Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ: ಸೆಪ್ಟೆಂಬರ್ 24, ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ವೈದಿಕಶಾಸ್ತ್ರದ ಪ್ರಕಾರ ಈ ದಿನ ನಿಮ್ಮ ರಾಶಿಗಳಿಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಯ ಸಾಧ್ಯತೆಗಳಿವೆ. ಈ ದಿನ ಅರೋಗ್ಯ ಚೆನ್ನಾಗಿರಲಿದೆ. ಏನಾದರು ಹಣ ಹೂಡಿಕೆ ಮಾಡುವುದಾದರೆ ಚೆನ್ನಾಗಿ ವಿಚಾರಿಸಿದ ಬಳಿಕವಷ್ಟೇ ಮಾಡಿ, ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ದಿನ ಶುಭವಾಗಿದೆ. ಕೆಲಸದಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡಿದರೆ ನೀವು ನಿರೀಕ್ಷೆ ಮಾಡಿದಂಥ ಫಲ ಪಡೆಯುತ್ತೀರಿ. ಸಂಬಂಧದಲ್ಲಿ ಭಿನ್ನಾಬಿಪ್ರಾಯ ಮತ್ತಷ್ಟು ಹೆ
ಆರೋಗ್ಯ: ಖಾಲಿ ಹೊಟ್ಟೆಯಲ್ಲಿ ಚಹಾ ಮತ್ತು ಕಾಫಿ ಸೇವಿಸುವುದನ್ನು ತಪ್ಪಿಸಿ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ.
ಮಿಥುನ ರಾಶಿ
ಕೆಲಸದ ವಿಷಯದಲ್ಲಿ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ, ಈ ದಿನ ಧನಾತ್ಮಕವಾಗಿರಿ. ಸರಿಯಾದ ಸಮಯ ಬಂದಾಗ, ವಿಷಯಗಳು ನಿಮ್ಮ ಪರವಾಗಿ ತಿರುಗುತ್ತವೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಹಣದ ವಿಷಯಕ್ಕೆ ಸಂಬಂಧಿಸಿದಂತೆ ಪಾಲುದಾರಿಕೆಯೊಂದಿಗೆ ಕೆಲವು ವಿವಾದಗಳ ಸಾಧ್ಯತೆಯಿದೆ. ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಲು ಸಲಹೆ ನೀಡಲಾಗುವುದು. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಅನಗತ್ಯ ಚಿಂತೆಗಳಿಂದ ದೂರವಿರಬೇಕು.
ಕರ್ಕ ರಾಶಿ
ಕೆಲಸದ ಹೊರೆ ಇದ್ದಕ್ಕಿದ್ದಂತೆ ಹೆಚ್ಚಾಗಬಹುದು, ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಹಣದ ವಿಷಯದಲ್ಲಿ ಉತ್ತಮವಲ್ಲ, ಖರ್ಚು ಹೆಚ್ಚಿರಲಿದೆ, ವ್ಯಾಪಾರಿಗಳಿಗೂ ಈ ದಿನ ಅಷ್ಟೊಂದು ಅನುಕೂಲಕರವಲ್ಲ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ನೋಡುವುದಾದರೆ ಕಿವಿಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಸಿಂಹ ರಾಶಿ
ಕೆಲಸಕ್ಕೆ ಸಂಬಂಧಿಸಿದ ಕೆಲವು ಅನಗತ್ಯ ಸಮಸ್ಯೆಗಳನ್ನು ನೀವು ಎದುರಿಸಬಹುದು. ಕಷ್ಟಪಟ್ಟು ದುಡಿದ ಹಣವನ್ನು ಸರಿಯಾಗಿ ಬಳಸಿಕೊಳ್ಳಬೇಕು. ನೀವು ಹೂಡಿಕೆ ಮಾಡಬೇಕೆಂದಿದ್ದರೆ ಅದಕ್ಕೆ ಈ ಅವಧಿ ಉತ್ತಮವಾಗಿದೆ. ಹಣಕಾಸಿನ ವಹಿವಾಟು ಮಾಡುವಾಗ ಜಾಗ್ರತೆವಹಿಸಿ. ವಿಶೇಷವಾಗಿ ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಬಹಳ ಆಲೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಜವಾಬ್ದಾರಿಗಳ ಬಗ್ಗೆ ನಿರ್ಲಕ್ಷ್ಯ ಬೇಡ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.
ಕನ್ಯಾ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿವೆ. ನೀವು ಹಣ ಗಳಿಸುವ ಅವಕಾಶಗಳಿವೆ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿದೆ. ವೈವಾಹಿಕ ಬದುಕಿನ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ, ಇಲ್ಲದಿದ್ದರೆ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ಇನ್ನು ಆರೋಗ್ಯದ ಕಡೆಗೆ ಕೂಡ ಗಮನಹರಿಸಬೇಕು.
ತುಲಾ ರಾಶಿ
ಈ ದಿನವು ಅನುಕೂಲಕರವಾಗಿದೆ, ನಿಮ್ಮ ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಯಾವುದೇ ಸಮಸ್ಯೆಯು ಪರಿಹರಿಸಲ್ಪಡುತ್ತದೆ. ಹಣದ ವಿಷಯದಲ್ಲಿ ದಿನವು ತುಂಬಾ ದುಬಾರಿಯಾಗಲಿದೆ. ವ್ಯಾಪಾರಿಗಳಿಗೆ ಲಾಭದ ವಿಷಯದಲ್ಲಿ ಈ ದಿನ ಅಷ್ಟೊಂದು ಅನುಕೂಲಕರವಲ್ಲ. ತಂದೆಗೆ ಆರೋಗ್ಯ ಸಮಸ್ಯೆಯಿದ್ದರೆ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು. ನಿಮ್ಮ ಹಾಗೂ ಸಂತಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ವೃಶ್ಚಿಕ ರಾಶಿ
ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ನಿರ್ಲಕ್ಷ್ಯ ವಹಿಸಬೇಡಿ.ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಲು ದಿನವು ಸೂಕ್ತವಲ್ಲ. ಕೆಲಸದ ವಿಷಯದಲ್ಲಿ ಹೆಚ್ಚು ಟೆನ್ಶನ್ ತೆಗೆದುಕೊಳ್ಳಬೇಡಿ. ಮನೆಯ ವಾತಾವರಣವು ಆಹ್ಲಾದಕರವಾಗಿರುತ್ತದೆ. ವೃತ್ತಿಜೀವನದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಿ.
ಧನು ರಾಶಿ
ಹಣದ ವಿಷಯದಲ್ಲಿ ದಿನವು ಅನುಕೂಲಕರವಾಗಿದೆ. ನಿಮ್ಮ ಉಳಿತಾಯ ಹೆಚ್ಚಾಗಬಹುದು. ವ್ಯಾಪಾರದಲ್ಲಿ ನಿರ್ಲಕ್ಷ್ಯವು ದುಬಾರಿಯಾಗಬಹುದು.ಮನೆಯಲ್ಲಿ ವಾತಾವರಣವು ಕ್ರಮಬದ್ಧವಾಗಿರುತ್ತದೆ. ಕಷ್ಟದ ಸಮಯದಲ್ಲಿ ನಿಮ್ಮ ಸಂಗಾತಿಯಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಆರೋಗ್ಯದ ವಿಷಯದಲ್ಲಿ ದಿನವು ಸರಾಸರಿಯಾಗಲಿದೆ.
ಮಕರ ರಾಶಿ
ಹಣಕಾಸಿನ ವಿಷಯಗಳಲ್ಲಿ ಈ ದಿನ ಉತ್ತಮವಾಗಿದೆ. ನೀವು ಹಣ ಗಳಿಸುವ ಅವಕಾಶಗಳಿವೆ. ವೈವಾಹಿಕ ಬದುಕಿನಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಯಾವುದೇ ಕೆಲಸ ಸ್ಥಗಿತಗೊಂಡರೆ ಅದು ಪೂರ್ಣಗೊಳ್ಳುವ ಬಲವಾದ ಸಾಧ್ಯತೆಯಿದೆ. ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ. ನಕಾರಾತ್ಮಕ ಆಲೋಚನೆಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯದಲ್ಲಿ ನೀವು ದೊಡ್ಡ ಸುಧಾರಣೆಯನ್ನು ಕಾಣುತ್ತೀರಿ.
ಕುಂಭ ರಾಶಿ
ಈ ದಿನ ಉತ್ತಮವಾಗಿದೆ.ಉದ್ಯೋಗಸ್ಥರಿಗೆ ಬಡ್ತಿ ದೊರೆಯಬಹುದು. ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಬಾಕಿ ಇರುವ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಪ್ರಯತ್ನಿಸಿ.ನಿಮ್ಮ ಕೆಲಸದ ಹೊರೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದೆ. ದಾಂಪತ್ಯ ಜೀವನದ ಸುಖ ಉಳಿಯುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ.
ಮೀನ ರಾಶಿ
ನೀವು ಯಾವುದೇ ಆಸ್ತಿ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಆ ಆಲೋಚನೆಯನ್ನು ಮುಂದೂಡಬೇಕಾಗುತ್ತದೆ. ಕೆಲಸದ ಸ್ಥಳದಲ್ಲಿ ನೀವು ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗಬಹುದು. ಉದ್ಯೋಗಸ್ಥರು ಕೆಲ ಸವಾಲುಗಳನ್ನು ಎದುರಿಸಬಹುದು. ನಿಮ್ಮ ಹಾಗೂ ಸಂಗಾತಿ ನಡುವೆ ಅನಗತ್ಯ ವಾದಗಳು ಉಂಟಾಗಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










