ಆಗಸ್ಟ್ 9, ದಿನ ಭವಿಷ್ಯ: ಈ ದಿನ ದ್ವಾದಶ 12 ರಾಶಿಗಳ ರಾಶಿಫಲ ಹೇಗಿದೆ?

ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 9) ಭವಿಷ್ಯ ನೋಡೋಣ:


ಮೇಷ ರಾಶಿ

ಈ ದಿನ ತುಂಬಾ ಚೆನ್ನಾಗಿರಲಿದೆ, ಕೆಲಸದಲ್ಲಿ ಒತ್ತಡ ಇರಬಹುದು. ನೀವು ವೃತ್ತಿ ಜೀವನದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಬೇಡದ ಚಿಂತೆಯಿಂದ ದೂರವಿರಿ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು, ಆರೋಗ್ಯ ಚೆನ್ನಾಗಿರಲಿದೆ.

Dina Bhavishya

ವೃಷಭ ರಾಶಿ

ಹಣದ ವ್ಯವಹಾರಗಳನ್ನು ಬಹಳ ಎಚ್ಚರಿಕೆಯಿಂದ ಮಾಡಿ. ಉದ್ಯಮಿಗಳಿಗೆ ಈ ದಿನ ಶುಭವಾಗಿದೆ, ಕೆಲಸದ ಕಡೆಗೆ ತುಂಬಾ ಗಮನಹರಿಸಬೇಕು. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಜೀವನ ರೊಮ್ಯಾಂಟಿಕ್ ಆಗಿರಲಿದೆ. ಈಗಾಗಲೇ ನೀವು ಅರೋಗ್ಯ ಸಮಸ್ಯೆ ಎದುರಿಸುತ್ತಿದ್ದರೆ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ.

ಮಿಥುನ ರಾಶಿ

ಈ ದಿನ ನೀವು ಕೆಲ ಸಂದರ್ಭದಲ್ಲಿ ಶಾಂತ ರೀತಿಯಿಂದ ವರ್ತಿಸಬೇಕು. ಆತುರದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ವ್ಯಾಪಾರಿಗಳಿಗೆ ಈ ದಿನ ಚೆನ್ನಾಗಿರಲಿದೆ. ಕುಟುಂಬದಲ್ಲಿನ ಸಮಸ್ಯೆಯನ್ನು ಶಾಂತ ರೀತಿಯಲ್ಲಿ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯದ ವಿಷಯದಲ್ಲಿ ಈ ದಿನ ಉತ್ತಮವಲ್ಲ, ಹೆಚ್ಚು ಅಯಾಸ ಕಾಡಬಹುದು.

ಕರ್ಕ ರಾಶಿ

ಈ ದಿನ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ನಿಮ್ಮ ಪ್ರೀತಿಪಾತ್ರರ ಭಾವನೆಗಳನ್ನು ಗೌರವಿಸಿ. ಖರ್ಚಿನ ಬಗ್ಗೆ ಹೇಳುವುದಾದರೆ
ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಪ್ರಮುಖ ವ್ಯವಹಾರ ನಿರ್ಧಾರವನ್ನು ತೆಗೆದುಕೊಳ್ಳುವುದು ಉತ್ತಮ. ಕೆಲಸದಲ್ಲಿ ಈ ದಿನ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.

ಸಿಂಹ ರಾಶಿ

ವೈಯಕ್ತಿಕ ವಿಷಯ ಕೆಲಸದ ಮೇಲೆ ಪರಿಣಾಮ ಬೀರದಂತೆ ಜಾಗ್ರತೆವಹಿಸಿ. ವ್ಯಾಪಾರಿಗಳಿಗೆ ಈ ಧನಲಾಭವಾಗಲಿದೆ. ಉದ್ಯೋಗಿಗಳು ನಿಮ್ಮ ಕೆಲಸ-ಕಾರ್ಯಗಳನ್ನು ಎಚ್ಚರಿಕೆಯಿಂದ ಮಾಡಿ. ಕುಟುಂಬ ವಿಷಯದಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡದಂತೆ ಜಾಗ್ರತೆವಹಿಸಿ, ಆರೋಗ್ಯದ ಬಗ್ಗೆ ಹೇಳುವುದಾರೆ ಆರೋಗ್ಯ ಸಂಬಂಧಿತ ಸಮಸ್ಯೆವಿರಬಹುದು.

ಕನ್ಯಾ ರಾಶಿ

ಈ ದಿನ ನೀವು ಜಾಗ್ರತೆವಹಿಸಬೇಕು. ಕೆಲಸದಲ್ಲಿನ ಅಡೆತಡೆಗಳು ನಿಮ್ಮ ಅತ್ಮವಿಶ್ವಾಸ ಕುಗ್ಗಿಸಬಹುದು, ಅದರೆ ಅ ರೀತಿ ಆಗದಂತೆ ನೋಡಿಕೊಳ್ಳಿ. ವ್ಯಾಪಾರಿಗಳಿಗೆ ಆರ್ಥಿಕ ಲಾಭದ ದೃಷ್ಟಿಯಿಂದ ಈ ದಿನ ಉತ್ತಮವಲ್ಲ. ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ಆದ್ದರಿಂದ ಆರೋಗ್ಯದ ಕಡೆಗೆ ಗಮನಹರಿಸಿ.

ತುಲಾ ರಾಶಿ

ಕೆಲಸದಲ್ಲಿ ಈ ದಿನ ಉತ್ತಮವಾಗಿದೆ, ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ವೈವಾಹಿಕ, ಕುಟುಂಬ ಜೀವನ ಚೆನ್ನಾಗಿರಲಿದೆ. ಅತಿಯಾದ ಚಿಂತೆ ಒಳ್ಳೆಯದಲ್ಲ.

ವೃಶ್ಚಿಕ ರಾಶಿ

ಸಂಬಂಧದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಈ ದಿನ ನಿಮ್ಮ ಖರ್ಚು ಮತ್ತು ಆದಾಯದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಜೀವನದ ಕಡೆಗೆ ಗಮನಹರಿಸಿ, ಸಣ್ಣ -ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.

ಧನು ರಾಶಿ

ಈ ದಿನ ನೀವು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು, ಇತರರ ವಿಷಯಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ, ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು. ಉದ್ಯೋಗಿಗಳಿಗೆ-ವ್ಯಾಪಾರಿಗಳಿಗೆ ತುಂಬಾ ಒತ್ತಡ ಇರಲಿದೆ. ವೈವಾಹಿಕ ಜೀವನದ ಬಗ್ಗೆ ಹೇಳುವುದಾದರೆ ಈ ದಿನ ನಿಮಗೆ ರೊಮ್ಯಾಂಟಿಕ್ ಆಗಿರಲಿದೆ, ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ.

ಮಕರ ರಾಶಿ

ಈ ದಿನ ಶುಭವಾಗಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ತೆರಿಗೆ ಸಂಬಂಧಿತ ವಿಷಯಗಳಲ್ಲಿ ನಿಷ್ಕಾಳಜಿ ವಹಿಸಬೇಡಿ, ಇಲ್ಲದಿದ್ದರೆ ನಷ್ಟ ಸಂಭವಿಸಬಹುದು. ಕಛೇರಿಯಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗುತ್ತದೆ. ಆರೋಗ್ಯದ ಕಡೆಗೆ ಗಮನಹರಿಸಿ.


ಕುಂಭ ರಾಶಿ

ನಿಮ್ಮ ಜವಾಬ್ದಾರಿಗಳನ್ನು ಉತ್ತಮವಾಗಿ ನಿರ್ವಹಿಸುವಿರಿ. ಈ ದಿನ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ. ಕೆಲಸ-ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಮನೆಯಲ್ಲಿನ ಭಿನ್ನಾಭಿಪ್ರಾಯ ತಾಳ್ಮೆಯಿಂದ ಬಗೆಹರಿಸಿ.

ಮೀನ ರಾಶಿ

ಈ ದಿನ ನೀವು ಕೆಲಸದಲ್ಲಿ ಜಾಗ್ರತೆವಹಿಸಬೇಕು. ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರಪಡಬೇಡಿ. ನಿಮ್ಮ ಪ್ರೀತಿಪಾತ್ರರಿಂದ ಸಲಹೆ ಪಡೆಯಿರಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope Prediction for 9 August 2024: Dina Bhavishya for All Zodiac Signs

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Thursday, August 8, 2024, 20:26 [IST]
X
Desktop Bottom Promotion