Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಸೆಪ್ಟೆಂಬರ್ 15, ನಿಮ್ಮ ರಾಶಿಗೆ ಈ ದಿನ ಹೇಗಿರಲಿದೆ?
ಶುಭ ದಿನ, ಜ್ಯೋತಿಷ್ಯ ಪ್ರಕಾರ ಈ ದಿನದ ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಈ ದಿನ ಕೆಲಸದ ಒತ್ತಡ ಹೆಚ್ಚಿರಲಿದೆ. ಈ ದಿನ ನಿಮ್ಮ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಿ. ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ವೃತ್ತಿಪರ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ವೈವಾಹಿಕ ಜೀವನದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿವೆ. ಹಣದ ಕೊರತೆಯಿಂದ ಸ್ಥಗಿತಗೊಂಡಿದ್ದ ಕೆಲಸಗಳನ್ನು ಇಂದು ಪೂರ್ಣಗೊಳಿಸಬಹುದು. ಕೆಲಸಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರವು ನಿಮಗೆ ಉತ್ತಮ ಫಲಿತಾಂಶ ದೊರೆಯಲಿದೆ. ಬಾಕಿ ಉಳಿದಿರುವ ಕೆಲಸಗಳನ್ನು ಪೂರ್ಣಗೊಳಿಸುವುದರಿಂದ ಸಮಾಧಾನವಿರುತ್ತದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯೂ ಉತ್ತಮವಾಗಿರುತ್ತದೆ.
ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ.
ಮಿಥುನ ರಾಶಿ
ಅಪರಿಚಿತರನ್ನು ಹೆಚ್ಚು ನಂಬಬೇಡಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಫಲ ಸಿಗಲಿದೆ. ಯಾವುದೇ ಪ್ರಮುಖ ವೈಯಕ್ತಿಕ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು, ನಿಮ್ಮ ಹಿರಿಯರಿಂದ ಸಲಹೆ ಪಡೆಯಿರಿ. ಪ್ರೀತಿಯಲ್ಲಿ ಭಿನ್ನಾಭಿಪ್ರಾಯವಿದ್ದರೆ ಜಾಣ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ.
ಕರ್ಕ ರಾಶಿ
ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ವಿರೋಧಿಗಳು ಕಾರ್ಯಸ್ಥಳದಲ್ಲಿ ಸಕ್ರಿಯರಾಗಿರುತ್ತಾರೆ. ನೀವು ಬಹಳ ಎಚ್ಚರಿಕೆಯಿಂದ ಇರಬೇಕು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರ ರಹಸ್ಯವನ್ನು ನಿಯಂತ್ರಣದಲ್ಲಿಡಿ. ಇನ್ನು ಈ ದಿನ ಕೋಪವನ್ನುನಿಯಂತ್ರಣದಲ್ಲಿಡಿ. ಸಂಬಂಧದಲ್ಲಿ ಭಿನ್ನಾಭಿಪ್ರಾಯಗಳಿರಬಹುದು,
ಆರೋಗ್ಯ ಉತ್ತಮವಾಗಿರುತ್ತದೆ.
ಸಿಂಹ ರಾಶಿ
ನಕಾರಾತ್ಮಕತೆಯು ನಿಮ್ಮನ್ನು ಮೀರಿಸಲು ಬಿಡಬೇಡಿ, ಧನಾತ್ಮಕವಾಗಿರಿ. ಶಿಕ್ಷಣಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ವ್ಯಾಪಾರಿಗಳು ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಆರ್ಥಿಕವಾಗಿ ಜಾಗ್ರತೆವಹಿಸಬೇಕು. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಗಾಢವಾಗಬಹುದು. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಕನ್ಯಾ ರಾಶಿ
ಕೆಲವು ಹೊಸ ಕೆಲಸಗಳನ್ನು ಯೋಜಿಸಬಹುದು. ನಿಮ್ಮ ಆಪ್ತರಿಂದ ಸಂಪೂರ್ಣ ಬೆಂಬಲವೂ ಸಿಗುತ್ತದೆ. ಹಣಕ್ಕೆ ಸಂಬಂಧಿಸಿದ ಚಿಂತೆಗಳು ದೂರವಾಗುತ್ತವೆ. ಕುಟುಂಬ ಜೀವನ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ನಿಮ್ಮ ಸಂಬಂಧಗಳು ಇನ್ನಷ್ಟು ಬಲಗೊಳ್ಳುತ್ತವೆ. ಆರೋಗ್ಯ ಉತ್ತಮವಾಗಿರುತ್ತದೆ.
ತುಲಾ ರಾಶಿ
ಕೆಲಸದ ಸ್ಥಳದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಹಣದ ಬಗ್ಗೆ ಹೆಚ್ಚು ಚಿಂತೆ ಮಾಡಬೇಡಿ. ಸೂಕ್ತ ಸಮಯ ಬಂದಾಗ ನಿಮ್ಮ ಸಮಸ್ಯೆ ಖಂಡಿತಾ ಪರಿಹಾರವಾಗುತ್ತದೆ. ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆ ಇರಬಹುದು.
ವೃಶ್ಚಿಕ ರಾಶಿ
ಈ ದಿನ ಏರಳಿತಗಳಿರಬಹುದು, ಕೆಲ ಸವಾಲುಗಳು ಎದುರಾಗಬಹುದು. ಸಿಗಬೇಕಾಗಿದ್ದ ಹಣ ಸಿಗದೆ ಆರ್ಥಿಕ ತೊಂದರೆಗಳು ಎದುರಾಗುವುದು.ಕೆಲಸದ ಜಾಗದಲ್ಲಿ ಸಮತೋಲಿತ ರೀತಿಯಲ್ಲಿ ವರ್ತಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಿ.
ಧನು ರಾಶಿ
ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ಮತ್ತು ಅನ್ಯೋನ್ಯತೆ ಹೆಚ್ಚಾಗುತ್ತದೆ. ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇಂದು ಬಹಳ ಮುಖ್ಯವಾದ ದಿನವಾಗಿರುತ್ತದೆ. ಸ್ಥಗಿತಗೊಂಡ ವ್ಯಾಪಾರ ಯೋಜನೆಯಲ್ಲಿ ನೀವು ಮತ್ತೆ ಕೆಲಸವನ್ನು ಪ್ರಾರಂಭಿಸಬಹುದು. ನೀವು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗಿದೆ. ಕೆಲಸ ಹುಡುಕುತ್ತಿದ್ದರೆ ಉದ್ಯೋಗ ಸಿಗುವ ಸಂಭವವಿದೆ. ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ.
ಮಕರ ರಾಶಿ
ಇಂದು ನಿಮಗೆ ಅತ್ಯಂತ ಮಂಗಳಕರ ದಿನವಾಗಲಿದೆ. ವೃತ್ತಿಪರ ಜೀವನದಲ್ಲಿ ನೀವು ಬಯಸಿದ ಫಲಿತಾಂಶಗಳನ್ನು ಪಡೆಯುತ್ತೀರಿ. ವೈಯಕ್ತಿಕ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರಲಿದೆ. ನೀವು ಹೊಸ ಆಸ್ತಿ, ಮನೆ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಈ ಅವಧಿಯಲಲ್ಲಿ ಸಾಧ್ಯವಾಗುವುದು. ವೈವಾಹಿಕ ಬದುಕು ಚೆನ್ನಾಗಿರಲಿದೆ.
ಕುಂಭ ರಾಶಿ
ಮಾತಿನಲ್ಲಿ ಕಠೋರತೆ ಇರುತ್ತದೆ ಮತ್ತು ಸಂಬಂಧಗಳಲ್ಲಿ ಕಹಿ ಹೆಚ್ಚಾಗಬಹುದು. ನೀವು ನಕಾರಾತ್ಮಕತೆಯನ್ನು ಅನುಭವಿಸುವಿರಿ , ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ, ಆದರೆ ನೀವು ಹೆಚ್ಚು ಚಿಂತೆ ಮಾಡಬೇಡಿ. ನಿಮ್ಮ ಪ್ರಮುಖ ಕಾರ್ಯಗಳನ್ನು ನೀವೇ ಪೂರ್ಣಗೊಳಿಸಲು ಪ್ರಯತ್ನಿಸಿ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಮೀನ ರಾಶಿ
ನೀವು ಮೋಜು ಮಾಡಲು ಅವಕಾಶವನ್ನು ಪಡೆಯುತ್ತೀರಿ. ಕೆಲವು ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗೆ ಪರಿಹಾರದ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗುತ್ತೀರಿ. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗೆ ಪರಿಹಾರದ ಸಾಧ್ಯತೆ ಇದೆ. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ. ವೈವಾಹಿಕ ಜೀವನದಲ್ಲಿನ ಸಮಸ್ಯೆ ದೂರಾಗಲಿದೆ. ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯಿಂದ ನೀವು ಪರಿಹಾರವನ್ನು ಪಡೆಯಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications