Latest Updates
-
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್!
ಮೇ 4: ಶನಿದೇವನಿಗೆ ನಮಸ್ಕರಿಸಿ ದ್ವಾದಶ ರಾಶಿಫಲ ನೋಡೋಣ
ವೈದಿಕ ಶಾಸ್ತ್ರದ ಪ್ರಕಾರ ಮೇ 4 ನಿಮಗೆ ಹೇಗಿರಲಿದೆ ಎಂದು ನೋಡೋಣ....
ಮೇಷ ರಾಶಿ
ವೈವಾಹಿಕ ಜೀವನ ಚೆನ್ನಾಗಿರಬೇಕೆಂದರೆ ಹಳೆಯ ವಿಷಯಗಳನ್ನು ಕೆದುಕುತ್ತಾ ಇರಬೇಡಿ. ಕೆಲಸದಲ್ಲಿ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೂ ಈ ದಿನ ಲಾಭ ದೊರೆಯಲಿದೆ. ಇನ್ನು ಪಾಲುದಾರಿಕೆಯ ವ್ಯಾಪಾರ ಮಾಡುತ್ತಿರುವವರೆಗೆ ಈ ದಿನ ಲಾಭದ ದಿನವಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ.

ವೃಷಭ ರಾಶಿ
ಇಂದು ಖರ್ಚು ಅಧಿಕವಿರಲಿದೆ. ಆದರೆ ಖುಷಿಗಾಗಿ, ಸೌಕರ್ಯಕ್ಕಾಗಿ ಹಣ ಖರ್ಚು ಮಾಡುತ್ತೀರಿ. ಕೌಟುಂಬಿಕ ಜೀವನದಲ್ಲಿ ಸಂತೋಷ, ಶಾಂತಿ ಇರಲಿದೆ. ಇನ್ನು ಕೆಲಸ ಕಾರ್ಯಗಳಿಗೆ ಯಾವುದೇ ತೊಂದರೆ ಇರಲ್ಲ. ಇನ್ನು ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.
ಮಿಥುನ ರಾಶಿ
ಈ ದಿನ ಜಾಗ್ರತೆವಹಿಸಬೇಕು, ಕಾನೂನು ಸಂಬಂಧಿತ ವಿಷಯಗಳಲ್ಲಿ ತೊಡಗಿಕೊಳ್ಳಬೇಡಿ. ಕೆಲಸದಲ್ಲಿ ಈ ದಿನ ಒತ್ತಡವಿರಲಿದೆ. ಇನ್ನು ನಿಮ್ಮ ಮಾತುಗಳಿಂದ ಸಂಗಾತಿಯನ್ನು ನೋಯಿಸಲು ಹೋಗಬೇಡಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಇನ್ನು ಆರೋಗ್ಯ ಸಮಸ್ಯೆಗಳಿರಬಹುದು, ಆದರೆ ಜಾಗ್ರತೆವಹಿಸಿ.
ಕರ್ಕ ರಾಶಿ
ವೈವಾಹಿಕ ಜೀವನ ಚೆನ್ನಾಗಿರಲಿದೆ. ಇನ್ನು ನಿಮ್ಮ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ. ಆದರೆ ನೀವು ನಿರೀಕ್ಷೆ ಮಾಡಿದಷ್ಟು ಲಾಭ ಗಳಿಸಲು ಸಾಧ್ಯವಾಗಲ್ಲ. ನಿಮ್ಮ ಆರ್ಥಿಕ ತೊಂದರೆಗಳು ಶೀಘ್ರದಲ್ಲಿಯೇ ದೂರಾಗಲಿದೆ.
ಸಿಂಹ ರಾಶಿ
ವ್ಯಾಪಾರಿಗಳು ತಾವು ಕೊಡುತ್ತಿರುವ ವಸ್ತುಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ನಿಮ್ಮ ವ್ಯಾಪಾರದ ನಷ್ಟಕ್ಕೆ ಕಾರಣವಾಗಬಹುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಆದರೆ ಅದು ನಿಮ್ಮ ಸೌಖರ್ಯಕ್ಕಾಗಿ ನೀವು ಮಾಡುವ ಖರ್ಚು ಆಗಿರುವುದರಿಂದ ಖುಷಿಯಾಗಿರುತ್ತೀರಿ. ಮನೆಯಲ್ಲಿ ಹಿರಿಯರಿದ್ದರೆ ಅವರ ಆರೋಗ್ಯದ ಕಡೆ ಗಮನಹರಿಸಿ, ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ನಿಮ್ಮ ಕೆಲಸ ಪೂರ್ಣ ಮಾಡಲು ಕೆಲ ಅಡೆತಡೆವಿರಬಹುದು. ಇನ್ನು ಪ್ರಯಾಣ ಮಾಡುವಾಗ ಜಾಗ್ರತೆವಹಿಸಿ, ಟಿಕೆಟ್, ಮತ್ತಿತರ ಡಾಕ್ಯೂಮೆಂಟ್ ಬಗ್ಗೆ ಜಾಗ್ರತೆವಹಿಸಿ. ಆರ್ಥಿಕವಾಗಿ ನಿಮಗೆ ಈ ದಿನ ಚೆನ್ನಾಗಿದೆ. ಇನ್ನು ಆರೋಗ್ಯದ ಕಡೆ ಗಮನಹರಿಸಬೇಕು.
ತುಲಾ ರಾಶಿ
ಈ ದಿನ ನೀವು ಯಾವುದೇ ದೊಡ್ಡ ಸವಾಲನ್ನು ಸುಲಭವಾಗಿ ಜಯಿಸುವಲ್ಲಿ ಯಶಸ್ವಿಯಾಗುತ್ತೀರಿ. ಉದ್ಯೋಗಿಗಳು ಕೆಲಸದ ಕಡೆಗೆ ನಿರ್ಲಕ್ಷ್ಯ ಮಾಡಬೇಡಿ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿ. ಆರೋಗ್ಯ ಸಂಬಂಧಿ ಸಮಸ್ಯೆಯಿದ್ದರೆ ನೀವು ಜಾಗ್ರತೆವಹಿಸಿ.
ವೃಶ್ಚಿಕ ರಾಶಿ
ಕುಟುಂಬ ಜೀವನ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಧನಾತ್ಮಕವಾಗಿರಲಿದೆ. ನಿಮ್ಮ ವ್ಯವಹಾರದಲ್ಲಿ ನೀವು ಧನಾತ್ಮಕ ಬದಲಾವಣೆಗಳನ್ನು ನೋಡುತ್ತೀರಿ. ಆರ್ಥಿಕವಾಗಿ ಈ ದಿನ ನಿಮಗೆ ಒಳ್ಳೆಯದಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಿವಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಧನು ರಾಶಿ
ನಿಮಗೆ ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಖರ್ಚು ಅಧಿಕವಿರಲಿದೆ. ನಿಮ್ಮ ಅಜಾಗರೂಕತೆಯಿಂದ ಅಪಾರ ನಷ್ಟವಾಗುವ ಸಂಭವವಿದೆ. ಈ ದಿನ ಪ್ರಮುಖ ವ್ಯಾಪಾರ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಸಲಹೆ ನೀಡಲಾಗುವುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಮಕರ ರಾಶಿ
ಈ ದಿನ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿದೆ. ಹಾಗಂತ ತುಂಬಾ ದೊಡ್ಡ ಖರ್ಚು ಮಾಡಬೇಡಿ. ವ್ಯಾಪಾರಸ್ಥರಿಗೆ ಈ ದಿನ ಬಹಳ ಲಾಭದಾಯಕ ದಿನವಾಗಿದೆ. ನಿಮ್ಮ ವ್ಯವಹಾರವು ಶೀಘ್ರದಲ್ಲೇ ಪ್ರಗತಿಯನ್ನು ಕಾಣಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಚೆನ್ನಾಗಿರಲಿದೆ.
ಕುಂಭ ರಾಶಿ
ನೀವು ನಿರುದ್ಯೋಗಿಗಳಾಗಿದ್ದರೆ ಶೀಘ್ರದಲ್ಲಿಯೇ ಉತ್ತಮ ಫಲಿತಾಂಶ ಪಡೆಯುತ್ತೀರಿ. ವ್ಯಾಪಾರಿಗಳು ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿಯು ಆಹ್ಲಾದಕರವಾಗಿರುತ್ತದೆ.ಈ ದಿನ ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶ. ನಿಮ್ಮ ಆದಾಯವು ಉತ್ತಮವಾಗಿರುತ್ತದೆ, ಆದರೆ ಹಣಕಾಸಿನ ವಹಿವಾಟುಗಳಿಗೆ ದಿನವು ಸೂಕ್ತವಲ್ಲ.
ಮೀನ ರಾಶಿ
ವ್ಯಾಪಾರಿಗಳಿಗೆ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ, ನಿಮ್ಮ ಸರಿಯಾದ ನಿರ್ಧಾರಗಳಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಹಣಕಾಸಿನ ನಿರ್ಧಾರಗಳನ್ನು ಬಹಳ ಯೋಚಿಸಿ ತೆಗೆದುಕೊಳ್ಳಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications