Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ, ಆಗಸ್ಟ್ 18: 12 ರಾಶಿಗಳಿಗೆ ಈ ದಿನ ಹೇಗಿರಲಿದೆ?
ವೈದಿಕಶಾಸ್ತ್ರದ ಪ್ರಕಾರ ಆಗಸ್ಟ್ 18 ದ್ವಾದಶ ರಾಶಿಗಳಿಗೆ ಹೇಗಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ. ನೀವು ಸಂಬಂಧದ ಕಡೆಗೆ ಗಮನಹರಿಸುವುದರಿಂದ ನಿಮ್ಮ ಸಂಬಂಧ ಮತ್ತಷ್ಟು ಬಲವಾಗಲಿದೆ, ವೃತ್ತಿ ಜೀವನಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಮನೆಯ ವಾತಾವರಣ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಿವಿ ನೋವಿನ ಸಮಸ್ಯೆವಿರಬಹುದು.

ವೃಷಭ ರಾಶಿ
ಕೆಲಸದ ಒತ್ತಡ ಕಾರಣ ವೈಯಕ್ತಿಕ ಬದುಕಿನ ಕಡೆಗೆ ಗಮನಹರಿಸುವುದು ಕಷ್ಟವಾಗುವುದು. ಇನ್ನು ಆರ್ಥಿಕವಾಗಿ ಉತ್ತಮವಾಗಿದೆ, ಆದರೆ ಅಗ್ಯತಕ್ಕಿಂತ ಹೆಚ್ಚು ಖರ್ಚು ಮಾಡಲು ಹೋಗಬೇಡಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಸಂಬಂಧದ ಬಗ್ಗೆ ಹೇಳುವುದಾದರೆ ಚಿಕ್ಕ ವಿಷಯವನ್ನು ಮನಸ್ಸಿಗೆ ತೆಗದುಕೊಳ್ಳಬೇಡಿ.
ಮಿಥುನ ರಾಶಿ
ಈ ದಿನ ಉತ್ತಮವಾಗಿದೆ, ವೃತ್ತಿ ಬದುಕಿನಲ್ಲಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವೃತ್ತಿ ಬದುಕಿನಲ್ಲಿದ್ದ ಅಡೆತಡೆ ದೂರಾಗುವುದರಿಂದ ಖುಷಿಯಾಗಿರುತ್ತೀರಿ. ವ್ಯಾಪಾರಿಗಳಿಗೂ ಧನಲಾಭವಾಗಲಿದೆ. ವೈವಾಹಿಕ ಬದುಕಿನಲ್ಲಿ ಕೋಪ ನಿಯಂತ್ರಿಸಲು ಸಲಹೆ ನೀಡಲಾಗುವುದು, ಆರೋಗ್ಯ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ನಿಮಗೆ ಅನಕೂಲಕರವಲ್ಲ, ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಕೆಲ ಅಡೆತಡೆಗಳು ಎದುರಾಗಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮಗೆ ಅವಶ್ಯಕತೆ ಬಿದ್ದಾಗ ಅವರ ಬೆಂಬಲ ಸಿಗಲಿದೆ. ಅವಾಹಿತರಿಗೆ ಮದುವೆ ಮದುವೆಎ ಪ್ರಸ್ತಾಪ ಬರಲಿದೆ. ವಿವಾಹಿತರಿಗೆ, ಪ್ರೇಮಿಗಳಿಗೆ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ದಿನ ಶುಭವಾಗಿದೆ. ಈ ಅವಧಿಯಲ್ಲಿ ನೀವು ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲಿತಾಂಶ ಪಡೆಯುತ್ತೀರಿ. ವೈವಾಹಿಕ ಬದುಕು ಚೆನ್ನಾಗಿರಲಿದೆ. ವ್ಯಾಪಾರಿಗಳಿಗೂ ಈ ದಿನ ಧನ ಲಾಭವಾಗಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಹೊಟ್ಟೆಯ ಆರೋಗ್ಯದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಹಣಕಾಸಿನ ವಿಷಯಗಳಲ್ಲಿ ಹೆಚ್ಚು ಆತುರಪಡಬೇಡಿ, ಇಲ್ಲದಿದ್ದರೆ ಲಾಭದ ಬದಲು ನಷ್ಟ ಸಂಭವಿಸಬಹುದು. ಹೂಡಿಕೆಗೆಎ ಈ ಅವಧಿ ಉತ್ತಮವಾಗಿದೆ, ಸಂಗಾತಿಯೊಂದಿಗೆ ಬಾಂಧವ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ವೃತ್ತಿ ಮತ್ತು ವ್ಯವಹಾರಕ್ಕೆ ಈ ಸಮಯ ಅನುಕೂಲಕರವಾಗಿದೆ. ವೈಯಕ್ತಿಕ ಜೀವನದ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಆರ್ಥಿಕ ಸಮಸ್ಯೆಯೂ ದೂರಾಗಲಿದೆ.
ಕುಟುಂಬದಲ್ಲಿ ಸಂತೋಷ ಉಳಿಯಬೇಕೆಂದರೆ ನೀವು ನಿಮ್ಮ ವರ್ತನೆಯಲ್ಲಿ ಬದಲಾವಣೆ ಮಾಡುವುದು ಒಳ್ಳೆಯದು.
ವೃಶ್ಚಿಕ ರಾಶಿ
ಈ ದಿನ ನಿಮಗೆ ಅಷ್ಟೊಂದು ಅನುಕೂಲಕವರಲ್ಲ, ಕೆಲ ವಿಷಯ ಮನಸ್ಸಿಗೆ ಬೇಸರವನ್ನುಂಟು ಮಾಡಬಹುದು, ವ್ಯಾಪಾರಿಗಳೂ ಜಾಗ್ರತೆವಹಿಸಬೇಕು. ಇನ್ನು ಹಣದ ಬಗ್ಗೆ ಕೂಡ ಜಾಗ್ರತೆವಹಿಸಬೇಕು. ಪ್ರೇಮಿಗಳಿಗೆ ಈ ಅವಧಿ ಚೆನ್ನಾಗಿದೆ, ಆರೋಗ್ಯದ ಸಮಸ್ಯೆಗಳಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.
ಧನು ರಾಶಿ
ನೀವು ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳುವುದನ್ನು ತಪ್ಪಿಸಿ. ಯಾವುದೇ ರೀತಿಯ ಬದಲಾವಣೆಗೆ ಇದು ಸೂಕ್ತ ಸಮಯವಲ್ಲ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಮತ್ತಷ್ಟು ಪ್ರಯತ್ನ ಹಾಕಬೇಕು. ನಿಮ್ಮ ಸಂಗಾತಿಯ ಅಸಭ್ಯ ವರ್ತನೆ ನಿಮಗೆ ದುಃಖವನ್ನುಂಟು ಮಾಡಬಹುದು. ಆಹಾರಕ್ರಮದ ಕಡೆಗೆ ಗಮನಹರಿಸಿ.
ಮಕರ ರಾಶಿ
ಆಸ್ತಿ ವಿಷಯದಲ್ಲಿ ವಿವಾದವಿರಬಹುದು. ನಿಮ್ಮ ಹಿರಿಯರಿಂದ ಸಲಹೆ ಪಡೆದ ನಂತರವೇ ಯಾವುದೇ ನಿರ್ಧಾರ ತೆಗೆದುಕೊಳ್ಳಿ. ಆದಾಯವು ಉತ್ತಮವಾಗಿರುತ್ತದೆ, ನಿಮ್ಮ ವ್ಯವಹಾರವನ್ನು ಮುಂದುವರಿಸಲು ನೀವು ಬ್ಯಾಂಕ್‌ನಿಂದ ಸಾಲವನ್ನು ತೆಗೆದುಕೊಳ್ಳಲು ಬಯಸಿದರೆ ಸಾಲ ಸಿಗಲಿದೆ. ಉದ್ಯೋಗದಲ್ಲಿ ಈ ದಿನ ಉತ್ತಮವಾಗಿದೆ, ವೈವಾಹಿಕ ಜೀವನದಲ್ಲಿ ನಂಬಿಕೆಯ ಕೊರತೆ ಇದ್ದರೆ ಅದನ್ನು ಬಗೆಹರಿಸುವುದು ಒಳ್ಳೆಯದು. ಆರೋಗ್ಯವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಹಣಕಾಸಿನ ದೃಷ್ಟಿಯಿಂದ ಈ ಸಮಯ ಉತ್ತಮವಾಗಿದೆ. ಕೆಲಸದಲ್ಲಿ ಅತಿಯಾದ ಆತ್ಮವಿಶ್ವಾಸವನ್ನು ತಪ್ಪಿಸಿ ಇಲ್ಲದಿದ್ದರೆ ನೀವು ಮುಜುಗರ ಅನುಭವಿಸಬೇಕಾಗಬಹುದು. ನೀವು ವೃತ್ತಿಗೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ತೆಗೆದುಕೊಂಡರೆ, ನಿಮ್ಮ ನಿರ್ಧಾರವನ್ನು ನೀವು ಬಹಳ ಆಲೋಚಿಸಿ ತೆಗೆದುಕೊಳ್ಳಿ. ಪ್ರೇಮಿಗಳಿಗೆ ರೊಮ್ಯಾಂಟಿಕ್ ಆಗಿರಲಿದೆ. ಆರೋಗ್ಯ ಸಮಸ್ಯೆ ಇರುವವರು ನಿರ್ಲಕ್ಷ್ಯ ಮಾಡಬೇಡಿ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ದೂರಾಗಲಿದೆ. ವ್ಯಾಪಾರಿಗಳಿಗೆ ದೊಡ್ಡ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ.ಪ್ರೇಮಿಯಿಂದ ಮದುವೆ ಪ್ರಸ್ತಾಪ ಬರಬಹುದು. ಆರೋಗ್ಯ ಉತ್ತಮವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










