Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ, ಸೆಪ್ಟೆಂಬರ್ 19: ಶುಭ ಗುರುವಾರ, ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ಶುಭ ಗುರುವಾರ, ಈ ದಿನದಂದು ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಮೇಷ ರಾಶಿ
ಕೆಲಸದ ಸ್ಥಳದಲ್ಲಿ ಹೊಂದಾಣಿಕೆ ಇರಲಿದೆ. ಕಠಿಣ ಕೆಲಸವನ್ನು ಕೂಡ ಸುಲಭವಾಗಿ ಮಾಡಬಹುದು. ಹಣಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುವ ಸಾಧ್ಯತೆಯಿದೆ. ವ್ಯಾಪಾರಸ್ಥರಿಗೆ ಧನ ಲಾಭವಾಗಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಈ ದಿನ ಆರೋಗ್ಯ ಕೂಡ ಉತ್ತಮವಾಗಿರಲಿದೆ.

ವೃಷಭ ರಾಶಿ
ವ್ಯಾಪಾರ ವಿಷಯಗಳಲ್ಲಿ ಹೆಚ್ಚು ಆತುರಪಡಬೇಡಿ, ಇಲ್ಲದಿದ್ದರೆ ನಷ್ಟ ಸಂಭವಿಸಬಹುದು. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ. ಕೆಲಸದ ಜಾಗದಲ್ಲಿ ನಿಮ್ಮ ವರ್ತನೆಯ ಕಡೆಗೆ ಗಮನಹರಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು ತುಂಬಾನೇ ಮುಖ್ಯ.
ಮಿಥುನ ರಾಶಿ
ಆರೋಗ್ಯ ಸಂಬಂಧಿತ ಸಮಸ್ಯೆಗಳು ದೂರವಾಗುತ್ತವೆ. ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮ್ಮ ಕೈಲಾದಷ್ಟು ಪ್ರಯತ್ನಿಸುತ್ತೀರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಪ್ರಣಯ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ.
ಕರ್ಕ ರಾಶಿ
ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ನಗೊಳ್ಳಲಿದೆ. ಬೇಡದ ವಿಷಯಗಳಿಗೆ ಸಮಯ ವ್ಯರ್ಥ ಮಾಡಬೇಡಿ. ಈ ದಿನ ಖರ್ಚು ಅಧಿಕವಿರಲಿದೆ.
ಹಣದ ವಿಷಯದಲ್ಲಿ ದಿನವು ತುಂಬಾ ದುಬಾರಿಯಾಗಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಅತಿಯಾದ ಓಡಾಟದಿಂದ ಆಯಾಸ ಹೆಚ್ಚಾಗಿರಲಿದೆ.
ಸಿಂಹ ರಾಶಿ
ಯಾವುದೇ ಪ್ರಮುಖ ವೃತ್ತಿ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮಯ ಸರಿಯಲ್ಲ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಕೆಲಸದಲ್ಲಿ ಹೆಚ್ಚಿನ ಗಮನ ಕೊಡಿ ಇಲ್ಲದಿದ್ದರೆ ನಿಮ್ಮ ಕೆಲವು ಪ್ರಮುಖ ಕೆಲಸಗಳು ಇಂದು ಅಪೂರ್ಣವಾಗಿ ಇರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯಬೇಡ.
ಕನ್ಯಾ ರಾಶಿ
ಈ ದಿನ ಉತ್ತಮವಾಗಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳಲಿದೆ. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ. ಆರೋಗ್ಯವು ಉತ್ತಮವಾಗಿರುತ್ತದೆ ಆದರೆ ಕೆಲಸದ ವಿಷಯದಲ್ಲಿ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ.
ತುಲಾ ರಾಶಿ
ಕೆಲಸದ ಜಾಗದಲ್ಲಿ ಇಂದು ನೀವು ತುಂಬಾ ಸಮತೋಲಿತ ರೀತಿಯಲ್ಲಿ ವರ್ತಿಸಬೇಕು. ಹಣದ ಬಗ್ಗೆ ಹೆಚ್ಚು ಚಿಂತೆ ಮಾಡಬೇಡಿ. ನಿಮ್ಮ ಸಮಸ್ಯೆ ಶೀಘ್ರದಲ್ಲೇ ಪರಿಹಾರವಾಗಲಿದೆ. ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ಕೆಲಸದ ಬಗ್ಗೆ ನಿರ್ಲಕ್ಷ್ಯ ಬೇಡ. ನಿಮ್ಮ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ಆರೋಗ್ಯ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ನೀವು ಇತ್ತೀಚೆಗೆ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದ್ದರೆ ಕೆಲ ಅಡತಡೆ ಉಂಟಾಗಬಹುದು. ನಿಮ್ಮ ಸ್ವಂತ ನಿರ್ಧಾರಗಳಿಗೆ ಆದ್ಯತೆ ನೀಡಿ. ಇತರರನ್ನು ಅವಲಂಬಿಸಬೇಡಿ.
ನಿಮ್ಮ ಪ್ರಸ್ತುತ ಕೆಲಸವನ್ನು ಬದಲಾಯಿಸಲು ನೀವು ಬಯಸಿದರೆ ಈ ಸಮಯದಲ್ಲಿ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಬೇಡಿ. ಕಟುಂಬ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದತ್ತ ಗಮನಹರಿಸಿ.
ಧನು ರಾಶಿ
ನಿಮ್ಮ ಹಾಗೂ ಆಪ್ತರ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು, ನಿಮ್ಮ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಚೆನ್ನಾಗಿ ಯೋಚಿಸಿ ತೆಗೆದುಕೊಳ್ಳಿ. ಕೆಲಸದ ಸ್ಥಳದಲ್ಲಿ ಪರಿಸ್ಥಿತಿಯು ಪ್ರತಿಕೂಲವಾಗಿ ಕಾಣುತ್ತದೆ. ಖರ್ಚು ನಿಯಂತ್ರಿಸಿದರೆ ಒಳ್ಳೆಯದು. ವೈವಾಹಿಕ ಬದುಕು ಚೆನ್ನಾಗಿರಲಿದೆ,
ಆರೋಗ್ಯ ದುರ್ಬಲವಾಗಿರುತ್ತದೆ ನಿಯಮಿತವಾಗಿ ಔಷಧಿ ತೆಗೆದುಕೊಳ್ಳಿ.
ಮಕರ ರಾಶಿ
ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿ ಆತುರ ತೋರಬೇಡಿ. ಕೆಲಸದ ಸ್ಥಳದಲ್ಲಿ ಕೆಲವು ದೊಡ್ಡ ಯಶಸ್ಸನ್ನು ಪಡೆಯಲು ಸಾಧ್ಯವಾಗುವುದು, ಖರ್ಚು ನಿಯಂತ್ರಸಿದರೆ ಒಳ್ಳೆಯದು. ಆರೋಗ್ಯವು ಉತ್ತಮವಾಗಿರುತ್ತದೆ, ವ್ಯಾಪಾರಕ್ಕೆ ಸಂಬಂಧಸಿದಂತೆ ಅತುರದ ನಿರ್ಧಾರ ತೆಗೆದುಕೊಳ್ಳಬೇಡಿ. ವೈವಾಹಿಕ ಬದುಕು ಚೆನ್ನಾಗಿರಲಿದೆ.
ಕುಂಭ ರಾಶಿ
ಉದ್ಯೋಗಸ್ಥರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ಕೆಲಸದ ಹೊರೆ ಕಡಿಮೆ ಇರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಿಗಳಿಗೆ ಪ್ರತಿಸ್ಪರ್ಧೆಗಳಿಂದ ಸ್ಪರ್ಧೆ ಹೆಚ್ಚಿರಲಿದೆ.
ವೃತ್ತಿಜೀವನದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು, ವೈವಾಹಿಕ ಬದುಕು ಚೆನ್ನಾಗಿರಲಿದೆ. ಹೊಟ್ಟೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಮಸ್ಯೆವಿರಬಹುದು.
ಮೀನ ರಾಶಿ
ಉದ್ಯಮಿಗಳು ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗಬಹುದು. ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ನೀವು ಪ್ರಯತ್ನಿಸುತ್ತಿದ್ದರೆ ಈ ದಿನ ಅದಕ್ಕೆ ಸಂಬಂಧಿಸಿದಂಥ ಶುಭ ಸುದ್ದಿ ಪಡೆಯಬಹುದು. ನೀವು ಆಲಸ್ಯ ಮತ್ತು ಸೋಮಾರಿತನವನ್ನು ಅನುಭವಿಸಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಹೆಚ್ಚುತ್ತಿರುವ ಮೈ ತೂಕ ನಿಯಂತ್ರಿಸಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










