Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಆಗಸ್ಟ್ 14 ಈ ದಿನ ದ್ವಾದಶ ರಾಶಿಗಳ ರಾಶಿಫಲ
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ದಿನ ನಿಮ್ಮ ರಾಶಿಫಲ ಹೇಗಿದೆ ನೋಡೋಣ:
ಮೇಷ ರಾಶಿ
ಈ ದಿನ ನೀವು ನಿಮ್ಮ ಮಾತಿನ ಮೇಲೆ ಗಮನಹರಿಸಬೇಕು. ಹಣಕಾಸಿನ ಪರಿಸ್ಥಿತಿಯಲ್ಲಿ ಹದಗೆಡುವ ಸಾಧ್ಯತೆಯಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು. ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ಅನಾವಶ್ಯಕ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನಹರಿಸಿ. ಈ ದಿನ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ನೀವು ಇತ್ತೀಚೆಗೆ ಯಾವುದೇ ಹೂಡಿಕೆ ಮಾಡಿದ್ದರೆ ಉತ್ತಮ ಫಲಿತಾಂಶ ಪಡೆಯುತ್ತೀರಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವಿನ ಸಮಸ್ಯೆವಿರಬಹುದು.
ಮಿಥುನ ರಾಶಿ
ಈ ದಿನ ಅನುಕೂಲಕರವಾಗಿದೆ, ಬರಬೇಕಾಗಿರುವ ಹಣ ಕೈ ಸೇರಲಿದೆ. ವ್ಯಾಪಾರಿಗಳು ಹೊಸ ಹೂಡಿಕೆ ಮಾಡುವ ಮುನ್ನ ಅನುಭವಿಗಳಿಂದ ಸಲಹೆ ಪಡೆಯಿರಿ. ಉದ್ಯೋಗಿಗಳಿಗೆ ಕೆಲಸದ ಕಡೆಗೆ ಗಮನಹರಿಸಲು ಸಲಹೆ ನೀಡಲಾಗುವುದು. ಆರೋಗ್ಯ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ನೀವು ಕೋಪ ನಿಯಂತ್ರಿಸಿ. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಆತಂಕ ಹೆಚ್ಚಾಗಬಹುದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವ ಜನರು ಇಂದು ಜಾಗರೂಕರಾಗಿರಬೇಕು. ನಿಮ್ಮ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಆಹಾರಕ್ರಮದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ವೈಯಕ್ತಿಕವಾಗಿ ಈ ದಿನ ಉತ್ತಮವಲ್ಲ, ವೃತ್ತಿಪರ ಜೀವನದಲ್ಲಿ ಕೆಲವು ದೊಡ್ಡ ಬದಲಾವಣೆಗಳ ಸಾಧ್ಯತೆಯಿದೆ. ಖರ್ಚು ಮಿತಿಯಲ್ಲಿ ಮಾಡಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನೆಗಡಿ, ಕೆಮ್ಮು, ಜ್ವರ ಮುಂತಾದ ಸಮಸ್ಯೆಗಳಿರಬಹುದು.
ಕನ್ಯಾ ರಾಶಿ
ಈ ದಿನ ಧನಾತ್ಮಕವಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು ಸಹ ಪರಿಹರಿಸಲ್ಪಡುತ್ತವೆ.ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ.
ತುಲಾ ರಾಶಿ
ಕೆಲಸದ ಬಗ್ಗೆ ಅಜಾಗರೂಕತೆಯಿಂದ ನೀವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಉತ್ತಮವಾಗಿದೆ. ಮನೆಯ ಆಪ್ತರ ಮನಸ್ಸು ನೋಯಿಸಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಆರೋಗ್ಯದ ಕಡೆಗೆ ಗಮನಹರಿಸಿ. ಇಲ್ಲದಿದ್ದರೆ ನಿಮ್ಮ ಆರೋಗ್ಯವು ಹದಗೆಡಬಹುದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಈ ದಿನ ಕೋಪ ನಿಯಂತ್ರಿಸಿ, ಸಂಗಾತಿಯ ಕಡೆಗೆ ಗಮನಹರಿಸಿ, ಆಹಾರಕ್ರಮದ ಕಡೆಗೆ ಗಮನಹರಿಸಿ.
ಧನು ರಾಶಿ
ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು. ಇತರರ ವಿಷಯಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ, ಇಲ್ಲದಿದ್ದರೆ ನೀವು ಅನಗತ್ಯ ತೊಂದರೆಗೆ ಸಿಲುಕಬಹುದು. ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಗಮನಹರಿಸಬೇಕು. ಸಂಗಾತಿಯ ಜೊತೆ ಭಿನ್ನಾಭಿಪ್ರಾಯ ದೂರಾಗಿಸಲು ಪ್ರಯತ್ನಿಸಿ. ಆರೋಗ್ಯದ ಕಡೆಗೆ ಗಮನಹರಿಸಿ.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ದಿನ ನಿಮಗೆ ನಿಮ್ಮ ಕೆಲಸಕ್ಕೆ ಉತ್ತಮ ಪ್ರತಿಫಲ ಸಿಗಲಿದೆ. ನಿಮ್ಮವರ ಜೊತೆ ಕೋಪ, ಅಹಂಕಾರದಿಂದ ವರ್ತಿಸಬೇಡಿ .
ನಿಮ್ಮ ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ. ಸಂಗಾತಿಗೆ ಅನುಮಾನ ಒಳ್ಳೆಯದಲ್ಲ, ಆರೋಗ್ಯದ ಬಗ್ಗೆ ಹೇಳುವುದಾದರೆ ಗಂಟಲಿಗೆ ಸಂಬಂಧಿಸಿದ ಸಮಸ್ಯೆ ಇರಬಹುದು.
ಕುಂಭ ರಾಶಿ
ಈ ದಿನ ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ, ವಿಶೇಷವಾಗಿ ಹೂಡಿಕೆಗಳನ್ನು ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಕೆಲಸದಲ್ಲಿ ಮೇಲಾಧಿಕಾರಿ ಜೊತೆ ಅನಗ್ಯತ ಚರ್ಚೆ ಬೇಡ. ನಿಮ್ಮ ವೈವಾಹಿಕ ಜೀವನದ ಕಡೆ ನೀವು ಹೆಚ್ಚು ಗಮನ ಹರಿಸಬೇಕು.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಹಣದ ವಿಷಯಗಳಲ್ಲಿ ಅಜಾಗರೂಕತೆಯು ದುಬಾರಿಯಾಗಿದೆ. ಆರ್ಥಿಕ ನಷ್ಟದ ಸೂಚನೆಗಳಿವೆ. ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಿ. ಮನೆಯಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಭುಜ ಅಥವಾ ಸೊಂಟಕ್ಕೆ ಸಂಬಂಧಿಸಿದ ಸಮಸ್ಯೆ ಇರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications