Latest Updates
-
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ?
ದಿನ ಭವಿಷ್ಯ: ಜುಲೈ 2, ಏಕಾದಶಿ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ಶುಭ ದಿನ, ದ್ವಾದಶ ರಾಶಿಗಳ ರಾಶಿಫಲ....
ಮೇಷ ರಾಶಿ
ನಿಮ್ಮ ಆತ್ಮವಿಶ್ವಾಸ ಕುಗ್ಗಿಸುವ ಕೆಲವೊಂದು ವಿಷಯಗಳು ಬರಬಹುದು, ಆದರೆ ನೀವು ತಾಳ್ಮೆಯಿಂದ ವರ್ತಿಸಬೇಕಾಗುತ್ತದೆ. ಯಾರಿಂದಲೂ ಅಗತ್ಯಕ್ಕಿಂತ ಹೆಚ್ಚಿನದನ್ನು ನಿರೀಕ್ಷಿಸಬೇಡಿ. ವ್ಯಾಪಾರಿಗಳು ಅಷ್ಟೇ ವ್ಯಾಪಾರದ ಕಡೆಗೆ ಗಮನಿಸದಿದ್ದರೆ ನಷ್ಟವನ್ನು ಅನುಭವಿಸಬಹುದು. ಮನೆಯ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲ ಗೊಂದಲದಿಂದ ಪರಿಹಾರ ಸಿಗಲಿದೆ. ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯಬಹುದು.
ವ್ಯಾಪಾರಿಗಳ ಆತ್ಮವಿಶ್ವಾಸ ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ ಈ ದಿನ ಅಡೆತಡೆಗಳು ನಿವಾರಣೆಯಾಗುತ್ತವೆ. ಕುಟುಂಬ ಜೀವನದಲ್ಲಿ ಒಳ್ಳೆಯ ಹೊಂದಾಣಿಕೆ ಇರಲಿದೆ.
ವಿವಾಹಿತರಿಗೆ ಈ ದಿನ ಉತ್ತಮವಾಗಿರಲಿದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಹೊಸ ಕಾರ್ಯ ಪ್ರಾರಮಭಿಸಲು ಈ ದಿನವು ಅನುಕೂಲಕರವಾಗಿದೆ. ನಿಮ್ಮ ಜೀವನದಲ್ಲಿ ದೊಡ್ಡ ಬದಲಾವಣೆ ಆಗಬಹುದು. ವ್ಯಾಪಾರಿ0ಗಳಿಗೆ ಈ ದಿನ ಒತ್ತಡದಿಂದ ಕೂಡಿರಲಿದೆ. ನಿಮ್ಮ ಸಮಸ್ಯೆ ಶೀಘ್ರದಲ್ಲೇ ಪರಿಹಾರವಾಗಲಿದೆ. ಕುಟುಂಬ ಸದಸ್ಯರಲ್ಲಿ ಪ್ರೀತಿ ಮತ್ತು ಒಗ್ಗಟ್ಟು ಇರುತ್ತದೆ. ಸಂಗಾತಿಯ ಮನಸ್ಸಿಗೆ ನೋವಾಗುವ ಮಾತುಗಳನ್ನಾಡಬೇಡಿ. ಆರೋಗ್ಯ ಚೆನ್ನಾಗಿರಲಿದೆ.
ಕರ್ಕ ರಾಶಿ
ನಿಮ್ಮ ಸಂಬಂಧಗಳನ್ನು ಸುಧಾರಿಸಲು ನೀವು ಹೆಚ್ಚಿನ ಪ್ರಯತ್ನ ಮಾಡಬೇಕಾಗುತ್ತದೆ. ನಿಮ್ಮ ಕುಟುಂಬಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಚೆನ್ನಾಗಿ ಯೋಚಿಸಿ ತೆಗೆದುಕೊಳ್ಳಿ. ವ್ಯಾಪಾರಿಗಳು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆಯಬಹುದು. ನಿಮ್ಮ ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ. ಹಿರಿಯರ ಮಾತನ್ನು ನಿರ್ಲಕ್ಷಿಸಬೇಡಿ ಇಲ್ಲದಿದ್ದರೆ ನಷ್ಟ ಉಂಟಾಗುವುದು. ಆರೋಗ್ಯದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಕೆಲಸದಲ್ಲಿ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ, ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಕೆಲಸ ಮಾಡಬೇಕಾಗುತ್ತದೆ. ವ್ಯಾಪಾರಿಗಳಿಗೆ ಯಾವುದೇ ರೀತಿಯ ಬದಲಾವಣೆಗೆ ಸಮಯ ಸರಿಯಲ್ಲ. ಹಣದ ಚಿಂತೆ ಇರುತ್ತದೆ. ಉದ್ಯೋಗಿಗಳ ಎಲ್ಲಾ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳಲಿದೆ. ವೈವಾಹಿಕ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುವುದು.
ಕನ್ಯಾ ರಾಶಿ
ವೃತ್ತಿ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಚಿಂತೆಗಳು ದೂರಾಗಲಿದೆ. ಆರ್ಥಿಕವಾಗಿ ಈ ಅವಧಿ ನಿಮಗೆ ಉತ್ತಮವಾಗಿದೆ. ನೀವು ಹೊಸ ಜವಾಬ್ದಾರಿಗಳು ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಹೆಚ್ಚುತ್ತಿರುವ ಮೈ ತೂಕವನ್ನು ಆರೋಗ್ಯಕರವಾಗಿ ನಿಯಂತ್ರಿಸಿ.
ತುಲಾ ರಾಶಿ
ನೀವು ಹಣಕಾಸಿನ ವಿಷಯಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು. ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ. ನೀವು ಸಂಬಳದಲ್ಲಿ ಹೆಚ್ಚಳವನ್ನು ಬಯಸಿದರೆ ಅಥವಾ ನಿಮ್ಮ ಅಪೇಕ್ಷಿತ ವರ್ಗಾವಣೆಗಾಗಿ ಕಾಯುತ್ತಿದ್ದರೆ, ನೀವು ಒಳ್ಳೆಯ ಸುದ್ದಿ ಪಡೆಯಬಹುದು. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಬಂದರೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ. ಈ ದಿನ ಆರೋಗ್ಯ ಅಷ್ಟು ಉತ್ತಮವಾಗಿರಲ್ಲ.
ವೃಶ್ಚಿಕ ರಾಶಿ
ವ್ಯಾಪಾರಿಗಳಿಗೆ ಸವಾಲಿನ ದಿನ, ನೀವು ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕು. ಇತರರ ಮಾತು ಕೇಳಿ ನೀವು ನಿರ್ಧಾರ ತೆಗೆದುಕೊಳ್ಳಬೇಡಿ. ಉದ್ಯೋಗಿಗಳು ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಕಷ್ಟದ ಸಂದರ್ಭಗಳಲ್ಲಿಯೂ ನಿಮ್ಮ ಪ್ರೀತಿಪಾತ್ರರು ನಿಮ್ಮೊಂದಿಗೆ ಇರುತ್ತಾರೆ. ಆರೋಗ್ಯ ಸಮಸ್ಯೆ ಕೆಲಸದ ಮೇಲೆ ಪರಿಣಾಮ ಬೀರುವುದು.
ಧನು ರಾಶಿ
ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಮಾಡುತ್ತೀರಿ, ನಿಮ್ಮ ಈ ಪ್ರಯಾಣವು ತುಂಬಾ ಮಂಗಳಕರವಾಗಿರುತ್ತದೆ. ಹಣಕಾಸಿನ ಸಮಸ್ಯೆ ಬಗೆಹರೆಯುವುದರಿಂದ ಬಾಕಿ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸಲಾಗುವುದು. ಉದ್ಯೋಗಿಗಳು ಕೆಲಸದ ಕಡೆಗೆ ಗಮನಹರಿಸದಿದ್ದರೆ ಕಷ್ಟ. ಸಂಗಾತಿಯೊಂದಿಗಿನ ಸಂಬಂಧವು ಗಾಢವಾಗುವುದು. ದೈಹಿಕವಾಗಿ, ಮಾನಸಿಕವಾಗಿ ಒಳ್ಳೆಯದಿದೆ.
ಮಕರ ರಾಶಿ
ಕಾಲಾನಂತರದಲ್ಲಿ ನೀವು ನಿಮ್ಮೊಳಗೆ ಕೆಲವು ಬದಲಾವಣೆಗಳನ್ನು ತರಬೇಕಾಗಿದೆ. ಕೆಲಸಕ್ಕೆ ಸಂಬಂಧಿಸಿದಂತೆ ನೀವು ಸಾಕಷ್ಟು ಓಡಾಡಬೇಕಾಗುತ್ತದೆ. ವ್ಯಾಪಾರಿಗಳು ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತವೆ. ಹೊಸ ಹೂಡಿಕೆಗಳನ್ನು ಮಾಡಲು ಸಮಯ ಅನುಕೂಲಕರವಾಗಿದೆ. ಸಹೋದರ ಅಥವಾ ಸಹೋದರಿಗೆ ಸಂಬಂಧಿಸಿದ ಯಾವುದೇ ಚಿಂತೆಗಳು ಪರಿಹರಿಸಲ್ಪಡುತ್ತವೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ.
ಕುಂಭ ರಾಶಿ
ಕಠಿಣ ಪರಿಶ್ರಮದ ಹೊರತಾಗಿಯೂ, ನಿರೀಕ್ಷೆಗೆ ತಕ್ಕಂತೆ ಫಲಿತಾಂಶಗಳನ್ನು ಪಡೆಯದ ಕಾರಣ ಸ್ವಲ್ಪ ನಿರಾಶೆ ಉಂಟಾಗಬಹುದು. ನೀವು ಆತುರವನ್ನು ತಪ್ಪಿಸಬೇಕು. ಹೊಸ ಕೆಲಸವನ್ನು ಪ್ರಾರಂಭಿಸಲು ದಿನವು ಅನುಕೂಲಕರವಾಗಿದೆ. ಉದ್ಯೋಗಿಗಳ ಸಂಪೂರ್ಣ ಗಮನ ನಿಮ್ಮ ಕೆಲಸದ ಮೇಲೆ ಇರಬೇಕು. ಯಾವುದೇ ಕೆಲಸವನ್ನು ನಾಳೆಗೆ ಮುಂದೂಡಬೇಡಿ. ಈ ದಿನ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ.
ಮೀನ ರಾಶಿ
ಈ ದಿನ ಕೆಲಸದಲ್ಲಿ ಸವಾಲುಗಳಿರಬಹುದು. ವ್ಯಾಪಾರಿಗಳು ದೊಡ್ಡ ಲಾಭಕ್ಕಾಗಿ ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಅಲ್ಲೊಂದು ಇಲ್ಲೊಂದು ವಿಷಯಗಳ ಬಗ್ಗೆ ಹೆಚ್ಚು ಗಮನ ಕೊಡಬೇಡಿ , ಪ್ರೇಮಿಗಳಿಗೆ ಈ ದಿನ ಅನುಕೂಲಕರವಾಗಿದೆ. ಆರೋಗ್ಯಕ್ಕಾಗಿ ಆರೋಗ್ಯಕರ ಜೀವನದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











