Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ: ಜೂನ್ 30, ಈ ಮಾಸದ ಕೊನೆಯ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ಶುಭ ಭಾನುವಾರ, ದ್ವಾದಶ ರಾಶಿಗಳ ರಾಶಿಫಲ....
ಮೇಷ ರಾಶಿ
ಈ ದಿನ ನೀವು ತುಂಬಾ ಧನಾತ್ಮಕವಾಗಿರುತ್ತೀರಿ. ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ. ಕೆಲಸದ ದೃಷ್ಟಿಯಿಂದ ಅನುಕೂಲಕರವಾಗಿದೆ. ಪ್ರೇಮಿಗಳಿಗೆ ಈ ದಿನ ಉತ್ತಮವಾಗಿದೆ. ಆರೋಗ್ಯ ಉತ್ತಮವಾಗಿರಲಿದೆ.

ವೃಷಭ ರಾಶಿ
ನೀವು ಅದೃಷ್ಟ ನಂಬಿ ಕೂರಬೇಡಿ. ವ್ಯಾಪಾರಿಗಳು ಲಾಭ ಗಳಿಸಲು ಹೆಚ್ಚಿನ ಶ್ರಮ ಹಾಕಬೇಕಾಗುವುದು. ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿದೆ. ಕುಟುಂಬದೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ಸಂಗಾತಿಯ ಜೊತೆ ಜಗಳವಾಡಬೇಡಿ. ಆರೋಗ್ಯದ ಬಗ್ಗೆ ಹೇಳುವುದಾದರೆ ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ.
ಮಿಥುನ ರಾಶಿ
ಹಣಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಕಚೇರಿಯಲ್ಲಿ ನೀವು ಬಯಸಿದ ಕೆಲಸವನ್ನು ಮಾಡಲು ನಿಮಗೆ ಅವಕಾಶ ಸಿಗಲಿದೆ. ಪ್ರೇಮಿಗಳಿಗೆ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವು ಮತ್ತು ಆಯಾಸದಂತಹ ಸಮಸ್ಯೆಗಳು ಉಂಟಾಗಬಹುದು. ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷಿಸಬೇಡಿ.
ಕರ್ಕ ರಾಶಿ
ಕುಟುಂಬದಲ್ಲಿ ಈ ದಿನ ಪರಿಸ್ಥಿತಿ ಚೆನ್ನಾಗಿರಲ್ಲ, ನೀವು ಸಮಸ್ಯೆಯನ್ನು ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕು. ಕೆಲಸದಲ್ಲಿ ಒತ್ತಡ ತೆಗೆದುಕೊಳ್ಳಬೇಡಿ. ವ್ಯಾಪಾರಿಗಳು ಈ ಅವಧಿಯಲ್ಲಿ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ಸಂಗಾತಿಯ ಜೊತೆಗೆ ಭಿನ್ನಾಭಿಪ್ರಾಯವಿರಬಹುದು, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ನಿಮ್ಮ ನಿರ್ಧಾರವನ್ನು ಕಾರ್ಯಗತಗೊಳಿಸುವುದು ನಿಮಗೆ ತುಂಬಾ ಮಂಗಳಕರವಾಗಿರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನೀವು ಬಯಸಿದ ಲಾಭ ಪಡೆಯುತ್ತೀರಿ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸುತ್ತೀರಿ.
ಕನ್ಯಾ ರಾಶಿ
ಕೆಲಸದಲ್ಲಿ ಕೆಲ ಅಡೆತಡೆಗಳಿರಬಹುದು, ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ, ಈ ದಿನ ಕೆಲಸದ ಒತ್ತಡ ಹೆಚ್ಚಿರಲಿದೆ. ಮನೆಯ ವಾತಾರಣ ತುಂಬಾ ಚೆನ್ನಾಗಿರಲಿದೆ, ಹೀಗಾಗಿ ಮಾನಸಿಕ ನೆಮ್ಮದಿ ದೊರೆಯುತ್ತದೆ. ಅಲರ್ಜಿ ಮುಂತಾದ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ತುಲಾ ರಾಶಿ
ನೀವು ನಿಮ್ಮ ಜವಾಬ್ದಾರಿ ನಿರ್ಲಕ್ಷ್ಯ ಮಾಡಿದರೆ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ಬೇರೆಯವರ ಸಲಹೆ ಮೇರೆಗೆ ಹೂಡಿಕೆ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ, ಇಲ್ಲದಿದ್ದರೆ ನೀವು ಲಾಭದ ಬದಲು ನಷ್ಟವನ್ನು ಅನುಭವಿಸಬಹುದು. ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ನಿಮಗೆ ಅನುಕೂಲಕರವಾಗಿದೆ. ವೈಯಕ್ತಿಕ ವಿಷಯಗಳಲ್ಲಿ ಹೊರಗಿನವರು ಹೆಚ್ಚು ಹಸ್ತಕ್ಷೇಪ ಮಾಡಲು ಬಿಡಬೇಡಿ. ಆರೋಗ್ಯದತ್ತ ತೋರುವ ನಿರ್ಲಕ್ಷ್ಯ ಸಮಸ್ಯೆ ಹೆಚ್ಚಿಸಲಿದೆ.
ವೃಶ್ಚಿಕ ರಾಶಿ
ವಿದ್ಯಾರ್ಥಿಗಳು ತಮ್ಮ ಅಧ್ಯಯನಕ್ಕೆ ಸಂಬಂಧಿಸಿದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಅಂತಹ ಪರಿಸ್ಥಿತಿಯಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ, ನಿಮ್ಮ ಪಾಲುದಾರರೊಂದಿಗೆ ಉತ್ತಮ ಹೊಂದಾಣಿಕೆ ಕಾಪಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರುವುದು.
ಧನು ರಾಶಿ
ಕುಟುಂಬ ಜೀವನದಲ್ಲಿ ಕೆಲ ಅಭಿಪ್ರಾಯ ವ್ಯತ್ಯಾಸ ಬರಬಹುದು, ಆದರೆ ನೀವು ಕೋಪದ, ಅಸಮಧಾನದ ಬದಲಿಗೆ ತಾಳ್ಮೆಯಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ. ಜ್ವರ, ನೆಗಡಿ, ಕೆಮ್ಮು ಮುಂತಾದ ಆರೋಗ್ಯ ಸಮಸ್ಯೆಗಳಿರಬಹುದು. ಈ ದಿನ ಆರ್ಥಿಕ ದೃಷ್ಟಿಯಿಂದ ಒಳ್ಳೆಯದಲ್ಲ. ಜಾಗ್ರತೆವಹಿಸದಿದ್ದರೆ ಆರ್ಥಿಕ ನಷ್ಟವನ್ನು ಸಹ ಅನುಭವಿಸಬಹುದು.
ಮಕರ ರಾಶಿ
ಅನಪೇಕ್ಷಿತ ಪ್ರಯಾಣ ನಿಮ್ಮ ಆಯಾಸವನ್ನು ಹೆಚ್ಚಿಸಬಹುದು. ವೆಚ್ಚಗಳು ಹೆಚ್ಚಾಗಬಹು, ನಿಮ್ಮ ಹಣಕಾಸಿನ ಸಮಸ್ಯೆ ಗಾಢವಾಗುವುದು. ಕುಟುಂಬ ಸದಸ್ಯರಿಂದ ನೀವು ಭಾವನಾತ್ಮಕ ಬೆಂಬಲವನ್ನು ಪಡೆಯುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.
ಕುಂಭ ರಾಶಿ
ಕೆಲಸಕ್ಕೆ ಸಂಬಂಧಿಸಿದ ಯಾವುದೇ ಅಡೆತಡೆಗಳು ನಿವಾರಣೆಯಾಗುತ್ತವೆ. ಈ ಅವಧಿಯಲ್ಲಿ ಬಾಕಿ ಉಳಿದಿರುವ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುತ್ತವೆ. ಹಿರಿಯರು ನಿಮಗೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡರೆ, ನೀವು ಅದನ್ನು ಗೌರವಿಸಬೇಕು. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ನಿಮಗೆ ಹೃದ್ರೋಗ ಇದ್ದರೆ ನೀವು ಹೆಚ್ಚು ಜಾಗರೂಕರಾಗಿರಬೇಕು
ಮೀನ ರಾಶಿ
ಹಿತೈಷಿಗಳ ಸಲಹೆ ಮತ್ತು ಮಾರ್ಗದರ್ಶನವು ನಿಮಗೆ ತುಂಬಾ ಪ್ರಯೋಜನಕಾರಿಯಾಗಿದೆ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ. ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ. ಕುಟುಂಬದಲ್ಲಿ ಪರಿಸ್ಥಿತಿ ಸುಧಾರಿಸಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ತಲೆನೋವಿನ ಸಮಸ್ಯೆವಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










