ಸೆಪ್ಟೆಂಬರ್ 26, ದಿನ ರಾಶಿಫಲ ಪ್ರಕಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ಜ್ಯೋತಿಷ್ಯಶಾಸ್ತ್ರ ಪ್ರಕಾರ ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?

ಮೇಷ ರಾಶಿ

ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ವ್ಯಾಪಾರಿಗಳು ಅಗತ್ಯಕ್ಕಿಂತ ಹೆಚ್ಚಾಗಿ ಯಾರನ್ನೂ ನಂಬಬೇಡಿ. ಉದ್ಯೋಗಿಗಳು ಕೆಲಸದಲ್ಲಿ ಹೆಚ್ಚಿನ ಒತ್ತಡ ತೆಗೆದುಕೊಳ್ಳಬೇಡಿ. ಕುಟುಂಬದ ವಾತಾವರಣ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರುತ್ತದೆ.

Daily Horoscope

ವೃಷಭ ರಾಶಿ

ಈ ದಿನ ನಿಮಗೆ ಒತ್ತಡ ಅಧಿಕವಿರಲಿದೆ, ಕೆಲಸ ಅಂತ ಅರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಿಗಳಿಗೆ ಹಣಕ್ಕೆ ಸಂಬಂಧಿಸಿದ ದೊಡ್ಡ ವಹಿವಾಟುಗಳನ್ನು ಮಾಡಲು ದಿನವು ಅನುಕೂಲಕರವಾಗಿಲ್ಲ. ಕುಟುಂಬದಲ್ಲಿ ಖುಷಿಯ ವಾತಾವರಣ ಇರಲು ಪ್ರಯತ್ನಿಸಬೇಕು. ಹವಾಮಾನ ಬದಲಾವಣೆಯಿಂದ ಆರೋಗ್ಯ ಸಂಬಂಧಿತ ಸಮಸ್ಯೆಗಳಿರಬಹುದು.

ಮಿಥುನ ರಾಶಿ

ಆರ್ಥಿಕವಾಗಿ ಈ ದಿನ ನಿಮಗೆ ಶುಭವಾಗಿದೆ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ, ಸಂಬಂಧಗಳಲ್ಲಿ ಸಮನ್ವಯವು ಉತ್ತಮವಾಗಿರುತ್ತದೆ. ಮನೆಯಲ್ಲಿ ಧನಾತ್ಮಕ ವಾತಾವರಣ ಇರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ನೀವು ಆರೋಗ್ಯದ ಕಡೆಗೆ ಗಮನಹರಿಸಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸಿ.

ಕರ್ಕ ರಾಶಿ

ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗಬಹುದು. ಹೊಸ ವ್ಯಾಪಾರ ಯೋಜನೆಯಲ್ಲಿ ಕೆಲಸವನ್ನು ಪ್ರಾರಂಭಿಸಲು ದಿನ ಉತ್ತಮವಾಗಿದೆ. ಉದ್ಯೋಗಿಗಳಿಗೆ ತಮಗೆ ವಹಿಸಿದ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುವುದು. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಅರೋಗ್ಯ ಚೆನ್ನಾಗಿರಲಿದೆ.

ಸಿಂಹ ರಾಶಿ

ಈ ದಿನ ನಿಮಗೆ ಶುಭವಾಗಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ನೀವು ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಸರಿಯಾದ ನಿರ್ಧಾರಗಳಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರಲಿದೆ.

ಕನ್ಯಾ ರಾಶಿ

ಭೂಮಿಗೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ ಅದರ ತೀರ್ಪು ನಿಮ್ಮ ಪರವಾಗಿದೆ ಬರಲಿದೆ. ಈ ದಿನ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ.
ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ನಿಮ್ಮ ಸಂಬಂಧಗಳು ಇನ್ನಷ್ಟು ಬಲಗೊಳ್ಳುತ್ತವೆ. ಆರೋಗ್ಯ ಚೆನ್ನಾಗಿರಲಿದೆ.

ತುಲಾ ರಾಶಿ

ಈ ದಿನ ಉತ್ತಮವಾಗಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ನಿಮ್ಮ ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ.ಮನೆಯ ವಾತಾವರಣವು ಸುಧಾರಿಸುತ್ತದೆ. ನೀವು ನಿಮ್ಮ ಸಂಗಾತಿಯ ಆರೋಗ್ಯದ ಕಡೆಗೆ ಗಮನಹರಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ನೇತ್ರ ಸಂಬಂಧಿ ಸಮಸ್ಯೆಗಳಿರಬಹುದು.

ವೃಶ್ಚಿಕ ರಾಶಿ

ಈ ದಿನ ಅನುಕೂಲಕರವಾಗಿದೆ, ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ಇಂದು ನಿಮ್ಮ ವೃತ್ತಿ ಸಂಬಂಧಿಸಿದಂತೆ ಪ್ರಯಾಣ ಮಾಡಬಹುದು. ವೈವಾಹಿಕ ಬದುಕು ಚೆನ್ನಾಗಿರಲಿದೆ. ಏನೇ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯುವುದು, ಆರೋಗ್ಯದ ಬಗ್ಗೆ ಹೇಳುವುದಾದರೆ ಹಲ್ಲುಗಳಿಗೆ ಸಂಬಂಧಿಸಿದ ಸಮಸ್ಯೆಗಳಿರಬಹುದು.

ಧನು ರಾಶಿ

ನಿಮಗೆ ಯಾರಾದರು ಹಿರಿಯರು ಸಲಹೆ ನೀಡಿದರೆ ಅವರ ಸಲಹೆ ನಿರ್ಲಕ್ಷ್ಯ ಮಾಡಬೇಡಿ. ಅಲ್ಲದೆ ಯಾವುದೇ ರಿಸ್ಕ್‌ ತೆಗೆದುಕೊಳ್ಳಲು ಹೋಗದಿರುವುದು ಒಳ್ಳೆಯದು. ಆರೋಗ್ಯದಲ್ಲಿ ಏರಳಿತವಿರಬಹುದು. ಅಲರ್ಜಿ ಅಥವಾ ಸೋಂಕು ಸಂಬಂಧಿತ ಸಮಸ್ಯೆವಿರಬಹುದು. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿಯು ಒತ್ತಡದಿಂದ ಕೂಡಿರುತ್ತದೆ. ಆರೋಗ್ಯ ಉತ್ತಮವಾಗಿರಲಿದೆ.

ಮಕರ ರಾಶಿ

ಈ ಅವಧಿ ಏರಿಳಿತಗಳಿಂದ ಕೂಡಿರಲಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಲ್ಲ, ಹೊಸ ಯೋಜನೆಗಳಲ್ಲಿ ಕೆಲಸವನ್ನು ಪ್ರಾರಂಭಿಸುವುದನ್ನು ತಪ್ಪಿಸಿ. ಕೋಪ ಮತ್ತು ಆತುರದಿಂದ ಯಾವುದೇ ಕೆಲಸ ಮಾಡಬೇಡಿ. ವಿವಾಹಿತರು ಇತರ ಆಕರ್ಷಣೆಯಿಂದ ದೂರವಿರಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈ ಕೈ ನೋವಿನ ಸಮಸ್ಯೆವಿರಬಹುದು.


ಕುಂಭ ರಾಶಿ

ಕೆಲಸದಲ್ಲಿ ಈ ದಿನ ಉತ್ತಮವಾಗಿರಲಿದೆ, ನೀವು ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು, ಹಣಕಾಸಿನ ಪರಿಸ್ಥಿತಿ ಸುಧಾರಿಸಬಹುದು. ಮನೆಯ ವಾತಾವರಣವು ಆಹ್ಲಾದಕರವಾಗಿರುತ್ತದೆ. ವೈವಾಹಿಕ ಜೀವನದ ಕಡೆಗೆ ಗಮನಹರಿಸಬೇಕು.

ಮೀನ ರಾಶಿ

ಕೌಟುಂಬಿಕ ಸಮಸ್ಯೆಗಳನ್ನು ನೀವೇ ಬಗೆಹರಿಸಿಕೊಳ್ಳಲು ಪ್ರಯತ್ನಿಸಿ. ಹೊರಗಿನವರು ಹಸ್ತಕ್ಷೇಪ ಮಾಡಲು ಬಿಡಬೇಡಿ. ಹಣಕ್ಕೆ ಸಂಬಂಧಿಸಿದ ವ್ಯವಹಾರಗಳಲ್ಲಿ ಅಜಾಗರೂಕತೆಯಿಂದ ನೀವು ನಷ್ಟವನ್ನು ಅನುಭವಿಸಬಹುದು. ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರವಾಗುತ್ತವೆ. ವೈವಾಹಿಕ ಬದುಕು ಚೆನ್ನಾಗಿರಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope September 26: Effects On 12 Zodiac Signs In Kannada

Daily Horoscope September 26:: Here is how it affects on 12 zodiac signs read on...
Story first published: Wednesday, September 25, 2024, 21:27 [IST]
X
Desktop Bottom Promotion