Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ದಿನ ಭವಿಷ್ಯ: ಸೆಪ್ಟೆಂಬರ್ 17, ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ಶುಭ ದಿನ, ಈ ದಿನದ ರಾಶಿಫಲ ಪ್ರಕಾರ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿರಲಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ನಿಮ್ಮ ಆದಾಯವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಖರ್ಚು ಮಾಡುವುದು ಉತ್ತಮ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ನಿಮ್ಮ ಸಂಗಾತಿಯ ಆಲೋಚನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ.
ಆರೋಗ್ಯದ ಬಗ್ಗೆ ಸ್ವಲ್ಪವೂ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ನಿಮ್ಮ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧದಲ್ಲಿ ಉತ್ತಮ ಸಮನ್ವಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ಆರೋಗ್ಯ ಉತ್ತಮವಾಗಿರಲಿದೆ.
ಮಿಥುನ ರಾಶಿ
ಕೆಲಸ ಕಾರ್ಯಗಳಲ್ಲಿ ಈ ದಿನ ಉತ್ತಮವಾಗಿದೆ. ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮವಾಗಿರುತ್ತದೆ. ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಈ ಅವಧಿ ಲಾಭದಾಯಕವಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೂಳೆಗಳು ಅಥವಾ ಸ್ನಾಯುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಕರ್ಕ ರಾಶಿ
ಆರೋಗ್ಯದ ಕಡೆಗೆ ಗಮನಹರಿಸಬೇಕು. ಅತಿಯಾದ ಕೆಲಸದ ಒತ್ತಡ ತೆಗೆದುಕೊಳ್ಳಬೇಡಿ. ಕೆಲಸದಲ್ಲಿನ ಅಡೆತಡೆಗೆ ತಲೆಕೆಡಿಸಿಕೊಳ್ಳಬೇಡಿ, ಅದು ತಾತ್ಕಾಲಿಕವಾಗಿರಲಿದೆ.
ಕೆಲಸದ ಜೊತೆಗೆ ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳಿ. ಧ್ಯಾನ ಮಾಡುವುದರಿಂದ ಈ ದಿನ ಉತ್ತಮವಾಗಿದೆ.
ಸಿಂಹ ರಾಶಿ
ಕೆಲಸದ ಜಾಗದಲ್ಲಿ ಒಳರಾಜಕೀಯದಿಂದ ದೂರವಿರಿ. ವ್ಯಾಪಾರಿಗಳು ದೊಡ್ಡ ಹೂಡಿಕೆ ಮಾಡುವುದನ್ನು ತಪ್ಪಿಸಬೇಕು. ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ವೈವಾಹಿಕ ಜೀವನದ ಕಡೆಗೆ ಗಮನಹರಿಸಿ. ನಿಮ್ಮ ಜೀವನದಲ್ಲಿ ಯಾವುದೇ ಸಮಸ್ಯೆ ಇದ್ದರೆ ನಿಮ್ಮ ಪ್ರೀತಿಪಾತ್ರರ ಜೊತೆ ಮುಕ್ತವಾಗಿ ಮಾತನಾಡಿ. ಬಹುಶಃ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಆಹಾರಕ್ರಮದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ವೈವಾಹಿಕ ಬದುಕಿನಲ್ಲಿನ ಸಮಸ್ಯೆಎ ಬಗೆಹರಿಯಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ಆದಾಗ್ಯೂ, ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡಲು ದಿನವು ಸೂಕ್ತವಲ್ಲ. ನಿಮಗೆ ವಹಿಸಿದ ಕೆಲಸವನ್ನು ಆತುರದಿಂದ ಮಾಡಬೇಡಿ, ತಪ್ಪಾಗಬಹುದು, ಇಂದು ನೀವು ಕೋಪ ನಿಯಂತ್ರಿಸಿದರೆ ಒಳ್ಳೆಯದು. ಈ ದಿನ ಆರೋಗ್ಯ ಉತ್ತಮವಾಗಿರಲಿದೆ.
ತುಲಾ ರಾಶಿ
ವೃತ್ತಿ ಸಂಬಂಧಿತ ನಿರ್ಧಾರವನ್ನು ಆತುರದಿಂದ ತೆಗೆದುಕೊಳ್ಳಬೇಡಿ.ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ, ನೀವು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸುವುದು ಒಳ್ಳೆಯದು.
ಮನೆಯ ವಾತಾವರಣವು ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಬದುಕಿನಲ್ಲಿ ಸಾಮರಸ್ಯ ಇರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಿ. ಹಣದ ಬಗ್ಗೆ ಹೆಚ್ಚು ಚಿಂತಿಸಬೇಡಿ. ವ್ಯಾಪಾರಿಗಳಿಗೆ ಈ ದಿನ ಕೆಲ ಅಡೆತಡೆಗಳನ್ನು ಎದುರಿಸಬೇಕಾಗಬಹುದು. ನಿಮ್ಮ ಸಂಬಂಧದ ಕಡೆಗೆ ಗಮನಹರಿಸಿ. ಆರೋಗ್ಯಕ್ಕೆ ಆದ್ಯತೆ ನೀಡಿ ಇಲ್ಲದಿದ್ದರೆ ನಿಮ್ಮ ಸಮಸ್ಯೆಗಳು ಹೆಚ್ಚಾಗಬಹುದು.
ಧನು ರಾಶಿ
ಕಳಪೆ ಆರೋಗ್ಯವು ನಿಮ್ಮ ಕೆಲಸದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆರ್ಥಿಕವಾಗಿ ಈ ದಿನ ಉತ್ತಮವಲ್ಲ, ಹಣದ ಸಮಸ್ಯೆ ಉಂಟಾಗಬಹುದು. ಮನೆ ರಿಪೇರಿ ಇತ್ಯಾದಿಗಳಿಗಾಗಿ ನೀವು ಬಹಳಷ್ಟು ಹಣವನ್ನು ಖರ್ಚು ಮಾಡಬಹುದು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು.
ಆರೋಗ್ಯದ ಬಗ್ಗೆ ಹೇಳುವುದಾದರೆ ಅಜೀರ್ಣ, ಅಸಿಡಿಟಿ ಮುಂತಾದ ಸಮಸ್ಯೆಗಳಿರಬಹುದು.
ಮಕರ ರಾಶಿ
ಉದ್ಯೋಗದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಮತ್ತಷ್ಟು ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ ಆತ್ಮವಿಶ್ವಾಸ ಚೆನ್ನಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಆರೋಗ್ಯಕರ ದಿನಚರಿಯತ್ತ ಗಮನಹರಿಸಿ.
ಕುಂಭ ರಾಶಿ
ದಿನವು ನಿಮಗೆ ತುಂಬಾ ಆಹ್ಲಾದಕರವಾಗಿರುತ್ತದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಸಂಬಂಧ ಬಲವಾಗಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ನಿಮ್ಮ ಪ್ರಣಯ ಜೀವನದಲ್ಲಿ ಯಾವುದೇ ಸಮಸ್ಯೆ ಇದ್ದರೆ ಅದು ಬಗೆಹರಿಯಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಮೀನ ರಾಶಿ
ಅತ್ಯಧಿಕ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಕೂಡ ಪ್ರಭಾವ ಬೀರಬಹುದು. ಕೆಲಸದ ಜಾಗದಲ್ಲಿ ನೀವು ಕೋಪ ನಿಯಂತ್ರಿಸಿ, ಮೇಲಾಧಿಕಾರಿಗಳ ಜೊತೆ ಅಭಿಪ್ರಾಯ ವ್ಯತ್ಯಾಸ ಬರಬಹುದು. ಪ್ರೇಮ ಜೀವನದಲ್ಲಿ ಪರಿಸ್ಥಿತಿಯು ಅನುಕೂಲಕರವಾಗಿರುತ್ತದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











