ಆಗಸ್ಟ್ 7, ದಿನ ಭವಿಷ್ಯ: ಈ ದಿನ ದ್ವಾದಶ 12 ರಾಶಿಗಳ ರಾಶಿಫಲ ಹೇಗಿದೆ?

ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 7) ಭವಿಷ್ಯ ನೋಡೋಣ:

ಮೇಷ ರಾಶಿ

ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಅಗತ್ಯಕ್ಕಿಂತ ಹೆಚ್ಚು ಸಂವಹನ ಮಾಡಬೇಡಿ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಉದ್ಯೊಗಿಗಳಿಗೆ ಈ ದಿನ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.

Dina Bhavishya

ವೃಷಭ ರಾಶಿ

ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದಂತೆ ಸಲಹೆ ನೀಡಲಾಗುವುದು. ಆರ್ಥಿಕವಾಗಿ ಉತ್ತಮವಾಗಿದೆ, ಆದರೆ ಈ ದಿನ ಸಾಲ ನೀಡಬೇಡಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನದ ಕಡೆಗೆ ಗಮನಹರಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಹೊಟ್ಟೆನೋವು, ಗ್ಯಾಸ್, ಅಜೀರ್ಣ ಇತ್ಯಾದಿ ಸಮಸ್ಯೆಗಳಿರಬಹುದು.

ಮಿಥುನ ರಾಶಿ

ವೃತ್ತಿ ಬದುಕಿಗೆ ಸಂಬಂಧಿಸಿದ ನಿರ್ಧಾರವನ್ನು ಆಲೋಚಿಸಿ ತೆಗೆದುಕೊಳ್ಳಿ. ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ನೀವು ಸಮತೋಲನವನ್ನು ಕಾಯ್ದುಕೊಂಡರೆ ಒಳ್ಳೆಯದು. ವ್ಯಾಪಾರಿಗಳಿಗೆ ದನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ಈ ದಿನ ಉತ್ತಮವಾಗಿದದೆ.
ಆರೋಗ್ಯದ ಬಗ್ಗೆ ಹೇಳುವುದಾದರೆ ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಬೇಡಿ ಎಂದು ಸಲಹೆ ನೀಡಲಾಗುವುದು.

ಕರ್ಕ ರಾಶಿ

ಆರ್ಥಿಕ ಪರಿಸ್ಥಿತಿಯಲ್ಲಿ ಏರಿಳಿತಗಳಿರಬಹುದು, ನೀವು ಈ ದಿನ ಕೋಪ ನಿಯಂತ್ರಿಸಿ, ಕೆಲಸದಲ್ಲಿ ಒತ್ತಡ ಇರಲಿದೆ, ಅನಪೇಕ್ಷಿತ ಪ್ರಯಾಣವನ್ನು ಕೈಗೊಳ್ಳಬೇಕಾಗಬಹುದು. ಕುಟುಂಬದ ಜವಾಬ್ದಾರಿ ನಿಭಾಯಿಸಬೇಕು, ಸಂಗಾತಿಯ ಜೀವನ ಚೆನ್ನಾಗಿರಲಿದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.

ಸಿಂಹ ರಾಶಿ

ಈ ದಿನ ನೀವು ತಾಳ್ಮೆಯಿಂದ ಇರಿ. ಕೋಪದಲ್ಲಿ ವರ್ತಿಸಬೇಡಿ, ಆರೋಗ್ಯದಲ್ಲಿ ಹಠಾತ್ ಕುಸಿತವು ನಿಮ್ಮ ದಿನದ ಯೋಜನೆಗಳಿಗೆ ಅಡ್ಡಿಯಾಗುತ್ತದೆ.
ವ್ಯಾಪಾರಿಗಳು ಡಾಕ್ಯೂಮೆಂಟ್‌ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ಸಂಗಾತಿಯೊಂದಿಗೆ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

ಕನ್ಯಾ ರಾಶಿ

ವೃತ್ತಿ ಜೀವನ ಚೆನ್ನಾಗಿರಲಿದೆ. ಆರ್ಥಿಕವಾಗಿ ಪ್ರಗತಿಯನ್ನು ಕಾಣಬಹುದು. ಪ್ರತಿಕೂಲ ಸಂದರ್ಭಗಳನ್ನು ಶಾಂತಿಯುತವಾಗಿ ಎದುರಿಸಿ ಇಲ್ಲದಿದ್ದರೆ ನಿಮ್ಮ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಬಹುದು. ವ್ಯಾಪಾರಿಗಲಿಗೆ ಧನ ಲಾಭವಾಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.

ತುಲಾ ರಾಶಿ

ಕುಟುಂಬದಲ್ಲಿ ಈ ದಿನ ಉತ್ತಮವಾಗಿದೆ. ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ ಇಲ್ಲದಿದ್ದರೆ ನಷ್ಟ ಸಂಭವಿಸಬಹುದು. ವ್ಯಾಪಾರಿಗಳು ಹೊಸ ವ್ಯಾಪಾರಕ್ಕೆ ಈ ಅವಧಿಯಲ್ಲಿ ಸ್ವಲ್ಪ ಮುಂದೂಡುವುದು ಒಳ್ಳೆಯದು. ಮನೆಯಲ್ಲಿ ಭಿನ್ನಾಭಿಪ್ರಾಯಗಳಿರಬಹುದು, ಆಹಾರಕ್ರಮದ ಕಡೆಗೆ ಗಮನಹರಿಸಿ.

ವೃಶ್ಚಿಕ ರಾಶಿ

ಈ ದಿನ ಪ್ರಮುಖ ಅಡೆತಡೆ ದೂರಾಗಲಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ವಹಿವಾಟು ಬಾಕಿ ಉಳಿದಿದ್ದರೆ ಅದು ಇಂದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ವ್ಯವಹಾರ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಿ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.

ಧನು ರಾಶಿ

ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡಲು ದಿನವು ಸೂಕ್ತವಲ್ಲ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ, ವ್ಯಾಪಾರದ ಜವಾಬ್ದಾರಿಗಳನ್ನು ಪೂರೈಸುವಲ್ಲಿ ನೀವು ಪ್ರಮುಖ ಪಾತ್ರವನ್ನು ವಹಿಸುತ್ತೀರಿ. ಉದ್ಯೋಗಿಗಳು ಕೆಲಸದ ಕಡೆಗೆ ಗಮನಹರಿಸಬೇಕು. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯವು ಅತ್ಯುತ್ತಮವಾಗಿರುತ್ತದೆ.

ಮಕರ ರಾಶಿ

ಹೆಚ್ಚುತ್ತಿರುವ ವೆಚ್ಚಗಳನ್ನು ನೀವು ನಿಯಂತ್ರಿಸಬೇಕಾಗುತ್ತದೆ, ಇಲ್ಲದಿದ್ದರೆ ನಿಮ್ಮ ಬಜೆಟ್ ಅಸಮತೋಲನವಾಗಬಹುದು. ಅನಗ್ಯತ ವಿಷಯಗಳಲ್ಲಿ ತಲೆಕೆಡಿಸಿಕೊಳ್ಳಬೇಡಿ. ವೈವಾಹಿಕ ಬದುಕು ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಉತ್ತಮ ಆರೋಗ್ಯಕ್ಕಾಗಿ ಯೋಗ ಮತ್ತು ವ್ಯಾಯಾಮವನ್ನು ನಿಮ್ಮ ದಿನಚರಿಯಲ್ಲಿ ಸೇರಿಸಿದರೆ ಒಳ್ಳೆಯದು.

ಕುಂಭ ರಾಶಿ

ಈ ದಿನ ಉತ್ತಮವಾಗಿದೆ. ಅನುಪಯುಕ್ತ ವಸ್ತುಗಳಿಂದ ದೂರವಿರಿ ಇಲ್ಲದಿದ್ದರೆ ನಿಮ್ಮ ಬಹಳಷ್ಟು ಸಮಯ ವ್ಯರ್ಥವಾಗುತ್ತದೆ. ವ್ಯಾಪಾರಿಗಳು
ನಿಮ್ಮ ವಿರೋಧಿಗಳ ಬಗ್ಗೆ ಜಾಗರೂಕರಾಗಿರಬೇಕು. ಮನೆಯಲ್ಲಿ ನಿಮ್ಮ ಜವಾಬ್ದಾರಿ ನಿರ್ಲಕ್ಷ್ಯ ಮಾಡಬೇಡಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವು, ಆಯಾಸ ಇತ್ಯಾದಿ ಸಮಸ್ಯೆಗಳಿರಬಹುದು.

ಮೀನ ರಾಶಿ

ಮನೆಯಲ್ಲಿ ಕೆಲ ಅಸಮಧಾನವಿರಬಹುದು. ಆದರೆ ಹಿರಿಯರ ಮನಸ್ಸಿಗೆ ನೋವು ಕೊಡಬೇಡಿ. ಕೆಲಸದ ಕಡೆಗೆ ಗಮನಹರಿಸಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope Prediction for 7 August 2024: Dina Bhavishya for All Zodiac Signs

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Tuesday, August 6, 2024, 22:11 [IST]
X
Desktop Bottom Promotion