದಿನ ನಿಮಗೆ ಶುಭವಾಗಿರುತ್ತದೆ, ಈ ದಿನ ಒಳ್ಳೆಯ ಸುದ್ದಿ ಪಡೆಯುತ್ತೀರಿ. ಚಿಕ್ಕ ವ್ಯಾಪಾರಿಗಳು ಲಾಭ ಪಡೆಯುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತೊಡೆದುಹಾಕಲು ನೀವು ಆರೋಗ್ಯದ ಕಡೆಗೆ ಗಮನಹರಿಸಿ.

ಕರ್ಕ ರಾಶಿ

ಕುಟುಂಬ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳಿರಬಹುದು. ಆರ್ಥಿಕ ಸಮಸ್ಯೆಗಳಿರಬಹುದು. ವ್ಯಾಪಾರಿಗಳಿಗೆ ಕಾರ್ಯನಿರತವಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಅರೋಗ್ಯದ ಬಗ್ಗೆ ಹೇಳುವುದಾದರೆ ಸ್ನಾಯು ಸಂಬಂಧಿ ಸಮಸ್ಯೆಗಳಿರಬಹುದು.


ಸಿಂಹ ರಾಶಿ

ಈ ದಿನ ಕೋಪ ನಿಯಂತ್ರಿಸಿದರೆ ಒಳ್ಳೆಯದು. ಕೆಲಸದ ಸ್ಥಳದಲ್ಲಿ ಹಠಾತ್ ಸಮಸ್ಯೆ ಉಂಟಾಗಬಹುದು. ಕೆಲಸದಲ್ಲಿ ಅತಿಯಾದ ಆತ್ಮವಿಶ್ವಾಸ ತೋರಿಸಬೇಡಿ.
ಯಾವುದೇ ದೊಡ್ಡ ಹಣಕಾಸಿನ ವಹಿವಾಟು ಮಾಡುವ ಮೊದಲು ನೀವು ಎಚ್ಚರಿಕೆಯಿಂದ ಯೋಚಿಸಬೇಕು, ಇಲ್ಲದಿದ್ದರೆ ಆರ್ಥಿಕ ಸಮಸ್ಯೆ ಉಂಟಾಗುವುದು. ವ್ಯಾಪಾರಿಗಳಿಗೆ ವೃತ್ತಿ ಕಡೆಗೆ ಹೆಚ್ಚು ಗಮನ ನೀಡುವಂತೆ ಸಲಹೆ ನೀಡಲಾಗುವುದು. ನಕಾರಾತ್ಮಕತೆಯು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ.

ಕನ್ಯಾ ರಾಶಿ

ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ನೀವು ಪರಿಗಣಿಸುತ್ತಿರುವ ಯಾವುದೇ ಬದಲಾವಣೆಗಳನ್ನು ಕಾರ್ಯಗತಗೊಳಿಸಲು ಸರಿಯಾದ ಸಮಯ. ಹಣದ ಸಮಸ್ಯೆಗೆ ಖಂಡಿತ ಪರಿಹಾರ ಸಿಗಲಿದೆ. ಖಾಸಗಿ ಉದ್ಯೋಗದಲ್ಲಿರುವವರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಮನೆಯಲ್ಲಿ ನಡೆಯುತ್ತಿರುವ ಯಾವುದೇ ಸಮಸ್ಯೆಯು ಪರಿಹರಿಸಲ್ಪಡುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.

ತುಲಾ ರಾಶಿ

ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಹೊಸ ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿರುವ ಜನರಿಗೆ ಒಳ್ಳೆಯ ಸುದ್ದಿ ಸಿಗಬಹುದು. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಎ ಬಗೆಹರಿಯಲಿದೆ. ಇನ್ನು ಸಾಲದ ವ್ಯವಹಾರ ಮಾಡುವಾಗ ಜಾಗ್ರತೆವಹಿಸಬೇಕು. ಪ್ರಮುಖ ಕೆಲಸವನ್ನು ಎಚ್ಚರಿಕೆಯಿಂದ ಪೂರ್ಣಗೊಳಿಸಲು ಪ್ರಯತ್ನಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಮಾಧುರ್ಯ ಹೆಚ್ಚಾಗಲಿದೆ.

ವೃಶ್ಚಿಕ ರಾಶಿ

ಉದ್ಯೋಗಕ್ಕಾಗಿ ಮಾಡುವ ಪ್ರಯತ್ನಗಳು ಯಶಸ್ವಿಯಾಗುವುದರಿಂದ ಖುಷಿಯಾಗಿರುತ್ತೀರಿ. ವ್ಯಾಪಾರಿಗಳು ಆರ್ಥಿಕ ಲಾಭ ಪಡೆಯುತ್ತೀರಿ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಉತ್ತಮವಾಗಿರುತ್ತದೆ. ಪ್ರೀತಿ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಗಂಟಲು ನೋವು, ನೆಗಡಿ, ಕೆಮ್ಮು ಮುಂತಾದ ಸಮಸ್ಯೆಗಳಿರಬಹುದು.

ಧನು ರಾಶಿ

ಈ ದಿನ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಸಂಬಂಧಗಳು ಸುಧಾರಿಸುತ್ತದೆ. ಹೆಚ್ಚಿನ ಕೆಲಸದ ಹೊರೆಯಿಂದಾಗಿ ನೀವು ತುಂಬಾ ಕಿರಿಕಿರಿಯನ್ನು ಅನುಭವಿಸುವಿರಿ. ತುಂಬಾ ಆಯಾಸವಾದರೆ ವಿಶ್ರಾಂತಿ ಕಡೆಗೆ ಗಮನಹರಿಸಿ. ನೀವು ಇತ್ತೀಚೆಗೆ ಯಾರಿಗಾದರೂ ಪ್ರಪೋಸ್ ಮಾಡಿದ್ದರೆ, ನೀವು ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆಯಬಹುದು. ಆರೋಗ್ಯ ಚೆನ್ನಾಗಿರಲಿದೆ.

ಮಕರ ರಾಶಿ

ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ಅನುಭವಿಗಳ ಅಭಿಪ್ರಾಯ ಹೇಳಿ. ಹಣಕಾಸಿನ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ನಿಮ್ಮ ಯಾವುದೇ ಬಾಕಿ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ಉದ್ಯೋಗಿಗಳಿಗೆ ಕೆಲಸದಲ್ಲಿ ನಿರ್ಲಕ್ಷ್ಯ ಮಾಡದಂತೆ ಸಲಹೆ ನೀಡಲಾಗಿದೆ. ಮೈಕೈ ನೀವಿನ ಸಮಸ್ಯೆವಿರಬಹುದು.

ಕುಂಭ ರಾಶಿ

ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ನಿಮ್ಮ ಹೆತ್ತವರ ಆಶೀರ್ವಾದದಿಂದ ನೀವು ಯಶಸ್ಸನ್ನು ಪಡೆಯುತ್ತೀರಿ. ಅದು ವೈಯಕ್ತಿಕ ಅಥವಾ ವೃತ್ತಿಪರ ಜೀವನ, ನೀವು ನಿಮ್ಮ ಜವಾಬ್ದಾರಿಗಳನ್ನು ಉತ್ತಮವಾಗಿ ನಿರ್ವಹಿಸುತ್ತೀರಿ. ಈ ದಿನ ಕೋಪ ನಿಯಂತ್ರಿಸಿ, ವೈವಾಹಿಕ ಬದುಕಿನಲ್ಲಿ ಮೂರನೇ ವ್ಯಕ್ತಿಯ ಹಸ್ತಕ್ಷೇಪದಿಂದಾಗಿ ನಿಮ್ಮ ನಡುವೆ ಭಿನ್ನಾಭಿಪ್ರಾಯವಿರಬಹುದು, ನೀವು ಕೂತು ಮಾತನಾಡಿ ಸಮಸ್ಯೆ ಬಗೆಹರಿಸಿ.

ಮೀನ ರಾಶಿ

ನಿಮ್ಮ ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಹಣವನ್ನು ಹೂಡಿಕೆ ಮಾಡಲು ಇದು ಸರಿಯಾದ ಸಮಯ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಅನಗ್ಯತ ಸಮಸ್ಯೆಗಳಿಂದ ದೂರವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು, ನಿಮ್ಮ ಪ್ರೀತಿಪಾತ್ರರ ಅಭಿಪ್ರಾಯವನ್ನು ತೆಗೆದುಕೊಳ್ಳಿ. ಇದು ನಿಮ್ಮ ಸಂಬಂಧಗಳನ್ನು ಇನ್ನಷ್ಟು ಉತ್ತಮಗೊಳಿಸುತ್ತದೆ. ಆರೋಗ್ಯದ ಬಗ್ಗೆ ಕೇಳುವುದಾದರೆ ಆಯಾಸವಿರಬಹುದು.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope Prediction for 26 August 2024: Dina Bhavishya for All Zodiac Signs

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Sunday, August 25, 2024, 23:03 [IST]
X
Desktop Bottom Promotion