Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆಗಸ್ಟ್ 8, ದಿನ ಭವಿಷ್ಯ: ಈ ದಿನ ದ್ವಾದಶ 12 ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 8) ಭವಿಷ್ಯ ನೋಡೋಣ:
ಮೇಷ ರಾಶಿ
ನಿಮ್ಮ ಮಾತಿನ ಕಡೆ ಗಮನಹರಿಸಿ. ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸಬಹುದು. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ವಿವಾದ್ಮಾಕ ವಿಷಯಗಳ ಬಗ್ಗೆ ಮಾತನಾಡದಿರುವುದು ಒಳ್ಳೆಯದು. ಆರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ಅವಧಿ ಉತ್ತಮವಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮ ಪ್ರಯೋಜನ ಸಿಗಲಿದೆ. ವ್ಯಾಪಾರಿಗಲಿಗೆ ಧನಲಾಭವಾಗಲಿದೆ. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರಲಿದೆ, ಆರೋಗ್ಯಕ್ಕಾಗಿ ತೂಕ ನಿಯಂತ್ರಣ ಮಾಡಲು ಪ್ರಯತ್ನಿಸಿದರೆ ಒಳ್ಳೆಯದು.
ಮಿಥುನ ರಾಶಿ
ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಕೆಲ ಸಮಸ್ಯೆಗಳು ಇರಬಹುದು, ವ್ಯಾಪಾರಿಗಳಿಗೆ ಲಾಭಕ್ಕಾಗಿ ಅಡ್ಡಮಶಾರ್ಗ ಹಿಡಿಯದಂತೆ ಸಲಹೆ ನೀಡಲಾಗುವುದು, ಈ ದಿನ ಆರೋಗ್ಯ ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಕೆಲಸದಲ್ಲಿ ಈ ದಿನ ತುಂಬಾನೇ ಬ್ಯುಸಿಯಾಗಿರುತ್ತೀರಿ, ನಿಮ್ಮ ಸಂಗಾತಿಯ ಭಾವನೆಗಳ ಕಡೆಯೂ ಗಮನಹರಿಸಿ. ಅವರ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳಬೇಡಿ.
ಕರ್ಕ ರಾಶಿ
ವ್ಯಾಪಾರಿಗಳು ಅನಗ್ಯತ ಸಮಸ್ಯೆಗಳಿಂದ ದೂರವಿರಬೇಕು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಗ್ರಾಹಕ ಜೊತೆ ಕಟುವಾಗಿ ವರ್ತಿಸಬೇಡಿ. ಪ್ರೀತಿಪಾತ್ರರ ಜೊತೆ ಕೋಪ ಮತ್ತು ಅಹಂಕಾರದಿಂದ ವರ್ತಿಸಬೇಡಿ. ಈ ದಿನ ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆಗಳಿದ್ದರೆ ಸೂಕ್ತ ಗಮನಹರಿಸಿ.
ಸಿಂಹ ರಾಶಿ
ಅನೇಕ ರೀತಿಯ ನಕಾರಾತ್ಮಕ ಆಲೋಚನೆಗಳು ಮನಸ್ಸಿನಲ್ಲಿ ಬರಬಹುದು. ಈ ದಿನ ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸುವುದು ಒಳ್ಳೆಯದು. ಆರ್ಥಿಕವಾಗಿ ಈ ದಿನ ಅನುಕೂಲಕರವಲ್ಲ, ಕುಟುಂಬದಲ್ಲಿ ಸಮತೋಲಿತವಾಗಿ ವರ್ತಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಕೋಪವನ್ನು ನಿಯಂತ್ರಿಸಿ.
ಕನ್ಯಾ ರಾಶಿ
ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಜವಾಬ್ದಾರಿಗಳ ಹೊರೆ ಹೆಚ್ಚಾಗಬಹುದು. ಹಿಂದೆ ಮಾಡಿದ ಯಾವುದೇ ಹೂಡಿಕೆಯಿಂದ ಈ ಅವಧಿ ಉತ್ತಮವಾಗಿದೆ. ಉದ್ಯಮಿಗಳು ಅಜಾಗರೂಕರಾಗಿದ್ದರೆ, ಉತ್ತಮ ಅವಕಾಶವು ನಿಮ್ಮ ಕೈಯಿಂದ ಜಾರಿಕೊಳ್ಳಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಬದುಕಿನಲ್ಲಿ ಪರಸ್ಪರ ನಂಬಿಕೆ ಇಡುವಂತೆ ಸಲಹೆ ನೀಡಲಾಗುವುದು.
ತುಲಾ ರಾಶಿ
ಈ ದಿನ ಸುಮ್ಮನೆ ಸಮಯ ವ್ಯರ್ಥ ಮಾಡಬೇಡಿ. ವೃತ್ತಿ ಜೀವನದ ಕಡೆಗೆ ಗಮನಹರಿಸಿ. ಉದ್ಯೋಗಿಗಳು ಈ ಸಮಯದಲ್ಲಿ ಯಾವುದೇ ಬದಲಾವಣೆ ಮಾಡದಂತೆ ಸಲಹೆ ನೀಡಲಾಗುವುದು. ವ್ಯಾಪಾರಿಗಳು ಜಾಗ್ರತೆವಹಿಸುವಂತೆ ಸಲಹೆ ನೀಡಲಾಗುವುದು, ವೈವಾಹಿಕ ಬದುಕಿನಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಕೆಲಸದಲ್ಲಿ ಒತ್ತಡ ಇರಲಿದೆ, ತರಾತುರಿಯಲ್ಲಿ ತೆಗೆದುಕೊಳ್ಳುವ ಯಾವುದೇ ನಿರ್ಧಾರವು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು. ಕಷ್ಟಕರ ಸಂದರ್ಭಗಳಲ್ಲಿ ನಿಮ್ಮ ಸಂಗಾತಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ವ್ಯಾಪಾರಿಗಲು ತಮ್ಮ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಆಹಾರಕ್ರಮದ ಕಡೆಗೆ ಗಮನಹರಿಸಿ.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನ ಹಾಕುತ್ತೀರಿ, ಅದರೆ ಇತರರ ವಿಷಯಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ ಎಂದು ಸಲಹೆ ನೀಡಲಾಗುವುದು. ವ್ಯಾಪಾರಿಗಳು ಅತಿಯಾದ ಲಾಭದ ಆಸೆಗೆ ಬೀಳಬೇಡಿ. ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ನೀವು ಸಕಾರಾತ್ಮಕ ಉತ್ತರವನ್ನು ಪಡೆಯಬಹುದು. ಕುಟುಂಬದ ಕಡೆಗೆ ಗಮನಹರಿಸಿ. ವಾಹನವನ್ನು ಜಾಗ್ರತೆಯಿಂದ ಬಳಸಿ.
ಮಕರ ರಾಶಿ
ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಆತುರಪಡಬೇಡಿ. ಹಣಕಾಸಿನ ವಿಷಯದಲ್ಲಿ ಅನುಕೂಲವಾಗುತ್ತದೆ. ಹಣಕ್ಕೆ ಸಂಬಂಧಿಸಿದ ಯಾವುದೇ ವಹಿವಾಟು ಬಾಕಿ ಉಳಿದಿದ್ದರೆ ಅದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.
ಕುಂಭ ರಾಶಿ
ಕೆಲಸ ಕೆಲಸ ಅಂತ ಆಯಾಸ ಮಾಡಿಕೊಳ್ಳದೆ ವಿಶ್ರಾಂತಿ ಕಡೆ ಗಮನಹರಿಸಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನದ ಕಡಗೆ ಗಮನಹರಿಸಿ.
ವಿವಾಹಿತರಿಗೆ ದಿನವು ತುಂಬಾ ಆಹ್ಲಾದಕರವಾಗಿರುತ್ತದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ, ಸೂಕ್ತ ವೈದ್ಯರನ್ನು ಕಾಣಿ.
ಮೀನ ರಾಶಿ
ವೈವಾಹಿಕ ಜೀವನ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ.
ನಿಮ್ಮ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications