Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ, ಸೆಪ್ಟೆಂಬರ್ 18: ಚಂದ್ರಗ್ರಹಣದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಸೆಪ್ಟೆಂಬರ್ 18ಕ್ಕೆ ಚಂದಗ್ರಗ್ರಹಣ, ಈ ದಿನದಂದು ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಈ ದಿನ ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ. ವ್ಯಾಪಸಾರಿಗಳಿಗೂ ಈ ದಿನ ಧನಾತ್ಮಕವಾಗಿರಲಿದೆ. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ, ಸಂಬಂಧಗಳು ಸುಧಾರಿಸುತ್ತವೆ. ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ ಇರಲಿದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಆರ್ಥಿಕವಾಗಿ ಉತ್ತಮವಿದೆ. ಕೆಲಸದ ಸ್ಥಳದಲ್ಲಿ ಉತ್ತಮ ಅವಕಾಶಗಳನ್ನು ಪಡೆಯುತ್ತೀರಿ. ಈ ಅವಕಾಶಗಳನ್ನು ಬಳಸಿಕೊಳ್ಳಲು ನೀವು ನಿಮ್ಮ ಕೈಲಾದಷ್ಟು ಪ್ರಯತ್ನಿಸಬೇಕು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರುವುದು. ಆರೋಗ್ಯ ಉತ್ತಮವಾಗಿರಲಿದೆ.
ಮಿಥುನ ರಾಶಿ
ಯಾವುದೇ ಕೆಲಸವನ್ನು ಆತುರದಿಂದ ಮಾಡಲು ಹೋಗಬೇಡಿ. ನಿಮ್ಮ ಆರೋಗ್ಯದ ಬಗ್ಗೆ ನೀವು ಜಾಗರೂಕರಾಗಿರಬೇಕು. ಆರ್ಥಿಕವಶಾಗಿ ಈ ದಿನ ಪ್ರಯೋಜನಕಾರಿಯಲ್ಲ.
ಅಹಂ ಸಂಬಂಧದಲ್ಲಿ ಬಿರುಕು ಉಂಟು ಮಾಡುವುದು ಆದ್ದರಿಂದ ಜಾಗ್ರತೆವಹಿಸಿ, ನಿಮ್ಮ ಕುಟುಂಬದಲ್ಲಿ ಯಾವುದೇ ಮೂರನೇ ವ್ಯಕ್ತಿ ಹಸ್ತಕ್ಷೇಪ ಮಾಡಲು ಬಿಡಬೇಡಿ.
ಆಹಾರಕ್ರಮದ ಕಡೆಗೆ ಗಮನಹರಿಸಿ.
ಕರ್ಕ ರಾಶಿ
ಈ ದಿನ ಕೆಲಸದ ಒತ್ತಡ ಅಧಿಕವಿರಲಿದೆ. ವೈವಾಹಿಕ ಬದುಕು, ಕುಟುಂಬ ಜೀವನ ಚೆನ್ನಾಗಿರಲಿದೆ. ವ್ಯಾಪಾರದಲ್ಲಿ ಲಾಭ ಕಾಣುವಿರಿ.
ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಮಟಾಗದಂತೆ ನೋಡಿಕೊಳ್ಳಿ. ಆರೋಗ್ಯ ಸಂಬಂಧಿತ ಸಮಸ್ಯೆ ಇದ್ದರೆ ಮತ್ತಷ್ಟು ಜಾಗ್ರತೆವಹಿಸಿ.
ಸಿಂಹ ರಾಶಿ
ಸರ್ಕಾರಿ ವಲಯಕ್ಕೆ ಸಂಬಂಧಿಸಿದ ಯಾವುದೇ ಕೆಲಸಗಳು ಸ್ಥಗಿತಗೊಂಡರೆ ಅದು ಇಂದೇ ಪೂರ್ಣಗೊಳ್ಳುವ ಸಾಧ್ಯತೆಯದೆ. ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ಕೆಲಸದಲ್ಲಿದ್ದ ಸಮಸ್ಯೆ ಬಗೆಹರಿಯಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಗಮನಹರಿಸಿ.
ಕನ್ಯಾ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಹಣ ಗಳಿಸುವ ಸಾಧ್ಯತೆಗಳಿವೆ. ನಿಮ್ಮ ಆರೋಗ್ಯ ಸುಧಾರಿಸಬಹುದು. ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಅನಗ್ಯತ ಚಿಂತೆಯಿಂದ ದೂರವಿರಿ.
ತುಲಾ ರಾಶಿ
ಈ ದಿನ ನಿಮ್ಮ ಎಲ್ಲಾ ಕೆಲಸಗಳು ಇಂದು ಸುಗಮವಾಗಿ ಪೂರ್ಣಗೊಳ್ಳುತ್ತವೆ. ಯಾವುದೇ ಪ್ರಮುಖ ಹಣಕಾಸಿನ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ, ಕೆಲಸದ ಜಾಗದಲ್ಲಿ ನಿಮ್ಮ ವರ್ತನೆ ಕಡೆಗೆ ಗಮನಹರಿಸಿ, ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಕೆಮ್ಮು, ನೆಗಡಿ ಮತ್ತು ತಲೆನೋವು ಮುಂತಾದ ಸಮಸ್ಯೆಗಳಿರಬಹುದು.
ವೃಶ್ಚಿಕ ರಾಶಿ
ಆರ್ಥಿಕವಾಗಿ ಅನುಕೂಲಕರವಲ್ಲ, ಖರ್ಚು ಅಧಿಕವಿರಲಿದೆ. ಹಣದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಷಯವು ಬಗೆಹರಿಯಬಹುದು. ವು ಹೂಡಿಕೆ ಇತ್ಯಾದಿಗಳಿಗೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಬೇಕು. ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಗಮನಹರಿಸಿ.
ಧನು ರಾಶಿ
ಪ್ರಮುಖ ಕಾರ್ಯದಲ್ಲಿನ ಪ್ರಯತ್ನಗಳನ್ನು ನೀವು ವೇಗಗೊಳಿಸಬೇಕಾಗಿದೆ. ಶೀಘ್ರದಲ್ಲೇ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಮ್ಮ ವ್ಯಾಪಾರ ಯೋಜನೆಗಳಲ್ಲಿ ಬದಲಾವಣೆಗಳನ್ನು ಮಾಡಲು ಸಮಯವು ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆದರೆ ಕೆಲವು ವೈಯಕ್ತಿಕ ವಿಚಾರದಲ್ಲಿ ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು.
ಮಕರ ರಾಶಿ
ಹಣಕಾಸಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಕೆಲಸದಲ್ಲಿ ಯಾವುದೇ ಸಮಸ್ಯೆ ಇದ್ದರೆ, ನೀವು ಒತ್ತಡದಿಂದ ಮುಕ್ತರಾಗಿರಬೇಕು. ಚಿಕ್ಕ ಪುಟ್ಟ ಆರೋಗ್ಯ ಸಮಸ್ಯೆಯಾದರೂ ನಿರ್ಲಕ್ಷ್ಯ ಮಾಡಬೇಡಿ. ನಿಮಗೆ ಥೈರಾಯ್ಡ್ ಸಮಸ್ಯೆ ಇದ್ದರೆ, ನಿಯಮಿತವಾಗಿ ನಿಮ್ಮ ಔಷಧಿಗಳನ್ನು ತೆಗೆದುಕೊಳ್ಳುತ್ತಿರಿ.
ಕುಂಭ ರಾಶಿ
ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ನೀವು ಸಮತೋಲನವನ್ನು ಕಾಯ್ದುಕೊಳ್ಳಲು ಪ್ರಯತ್ನಿಸುವುದು ಒಳ್ಳೆಯದು. ನಿಮ್ಮ ಹತ್ತಿರವಿರುವ ಯಾರೊಂದಿಗಾದರೂ ಬಿರುಕು ಉಂಟಾದರೆ ನೀವು ಎಲ್ಲಾ ದ್ವೇಷಗಳನ್ನು ಮರೆತು ಹೊಸ ಆರಂಭವನ್ನು ಮಾಡಬೇಕು. ವ್ಯಾಪಾರಿಗಳು ದೊಡ್ಡ ಲಾಭದ ನಿರೀಕ್ಷೆಯಲ್ಲಿ ಚಿಕ್ಕ ವ್ಯವಹಾರದ ಕಡೆಗೆ ಗಮನಹರಿಸದೆ ಇರಬೇಡಿ. ನಿಮ್ಮ ವರ್ತನೆ ಕುಟುಂಬದವರನ್ನು ನೋಯಿಸದಂತೆ ಜಾಗ್ರತೆವಹಿಸಿ.
ಮೀನ ರಾಶಿ
ಕೆಲಸಕ್ಕೆ ಸಂಬಂಧಿಸಿದಂತೆ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಉದ್ಯೋಗ ಅಥವಾ ವ್ಯವಹಾರವಾಗಿರಲಿ ಪ್ರಗತಿ ಕಂಡು ಬರಲಿದೆ. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಆದಾಯ ಹೆಚ್ಚಾಗಬಹುದು. ಇತರರ ಸಲಹೆಯ ಮೇರೆಗೆ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯವು ಉತ್ತಮವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










