ದಿನ ಭವಿಷ್ಯ: ಜುಲೈ 5: ಶುಭ ಶುಕ್ರವಾರ, ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?

ಶುಭ ದಿನ, ಜುಲೈ 5ರ ದ್ವಾದಶ ರಾಶಿಗಳ ರಾಶಿಫಲ....

ಮೇಷ ರಾಶಿ

ನೀವು ಬೇರೆ ಕಡೆ ಕೆಲಸಕ್ಕೆ ಶ್ರಮಿಸಿದ್ದರೆ ಅದಕ್ಕೆ ಸಂಬಂಧಿಸಿದ ಸುದ್ದಿ ಸಿಗಲಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ನೀವು ಹೂಡಿಕೆ ಮಾಡುವುದಾದರೆ ತುಂಬಾ ಆಲೋಚಿಸಿ ಮಾಡಿ. ಕುಟುಂಬದಲ್ಲಿನ ವ್ಯಕ್ತಿಗಳ ಜೊತೆ ಭಿನ್ನಾಭಿಪ್ರಾಯವಿರಬಹುದು, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.

Dina Bhavishya

ವೃಷಭ ರಾಶಿ

ಈ ದಿನ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುವುದರಿಂದ ನಿರಾಳವಾಗುತ್ತೇವೆ. ಮತ್ತು ನೀವು ಉತ್ತಮವಾಗುತ್ತೀರಿ. ಇನ್ನು ಯಾವುದಾದರು ಹೊಸ ಕೆಲಸ ಪ್ರಾರಂಭಿಸುವುದಾದರೆ ಈ ಅವಧಿ ನಿಮಗೆ ಶುಭವಾಗಿದೆ. ಪ್ರೇಮಿಗಳಿಗೆ ಈ ದಿನ ದಿನವು ವಿಶೇಷವಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

ಮಿಥುನ ರಾಶಿ

ಕೆಲಸದಲ್ಲಿ ಈ ದಿನ ನಿಮಗೆ ಶುಭವಾಗಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಉತ್ತಮ ಆರ್ಥಿಕ ಲಾಭ ಪಡೆಯಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಅವಾಹಿತರಿಗೆ ಈ ಅವಧಿಯಲ್ಲಿ ಮದುವೆ ಪ್ರಸ್ತಾಪ ಬರಬಹುದು, ಆದರೆ ಆತುರದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.

ಕರ್ಕ ರಾಶಿ

ನೀವು ಕೆಲಸದಲ್ಲಿ ಯಶಸ್ಸು ಸಾಧಿಸಲು ಹೆಚ್ಚು ಪ್ರಯತ್ನ ಮಾಡಬೇಕು. ನೀವು ನಿಮ್ಮ ವ್ಯಾಪಾರ ಯೋಜನೆಗಳನ್ನು ರಹಸ್ಯವಾಗಿಡಿ. ಯಾರನ್ನೂ ಅತಿಯಾಗಿ ನಂಬಬೇಡಿ. ಅತಿಯಾದ ಕೆಲಸದ ಒತ್ತಡ ತೆಗೆದುಕೊಳ್ಳಬೇಡಿ. ಮನೆಯಲ್ಲಿ ಈ ದಿನ ಉತ್ತಮವಾಗಿರಲಿದೆ, ಪ್ರೇಮಿಗಳ ನಡುವೆ ಭಿನ್ನಾಭಿಪ್ರಾಯವಿರಬಹುದು, ಆರೋಗ್ಯದ ಕಡೆಗೆ ಗಮನಹರಿಸಿ.

ಸಿಂಹ ರಾಶಿ

ಇಂದು ನೀವು ಯಾವುದೇ ನಿರ್ಧಾರಗಳನ್ನು ಆತುರದಿಂದ ತೆಗೆದುಕೊಳ್ಳಬೇಡಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ನೀವು ಅನುಭವಿಗಳ ಸಲಹೆ ಪಡೆಯುವುದು ಒಳ್ಳೆಯದು. ಆರ್ಥಿಕವಾಗಿ ಕೆಲ ಸಮಸ್ಯೆಗಳಿರಬಹುದು. ಕಠಿಣ ಪರಿಶ್ರಮದ ಹೊರತಾಗಿಯೂ, ನಿರೀಕ್ಷೆಗೆ ತಕ್ಕಂತೆ ಫಲಿತಾಂಶಗಳನ್ನು ಪಡೆಯದ ಕಾರಣ ನಿಮ್ಮ ನಕಾರಾತ್ಮಕ ಆಲೋಚನೆ ಬರಬಹುದು. ಕುಟುಂಬದ ಕಡೆಗೆ ಗಮನಹರಿಸಿ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಹೆಚ್ಚಾಗದಂತೆ ನೋಡಿಕೊಳ್ಳಿ.

ಕನ್ಯಾ ರಾಶಿ

ಈ ದಿನ ನಿಮಗೆ ಶುಭವಾಗಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ನಿಮಗೆ ಶುಭವಾಗಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ನೀವು ಬಯಸಿದಂತೆಯೇ ಫಲಿತಾಂಶ ದೊರೆಯಲಿದೆ. ಪ್ರೇಮಿಗಳು ತಮ್ಮ ಸಂಬಂಧದ ಕಡೆ ಗಮನಹರಿಸಿ. ಕಾಯಿಲೆಯಿದ್ದರೆ ನಿರ್ಲಕ್ಷ್ಯ ಬೇಡ.

ತುಲಾ ರಾಶಿ

ಈ ಅವಧಿಯಲ್ಲಿ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುತ್ತವೆ, ಇದರಿಂದಾಗಿ ತುಂಬಾ ರಿಲ್ಯಾಕ್ಸ್ ಆಗುತ್ತೀರಿ. ವ್ಯವಹಾರ ಯೋಜನೆಯಲ್ಲಿ ಕೆಲಸ ಮಾಡಲು ಅವಕಾಶ ಸಿಗಲಿದೆ. ಕಚೇರಿಯ ವಾತಾವರಣವು ಧನಾತ್ಮಕವಾಗಿರುತ್ತದೆ. ಸಂಗಾತಿ ಹಾಗೂ ನಿಮ್ಮ ನಡುವೆ ಸಂಬಂಧ ಚೆನ್ನಾಗಿರಲಿದೆ. ಕೆಲಸದಲ್ಲಿ ಅತಿಯಾಗಿ ಒತ್ತಡ ತೆಗೆದುಕೊಳ್ಳಬೇಡಿ.

ವೃಶ್ಚಿಕ ರಾಶಿ

ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಸಂಬಂಧ ತುಂಬಾ ಚೆನ್ನಾಗಿರಲಿದೆ. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಪ್ರೀತಿಪಾತ್ರರಿಂದ ನೀವು ಸಂಪೂರ್ಣ ಬೆಂಬಲ ಪಡೆಯುತ್ತೀರಿ. ವ್ಯಾಪಾರಿಗಳು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕು. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗಿಗಳ ಆತ್ಮವಿಶ್ವಾಸ ಚೆನ್ನಾಗಿರಲಿದೆ. ನೀವು ಪ್ರೀತಿಸುತ್ತಿದ್ದರೆ ನಿಮ್ಮ ಪ್ರೀತಿ ಬಗ್ಗೆ ಮನೆಯಲ್ಲಿ ಹೇಳಿದರೆ ಸಕಾರಾತ್ಮಕ ಪ್ರತಿಕ್ರಿಯೆ ಪಡೆಯುತ್ತೀರಿ.

ಧನು ರಾಶಿ

ಕುಟುಂಬ ಜೀವನದ ಕಡೆಗೆ ಗಮನಹರಿಸಬೇಕು. ನಿಮ್ಮ ಅಸಡ್ಡೆ ವರ್ತನೆಯಿಂದಾಗಿ ಸಂಬಂಧಗಳಲ್ಲಿ ತಪ್ಪು ತಿಳುವಳಿಕೆ ಉಂಟಾಗಬಹುದು. ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಬಹಳ ಬುದ್ಧಿವಂತಿಕೆಯಿಂದ ವರ್ತಿಸಿ. ಚಿಕ್ಕ ವಿಷಯಕ್ಕೆ ಕೋಪಗೊಳ್ಳಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆವಿರಬಹುದು.

ಮಕರ ರಾಶಿ

ಈ ದಿನ ಗ್ರಹಗಳ ಸ್ಥಾನವು ನಿಮಗೆ ಅನುಕೂಲಕರವಾಗಿದೆ, ಈ ದಿನ ನಿಮ್ಮ ಕೆಲಸ ಕಾರ್ಯದಲ್ಲಿ ಅತ್ಯುತ್ತಮ ಫಲಿತಾಂಶ ಪಡೆಯುತ್ತೀರಿ. ಹಣದ ವಿಚಾರದಲ್ಲಿ ಆತುರ ಬೇಡ.
ಕುಟುಂಬ ಜೀವನ ಚೆನ್ನಾಗರಲಿದೆ. ಸಂಗಾತಿ ಹಾಗೂ ನಿಮ್ಮ ನಡುವೆ ಅಂತರ ಹೆಚ್ಚಾಗಿದ್ದರೆ ಮಾತಿನ ಮೂಲಕ ಬಗೆಹರಿಸಲು ಪ್ರಯತ್ನಿಸಿ. ತುಂಬಾ ನಿದ್ದೆ ಕೆಡಬೇಡಿ, ಆರೋಗ್ಯದ ಮೇಲೆ ಪರಿಣಾಮ ಬೀರುವುದು.

ಕುಂಭ ರಾಶಿ

ವಿದ್ಯಾರ್ಥಿಗಳಿಗೆ ಸಮಯ ಅನುಕೂಲಕರವಾಗಿದೆ. ಕೆಲಸದಲ್ಲಿ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ. ತುಂಬಾ ಸಮಯದಿಂದ ಬರಬೇಕಾಗಿರುವ ಹಣ ಕೈ ಸೇರಲಿದೆ, ಹೀಗಾಗಿ ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಮನೆಯ ಹಿರಿಯರ ಮಾತುಗಳನ್ನು ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಸಂಗಾತಿಯ ಭಾವನೆಗಳನ್ನು ಗೌರವಿಸಬೇಕು.
ಆರೋಗ್ಯದ ಬಗ್ಗೆ ನೋಡುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.

ಮೀನ ರಾಶಿ

ಶೀಘ್ರವೇ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ. ಕೆಲಸದಲ್ಲಿ ಹೆಚ್ಚು ನಿರತರಾಗಿರುವ ಕಾರಣ, ನಿಮ್ಮ ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡಲು ನಿಮಗೆ ಸಾಧ್ಯವಾಗುವುದಿಲ್ಲ. ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ನೀವು ಸಮತೋಲನವನ್ನು ಕಾಯ್ದುಕೊಳ್ಳಬೇಕು.
ಪ್ರೇಮ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯಬೇಡ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope Prediction for 5th July 2024: Dina Bhavishya for All Zodiac Signs

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Thursday, July 4, 2024, 21:24 [IST]
X
Desktop Bottom Promotion