Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಜೂನ್ 28, ಶುಕ್ರವಾರದ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ಶುಭ ಶುಕ್ರವಾರ, ದ್ವಾದಶ ರಾಶಿಗಳ ರಾಶಿಫಲ....
ಮೇಷ ರಾಶಿ
ಕೆಲಸದ ಬಗ್ಗೆ ನಿರ್ಲಕ್ಷ್ಯ ಬೇಡ, ನೀವು ಕೆಲಸದ ಕಡೆಗೆ ತುಂಬಾ ಗಮನಹರಿಸಬೇಕು. ವ್ಯಾಪಾರಿಗಳು ಈ ದಿನ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೂ ಯೋಚಿಸಿ ತೆಗೆದುಕೊಳ್ಳಬೇಕು. ಸಂಗಾತಿಯೊಂದಿಗಿನ ಸಮನ್ವಯವು ಹದಗೆಡಬಹುದು. ನಿಮ್ಮಿಬ್ಬರ ನಡುವೆ ನಂಬಿಕೆಯ ಕೊರತೆ ಕಾಣಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಆರೋಗ್ಯ ಸಂಬಂಧಿತ ಸಮಸ್ಯೆಗಳಿರಬಹುದು.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ. ವ್ಯಾಪರಿಗಳಿಗೆ ಹೊಸ ವ್ಯವಹಾರಗಳನ್ನು ಮಾಡಲು ಅವಕಾಶ ಸಿಗಲಿದೆ. ಉದ್ಯೋಗಿಗಳಿಗೆ ಈ ದಿನ ಶುಭವಾಗಿದೆ, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ದಿನ ಶುಭವಾಗಿದೆ. ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ. ಸಂಬಂಧಗಳಲ್ಲಿ ಪ್ರೀತಿ, ವಾತ್ಸಲ್ಯ ಇರಲಿದೆ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ತಪ್ಪಿಸಬೇಕು, ಆರೋಗ್ಯದ ಬಗ್ಗೆ ಹೇಳುವುದಾದರೆ ವ್ಯಾಯಾಮದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ನೀವು ನಿಮ್ಮ ಪ್ರೀತಿಪಾತ್ರರನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಬಹುದು, ನಿಮ್ಮ ಜವಾಬ್ದಾರಿಗಳ ಕಡೆಗೆ ಗಮನ ಕೊಡಿ, ವ್ಯಾಪಾರಸ್ಥರಿಗೆ ಸವಾಲಿನ ದಿನ, ಉದ್ಯೋಗಿಗಳು ಹೆಚ್ಚಿನ ಶ್ರಮ ಹಾಕಿ ಕೆಲಸ ಮಾಡಿ ಎಂದು ಸಲಹೆ ನೀಡಲಾಗುವುದು. ಮೂಳೆ ಸಂಬಂಧಿತ ಸಮಸ್ಯೆವಿರಬಹುದು.
ಕರ್ಕ ರಾಶಿ
ಯಾವುದೇ ಸಮಸ್ಯೆಯಿದ್ದರೆ, ವಿಚಲಿತರಾಗುವ ಬದಲು ಅದನ್ನು ಬಗೆಹರಿಸಲು ಪ್ರಯತ್ನಿಸಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ನಿಮ್ಮ ನಿರ್ಧಾರಗಳನ್ನು ತುಂಬಾನೇ ಆಲೋಚಿಸಿ ತೆಗೆದುಕೊಳ್ಳಬೇಕು. ಕುಟುಂಬದಲ್ಲಿ ಭಿನ್ನಾಭಿಪ್ರಾಯವಿರಬಹುದು, ಪೋಷಕರ ಮನಸ್ಸಿಗೆ ನೋವಾಗುವ ಮಾತುಗಳನ್ನಾಡಬೇಡಿ. ಆರೋಗ್ಯದಲ್ಲಿ ಏರಳಿತ ಇರಲಿದೆ.
ಸಿಂಹ ರಾಶಿ
ಮೋಜಿಗಾಗಿ ಹಣ ಖರ್ಚು ಮಾಡುವ ತಪ್ಪು ಮಾಡದಿರಿ. ವ್ಯಾಪಾರಿಗಳು ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಹಣದ ವಿಷಯದಲ್ಲಿ ಯಾವುದೇ ಸಮಸ್ಯೆ ಇದ್ದರೆ ನಿಮ್ಮ ಸಮಸ್ಯೆಗೆ ಪರಿಹಾರ ಸಿಗಲಿದೆ. ಚಿಕ್ಕ ವಿಷಯ ದೊಡ್ಡದು ಮಾಡಲು ಹೋಗಬೇಡಿ. ಪ್ರತಿಕೂಲ ಸಂದರ್ಭಗಳಲ್ಲಿ ನೀವು ಅವರ ಬೆಂಬಲವನ್ನು ಪಡೆಯುತ್ತೀರಿ. ಆರೋಗ್ಯದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಕುಟುಂಬದ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು. ಯಾವುದೇ ನಿರ್ಧಾರವನ್ನು ಆಲೋಚಿಸದೆ ತೆಗೆಯಬೇಡಿ, ಇಲ್ಲದಿದ್ದರೆ ನಿಮ್ಮ ಸಮಬಂಧದ ಮೇಲೆ ಪರಿಣಾಮಬೀರಬಹುದು, ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ, ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಮನೆಯ ವಿಷಯವನ್ನು ಹೊರಗಿನವರ ಜೊತೆ ಹೇಳಿಕೊಳ್ಳಬೇಡಿ. ದಂಪತಿಗಳ ನಡುವೆ ಚಿಕ್ಕ ವಿಷಯಕ್ಕೆ ಗಲಾಟೆಯಾಗುವುದನ್ನು ತಪ್ಪಿಸಿ. ಆರೋಗ್ಯ ಸಮಸ್ಯೆಯಿದ್ದರೆ ಜಾಗ್ರತೆವಹಿಸಿ.
ತುಲಾ ರಾಶಿ
ನೀವು ಕೆಲವು ಪ್ರಮುಖ ಕೆಲಸಗಳಲ್ಲಿ ತುಂಬಾ ನಿರತರಾಗಿರುತ್ತೀರಿ , ಈ ದಿನ ನೀವು ಯಶಸ್ಸನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ವ್ಯಾಪಾರಿಗಳಿಗೆ ಈ ದಿನವು ಅನುಕೂಲಕರವಾಗಿದೆ. ನಿಮ್ಮ ಯಾವುದೇ ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿದೆ. ಸಂಗಾತಿಯ ಮನಸ್ಸು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ಆರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ. ನೀವು ಕೆಲಸಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನಿಮ್ಮ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ.
ಕುಟುಂಬ ಜೀವನದಲ್ಲಿ ಸಂತೋಷ, ಶಾಂತಿ ಇರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಅಲರ್ಜಿ ಗೆ ಸಂಬಂಧಿತ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಈ ದಿನ ಕಷ್ಟವಾಗಬಹುದು. ಹೊಸ ವ್ಯವಹಾರಗಳನ್ನು ಮಾಡುವಾಗ ಹೆಚ್ಚು ಜಾಗರೂಕರಾಗಿರಿ, ಇಲ್ಲದಿದ್ದರೆ ನಷ್ಟ ಸಂಭವಿಸಬಹುದು. ಕುಟುಂಬದ ಸದಸ್ಯರ ಮಾತುಗಳು ನಿಮ್ಮ ಹೃದಯವನ್ನು ನೋಯಿಸಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ.
ಮಕರ ರಾಶಿ
ಬೇರೆಯವರ ವಿಷಯದಲ್ಲಿ ತಲೆ ಹಾಕಬೇಡಿ, ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನೀವು ಅದ್ಭುತ ಯಶಸ್ಸನ್ನು ಪಡೆಯಬಹುದು. ಉದ್ಯೋಗಿಗಳು ಕೆಲಸದ ಜಾಗದಲ್ಲಿ ಕೋಪಗೊಳ್ಳಬೇಡಿ. ಮಕ್ಕಳ ಆರೋಗ್ಯದ ಬಗ್ಗೆ ಚಿಂತೆ ಕಾಡಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ.
ಕುಂಭ ರಾಶಿ
ಸಂಬಂಧ ಸುಧಾರಿಸಲಿದೆ, ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ನಿಮ್ಮ ವ್ಯವಹಾರದಲ್ಲಿ ಪ್ರಗತಿ ಇರುತ್ತದೆ. ನಿಮ್ಮ ಕೆಲಸದಿಂದ ಸಾಕಷ್ಟು ತೃಪ್ತರಾಗುತ್ತಾರೆ. ಕುಟುಂಬದಲ್ಲಿ ಈ ದಿನ ಸಂತೋಷದ ವಾತಾವರಣ ಇರಲಿದೆ. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವುದು ಒಳ್ಳೆಯದು.
ಮೀನ ರಾಶಿ
ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿದೆ. ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಮಾಡಿದ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ. ನೀವು ಪ್ರೇಮ ಸಂಬಂಧವನ್ನು ಹೊಂದಿದ್ದರೆ, ನಿಮ್ಮ ಸಂಬಂಧದ ಬಗ್ಗೆ ನೀವು ಹೆಚ್ಚು ಗಮನ ಹರಿಸಬೇಕು. ಆರೋಗ್ಯದ ಬಗ್ಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications