Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಜುಲೈ ಮಾಸದ ಮೊದಲ ದಿನ ನಿಮ್ಮ ರಾಶಿಫಲ ಹೇಗಿದೆ?
ಜುಲೈ ಮಾಸದ ಮೊದಲ ದಿನ ನಿಮ್ಮ ರಾಶಿಫಲ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ತಿಂಗಳ ಆರಂಭವೇ ನಿಮಗೆ ಧನಾತ್ಮಕವಾಗಿದೆ, ಹೊಸ ಆದಾಯದ ಮೂಲ ಸಿಗಲಿದೆ, ವ್ಯಾಪಾದಲ್ಲಿ ಲಾಭ ಸಿಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಇನ್ನು ಅವಾಹಿತರು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಶೀಘ್ರವೇ ನಿಮಗೆ ಜೋಡಿ ಸಿಗಲಿದೆ. ಆರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ನೀವು ನಿರೀಕ್ಷಿಸಿದ ಫಲ ಸಿಗಲು ನೀವು ಹೆಚ್ಚಿನ ಶ್ರಮ ಹಾಕಬೇಕು. ಬರಿ ಅದೃಷ್ಟ ನಂಬಿ ಕೂರಬೇಡಿ. ವ್ಯಾಪಾರಿಗಳು ಲಾಭವನ್ನು ಪಡೆಯಲು ಪ್ರಯತ್ನಿಸಬೇಕು.
ಕೆಲಸದ ಜಾಗದಲ್ಲಿ ಜಾಗ್ರತೆವಹಿಸಿ. ಕುಟುಂಬ ಜೀವನದಲ್ಲಿ ಸಾಮರಸ್ಯ ಕಾಪಾಡಲು ಪ್ರಯತ್ನಿಸಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ನಕಾರಾತ್ಮಕ ಆಲೋಚನೆಗಳಿಂದ ದೂರವಿರಬೇಕು.
ಮಿಥುನ ರಾಶಿ
ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವಾಗ ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ನೀವು ಕಷ್ಟವನ್ನು ಅನುಭವಿಸುವಿರಿ. ವೃತ್ತಿಗೆ ಸಂಬಂಧಿಸಿದ ಚಿಂತೆ ಕಾಡಬಹುದು, ಕೆಲಸ ಬದಲಾಯಿಲು ಯೋಚಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ಆತುರದಲ್ಲಿ ತೆಗೆದುಕೊಳ್ಳಬೇಡಿ. ನಿಮ್ಮ ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ಕರ್ಕ ರಾಶಿ
ಈ ದಿನ ಕುಟುಂಬ ಜೀವನದ ಕಡೆಗೆ ಗಮನಹರಿಸಿ, ಸಮಸ್ಯೆಯನ್ನು ಬುದ್ಧಿವಂತಿಕೆಯಿಂದ ವರ್ತಿಸಬೇಕು. ಕೆಲಸದಲ್ಲಿ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ. ವ್ಯಾಪಾರಿಗಳು ಯಾವುದೇ ಪ್ರಮುಖ ಬದಲಾವಣೆಗಳನ್ನು ಮಾಡುವುದನ್ನು ತಪ್ಪಿಸಬೇಕು. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳನ್ನೂ ನಿರ್ಲಕ್ಷಿಸಬೇಡಿ.
ಸಿಂಹ ರಾಶಿ
ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ನಿಮ್ಮ ನಿರ್ಧಾರವನ್ನು ಕಾರ್ಯಗತಗೊಳಿಸುವುದು ನಿಮಗೆ ತುಂಬಾ ಮಂಗಳಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ವ್ಯಾಪಾರಿಗಳು ಬಯಸಿದ ಲಾಭವನ್ನು ಪಡೆಯುತ್ತೀರಿ. ಈ ದಿನ ಕೆಲಸದ ಹೊರೆ ಕಡಿಮೆ ಇರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದಲ್ಲಿ ನೀವು ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡುತ್ತೀರಿ.
ಕನ್ಯಾ ರಾಶಿ
ಕೆಲವು ಪ್ರಮುಖ ಕೆಲಸಗಳಲ್ಲಿ ಅಡಚಣೆಯಿಂದ ನೀವು ಅಸಮಾಧಾನಗೊಳ್ಳಬಹುದು, ಆದರೆ ನೀವು ತಾಳ್ಮೆಯಿಂದಿರಬೇಕು. ವ್ಯಾಪಾರಿಗಳ ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ, ಅಧಿಕ ಕೆಲಸ ಇರಲಿದೆ. ವೈವಾಹಿಕ ಜೀವನದಲ್ಲಿ ಪ್ರೀತಿ ಇರಲಿದೆ. ನಿಮ್ಮ ಸಂಬಂಧವು ಹೆಚ್ಚು ಪ್ರಬುದ್ಧವಾಗುವುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಹವಾಮಾನದ ಬದಲಾವಣೆ ಆರೋಗ್ಯದ ಮೇಲೆ ಪರಿಣಾಮ ಬೀರುವುದು.
ತುಲಾ ರಾಶಿ
ನೀವು ಮೋಜಿನ ಮನಸ್ಥಿತಿಯಲ್ಲಿರುತ್ತೀರಿ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ವ್ಯಾಪಾರಿಗಳು ಇತರರ ಸಲಹೆಯ ಮೇರೆಗೆ ಹೂಡಿಕೆ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ, ಇಲ್ಲದಿದ್ದರೆ ನೀವು ಲಾಭದ ಬದಲು ನಷ್ಟವನ್ನು ಅನುಭವಿಸಬಹುದು. ನೀವು ಇತ್ತೀಚೆಗೆ ಬೇರೆ ಕಡೆ ಕೆಲಸಕ್ಕೆ ಪ್ರಯತ್ನ ಮಾಡಿದ್ದರೆ ಈ ದಿನ ನಿಮಗೆ ಖುಷಿ ನೀಡುವ ಸುದ್ದಿ ಸಿಗಲಿದೆ. ವೈಯಕ್ತಿಕ ವಿಷಯಗಳಲ್ಲಿ ಹೊರಗಿನವರು ಹೆಚ್ಚು ಹಸ್ತಕ್ಷೇಪ ಮಾಡಲು ಬಿಡಬೇಡಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯವು ಸಮಸ್ಯೆಗಳನ್ನು ಹೆಚ್ಚಿಸಬಹುದು.
ವೃಶ್ಚಿಕ ರಾಶಿ
ವಿದ್ಯಾರ್ಥಿಗಳು ತಮ್ಮ ಅಧ್ಯಯನಕ್ಕೆ ಸಂಬಂಧಿಸಿದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಅಂತಹ ಪರಿಸ್ಥಿತಿಯಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ವ್ಯಾಪಾರಿಗಳು ಪಾಲುದಾರರೊಂದಿಗೆ ಉತ್ತಮ ಸಮನ್ವಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ಕೆಲಸದಲ್ಲಿ ಈ ದಿನ ಉತ್ತಮವಾಗಿದೆ. ಆರೋಗ್ಯ ಸಂಬಂಧಿತ ಸಮಸ್ಯೆಯಿಂದ ನೀವು ಪರಿಹಾರವನ್ನು ಪಡೆಯುತ್ತೀರಿ.
ಧನು ರಾಶಿ
ನೀವು ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗಬಹುದು. ನೀವು ನಂಬಿದ ವ್ಯಕ್ತಿಯಿಂದಲೇ ದ್ರೋಹಕ್ಕೆ ಬಲಿಯಾಗಬಹುದು. ನಿಮ್ಮ ಹಣಕಾಸಿನ ಪರಿಸ್ಥಿತಿಯಲ್ಲಿ ಹಠಾತ್ ಕ್ಷೀಣತೆಯಿಂದಾಗಿ ನಿಮ್ಮ ಆತಂಕವು ಹೆಚ್ಚಾಗಬಹುದು. ವ್ಯಾಪಾರಿಗಳು ಆರ್ಥಿಕ ನಷ್ಟವನ್ನು ಸಹ ಅನುಭವಿಸಬಹುದು. ನೀವು ಕುಟುಂಬದ ಸದಸ್ಯರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಆದರೆ ನೀವು ಕೋಪದಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯ ಸಮಸ್ಯೆಗಳಿರಬಹುದು.
ಮಕರ ರಾಶಿ
ಈ ದಿನದ ಪ್ರಯಾಣ ನಿಮ್ಮ ಆಯಾಸವನ್ನು ಹೆಚ್ಚಿಸಬಹುದು. ನಿಮ್ಮ ಆರೋಗ್ಯದೊಂದಿಗೆ ಆಟವಾಡದಿದ್ದರೆ ಉತ್ತಮ. ನಿಮ್ಮ ಹಣಕಾಸಿನ ಸಮಸ್ಯೆಗಳು ಗಾಢವಾಗುತ್ತವೆ.
ಕಛೇರಿಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯ ಉತ್ತಮವಾಗಿರುತ್ತದೆ.
ಕುಂಭ ರಾಶಿ
ಕೆಲಸಕ್ಕೆ ಸಂಬಂಧಿಸಿದ ಯಾವುದೇ ಅಡೆತಡೆಗಳು ನಿವಾರಣೆಯಾಗುತ್ತವೆ, ನಿಮ್ಮ ಕೆಲಸದ ಮೇಲೆ ನೀವು ಸರಿಯಾಗಿ ಗಮನಹರಿಸಬಹುದು. ವ್ಯಾಪಾರಿಗಳ ಬಾಕಿ ಉಳಿದಿರುವ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುತ್ತವೆ. ಮನೆಯ ಹಿರಿಯರು ನಿಮಗೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡರೆ, ನೀವು ಅದನ್ನು ಗೌರವಿಸಬೇಕು.
ಹೃದ್ರೋಗ ಸಮಸ್ಯೆ ಇದ್ದರೆ ನೀವು ಹೆಚ್ಚು ಜಾಗರೂಕರಾಗಿರಬೇಕು
ಮೀನ ರಾಶಿ
ಹಿತೈಷಿಗಳ ಸಲಹೆ ಮತ್ತು ಮಾರ್ಗದರ್ಶನವು ನಿಮಗೆ ತುಂಬಾ ಪ್ರಯೋಜನಕಾರಿಯಾಗುವುದು. ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ವ್ಯಾಪಾರಿಗಳು ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ನಿಮ್ಮ ನಡುವಿನ ಸಮನ್ವಯವು ಇನ್ನೂ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ಪ್ರೀತಿ ಗಾಢವಾಗುತ್ತದೆ. ತಲೆನೋವಿನ ಸಮಸ್ಯೆವಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications