ದಿನ ಭವಿಷ್ಯ: ಸೆಪ್ಟೆಂಬರ್ 16, ನಿಮ್ಮ ರಾಶಿಗೆ ಈ ದಿನ ಹೇಗಿರಲಿದೆ?

ಶುಭ ದಿನ, ಈ ದಿನದ ರಾಶಿಫಲ ಪ್ರಕಾರ ನಿಮಗೆ ಹೇಗಿರಲಿದೆ?

ಮೇಷ ರಾಶಿ

ಈ ದಿನ ನಿಮಗೆ ಶುಭವಾಗಿದೆ, ಅರ್ಥಿಕವಾಗಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಧನಾತ್ಮಕ ಬದಲಾವಣೆ ಕಂಡು ಬರುವುದು. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರಲಿದೆ.

Dina Bhavishya

ವೃಷಭ ರಾಶಿ

ಈ ದಿನ ನಿಮಗೆ ಕೆಲಸದ ಒತ್ತಡ ಅಧಿಕವಿರಲಿದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿವೆ. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ. ಕೆಲಸದ ಬಗ್ಗೆ ಹೇಳುವುದಾದರೆ ಸಹೋದ್ಯೋಗಿಗಳ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ, ಕೌಟುಂಬಿಕ ಜೀವನದ ಕಡೆಗೆ ಹೆಚ್ಚು ಗಮನ ಕೊಡಿ. ಈ ದಿನ ನೀವು ಅವಸರದಿಂದ ಗಾಡಿ ಓಡಿಸುವುದು, ಅಥವಾ ಕೆಲಸ ಮಾಡುವುದು ಮಾಡಬೇಡಿ.

ಮಿಥುನ ರಾಶಿ

ದಿನದ ಆರಂಭವು ನಿಮಗೆ ತುಂಬಾ ನಿಧಾನವಾಗಿರುತ್ತದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಕೆಲಸದ ಹೊರೆ ಹೆಚ್ಚಿರಲಿದೆ. ಯೋಜನೆಯ ಪ್ರಕಾರ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.

ಕರ್ಕ ರಾಶಿ

ಹಣದ ವಿಚಾರದಲ್ಲಿ ಯಾವುದೇ ರೀತಿಯ ಅಜಾಗರೂಕತೆ ಬೇಡ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಈ ಸಮಯದಲ್ಲಿ ಯಾವುದೇ ಹೂಡಿಕೆ ಮಾಡಲು ಹೋಗಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ, ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
.

ಸಿಂಹ ರಾಶಿ

ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗುತ್ತದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಯಶಸ್ವಿಯಾಗುತ್ತದೆ. ಹಣದ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ಈ ಅವಧಿಯಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರ ನಿಮಗೆ ಅನುಕೂಲಕರವಾಗಿರುತ್ತದೆ. ಪ್ರೇಮಿಗಳು ಪರಸ್ಪರ ಹೊಂದಾಣಿಕೆಯ ಕಡೆಗೆ ಗಮನಹರಿಸಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ.


ಕನ್ಯಾ ರಾಶಿ

ಈ ದಿನ ನಿಮಗೆ ಶುಭವಾಗಿದೆ. ವ್ಯಾಪಾರಿಗಳು ತ್ವರಿತ ಲಾಭಕ್ಕೆ ಅಡ್ಡಮಾರ್ಗ ಹಿಡಿಯಬೇಡಿ. ಕಚೇರಿಯಲ್ಲಿ ಹೆಚ್ಚು ಮಾತನಾಡಬೇಡಿ . ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಹೊಟ್ಟೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ ಕರಿದ ಆಹಾರವನ್ನು ಸೇವಿಸಬೇಡಿ.


ತುಲಾ ರಾಶಿ

ಕೆಲಸದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗುವುದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಉತಮ ಲಾಭ ಗಳಿಸಹುದು. ವ್ಯಾಪಾರವನ್ನು ವಿಸ್ತರಿಸುವ ಯೋಜನೆಗಳು ಕಾರ್ಯರೂಪಕ್ಕೆ ಬರಬಹುದು. ನಿಮ್ಮ ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕು.
ಕುಟುಂಬ: ಕಷ್ಟಕರ ಸಂದರ್ಭಗಳಲ್ಲಿ ನಿಮ್ಮ ನೈತಿಕತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ. ಮದುಮೇಹಿಗಳು ಆಹಾರಕ್ರಮದ ಕಡೆಗೆ ಗಮನಹರಿಸಿ.

ವೃಶ್ಚಿಕ ರಾಶಿ

ಈ ದಿನ ಶುಭವಾಗಿದೆ, ಅದರೆ ಅನಗತ್ಯ ವೆಚ್ಚಗಳಿಂದಾಗಿ ನಿಮ್ಮ ಬಜೆಟ್ ಅಸಮತೋಲನವಾಗಬಹುದು. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ನಿಮ್ಮ ಸಂಪೂರ್ಣ ಗಮನವು ನಿಮ್ಮ ಕೆಲಸದ ಮೇಲೆ ಇರುತ್ತದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ.ಪ್ರೇಮ ವಿವಾಹಕ್ಕೆ ಇದ್ದ ವಿರೋಧ ದೂರಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ.

ಧನು ರಾಶಿ

ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅನುಭವಿ ಜನರ ಮಾರ್ಗದರ್ಶನ ಪಡೆಯಿರಿ. ವೈವಾಹಿಕ ಜೀವನದಲ್ಲಿ ಪ್ರೀತಿ, ನಂಬಿಕೆ, ಗೌರವ ಮುಖ್ಯ, ಕೋಪದಿಂದ ವರ್ತಿಸಿದರೆ ಸಂಬಂಧ ಮತ್ತಷ್ಟು ಹಾಳಾಗುವುದು, ಆರೋಗ್ಯದ ಕಡೆಗೆ ಗಮನಹರಿಸಿ.

ಮಕರ ರಾಶಿ

ಈ ದಿನ ನಿಮಗೆ ಉತ್ತಮವಾಗಿದೆ. ಹಣಕಾಸಿನ ವಿಷಯಗಳಲ್ಲಿ ಯಾವುದೇ ರೀತಿಯಲ್ಲಿ ಆತುರಪಡಬೇಡಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ವಿವಾಹಿತರು ಪರಸ್ಪರ ಹೆಚ್ಚು ಗಮನ ಹರಿಸಬೇಕು. ಆರೋಗ್ಯ ಚೆನ್ನಾಗಿರಲಿದೆ.

ಕುಂಭ ರಾಶಿ

ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ.ಹಣದ ವಿಷಯದಲ್ಲಿ ಯಾರನ್ನೂ ಹೆಚ್ಚು ನಂಬಬೇಡಿ, ಇಲ್ಲದಿದ್ದರೆ ನಷ್ಟ ಸಂಭವಿಸಬಹುದು. ಮನೆಯ ವಾತಾವರಣ ಚೆನ್ನಾಗಿರಲಿದೆ. ಆಹಾರಕ್ರಮದ ಕಡೆಗೆ ಗಮನಹರಿಸಿದರೆ ಆರೋಗ್ಯ ಉತ್ತಮವಾಗಿರಲಿದೆ.

ಮೀನ ರಾಶಿ
ಕೆಲಸಕ್ಕೆ ಸಂಬಂಧಿಸಿದ ಚಿಂತೆ ಹೆಚ್ಚಾಗಬಹುದು. ನಿಮ್ಮ ಆಪ್ತರ ಜೊತೆಯೇ ಮನಸ್ತಾಪ ಬರಬಹುದು, ಸಮಧಾನದಿಮದ ವರ್ತಿಸಿ. ಆರೋಗ್ಯದ ಕಡೆಗೆ ಗಮನಹರಿಸಿ.
ನಿಮ್ಮ ಕೆಲಸದ ಬಗ್ಗೆ ನೀವು ಹೆಚ್ಚು ಗಮನ ಹರಿಸಬೇಕಾಗುತ್ತದೆ. ಸ್ವಲ್ಪವೂ ನಿರ್ಲಕ್ಷ್ಯ ಮಾಡಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣಿನ ಆರೋಗ್ಯದ ಬಗ್ಗೆ ಗಮನಹರಿಸಿ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope Prediction for September 16: Dina Bhavishya for All Zodiac Signs

, daily horoscope, horoscope today, today horoscope, dina bhavishya kannada, rashi bhavishya in kannada, dina rashi bhavishya, today rashi bhavishya, dina bhavishya today, dwadasha rashi bhavishya,
Story first published: Sunday, September 15, 2024, 20:56 [IST]
X
Desktop Bottom Promotion