Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಆಗಸ್ಟ್ 3, ದಿನ ಭವಿಷ್ಯ: ಅಮವಾಸ್ಯೆ ತಿಥಿಯ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 3) ಭವಿಷ್ಯ ನೋಡೋಣ:
ಮೇಷ ರಾಶಿ
ಮೇಷ ರಾಶಿಯವರು ಈ ದಿನ ನಿಮ್ಮ ನಡವಳಿಕೆ ಕಡೆಗೆ ಗಮನಹರಿಸಬೇಕು, ಕೆಲಸದಲ್ಲಿ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ, ಇನ್ನು ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ನಿಮಗೆ ಉತ್ತಮವಾಗಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ವಿದ್ಯಾರ್ಥಿಗಳಿಗೆ ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ. ಆರೋಗ್ಯದ ಕಡೆಗೆ ಗಮನಹರಿಸಿ. ವ್ಯಾಪಾಗಳಿಗೆ ಈ ದಿನ ಅನುಕೂಲಕರವಾಗಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ಅರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವಿನ ಸಮಸ್ಯೆವಿರಬಹುದು.
ಮಿಥುನ ರಾಶಿ
ಈ ದಿನ ನೀವು ಮನಸ್ಸಿಗೆ ನೋವು ಕೊಡುವ ಹಳೆಯ ವಿಚಾರ ನೆನಪು ಮಾಡುವ ಮಾಡಲು ಬೇರೆ ಕಡೆಗೆ ನಿಮ್ಮ ಗಮನ ಹರಿಸಿ, ಕೋಪವನ್ನು ತುಂಬಾನೇ ನಿಯಂತ್ರಿಸಿ. ವ್ಯಾಪಾರಿಗಳಿಗೆ ಈ ದಿನ ಶುಭವಾಗಿದೆ. ನೀವು ಸಂಗಾತಿಯ ಮೇಲೆ ಕೋಪಪಡುವ ಬದಲಿಗೆ ಅವರನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿದರೆ ಪರಿಸ್ಥಿತಿ ಸುಧಾರಿಸುವುದು. ಆರೋಗ್ಯದ ಬಗ್ಗೆ ಹೇಳುವುದಾದರೆ ನಿರಂತರ ಕುಳಿತು ಕೆಲಸ ಮಾಡಬೇಡಿ.
ಕರ್ಕ ರಾಶಿ
ಈ ದಿನ ಕೆಲಸದಲ್ಲಿ ಹೆಚ್ಚಿನ ಒತ್ತಡ ಇರಬಹುದು, ಆರ್ತಿಕವಾಗಿ ಈ ಸಮಯ ಉತ್ತಮವಿದೆ, ಹಾಗಾಗಿ ಹೂಡಿಕೆ ಬಗ್ಗೆ ಅಲೋಚನೆ ಮಾಡಬಹುದು. ಉದ್ಯೋಗ ಬದಲಾವಣೆಗೂ ಈ ಸಮಯ ಉತ್ತಮವಾಗಿದೆ, ಅಲ್ಲದೆ ವಯಯಕ್ತಿಕ ಬದುಕಿನಲ್ಲಿ ವಿವಾಹಿತರು ಸಂಗಾತಿ ಜೊತೆಗಿನ ಭಿನ್ನಾಭಿಪ್ರಾಯ ದೂರ ಮಾಡುವುದು ಒಳ್ಳೆಯದು. ಅರೋಗ್ಯದ ಬಗ್ಗೆ ನೋಡುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಕೆಲಸಕ್ಕೆ ಸಂಬಂಧಿಸಿದ ಚಿಂತೆ ಹೆಚ್ಚಾಗಬಹುದು, ಎಲ್ಲಾ ಜವಾಬ್ದಾರಿ ನೀವೇ ತೆಗೆದುಕೊಳ್ಳಬೇಡಿ, ಖರ್ಚು ನಿಯಂತ್ರಿಸಿದರೆ ಒಳ್ಳೆಯದು, ಉದ್ಯೋಗಿಗಳು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಅರೋಗ್ಯದ ಬಗ್ಗೆ ಹೇಳುವುದಾದರೆ ವ್ಯಾಯಾಮದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಕೆಲಸದಲ್ಲಿ ಬೇಡದ ವಿಷಯಗಳ ಕಡೆ ಗಮನ ನೀಡದೆ ನಿಮ್ಮ ಕೆಲಸದತ್ತ ಗಮನಹರಿಸಿ, ಅಲ್ಲದೆ ಚಿಕ್ಕ ವಿಷಯಕ್ಕೆ ಕೋಪ ಪಡಬೇಡಿ, ಹಣದ ವ್ಯವಹಾರ ಮಾಡುವಾಗ ಜಾಗ್ರತೆವಹಿಸಿ, ವ್ಯಾಪಾರಿಗಳು ಕೂಡ ಹಣದ ನಷ್ಟ ಉಂಟಾಗದಂತೆ ಜಾಗ್ರತೆವಹಿಸಿ.
ತುಲಾ ರಾಶಿ
ಈ ದಿನ ನೀವು ಭಾವನಾತ್ಮಕವಾಗಿ ಸ್ವಲ್ಪ ದುರ್ಬಲರಾಗಿರುತ್ತೀರಿ, ಸಮಸ್ಯೆಯನ್ನು ಧೈರ್ಯದಿಂದ ಎದುರಿಸಲು ಪ್ರಯತ್ನಿಸಿ, ಕೆಲಸ ಕಾರ್ಯಗಳು ಚೆನ್ನಾಗಿ ನಡೆಯಲಿದೆ, ಮನೆಯ ವಾತಾವರಣ ಅಷ್ಟು ಸರಿಯಿರಲ್ಲ, ಮನೆಯ ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಿ.
ವೃಶ್ಚಿಕ ರಾಶಿ
ಹಣದ ಬಗ್ಗೆ ಜಾಗ್ರತೆವಹಿಸದಿದ್ದರೆ ಅರ್ಥಿಕ ತೊಂದರೆಗಳು ಉಂಟಾಗುವುದು, ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಅಲ್ಲದೆ ವೈವಾಹಿಕ ಬದುಕಿನಲ್ಲಿ ಏನಾದರು ಭಿನ್ನಾಭಿಪ್ರಾಯವಿದ್ದರೆ ಮುಕ್ತ ಮಾತನಾಡುವ ಮೂಲಕ ಬಗೆಹರಿಸಿಕೊಳ್ಳಿ. ಹೂಡಿಕೆಗೆ ಅವಸರ ಬೇಡ.
ಧನು ರಾಶಿ
ನೀವು ಬೇರೆಯವರ ವಿಷಯಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ, ಇಲ್ಲದಿದ್ದರೆ ನೀವು ಅನುಪಯುಕ್ತ ವಿಷಯಗಳಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡುತ್ತೀರಿ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ , ಕುಟುಂಬದಲ್ಲಿನ ಭಿನ್ನಾಭಿಪ್ರಾಯ ದೂರಾಗಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಭುಜಕ್ಕೆ ಸಂಬಂಧಿಸಿದ ಸಮಸ್ಯೆವಿರಬಹುದು.
ಮಕರ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆದರೆ ಅನಗತ್ಯ ವೆಚ್ಚಗಳನ್ನು ತಪ್ಪಿಸಿ ಇಲ್ಲದಿದ್ದರೆ ನಿಮ್ಮ ಆರ್ಥಿಕ ಸ್ಥಿತಿ ಹದಗೆಡಬಹುದು. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ, ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ನೋಡಿಕೊಳ್ಳಿ, ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಬೇಡ.
ಕುಂಭ ರಾಶಿ
ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಕೆಲಸಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ, ಇಲ್ಲದಿದ್ದರೆ ಅದು ಲಾಭದ ಬದಲು ನಷ್ಟವನ್ನು ಉಂಟುಮಾಡಬಹುದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಈ ದಿನವು ಒಳ್ಳೆಯದು. ನಿಮ್ಮ ಯಾವುದೇ ನಿರ್ಧಾರದಿಂದ ನೀವು ಸರಿಯಾದ ಫಲಿತಾಂಶವನ್ನು ಪಡೆಯಬಹುದು. ಆರೋಗ್ಯದ ಬಗ್ಗೆ ಸ್ವಲ್ಪವೂ ನಿರ್ಲಕ್ಷ್ಯ ಬೇಡ.
ಮೀನ ರಾಶಿ
ಭವಿಷ್ಯದ ಯೋಜನೆಗಳನ್ನು ಮಾಡಲು ಈ ದಿನವು ಅನುಕೂಲಕರವಾಗಿದೆ. ನೀವು ಯಾರಿಗಾದರೂ ಸಾಲ ನೀಡಿದ್ದರೆ, ಇಂದು ಅದನ್ನು ಮರಳಿ ಪಡೆಯುವ ಸಾಧ್ಯತೆಯಿದೆ. ಹಣದ ಕೊರತೆಯಿಂದ ಸ್ಥಗಿತಗೊಂಡಿದ್ದ ಕೆಲಸವೂ ಪೂರ್ಣಗೊಳ್ಳಲಿದೆ. ಈ ದಿನ ಯಾವುದೇ ಪ್ರಮುಖ ನಿರ್ದಾರವಾದರೂ ಅಲೋಚಿಸಿ ತೆಗೆದುಕೊಳ್ಳಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬದಲ್ಲಿ ಕೋಪದ ವರ್ತನೆ ತೋರಬೇಡಿ, ಆರೋಗ್ಯದಲ್ಲಿ ಏರಳಿತವಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










