Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ದಿನ ಭವಿಷ್ಯ: ಸೆಪ್ಟೆಂಬರ್ 13, ನಿಮ್ಮ ರಾಶಿಗೆ ಈ ದಿನ ಹೇಗಿರಲಿದೆ?
ಶುಭ ಶುಕ್ರವಾರ, ಈ ದಿನ ನಿಮ್ಮ ರಾಶಿಫಲ ಹೇಗಿರಲಿದೆ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವಿದೇಶದಲ್ಲಿ ಕೆಲಸ ಮಾಡುವವರಿಗೆ ಇಂದು ಅತ್ಯಂತ ಶುಭ ದಿನವಾಗಲಿದೆ. ಈ ದಿನ ನಿಮ್ಮ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೊಗ್ಯದ ಬಗ್ಗೆ ಹೇಳುವುದಾದರೆ ಬೆನ್ನು, ಭುಜ ನೋವಿನ ಸಮಸ್ಯೆವಿರಬಹುದು.

ವೃಷಭ ರಾಶಿ
ಕೆಲಸದ ಸ್ಥಳದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಕುಟುಂಬದ ಹಿರಿಯರಿಗೆ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಹೊಸ ಕೆಲಸವನ್ನು ಪ್ರಾರಂಭಿಸುವ ಆಲೋಚನೆಯಲ್ಲಿದ್ದರೆ ಅದರಂತೆ ಮುಮದುವರೆಯಬಹುದು. ಕೌಟುಂಬಿಕ ಜೀವನದಲ್ಲಿ ಕೆಲವು ಪ್ರಕ್ಷುಬ್ಧತೆ ಇರುತ್ತದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಹೊಟ್ಟೆಗೆ ಸಂಬಂಧಿಸಿದ ಸೋಂಕು ಉಂಟಾಗಬಹುದು.
ಮಿಥುನ ರಾಶಿ
ಹಣಕಾಸಿನ ವಿಷಯಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ವೃತ್ತಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಯು ಪರಿಹರಿಸಲ್ಪಡುತ್ತದೆ. ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರು ಬಯಸಿದ ಫಲಿತಾಂಶಗಳನ್ನು ಪಡೆಯುತ್ತಾರೆ. ನೀವು ಇತ್ತೀಚೆಗೆ ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ ನೀವು ಹೆಚ್ಚಿನ ಗಮನಹರಿಸಬೇಕು. ನಿಮ್ಮ ಸಂಗಾತಿಯೊಂದಿಗೆ ನೀವು ಬಿರುಕು ಹೊಂದಿದ್ದರೆ ಅದು ಬಗೆಹರಿಯಲಿದೆ.
ನಿಮ್ಮ ಆಹಾರದ ಬಗ್ಗೆ ಕಾಳಜಿ ವಹಿಸಿ ಇಲ್ಲದಿದ್ದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಬರಬಹುದು.
ಕರ್ಕ ರಾಶಿ
ನೀವು ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದಕ್ಕೆ ಪರಿಹಾರ ಸಿಗಲಿದೆ. ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ವ್ಯಾಪಾರಿಗಳಿಗೆ ಆರ್ಥಿಕ ಚಿಂತೆ ಕಾಡಬಹುದು. ಈ ದಿನ ಖರ್ಚು ಹೆಚ್ಚಿರಲಿದೆ. ವೈವಾಹಿಕ ಬದುಕಿನಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ಅದು ಬಗೆಹರಿಸಿ.
ಸಿಂಹ ರಾಶಿ
ಕೆಲಸದ ಸ್ಥಳದಲ್ಲಿ ನೀವು ಬಹಳ ಜಾಗರೂಕರಾಗಿರಬೇಕು. ಬಾಕಿ ಇರುವ ಕೆಲಸ ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಪ್ರೀತಿಪಾತ್ರರಿಂದ ನೀವು ಒಳ್ಳೆಯ ಸುದ್ದಿಯನ್ನು ಸಹ ಪಡೆಯಬಹುದು. ಯಾವುದೇ ಹೂಡಿಕೆ ಮಾಡಲು ಈ ಅವಧಿ ಅನುಕೂಲಕರವಾಗಿದೆ, ಹಣದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವಿನ ಸಮಸ್ಯೆ ಕಾಡಬಹುದು.
ಕನ್ಯಾ ರಾಶಿ
ಅನಗತ್ಯ ಚರ್ಚೆಗಳಿಂದ ದೂರವಿರಿ , ಈ ದಿನ ನಿಮಗೆ ಉತ್ತಮವಾಗಿರಲಿ, ಆರೋಗ್ಯ ಚೆನ್ನಾಗಿರಲಿದೆ. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯಬಹುದು. ನಿಮಗೆ ಸಂಧಿವಾತ ಸಮಸ್ಯೆ ಇದ್ದರೆ ಆರೋಗ್ಯದ ಕಡೆಗೆ ಗಮನಹರಿಸಿ.
ತುಲಾ ರಾಶಿ
ಈ ದಿನ ಕೆಲ ಸವಾಲುಗಳು ಇರಬಹುದು. ನೀವು ಅಪಾಯಕಾರಿ ವ್ಯಾಪಾರ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು.ಪ್ರಗತಿಯಲ್ಲಿ ಅಡೆತಡೆಗಳು ಇರಬಹುದು. ನಿಮ್ಮ ಕಠಿಣ ಪರಿಶ್ರಮದ ಅಪೇಕ್ಷಿತ ಫಲಿತಾಂಶಗಳನ್ನು ನೀವು ಶೀಘ್ರದಲ್ಲೇ ಪಡೆಯುತ್ತೀರಿ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ, ಅದರೆ ಮಾನಸಿಕ ಆರೋಗ್ಯದ ಕಡೆಗೆ ಗಮನಹರಿಸಬೇಕು, ಅನಗ್ಯತ ಚಿಂತೆ ಬಿಡಿ. ಆರೋಗ್ಯ ದಿಢೀರ್ ಹದಗೆಡುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ
ಕೆಲಸದ ಸ್ಥಳದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಸರಿಯಾದ ಫಲಿತಾಂಶವನ್ನು ಪಡೆಯಬಹುದು. ನಿಮ್ಮ ಸಂಗಾತಿಯೊಂದಿಗೆ ದಿನವು ತುಂಬಾ ವಿಶೇಷವಾಗಿರುತ್ತದೆ. ನಿಮ್ಮ ಕೆಲಸವನ್ನು ನೀವು ಬಹಳ ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ. ಉದ್ಯೋಗಕ್ಕೆ ಪ್ರಯತ್ನ ಮಾಡುತ್ತಿದ್ದರೆ ನೀವು ಸಕಾರಾತ್ಮಕ ಉತ್ತರವನ್ನು ಪಡೆಯಬಹುದು. ವೈವಾಹಿಕ ಬದುಕು ಚೆನ್ನಾಗಿರಲಿದೆ.
ಧನು ರಾಶಿ
ವೃತ್ತಿ ಬದುಕು ಚೆನ್ನಾಗಿರಲಿದೆ, ಹಣದ ವಿಷಯದಲ್ಲಿ ಆತುರಪಡಬೇಡಿ, ಇಲ್ಲದಿದ್ದರೆ ನೀವು ನಷ್ಟವನ್ನು ಅನುಭವಿಸಬಹುದು. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿದೆ. ಮನೆಯ ವಾತಾವರಣದಲ್ಲಿ ದೊಡ್ಡ ಸುಧಾರಣೆ ಕಂಡುಬರುತ್ತದೆ. ನಿಮ್ಮ ಸಂಗಾತಿಯ ನಡವಳಿಕೆಯಲ್ಲಿನ ಕೆಲವು ಬದಲಾವಣೆಗಳಿಂದಾಗಿ ನೀವು ತುಂಬಾ ಚಿಂತಿತರಾಗುತ್ತೀರಿ. ಏನೇ ಇದ್ದರು ನೀವಿಬ್ಬರು ಮಾತನಾಡಿ ಬಗೆಹರಿಸಲು ಪ್ರಯತ್ನಿಸಿ.
ಮಕರ ರಾಶಿ
ನೀವು ದೀರ್ಘಕಾಲದವರೆಗೆ ಕೆಲಸವನ್ನು ಪೂರ್ಣಗೊಳಿಸಲು ಶ್ರಮಿಸುತ್ತಿದ್ದರೆ ಈ ದಿನ ಉತ್ತಮವಾಗಿದೆ. ಹೊಸ ಆಸ್ತಿ ಇತ್ಯಾದಿಗಳನ್ನು ಖರೀದಿಸುವ ಯೋಜನೆ ಇರಬಹುದು. ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು, ನೀವು ನಿಮ್ಮ ಹಿರಿಯರ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕು. ನಿಮ್ಮ ಜೀವನದಲ್ಲಿ ಯಾವುದೇ ಸಮಸ್ಯೆ ಇದ್ದರೆ ಅದು ಬಗೆಹರಿಸಲು ಪ್ರಯತ್ನಿಸಬೇಕು. ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ವಿದೇಶಕ್ಕೆ ಹೋಗಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವವರಿಗೆ ಒಳ್ಳೆಯ ಸುದ್ದಿ ಸಿಗಬಹುದು.ಸಂಗಾತಿಯೊಂದಿಗೆ ಬಿರುಕು ಹೊಂದಿದ್ದರೆ, ಎಲ್ಲಾ ಅಸಮಾಧಾನಗಳನ್ನು ಮರೆತು ಸಂಬಂಧ ಸರಿಪಡಿಸಲು ಪ್ರಯತ್ನಿಸಿ.
ಕುಂಭ ರಾಶಿ
ಉದ್ಯಮಿಗಳು ಹೊಸ ವ್ಯವಹಾರದಲ್ಲಿ ತಮ್ಮ ಅದೃಷ್ಟವನ್ನು ಪ್ರಯತ್ನಿಸಲು ಯೋಜಿಸುತ್ತಿದ್ದರೆ, ನೀವು ಯಶಸ್ಸನ್ನು ಪಡೆಯಬಹುದು. ಅಜಾಗರೂಕತೆಯು ನಿಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ವ್ಯಾಪಾರಿಗಳಿಗೆ ಲಾಭ ಗಳಿಸಲು ಸಾಧ್ಯವಾಗುವುದು. ಸಂಗಾತಿ ಜೊತೆಗೆ ಚಿಕ್ಕ ವಿಷಯಕ್ಕೆ ಕೋಪಗೊಳ್ಳಬೇಡಿ. ಆರೋಗ್ಯದ ಕಡೆಯೂ ಗಮನಹರಿಸಬೇಕು.
ಮೀನ ರಾಶಿ
ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ ಮತ್ತು ಹಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ. ವ್ಯಾಪಾರಸ್ಥರು ಬಯಸಿದ ಲಾಭವನ್ನು ಪಡೆಯಬಹುದು. ನಿಮ್ಮ ವ್ಯಾಪಾರವನ್ನು ವಿಸ್ತರಿಸಲು ನೀವು ಯೋಜಿಸುತ್ತಿದ್ದರೆ, ನಿಮ್ಮ ಯೋಜನೆಯಂತೆ ಮುಂದುವರೆಯಲು ಈ ಸಮಯ ಅನುಕೂಲಕರವಾಗಿದೆ. ಕೆಲಸದಲ್ಲಿ ಒತ್ತಡವಿರಲಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಅತಿಯಾದ ಓಡಾಟದಿಂದ ಆಯಾಸವಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











