ದಿನ ಭವಿಷ್ಯ: ಜುಲೈ 29, ಶುಭ ಸೋಮವಾರ, ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ಜ್ಯೋತಿಷ್ಯ ಪ್ರಕಾರ ಜುಲೈ 29ರ ದ್ವಾದಶ ರಾಶಿಗಳ ರಾಶಿಫಲ:

ಮೇಷ ರಾಶಿ

ಮೇಷ ರಾಶಿಯವರಿಗೆ ಈ ದಿನ ಉತ್ತಮವಾಗಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಹೊಸ ಆಸ್ತಿ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜನೆಗಳನ್ನು ಮಾಡಬಹುದು.
ನೀವು ಹಣಕ್ಕೆ ಸಂಬಂಧಿಸಿದ ಕೆಲಸವನ್ನು ಬಹಳ ಆಲೋಚಿಸಿ ಮಾಡಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನೆಗಡಿ, ಕೆಮ್ಮು ಮೊದಲಾದ ಸಮಸ್ಯೆಗಳು ಬರಬಹುದು.

Dina Bhavishya

ವೃಷಭ ರಾಶಿ

ಈ ವಾರ ನಿಮಗೆ ಉತ್ತಮವಾಗಿದೆ, ನೀವು ತೆಗೆದುಕೊಳ್ಳುವ ನಿರ್ಧಾರ ನಿಮಗೆ ಉತ್ತಮ ಫಲ ಪಡಲಿದೆ. ಆತ್ಮವಿಶ್ವಾಸ ಹೆಚ್ಚಾಗುತ್ತದೆ , ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ.
ಆರ್ಥಿಕ ಜೀವನ ಚೆನ್ನಾಗಿರಲಿದೆ. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ. ಸಂಬಂಧಗಳು ಸುಧಾರಿಸುತ್ತವೆ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ಚಿಕ್ಕ ಆರೋಗ್ಯ ಸಮಸ್ಯೆಯಾದರೂ ನಿರ್ಲಕ್ಷ್ಯ ಮಾಡಬೇಡಿ.

ಮಿಥುನ ರಾಶಿ

ಈ ದಿನ ನೀವು ಖರ್ಚಿನ ಕಡೆಗೆ ಗಮನಹರಿಸಿ, ನಿಮ್ಮ ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ತಪ್ಪು ಮಾಡಬೇಡಿ, ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬದಲ್ಲಿನ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿ, ಮುಕ್ತವಾಗಿ ಮಾತನಾಡುವುದರ ಮೂಲಕ ಸಮಸ್ಯೆ ಬಗೆಹರಿಯಲಿದೆ. ಪ್ರೇಮಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ಈ ದಿನ ಗಾಡಿಯನ್ನು ನೋಡಿಕೊಂಡು ಓಡಿಸಿ


ಕರ್ಕ ರಾಶಿ

ನೀವು ನಕಾರಾತ್ಮಕ ಚಿಂತಿಸುವ ಬದಲಿಗೆ ಸಕಾರಾತ್ಮಕವಾಗಿ ಯೋಚಿಸಲು ಪ್ರಾರಂಭಿಸಿ, ಬದುಕಿನಲ್ಲಿ ಉತ್ತಮ ಬದಲಾವಣೆಯಾಗುತ್ತದೆ, ಆರ್ಥಿಕವಾಗಿ ನೋಡುವುದಾದರೆ ಹೆಚ್ಚು ಖರ್ಚು ಮಾಡಲು ಹೋಗಬೇಡಿ. ಕೆಲಸದಲ್ಲಿ ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಅವಾಹಿತರಿಗೆ ಮದವೆ ಪ್ರಸ್ತಾಪ ಬರಲಿದೆ.ಸೊಂಟಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ಸೂಕ್ತ ವೈದ್ಯರರನ್ನು ಕಾಣಿ.

ಸಿಂಹ ರಾಶಿ

ಈ ದಿನ ನಿಮಗೆ ಕೆಲಸ ಕಾರ್ಯದ ವಿಚಾರದಲ್ಲಿ ಉತ್ತಮವಾಗಿದೆ. ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ, ಇಲ್ಲದಿದ್ದರೆ ಸಮಸ್ಯೆಗಳು ಹೆಚ್ಚಾಗಬಹುದು. ವ್ಯಾಪಾರಿಗಳು ನಿಮ್ಮ ವ್ಯವಹಾರದಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಯಾರನ್ನೂ ನಂಬಬೇಡಿ, ಹಣದ ವಿಷಯಗಳಲ್ಲಿ ಜಾಗರೂಕರಾಗಿರಿ. ಕುಟುಂಬದಲ್ಲಿ ನಿಮ್ಮ ಕೋಪವನ್ನು ತೋರಿಸಲು ಹೋಗಬೆಡಿ, ಕುಟುಂಬದ ನೆಮ್ಮದಿ ಹಾಳಾಗುವುದು. ರೊಮ್ಯಾಂಟಿಕ್ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಕನ್ಯಾ ರಾಶಿ

ವೃತ್ತಿ ಜೀವನದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ. ವೈವಾಹಿಕ ಜೀವನದಲ್ಲಿ ಬಾಂದವ್ಯ ಚೆನ್ನಾಗಿರಲಿದೆ, ಕುಟುಂಬದಲ್ಇ ನೆಮ್ಮದಿ ಇರಲಿದೆ.
ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಿಗಳಿಗೆ ಈ ದಿನ ಒಡಾಟ ಹೆಚ್ಚಿರಲಿದೆ. ಆರೋಗ್ಯ ಮಾತ್ರ ನಿರ್ಲಕ್ಷ್ಯ ಮಾಡಬೇಡಿ.


ತುಲಾ ರಾಶಿ

ನೀವು ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ದಿನ ನೀವು ಶುಭ ಸುದ್ದಿ ಪಡೆಯುತ್ತೀರಿ. ನೀವು ತುಂಬಾ ಧನಾತ್ಮಕ ಮತ್ತು ಶಕ್ತಿಯುತ ಭಾವನೆ ಹೊಂದುವಿರಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹಣದ ಕೊರತೆಯಿಂದ ಸ್ಥಗಿತಗೊಂಡ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ, ತಾಳ್ಮೆಯಿಂದ ಪರಿಸ್ಥಿತಿ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ.

ವೃಶ್ಚಿಕ ರಾಶಿ

ಮಕ್ಕಳ ಕುರಿತ ಚಿಂತೆ ದೂರಾಗಲಿದೆ, ಹಾಗಾಗಿ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗುತ್ತವೆ ಮತ್ತು ಹೊಸ ಆದಾಯದ ಮೂಲವು ಲಭ್ಯವಾಗುತ್ತದೆ. ವ್ಯಾಪಾರಿಗಳಿಗೆ ಹೂಡಿಕೆ ಮಾಡಲು ಈ ಸಮಯ ಉತ್ತಮವಾಗಿದೆ. ವೈವಾಹಿಕ ಜೀವನದ ಕಡೆಗೆ ಗಮನಹರಿಸಿ. ಆಹಾರಕ್ರಮದ ಕಡೆಗೆ ಗಮನಹರಿಸಿ.

ಧನು ರಾಶಿ

ನೀವು ಸಮಯವನ್ನು ವ್ಯರ್ಥ ಮಾಡಬೇಡಿ, ಈ ಸಮಯದಲ್ಲಿ ಹಣವನ್ನು ನೋಡಿಕೊಂಡು ಖರ್ಚು ಮಾಡಿದರೆ ಒಳ್ಳೆಯದು. ಒಂದೇ ಕೆಲಸವನ್ನು ಒಟ್ಟಿಗೆ ಮಾಡಲು ಹೋಗಬೇಡಿ, ಯಾವ ಕೆಲಸವು ಪೂರ್ಣವಾಗುವುದಿಲ್ಲ, ಆದ್ದರಿಂದ ಪ್ರಮುಖ ಕೆಲಸದ ಕಡೆಗೆ ಗಮನಹರಿಸಿ. ಆರೋಗ್ಯ ಚೆನ್ನಾಗಿರಲಿದೆ.

ಮಕರ ರಾಶಿ

ಈ ದಿನ ನಿಮಗೆ ಶುಭವಾಗಿದೆ, ವ್ಯಾಪಾರಿಗಳು ಆತುರದಿಂದ ದೂರವಿರಬೇಕು ಇಲ್ಲದಿದ್ದರೆ ನಷ್ಟ ಸಂಭವಿಸಬಹುದು. ವ್ಯಾಪಾರಿಗಳು ನೀವು ಉತ್ತಮ ಲಾಭವನ್ನು ಪಡೆಯಬಹುದು. ಮನೆಯ ವಾತಾವರಣ ಶಾಂತವಾಗಿರುತ್ತದೆ. ಒಡಹುಟ್ಟಿದವರೊಂದಿಗಿನ ಸಂಬಂಧಗಳಲ್ಲಿ ಪ್ರೀತಿ ಮತ್ತು ಮಾಧುರ್ಯ ಹೆಚ್ಚಾಗುತ್ತದೆ. ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ.

ಕುಂಭ ರಾಶಿ

ಉದ್ಯೋಗವನ್ನು ಹುಡುಕುತ್ತಿದ್ದರೆ ನಿಮ್ಮ ಪ್ರಯತ್ನ ಮತ್ತಷ್ಟು ಚುರುಕುಗೊಳಿಸಿ, ಪ್ರಮುಖ ದಾಖಲೆಗಳನ್ನು ಮಾಡುವಾಗ ಆತುರಪಡಬೇಡಿ, ಹಣಕ್ಕೆ ಸಂಬಂಧಿಸಿದ ನಿರ್ಧಾರಗಳಲ್ಲಿ ಆತುರಬೇಡ. ನೀವು ಅವಿವಾಹಿತರಾಗಿದ್ದರೆ ಮದುವೆ ಸಂಬಂಧ ಬರಬಹುದು, ದಾಂಪತ್ಯದಲ್ಲಿ ಅಡಚಣೆ ನಿವಾರಣೆಯಾಗುವುದು, ಆರೋಗ್ಯದ ಬಗ್ಗೆ ಹೇಳುವುದಾದರೆ ಮೊಣಕಾಲಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.

ಮೀನ ರಾಶಿ

ಕೆಲಸದ ಸ್ಥಳದಲ್ಲಿ ನೀವು ಜಾಗರೂಕರಾಗಿರಬೇಕು,ನಿಮ್ಮ ರಹಸ್ಯಗಳನ್ನು ತಿಳಿದುಕೊಳ್ಳಲು ಕೆಲವರು ಪ್ರಯತ್ನಿಸುತ್ತಾರೆ. ಅಂತಹವರ ಬಗ್ಗೆ ಜಾಗರೂಕರಾಗಿರಿ. ಹಣಕ್ಕೆ ಸಂಬಂಧಿಸಿದ ಚಿಂತೆಗಳು ದೂರವಾಗುತ್ತವೆ. ವ್ಯಾಪಾರಿಗಳಿಗೆ ಉತ್ತಮವಾಗಿದೆ, ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope Prediction for 29 July 2024: Dina Bhavishya for All Zodiac Signs

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Sunday, July 28, 2024, 21:41 [IST]
X
Desktop Bottom Promotion