Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆಗಸ್ಟ್ 29: ಶುಭ ಗುರುವಾರ, ಈ ದಿನ ರಾಶಿಫಲ ನಿಮ್ಮ ರಾಶಿಗೆ ಹೇಗಿದೆ?
ಶುಭ ಗುರುವಾರ, ಈ ದಿನ ದ್ವಾದಶ ರಾಶಿಗಳಿಗೆ ಹೇಗಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ಪ್ರಮುಖ ಸಮಸ್ಯೆ ಬಗೆಹರಿಸಲ್ಪಡುತ್ತದೆ, ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಕೆಲಸದಲ್ಲಿ ಈ ದಿನ ನಿಮಗೆ ಶುಭವಾಗಿದೆ. ಮನೆಯಲ್ಲಿ ವಾತಾವರಣ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೆಚ್ಚು ಚಿಂತಿಸುವುದನ್ನು ತಪ್ಪಿಸಿ.

ವೃಷಭ ರಾಶಿ
ನಿಮಗೆ ಮಕ್ಕಳಿದ್ದರೆ ಅವರ ಕಡೆಗೆ ಗಮನಹರಿಸಬೇಕು. ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮಯ ಸರಿಯಲ್ಲ. ಒಳ್ಳೆಯ ಅವಕಾಶ ನಿಮ್ಮ ಕೈಯಿಂದ ಜಾರಿಕೊಳ್ಳಬಹುದು, ಜಾಗ್ರತೆವಹಿಸಿ. ವ್ಯಾಪಾರಿಗಳು ಈ ದಿನ ಹೆಚ್ಚಿನ ಶ್ರಮ ಹಾಕಬೇಕು. ವೈವಾಹಿಕ ಜಿವನ ಚೆನ್ನಾಗಿರಲಿದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಈ ದಿನ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ವ್ಯಾಪಾರಿಗಳಿಗೆ ಲಾಭ ಗಳಿಸಲು ಉತ್ತಮ ಅವಕಾಶವಿರುತ್ತದೆ. ನಿಮ್ಮ ವ್ಯಾಪಾರ ವೃದ್ಧಿಯಾಗುತ್ತದೆ. ಕೆಲಸ ಹುಡುಕುತ್ತಿದ್ದರೆ ನೀವು ಹೊಸ ಉದ್ಯೋಗದ ಪ್ರಸ್ತಾಪವನ್ನು ಪಡೆಯಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆವಿದ್ದರೆ ಆರೋಗ್ಯ ಸುಧಾರಿಸಲಿದೆ.
ಕರ್ಕ ರಾಶಿ
ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ದೊಡ್ಡ ವ್ಯವಹಾರವನ್ನು ಮಾಡುವುದಾದರೆ ಅದನ್ನು ಮುಂದೂಡುವುದು ಒಳ್ಳೆಯದು. ನಿಮ್ಮ ಆತ್ಮಸ್ಥೈರ್ಯ ಕುಸಿಯಲು ಬಿಡಬೇಡಿ . ವ್ಯಾಪಾರಿಗಳು ಪ್ರಮುಖ ನಿರ್ಧಾರಗಳನ್ನು ನೀವೇ ತೆಗೆದುಕೊಳ್ಳಿ, ಬೇರೆಯವರ ಮೇಲೆ ಅವಲಂಬಿಸಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನೆಗಡಿ, ಕೆಮ್ಮು, ಜ್ವರ ಮುಂತಾದ ಸಮಸ್ಯೆಗಳಿರಬಹುದು.
ಸಿಂಹ ರಾಶಿ
ಅನಗ್ಯತ ಚಿಂತೆ ಮಾಡಬೇಡಿ, ಇಂದು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ವ್ಯಾಪಾರಿಗಳಿಗೆ ಈ ದಿನ ದನಾತ್ಮಕವಾಗಿರಲಿದೆ.
ವೈವಾಹಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳು ನಿಮ್ಮ ಮಕ್ಕಳ ಮೇಲೆ ನಕಾರಾತ್ಮಕ ಪರಿಣಾಮ ಬೀರದಂತೆ ಜಾಗ್ರತೆವಹಿಸಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ನಿದ್ರಾಹೀನತೆಯ ಸಮಸ್ಯೆವಿರಬಹುದು.
ಕನ್ಯಾ ರಾಶಿ
ಇತರರಿಂದ ಹೆಚ್ಚು ನಿರೀಕ್ಷಿಸಬೇಡಿ, ಬದಲಿಗೆ ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಡುವುದು ಒಳ್ಳೆಯದು. ಕುಟುಂಬ ಜೀವನ, ವೈವಾಹಿಕ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಒತ್ತಡ ಅಧಿಕವಿರಲಿದೆ. ಉದ್ಯೋಗಿಗಳ ಕೆಲಸ ಕಾರ್ಯಗಳು ಯೊಜನೆಯಂತೆಯೇ ಪೂರ್ಣವಾಗಲಿದೆ. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಅನುಕೂಲಕರವಾಗಿರುತ್ತದೆ.
ತುಲಾ ರಾಶಿ
ಕೆಲಸದ ಜೊತೆಗೆ ವಿಶ್ರಾಂತಿಯ ಕಡೆಗೆ ಗಮನಹರಿಸಿ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಹಣಕಾಸಿನ ಸಮಸ್ಯೆಗಳು ಬಗೆಹರಿಯಲಿವೆ. ಹೊಸ ಕೆಲಸವನ್ನು ಪ್ರಾರಂಭಿಸಲು ಯೋಜನೆಗಳನ್ನು ಮಾಡಲು ಈ ಅವಧಿ ಅನುಕೂಲಕರವಾಗಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷಿಸಬೇಡಿ.
ವೃಶ್ಚಿಕ ರಾಶಿ
ಕೆಲಸದ ಸ್ಥಳದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳು ಕಂಡುಬರುವುದು. ಸಂಬಂಧದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ.
ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಮನೆಯಲ್ಲಿನ ಸಮಸ್ಯೆಗಳು ಬಗೆಹರಿಯಲಿವೆ. ಸಂಬಂಧಗಳು ಸುಧಾರಿಸುತ್ತವೆ. ಆರೋಗ್ಯಕ್ಕಾಗಿ ಜೀವನಶೈಲಿಯತ್ತ ಗಮನಹರಿಸಿ.
ಧನು ರಾಶಿ
ಹಣಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವಾಗ ತುಂಬಾ ಆತುರಪಡಬೇಡಿ. ಅನಗತ್ಯ ವಿಷಯಗಳಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡುವುದನ್ನು ತಪ್ಪಿಸಿ. ವ್ಯಾಪಾರಿಗಳು ಹಣಕಾಸಿನ ವಹಿವಾಟುಗಳು ಪೂರ್ಣಗೊಳ್ಳಬಹುದು. ನೀವು ಹೂಡಿಕೆ ಇತ್ಯಾದಿಗಳನ್ನು ಮಾಡಲು ಯೋಜಿಸುತ್ತಿದ್ದರೆ ಅದನ್ನು ಮುಂದೂಡುವುದು ಒಳ್ಳೆಯದು. ನೀವು ಯಾವುದೇ ದೈಹಿಕ ಸಮಸ್ಯೆಯನ್ನು ಎದುರಿಸುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಮಕರ ರಾಶಿ
ವಿದ್ಯಾರ್ಥಿಗಳು ಅಧ್ಯಯನದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ವ್ಯಾಪಾರಿಗಳಾಗಿದ್ದರೆ ಕೆಲಸದ ನಿಮಿತ್ತ ಹಠಾತ್ ಪ್ರಯಾಣ ಮಾಡಬೇಕಾಗಬಹುದು. ನಿಮ್ಮ ಈ ಪ್ರಯಾಣ ತುಂಬಾ ದುಬಾರಿಯಾಗಲಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ಸಂಗಾತಿಯ ಜೊತೆ ಕೆಲ ಭಿನ್ನಾಭಿಪ್ರಾಯಗಳಿರಬಹುದು, ಆದರೆ ನೀವು ಕೋಪವನ್ನು ನಿಯಂತ್ರಿಸಿ.
ಕುಂಭ ರಾಶಿ
ಪ್ರತಿಕೂಲ ಪರಿಸ್ಥಿತಿಯಲ್ಲಿ ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಯಾರನ್ನೂ ಕುರುಡಾಗಿ ನಂಬಬೇಡಿ. ವ್ಯಾಪಾರಿಗಳಿಗೆ ಈ ದಿನ ಕೆಲ ಅಡಚಣೆ ಉಂಟಾಗಬಹುದು. ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ಉಂಟಾಗಬಹುದು. ಆದರೆ ನಿಮ್ಮ ಮಾತನಿಂದ ಅವರನ್ನು ನೋಯಿಸಬೇಡಿ, ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಲ್ಲ.
ಮೀನ ರಾಶಿ
ಕೆಲವರು ನಿಮ್ಮಿಂದ ಲಾಭ ಪಡೆಯಲು ನೋಡಬಬುದು, ಅಂತವರ ಬಗ್ಗೆ ನೀವು ಜಾಗರೂಕರಾಗಿರಬೇಕು. ಬಾಕಿಯಿರುವ ಕೆಲಸವನ್ನು ಪೂರ್ಣಗೊಳಿಸುವ ಮೂಲಕ ನೀವು ದೊಡ್ಡ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ನೀವು ಚೆನ್ನಾಗಿ ಆಲೋಚಿಸಿ ತೆಗೆದುಕೊಳ್ಳಿ. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ವೃದ್ಧಿಸಲು ಪ್ರಯತ್ನಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications