Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ದಿನ ಭವಿಷ್ಯ: ಶುಕ್ರವಾರ ದ್ವಾದಶ ರಾಶಿಗಳಲ್ಲಿ ಯಾವ ರಾಶಿಗೆ ಹೇಗಿರಲಿದೆ?
ಶುಭ ದಿನ, ವೈದಿಕ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ರಾಶಿಫಲ.....
ಮೇಷ ರಾಶಿ
ಮೇಷ ರಾಶಿಯ ವ್ಯಾಪಾರಿಗಳು ಯಾವುದೇ ದೊಡ್ಡ ವ್ಯವಹಾರ ಮಾಡದಂತೆ ಸಲಹೆ ನೀಡಲಾಗುವುದು. ಉದ್ಯೋಗಿಗಳು ಈ ದಿನ ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರಲಿದೆ. ಹೆಚ್ಚು ಖರ್ಚು ಮಾಡಲು ಹೋಗಬೇಡಿ. ಆರೋಗ್ಯದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಈ ದಿನ ವಾಹನ ಚಲಾಯಿಸುವಾಗ ಜಾಗ್ರತೆವಹಿಸಿ. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿಯು ಆಹ್ಲಾದಕರವಾಗಿರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನೀವು ಕಚೇರಿಯಲ್ಲಿ ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗಬಹುದು, ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ. ಈ ದಿನ ನೀವು ಹಣದ ವಿಷಯದಲ್ಲಿ ನೀವು ಹೆಚ್ಚು ಜಾಗರೂಕರಾಗಿರಬೇಕು.
ಮಿಥುನ ರಾಶಿ
ಪ್ರೇಮಿಗಳಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ಬಯಸಿದ ಕೆಲ ವಸ್ತುಗಳನ್ನು ಖರೀದಿ ಮಾಡುತ್ತೀರಿ. ಕೆಲಸದ ದೃಷ್ಟಿಯಿಂದ ಈ ದಿನ ಮಿಶ್ರಫಲ. ಆರೋಗ್ಯ ಚೆನ್ನಾಗಿರಲಿದೆ.
ಕರ್ಕ ರಾಶಿ
ನೀವು ಕೆಲಸವನ್ನು ನೀವು ಶ್ರದ್ಧೆಯಿಂದ ಮಾಡುತ್ತೀರಿ. ನಿಮ್ಮ ಕಾರ್ಯಕ್ಷಮತೆಯಲ್ಲಿ ನೀವು ದೊಡ್ಡ ಸುಧಾರಣೆ ಕಂಡು ಬರಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಈ ದಿನ ಉತ್ತಮ ಲಾಭ ಗಳಿಸುತ್ತೀರಿ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯವಿರಬಹುದು. ವೈವಾಹಿಕ ಜೀವನದ ಕಡೆಗೆ ಗಮನಹರಿಸುವುದು ಒಳ್ಳೆಯದು. ಆರ್ಥಿಕವಾಗಿ ನೋಡುವುದಾದರೆ ಖರ್ಚು ಅದಿಕವಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ನೀವು ಉದ್ಯಮಿಯಾಗಿದ್ದರೆ ನಿಮ್ಮ ವ್ಯವಹಾರದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ವ್ಯಾಪಾರಿಗಳು ಗಡಿಬಿಡಿಯಲ್ಲಿ ಯಾವುದೇ ನಿರ್ಧಾರಕ್ಕೆ ಬರಬೇಡಿ. ಉದ್ಯೋಗಿಗಳಿಗೆ ಈ ದಿನ ಶುಭವಾಗಿದೆ. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಆರ್ಥಿಕ ಸ್ಥಿತಿ ಶೀಘ್ರದಲ್ಲಿಯೇ ಸುಧಾರಣೆ ಕಂಡು ಬರುವುದು. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಶುಭವಾಗಿದೆ.
ಕನ್ಯಾ ರಾಶಿ
ಸಂಗಾತಿಯ ಜೊತೆಗೆ ಭಿನ್ನಾಭಿಪ್ರಾಯವಿರಬಹುದು. ಹಣದ ವಿಷಯದಲ್ಲಿ ಈ ದಿನ ಉತ್ತಮವಲ್ಲ, ಗಮನಹರಿಸದಿದ್ದರೆ ಆರ್ಥಿಕ ನಷ್ಟ ಉಂಟಾಗಬಹುದು. ಇಂದು ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸ ಮಾಡಬೇಡಿ. ಕೆಲಸದಲ್ಲಿ ಈ ದಿನ ಯಾವುದೇ ಪ್ರಮುಖ ಸಮಸ್ಯೆ ಇರಲ್ಲ, ಆರೋಗ್ಯದ ಬಗ್ಗೆ ಚಿಂತೆ ಬಿಡಿ. ಅತಿ ಹೆಚ್ಚಿನ ಮಾನಸಿಕ ಒತ್ತಡ ತೆಗೆದುಕೊಳ್ಳಬೇಡಿ.
ತುಲಾ ರಾಶಿ
ಈ ದಿನ ಲಾಭದಾಯಕವಾಗಿದೆ. ಆ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ. ಈ ದಿನ ನೀವು ಸಾಮಾಜಿಕ ಕಾರ್ಯದ ಕಡೆಗೆ ಹೆಚ್ಚಿನ ಗಮನಹರಿಸುತ್ತೀರಿ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ವೃಶ್ಚಿಕ ರಾಶಿ
ಈ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ, ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಈ ದಿನ ನೀವು ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ನೀವು ಯಶಸ್ವಿಯಾಗಬಹುದು. ವ್ಯಾಪಾರಿಗಳಿಗೆ ಈ ದಿನ ಬಯಸಿದ ಲಾಭ ಸಿಗಲಿದೆ ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸರಾಸರಿ ದಿನವಾಗಿರಲಿದೆ.
ಧನು ರಾಶಿ
ಆರೋಗ್ಯ ಸಮಸ್ಯೆವಿರಬಹುದು, ನೀವು ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ನೀವು ಪ್ರಯತ್ನಿಸಬೇಕು. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿದೆ. ಆದರೆ ವ್ಯಾಪಾರಕ್ಕೆ ಸಂಬಂಧಿಸಿದ ನಿರ್ಧಾರ ಅನುಭವಿ ವ್ಯಕ್ತಿಗಳ ಸಲಹೆ ಪಡೆದ ಬಳಿಕವಷ್ಟೇ ನಿರ್ಧಾರ ತೆಗೆದುಕೊಳ್ಳಿ. ಕುಟುಂಬ ಜೀವನ ಚೆನ್ನಾಗಿರಲಿದೆ.
ಮಕರ ರಾಶಿ
ಉದ್ಯೋಗಿಗಳಿಗೆ ಅತಿಯಾದ ಕೆಲಸದ ಒತ್ತಡ ಇರಲಿದೆ. ವ್ಯಾಪಾರಿಗಳಿಗೆ ಈ ದಿನ ಧನಾತ್ಮಕವಾಗಿರಲಿದೆ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ, ನಿಮ್ಮ ಪಾಲುದಾರರೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ. ಹಣದ ವಿಷಯದಲ್ಲಿ, ದಿನವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆದರೆ ಆದಾಯಕ್ಕಿಂತ ಹೆಚ್ಚು ಖರ್ಚು ಮಾಡಲು ಹೋಗಬೇಡಿ.
ಕುಂಭ ರಾಶಿ
ದಾಂಪತ್ಯ ಜೀವನ ಚೆನ್ನಾಗಿರಲಿದೆ. ನಿಮ್ಮ ನಡುವೆ ಪ್ರೀತಿ ಮತ್ತು ವಾತ್ಸಲ್ಯ ಹೆಚ್ಚಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಉದ್ಯೋಗಿಗಳು ಕೆಲಸದಲ್ಲಿ ಫಲಿತಾಂಶಕ್ಕೆ ಸ್ವಲ್ಪ ಕಾಯುವುದು ಒಳ್ಳೆಯದು. ಶೀಘ್ರದಲ್ಲೇ ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುತ್ತೀರಿ. ವ್ಯಾಪಾರಸ್ಥರಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ. ಆರೋಗ್ಯ ಸಮಸ್ಯೆ ಇದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.
ಮೀನ ರಾಶಿ
ನೀವು ದೊಡ್ಡ ಉದ್ಯಮಿಗಳಾಗಿದ್ದರೆ ಇಂದು ನೀವು ತುಂಬಾ ಜಾಗರೂಕರಾಗಿರಬೇಕು. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಆರೋಗ್ಯ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











