Latest Updates
-
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ
ದಿನ ಭವಿಷ್ಯ: ಜುಲೈ 7: ಶುಭ ಭಾನುವಾರ ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ಶುಭ ದಿನ, ಜುಲೈ 7ರ ದ್ವಾದಶ ರಾಶಿಗಳ ರಾಶಿಫಲ....
ಮೇಷ ರಾಶಿ
ಈ ದಿನ ನಿಮಗೆ ಒತ್ತಡ ಅಧಿಕವಿರಲಿದೆ, ಆರೋಗ್ಯ ಸಮಸ್ಯೆಯೂ ಇರಬಹುದು, ಈ ದಿನ ವ್ಯಾಪಾರಿಗಳು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುವುದು. ಸಂಬಂಧದಲ್ಲಿ ಅಹಂ ಬೇಡ ಎಂದು ಸಲಹೆ ನೀಡಲಾಗುವುದು. ಆಹಾರಕ್ರಮದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರ್ಥಿಕ ಪ್ರಯೋಜನಗಳನ್ನು ಪಡೆಯುತ್ತೀರಿ. ವ್ಯಾಪಾರಿಗಳಿಗೂ ಈ ದಿನ ಉತ್ತಮವಾಗಿದೆ. ಉದ್ಯೋಗಿಗಳು ತಮಗೆ ಸಿಕ್ಕ ಅವಕಾಶ ಉತ್ತಮವಾಗಿ ಬಳಸಿಕೊಳ್ಳಿ. ಮಾನಸಿಕ ಒತ್ತಡ ಕಡಿಮೆ ಮಾಡಲು ಪ್ರಯತ್ನಿಸಿ. ವಿವಾಹಿತರಿಗೆ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣುಗಳ ಆರೋಗ್ಯದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಈ ದಿನ ಅಪೂರ್ಣವಾದ ಕೆಲಸ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಉದ್ಯೋಗಿಗಳು ಯಾವುದೇ ಬದಲಾವಣೆಯ ಬಗ್ಗೆ ಆಲೋಚಿಸಬೇಡಿ. ಸಂಗಾತಿಯ ಮಾತುಗಳನ್ನು ನಿರ್ಲಕ್ಷಿಸಬೇಡಿ, ಹಣದ ವಿಷಯದಲ್ಲಿ ಅವರ ನಿರ್ಧಾರ ಪಡೆಯಿರಿ, ಆಹಾರದ ಬಗ್ಗೆ ಹೇಳುವುದಾದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಕರ್ಕ ರಾಶಿ
ಈ ದಿನ ನೀವು ಹಣದ ವಿಷಯದಲ್ಲಿ ಜಾಗರೂಕರಾಗಿರಬೇಕು , ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಇನ್ನು ಕೆಲಸ ಹುಡುಕುತ್ತಿದ್ದರೆ ಈ ಅವಧಿ ಉತ್ತಮವಾಗಿದೆ.
ಕುಟುಂಬದಲ್ಲಿನ ಸಮಸ್ಯೆಯಿಂದ ತಾಳ್ಮೆಯಿಂದ ಬಗೆಹರಿಸಿ. ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ನೀವು ಅನಗ್ಯತ ವಾದ ಮಾಡಲು ಹೋಗದಿರಿ. ನಿಮ್ಮ ಹಣಕಾಸಿನ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಪ್ರಮುಖ ವ್ಯವಹಾರ ನಿರ್ಧಾರವನ್ನು ತೆಗೆದುಕೊಳ್ಳಿ, ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಿ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವು, ಸುಸ್ತು ಮೊದಲಾದ ಸಮಸ್ಯೆಗಳಿರಬಹುದು.
ಕನ್ಯಾ ರಾಶಿ
ಮನೆಯಲ್ಲಿ ವಾತಾವರಣ ಸರಿಯಿಲ್ಲದಿದ್ದರೆ ಕೋಪದ ಬದಲಿಗೆ ಬುದ್ಧಿವಂತಿಕೆಯಿಂದ ಬಗೆಹರಿಸಿ. ವ್ಯಾಪಾರಿಗಳು ಅಪೇಕ್ಷಿತ ಲಾಭ ಪಡೆಯುತ್ತಾರೆ. ಕೆಲಸದಲ್ಲಿ ನಿಮ್ಮ ಇಮೇಜ್ ಹಾಳಾಗದಂತೆ ಜಾಗ್ರತೆವಹಿಸಿ. ಪ್ರೀತಿ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರುತ್ತದೆ.
ತುಲಾ ರಾಶಿ
ಹೊಸ ಕೆಲಸವನ್ನು ಪ್ರಾರಂಭಿಸಲು ಈ ಸಮಯ ಅನುಕೂಲಕರವಾಗಿದೆ. ನೀವು ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಣೆ ಕಾಣಬಹುದು. ಆತ್ಮವಿಶ್ವಾಸ ಹೆಚ್ಚಾಗುವುದು. ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ತೆಗದುಕೊಳ್ಳುವಾಗ ಜಾಗ್ರತೆಯಿಂದ ತೆಗೆದುಕೊಳ್ಳಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ವೃಶ್ಚಿಕ ರಾಶಿ
ಹಣದ ಖರ್ಚು ಹೆಚ್ಚಿರಲಿದೆ, ನಿಮ್ಮ ಆಡಂಬರವೇ ಆರ್ಥಿಕ ಸಮಸ್ಯೆಗೆ ಕಾರಣವಾಗಬಹುದು. ದೊಡ್ಡ ಲಾಭ ಗಳಿಸಲು ಅಡ್ಡ ಮಾರ್ಗ ತಪ್ಪಿಸಿ. ವಿರೋಧಿಗಳು ಕುಟುಂಬದ ಕಡೆಗೆ ಗಮನಹರಿಸಿ. ಆರೋಗ್ಯ ದುರ್ಬಲವಾಗಿರುತ್ತದೆ.
ಧನು ರಾಶಿ
ಹೆಚ್ಚಿನ ಕೆಲಸದ ಹೊರೆಯಿಂದಾಗಿ ಮಾನಸಿಕ ಒತ್ತಡ ಹೆಚ್ಚಿರಲಿದೆ. ಹಣಕಾಸಿನ ವಿಷಯಗಳಲ್ಲಿ ಹೆಚ್ಚು ಆತುರಪಡಬೇಡಿ. ಕೆಲಸದ ಕಡೆಗೆ ಗಮನಹರಿಸಿ. ಕುಟುಂಬದಲ್ಲಿ ವಾತಾವರಣ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಮಕರ ರಾಶಿ
ಈ ದಿನ ತುಂಬಾ ಚೆನ್ನಾಗಿರಲಿದೆ. ನೀವು ಸವಾಲುಗಳನ್ನು ಧೈರ್ಯದಿಂದ ಎದುರಿಸುತ್ತೀರಿ. ಹಣಕಾಸಿನ ಲಾಭಗಳಿರುತ್ತವೆ, ಆದರೆ ಯಾವುದೇ ಹೊಸ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಮೊದಲು, ಹಳೆಯ ಬಾಕಿಯಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯ ಸುಧಾರಿಸುತ್ತದೆ.
ಕುಂಭ ರಾಶಿ
ದಿನದ ಆರಂಭವು ನಿಧಾನವಾಗಿರುತ್ತದೆ. ಸಾಲವನ್ನು ತೆಗೆದುಕೊಂಡಿದ್ದರೆ ಅಥವಾ ಹಣವನ್ನು ಎರವಲು ಪಡೆದಿದ್ದರೆ, ಸಾಧ್ಯವಾದಷ್ಟು ಬೇಗ ಅದನ್ನು ಮರಳಿಸಿ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಪ್ರೇಮಿಗಳ ಸಂಬಂಧ ಗಾಢವಾಗುವುದು. ಆರೋಗ್ಯ ಸಮಸ್ಯೆಗಳಿರಬಹುದು.
ಮೀನ ರಾಶಿ
ನೀವು ಬೇಡದ ಆಲೋಚನೆ ತೆಗೆದುಹಾಕಿ. ವ್ಯಾಪಾರಿಗಳಿಗೆ ಅನುಕೂಲಕರವಾಗಿದೆ.ಕುಟುಂಬ ಸದಸ್ಯರಲ್ಲಿ ಒಗ್ಗಟ್ಟು ಇರುತ್ತದೆ. ನಿಮ್ಮ ಕೆಲಸದ ಜೊತೆಗೆ ನಿಮ್ಮ ಸಂಬಂಧಗಳ ಬಗ್ಗೆ ನೀವು ಗಮನ ಹರಿಸಬೇಕು. ಸಂಗಾತಿ ನಡುವೆ ಭಿನ್ನಾಭಿಪ್ರಾಯವಿರಬಹುದು, ಆರೋಗ್ಯದ ಬಗ್ಗೆ ಹೇಳುವುದಾದರೆ ಮೈ ಕೈ ನೋವಿನ ಸಮಸ್ಯೆವಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











