Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆಗಸ್ಟ್ 6, ದಿನ ಭವಿಷ್ಯ: ಮಂಗಳಗೌರಿ ವ್ರತದ ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 6) ಭವಿಷ್ಯ ನೋಡೋಣ:
ಮೇಷ ರಾಶಿ
ನಿಮ್ಮ ಹಠದ ಸ್ವಭಾವವು ಅನಗ್ಯತ ಸಮಸ್ಯೆಗಳನ್ನು ತರಬಹುದು, ಈ ದಿನ ಯಾವುದೇ ಹಣದ ವ್ಯವಹಾರ ಮಾಡದಿದ್ದರೆ ಒಳ್ಳೆಯದು, ಇನ್ನು ಕೆಲಸದ ಬದಲಾವಣೆ ಬಗ್ಗೆ ನೀವು ಆಲೋಚಿಸುತ್ತಿದ್ದರೆ ಇನ್ನೂ ಸ್ವಲ್ಪ ಕಾಯುವಂತೆ ಸಲಹೆ ನೀಡಲಾಗುವುದು. ಕೆಲಸಸದಲ್ಲಿ ಒತ್ತಡ ಇರಲಿದೆ. ಮನೆಯಲ್ಲಿನ ಸಮಸ್ಯೆ ಪರಿಹಾರಕ್ಕೆ ಹಿರಿಯರ ಸಲಹೆ ಪಡೆಯಿರಿ, ಅಲ್ಲದೆ ಈ ಸಮಯದಲ್ಲಿ ಆರೋಗ್ಯ ಸರಿಯಿಲ್ಲದಿದ್ದರೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ಈ ದಿನ ನಿಮಗೆ ಉತ್ತವಾಗಿದೆ, ನಿಮ್ಮ ಅಭಿಪ್ರಾಯ ಬೇರೆಯವರ ಮೇಲೆ ಹೇರಲು ಯತ್ನಿಸಬೇಡಿ, ಅದು ನಿಮ್ಮ ಮಕ್ಕಳಾದರೂ ಸರಿ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಕೆಲಸ ಕಾರ್ಯಗಳಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ. ಸಂಗಾತಿಗೆ ಸುಳ್ಳು ಹೇಳಬೇಡಿ, ನಿಮ್ಮ ಮಾತೇ ನಿಮಗೆ ಶತ್ರುವಾಗಬಹುದು, ಹಾಗಾಗಿ ಸತ್ಯ ಹೇಳಿ, ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಮಿಥುನ ರಾಶಿ
ಬೇಡದ ವಿಷಯಗಳಿಂದ ದೂರವಿರಿ, ವ್ಯಾಪಾರಿಗಳು ಕಕಾನುನು ವಿಷಯದಲ್ಲಿ ಜಾಗ್ರತೆವಹಿಸಿ, ಉದ್ಯೋಗಿಗಳು ಕೆಲಸದ ಜಾಗದಲ್ಲಿ ಕೋಪದಿಂದ ವರ್ತಿಸದಂತೆ ಸಲಹೆ ನೀಡಲಾಗುವುದು, ವೈವಾಹಿಕ ಜೀವನದ ಬಗ್ಗೆ ಹೇಳುವುದಾದರೆ ಅನುಮಾನ ಒಳ್ಳೆಯದಲ್ಲ, ಹೃದಯ ಸಂಬಂಧಿ ಸಮಸ್ಯೆ ಇರುವವರು ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ.
ಕರ್ಕ ರಾಶಿ
ನೀವು ಅನಗ್ಯತ ಚಿಂತೆ ಹೊರ ಹಾಕುವುದು ಒಳ್ಳೆಯದು, ಕುಟುಂಬದ ಕಡೆಯೂ ಸಮಯ ಕಳೆಯಲು ಪ್ರಯತ್ನಿಸಿ, ಆರ್ಥಿಕವಾಗಿ ಈ ದಿನ ಉತ್ತಮವಿದೆ, ವ್ಯಾಪಾರಿಗಲಿಗೆ ಧನ ಲಾಭವಾಗಲಿದೆ. ಸಂಗಾತಿಗೆ ಆರೋಗ್ಯ ಸಮಸ್ಯೆ ಇದ್ದರೆ ಅವರ ಅರೈಕೆ ಕಡೆಗೆ ಗಮನಹರಿಸಿ, ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಆರ್ಥಿಕವಾಗಿ ಈ ಸಮಯ ಉತ್ತಮವಿದೆ, ವ್ಯಾಪಾರಿಗಳಿಗೂ ಈ ದಿನ ಲಾಭ ಗಳಿಸಲು ಸಾಧ್ಯವಾಗುವುದು, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಒಟ್ಟಿನಲ್ಲಿ ಈ ದಿನ ನಮಗೆ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಶುಭವಾಗಿದೆ, ಅರ್ಥಿಕವಾಗಿಯು ಯಾವುದೇ ದೊಡ್ಡ ಸಮಸ್ಯೆ ಇರಲ್ಲ, ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಅದಕ್ಕೆ ಸಂಬಂಧಿಸಿದ ಒಳ್ಳೆಯ ಸುದ್ದಿ ಸಿಗಬಹುದು, ಪ್ರೇಮಿಗಳಿಗೆ ಈ ದಿನ ವಿಶೆಷವಾಗಿರಲಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯವೂ ಉತ್ತಮವಾಗಿರಲಿದೆ. ಆದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.
ತುಲಾ ರಾಶಿ
ಮನೆಯ ಜವಾಬ್ದಾರಿಗಳಿಗೆ ಪ್ರೀತಿಪಾತ್ರರ ಬೆಂಬಲ ಸಿಗಲಿದೆ. ವ್ಯವಹಾರ ಸಂಬಂಧಿತ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ ಹಾಗೂ
ಯಾರನ್ನೂ ಅತಿಯಾಗಿ ನಂಬಬೇಡಿ. ಉದ್ಯೋಗಿಗಳಿಇಗೆ ಈ ದಿನ ಉತ್ತಮವಾಗಿದೆ, ಆರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ. ಆಸ್ತಿ ಖರೀದಿ ಮತ್ತು ಮಾರಾಟದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತದೆ. ಕುಟುಂಬ ಜೀವನದಲ್ಲಿ ಪ್ರೀತಿ ಇರಲಿದೆ, ಪದೇ ಪದೇ ಕಾಯಿಲೆ ಬೀಳುತ್ತಿದ್ದರೆ ನೀವು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಪ್ರಯತ್ನಿಸಿ.
ಧನು ರಾಶಿ
ದಿನವು ತುಂಬಾ ಧನಾತ್ಮಕವಾಗಿರುತ್ತದೆ. ಹಣದ ಹೂಡಿಕೆ ಮಾಡುವುದಾದರೆ ಅನುಭವಿ ವ್ಯಕ್ತಿಗಳ ಸಲಹೆ ಪಡೆಯಿರಿ, ಇನ್ನು ಸಾಲ ತೆಗೆದುಕೊಳ್ಳುವುದಾದರೆ ಅಗ್ಯತಕ್ಕಿಂತ ಹೆಚ್ಚು ಸಾಲ ತೆಗೆದುಕೊಳ್ಳಬೇಡಿ. ಕೆಲಸದ ಒತ್ತಡ ಅಧಿಕವಿರಬಹುದು, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಿರಲಿದೆ.
ಮಕರ ರಾಶಿ
ಈ ದಿನ ನೀವು ತಾಳ್ಮೆಯಿಂದಿರಿ, ಆವಾಗ ಬರುವ ಸಮಸ್ಯೆ ದೂರಾಗುವುದು, ಕೋಪದಿಂದ ವರ್ತಿಸಬೇಡಿ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗಬಹುದು. ನಿಮಗೆ ಒಳ್ಳೆಯ ಅವಕಾಶ ಸಿಗಲಿದೆ. ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ.
ಕುಂಭ ರಾಶಿ
ಮಕ್ಕಳ ಸಾಧನೆ ನಿಮಗೆ ಹೆಮ್ಮೆ ತರಲಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಕೆಲಸದ ಜಾಗದಲ್ಲಿ ಕೋಪದಿಂದ ವರ್ತಿಸಬೇಡಿ, ಆರೋಗ್ಯ ಸಮಸ್ಯೆ ಇದ್ದರೆ ಸ್ವಯಂ ಚಿಕಿತ್ಸೆ ಮಾಡಬೇಡಿ.
ಮೀನ ರಾಶಿ
ಕೆಲಸದ ನಿಮಿತ್ತ ನೀವು ಹಠಾತ್ ಪ್ರಯಾಣ ಮಾಡಬೇಕಾಗಬಹುದು. ವ್ಯಾಪಾರಿಗಳಿಗೆ ಭಾರಿ ಆರ್ಥಿಕ ಲಾಭದ ಸಾಧ್ಯತೆಯಿದೆ. ಮನೆಯ ವಿಷಯಗಳಲ್ಲಿ ಯೋಚಿಸದೆ ನಿಮ್ಮ ಅಭಿಪ್ರಾಯವನ್ನು ನೀಡಬೇಡಿ. ನಿಮ್ಮ ಹಿರಿಯರ ನಿರ್ಧಾರಗಳನ್ನು ಗೌರವಿಸಿ. ಮಧುಮೇಹಿಗಳಾಗಿದ್ದರೆ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications