ದಿನ ಭವಿಷ್ಯ ಏಪ್ರಿಲ್ 25, 2024: ಗುರುವಾರ ಈ 4 ರಾಶಿಯವರಿಗೆ ತುಂಬಾನೇ ಶುಭ ದಿನ

ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 25 ಹೇಗಿರಲಿದೆ ಎಂದು ನೋಡೋಣ ಬನ್ನಿ:

ಮೇಷ ರಾಶಿ

ಕೆಲಸದಲ್ಲಿ ಶುಭ ಸೂಚನೆ, ನಿಮ್ಮೆಲ್ಲಾ ಕೆಲಸ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಬೆಳವಣಿಗೆಯನ್ನು ಕಾಣುತ್ತೀರಿ, ಇದರಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ಕುಟುಂಬದಲ್ಲಿ ಸಂತೋಷ ಇರಲಿದೆ. ಈ ದಿನ ಖರ್ಚು ಕಡಿಮೆ ಇರಲಿದೆ, ಆರೋಗ್ಯ ಚೆನ್ನಾಗಿರಲಿದೆ. ಒಟ್ಟಿನಲ್ಲಿ ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ.

Dina Bhavishya

ವೃಷಭ ರಾಶಿ

ಉದ್ಯೋಗಿಗಳಿಗೆ ಕೆಲಸದ ಒತ್ತಡ, ಸವಾಲುಗಳು ಹೆಚ್ಚಾಗಲಿದೆ. ನಿಮ್ಮ ಕೆಲಸದಲ್ಲಿ ಹಲವು ಅಡೆತಡೆಗಳು ಬರುವುದರಿಂದ ಕೆಲಸ ಪೂರ್ಣಗೊಳಿಸಲು ಕಷ್ಟವಾಗುವುದು. ವ್ಯಾಪಾರಿಗಳಿಗೆ ಈ ದಿನ ಬಯಸಿದಂತೆ ಲಾಭ ಸಿಗುವುದು ಕಷ್ಟ, ನಿಮ್ಮ ಸ್ಪರ್ಧಿಗಳು ನಿಮ್ಮ ವ್ಯವಹಾರವನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಇನ್ನು ಹಣದ ಕುರಿತ ನಿರ್ಧಾರಗಳನ್ನು ತುಂಬಾ ಆಲೋಚಿಸಿ ತೆಗೆದುಕೊಳ್ಳಬೇಕು. ಮಾನಸಿಕ ಒತ್ತಡ ಕೆಲಸದ ಮೇಲೆ ಪ್ರಭಾವ ಬೀರದಂತೆ ಜಾಗ್ರತೆವಹಿಸಿ.

ಮಿಥುನ ರಾಶಿ

ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಿ, ಅತಿಯಾದ ಆತ್ಮವಿಶ್ವಾಸ ತೋರಲು ಹೋಗಬೇಡಿ, ನಷ್ಟ ಅನುಭವಿಸಬಹುದು. ಉದ್ಯೋಗಿಗಳಿಗೆ ಕೆಲಸದ ಹೊರೆ ಕಡಿಮೆಯಾಗುವ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಸಂಗಾತಿಯೊಂದಿಗೆ ಸಂಬಂಧ ವಿಶೇಷವಾಗಿರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.


ಕರ್ಕ ರಾಶಿ

ಈ ದಿನ ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ದಿನ ಹಣದ ವಿಷಯದಲ್ಲಿ ಉತ್ತಮವಾಗಿದೆ, ಇನ್ನು ಹೂಡಿಕೆಗೂ ಈ ದಿನ ಉತ್ತಮವಾಗಿದೆ. ಕುಟುಂಬದಲ್ಲಿ ಅನಗ್ಯತ ಅಹಂಕಾರ ತೋರಿಸಬೇಡಿ. ವ್ಯಾಪಾರಿಗಳು ಉತ್ತಮ ಲಾಭ ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.

ಸಿಂಹ ರಾಶಿ

ಕೆಲಸದಲ್ಲಿ ಕೆಲ ಸಮಸ್ಯೆಗಳು ಇರಬಹುದು, ಆದರೆ ಚಿಂತೆ ಬೇಡ, ಎಲ್ಲವೂ ಸರಿಯಾಗಲಿದೆ. ಉದ್ಯೋಗಿಗಳಿಗೆ ಸಂಪೂರ್ಣ ಬೆಂಬಲ ದೊರೆಯಲಿದೆ. ನೀವು ನಿಮ್ಮ ವೈವಾಹಿಕ ಜೀವನದ ಕಡೆಗೆ ಹೆಚ್ಚು ಗಮನಹರಿಸಬೇಕು. ನಿಮ್ಮ ಕೋಪ ನಿಯಂತ್ರಸಿದರೆ ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್‌ಗೆ ಅನುಗುಣವಾಗಿ ಮಾತ್ರ ನೀವು ಖರ್ಚು ಮಾಡುತ್ತೀರಿ.

ಕನ್ಯಾ ರಾಶಿ

ಮನೆಯಲ್ಲಿ ಚಿಕ್ಕ ಮಕ್ಕಳಿದ್ದರೆ ಇಂದು ಅವರ ಬಗ್ಗೆ ವಿಶೇಷ ಕಾಳಜಿ ವಹಿಸಿ. ಇಂದು ಹಣದ ವಿಷಯದಲ್ಲಿ ಸ್ವಲ್ಪ ದುಬಾರಿಯಾಗಲಿದೆ. ಕೆಲಸದಲ್ಲಿ ಅನಗ್ಯತ ಚಿಂತೆ ಬಿಡಿ. ವ್ಯಾಪಾರಿಗಳಿಗೆತುಂಬಾ ಸಮಯದಿಂದ ಸಮಸ್ಯೆ ಬಗೆಹರಿಯಲಿದೆ. ಪ್ರೇಮಿಗಳಿಗೆ ಈ ದಿನ ತುಂಬಾ ವಿಶೇಷವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಹೇಳುವುದಾದರೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆವಿರಬಹುದು.

ತುಲಾ ರಾಶಿ

ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ನಿಮ್ಮ ಕೆಲಸವನ್ನು ಮೇಲಾಧಿಕಾರಿಗಳು ಮೆಚ್ಚಿಕೊಳ್ಳುತ್ತಾರೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಯು ಪ್ರತಿಕೂಲವಾಗಿ ಕಾಣುತ್ತದೆ. ಕುಟುಂಬ ಜೀವನದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ನಿಮ್ಮ ನಡವಳಿಕೆಯಿಮದ ಮನೆಯವರನ್ನು ನೋಯಿಸಬೇಡಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಆರೋಗ್ಯವೂ ಉತ್ತಮವಾಗಿರಲಿದೆ.


ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರು ಏನಾದರೂ ಪರೀಕ್ಷೆ ಬರೆದಿದ್ದರೆ ಉತ್ತಮ ಫಲಿತಾಂಶ ದೊರೆಯಲಿದೆ. ಪ್ರೇಮಿಗಳಿಗೆ ಈ ದಿನ ವಿಶೇಷವಾಗಿರಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಉದ್ಯಮಿಗಳು ದೊಡ್ಡ ಆರ್ಡರ್ ಪಡೆಯಬಹುದು. ಶೀಘ್ರದಲ್ಲೇ ನಿಮ್ಮ ವ್ಯವಹಾರದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಂಡು ಬರಲಿದೆ, ಆರೋಗ್ಯ ಚೆನ್ನಾಗಿರಲಿದೆ.

ಧನು ರಾಶಿ

ಉದ್ಯೋಗಿಗಳಿಗೆ ಈ ದಿನ ಶುಭವಾಗಿದೆ, ನೀವು ಕೆಲಸದಲ್ಲಿ ನಿರ್ಲಕ್ಷ್ಯ ಬೇಡ. ವ್ಯಾಪಾರಿಗಳಿಗೆ ಈ ದಿನ ಮಿಶ್ರ ಫಲಿತಾಂಶ. ಕಷ್ಟದ ಸಂದರ್ಭದಲ್ಲಿ ಜೀವನ ಸಂಗಾತಿಯ ಬೆಂಬಲ ಸಿಗಲಿದೆ. ಹಣದ ವಿಚಾರದಲ್ಲಿ ಚಿಂತೆ ಇರಲ್ಲ. ನಿಮ್ಮ ಖರ್ಚುಗಳನ್ನು ಸುಲಭವಾಗಿ ಭರಿಸಲಾಗುವುದು. ಆರೋಗ್ಯದ ಬಗ್ಗೆ ಗಮನ ಹರಿಸಿ.

ಮಕರ ರಾಶಿ

ಈ ದಿನ ಕೆಲಸದಲ್ಲಿ ಸಮಸ್ಯೆಯಾಗದಂತೆ ಜಾಗ್ರತೆವಹಿಸಿ. ವ್ಯಾಪಾರಿಗಳು ಹಣದ ಒತ್ತಡ ಇರಲಿದೆ, ಇಂದು ಯಾವುದೇ ದೊಡ್ಡ ಖರ್ಚು ಮಾಡಬೇಡಿ. ವೈವಾಹಿಕ ಜೀವನದಲ್ಲಿ ನಿಮ್ಮ ಮಾತಿನಿಂದ ಸಮಸ್ಯೆಯಾಗದಂತೆ ನೋಡಿಕೊಳ್ಳಿ. ನಿಮ್ಮ ನಡವಳಿಕೆ ಅವರಿಗೆ ನೋವುಂಟು ಮಾಡಬಹುದು.

ಕುಂಭ ರಾಶಿ

ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಹಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಬಹಳ ಜಾಗರೂಕರಾಗಿರಲು ಸಲಹೆ ನೀಡಲಾಗುವುದು, ನಿಮ್ಮ ಶ್ರಮದ ಕ್ರೆಡಿಟ್‌ ಬೇರೆಯವರು ತೆಗೆದುಕೊಳ್ಳಬೇಡಿ. ದಿನದ ಎರಡನೇ ಭಾಗದಲ್ಲಿ ನೀವು ವಿಶೇಷ ವ್ಯಕ್ತಿಯನ್ನು ಭೇಟಿ ಮಾಡಬಹುದು. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.

ಮೀನ ರಾಶಿ

ನಿಮ್ಮ ವೃತ್ತಿ ಜೀವನದಲ್ಲಿ ನೀವು ಹೊಸತನ ಕಾಣುವಿರಿ, ನಿಮಗೆ ಹೊಸ ಅವಕಾಶಗಳು ದೊರೆಯಲಿದೆ. ವ್ಯಾಪಾರಿಗಳು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ, ನಿಮ್ಮ ಪಾಲುದಾರರಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗಲಿದೆ. ಕುಟುಂಬದಲ್ಲಿ ಸಂತೋಷ ಇರಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಾಣಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯದಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope Prediction for April 25, 2024: Dina Bhavishya for All Zodiac Signs

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada:
Story first published: Wednesday, April 24, 2024, 21:41 [IST]
X
Desktop Bottom Promotion