ಶುಭ ಶುಕ್ರವಾರ, ಸೆಪ್ಟೆಂಬರ್ 27 ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ಜ್ಯೋತಿಷ್ಯದ ಪ್ರಕಾರ ಸೆಪ್ಟೆಂಬರ್ 27ರಂದು ನಿಮ್ಮ ರಾಶಿಗೆ ಹೇಗಿರಲಿದೆ?

ಮೇಷ ರಾಶಿ

ಈ ದಿನ ಸಾಲದ ವ್ಯವಹಾರ ಮಾಡಲು ಹೋಗಬೇಡಿ, ಕೆಲಸದಲ್ಲಿಯೂ ಕೆಲ ಅಡೆತಡೆ ಇರಬಹುದು. ಆಸ್ತಿ ವ್ಯವಹಾರದಲ್ಲಿ ಕೆಲಸ ಮಾಡುವವರಿಗೆ ದಿನವು ಕಷ್ಟಕರವಾಗಿರುತ್ತದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯವಿರಲಿದೆ. ಮಧುಮೇಹ, ರಕ್ತದೊತ್ತಡ ಆರೋಗ್ಯ ಸಮಸ್ಯೆಯಿದ್ದರೆ ಜಾಗ್ರತೆವಹಿಸಿ.

Daily Horoscope September

ವೃಷಭ ರಾಶಿ

ಈ ದಿನ ನೀವು ನಿಮ್ಮ ಮಾತಿನ ಬಗ್ಗೆ ಜಾಗ್ರತೆವಹಿಸಿ, ಆರ್ಥಿಕ ಪರಿಸ್ಥಿತಿಯಲ್ಲಿ ಅಷ್ಟು ಚೆನ್ನಾಗಿರಲ್ಲ, ಹಣಕಾಸಿಗೆ ಸಂಬಂಧಿಸಿದ ನಿರ್ಧಾರಗಳನ್ನು ತುಂಬಾ ಜಾಗ್ರತೆಯಿಂದ ತೆಗೆದುಕೊಳ್ಳಬೇಕು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಹವಾಮಾನ ಬದಲಾವಣೆಯಿಂದ ಆರೋಗ್ಯ ಸಮಸ್ಯೆವಿರಬಹುದು.

ಮಿಥುನ ರಾಶಿ

ಇಂದು ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ಕೆಲಸಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಬೇಕು. ಸ್ಥಗಿತಗೊಂಡ ಕೆಲಸಗಳು ಪೂರ್ಣಗೊಳ್ಳುತ್ತವೆ . ಸಂಬಂಧಗಳಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.

ಕರ್ಕ ರಾಶಿ

ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಇನ್ನು ವ್ಯಾಪಾರಿಗಳು ನಿಮಗೆ ವಹಿಸಿದ ಕೆಲಸವನ್ನು ಸರಿಯಾದ ಸಮಯದೊಳಗೆ ಮಾಡಿ ಮುಗಿಸಲು ಜಾಗ್ರತೆವಹಿಸಬೇಕು.
ಅರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಸಂಬಂಧದ ಬಗ್ಗೆ ನೋಡುವುದಾದರೆ ನಿಮ್ಮ ಮಾತು ಅಥವಾ ವರ್ತನೆ ಆಪ್ತರನ್ನು ನೋಯಿಸದಂತೆ ಜಾಗ್ರತೆವಹಿಸಿ.ವೈವಾಹಿಕ ಬದುಕಿನಲ್ಲಿ ಭಿನ್ನಶಾಭಿಪ್ರಾಯವಿದ್ದರೆ ಬಗೆಹರಿಸಲು ಪ್ರಯತ್ನಿಸಿ.

ಸಿಂಹ ರಾಶಿ

ನೀವು ಖರ್ಚುಗಳ ಕಡೆಗೆ ಗಮನಹರಿಸಬೇಕು, ಅನಗ್ಯತ ಖರ್ಚಿಗೆ ಕಡಿವಾಣ ಹಾಕಿದರೆ ಒಳ್ಳೆಯದು. ವ್ಯಾಪಾರಸ್ಥರಿಗೆ ದಿನವು ಸವಾಲಿನಿಂದ ಕೂಡಿರಲಿದೆ. ಕೆಲಸದ ಜಾಗದಲ್ಲಿ ಭಿನ್ನಾಭಿಪ್ರಾಯ ತಪ್ಪಿಸಿ. ಇನ್ನು ಕುಟುಂಬದ ಹಿರಿಯರ ಮಾತು ನಿರ್ಲಕ್ಷ್ಯ ಮಾಡಬೇಡಿ. ಕೋಪ ನಿಯಂತ್ರಿಸಿ, ಆರೋಗ್ಯ ಚೆನ್ನಾಗಿರಲಿದೆ.

ಕನ್ಯಾ ರಾಶಿ

ಈ ದಿನ ನಿಮಗೆ ಶುಭವಾಗಿದೆ, ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ. ನೀವು ಯೋಜನೆಯ ಪ್ರಕಾರ ನಿಮ್ಮ ಕೆಲಸವನ್ನು ಪೂರ್ಣಗೊಳಿಸಬೇಕು. ವ್ಯಾಪಾರಿಗಳು ಸವಾಲುಗಳನ್ನು ಎದುರಿಸಬಹುದು. ಕೆಲಸದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ನೀವು ಕೋಪ ನಿಯಂತ್ರಿಸಿದರೆ ಒಳ್ಳೆಯದು, ಆರೋಗ್ಯ ಉತ್ತಮವಾಗಿರಲಿದೆ.

ತುಲಾ ರಾಶಿ

ಈ ದಿನ ಖರ್ಚು ಅಧಿಕವಿರಲಿದೆ. ಯೋಚಿಸದೆ ಖರ್ಚು ಮಾಡಿದರೆ ಕಷ್ಟವಾಗಬಹುದು, ಕೆಲಸ ಕಾರ್ಯಗಳು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ
ಸಂಬಂಧದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ, ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ವೃಶ್ಚಿಕ ರಾಶಿ

ಹಣಕ್ಕೆ ಸಂಬಂಧಿಸಿದ ದೊಡ್ಡ ಚಿಂತೆ ಬಗೆಹರಿಯಲಿದೆ. ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವಾಗ ಅದರ ಸಾಧಕ ಬಾಧಕಗಳ ಬಗ್ಗೆ ಆಲೋಚಿಸಿ ತೆಗೆದುಕೊಳ್ಳಬೇಕು.
ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆವಿರಬಹುದು.

ಧನು ರಾಶಿ

ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ಆರ್ಥಿಕ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು. ನೀವು ಕುಟುಂಬದ ಕಿರಿಯ ಸದಸ್ಯರಾಗಿದ್ದರೆ, ಮನೆಯ ವಿಷಯಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಲು ಹೋಗಬೇಡಿ, ಹಿರಿಯರ ಸಲಹೆ ಪಾಲಿಸುವುದು ಒಳ್ಳೆಯದು. ಆರೋಗ್ಯಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ತಲೆನೋವಿನ ಸಮಸ್ಯೆವಿರಬಹುದು.

ಮಕರ ರಾಶಿ

ಈ ದಿನ ನಿಮಗೆ ಅಷ್ಟೊಂದು ಅನುಕೂಲಕರವಲ್ಲ. ಹಣಕಾಸಿನ ಪರಿಸ್ಥಿತಿಯಲ್ಲಿ ಹದಗೆಡುವ ಸಾಧ್ಯತೆಯಿದೆ. ಹಣಕ್ಕೆ ಸಂಬಂಧಿಸಿದ ಕೆಲಸ ಮಾಡಲು ಹೋಗದಿರುವುದು ಒಳ್ಳೆಯದು. ಉದ್ಯೋಗಿಗಳು ಕೆಲಸದ ಕಡೆಗೆ ಗಮನಹರಿಸದಿದ್ದರೆ ಕಷ್ಟ. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು. ಪ್ರೇಮಿಗಳ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.

ಕುಂಭ ರಾಶಿ

ನೀವು ಇಂದು ಪ್ರಯಾಣಿಸುತ್ತಿದ್ದರೆ, ನಿಮ್ಮ ವಸ್ತುಗಳನ್ನು ನೀವು ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ ಇಲ್ಲದಿದ್ದರೆ ಅವುಗಳು ಕಳ್ಳತನ ಅಥವಾ ಕಳೆದುಹೋಗುವ ಸಾಧ್ಯತೆಗಳಿವೆ. ನೀವು ಸಾಕಷ್ಟು ಒತ್ತಡವನ್ನು ಅನುಭವಿಸುವಿರಿ ಮತ್ತು ಕೆಲವು ಹೊಂದಾಣಿಕೆಗಳನ್ನು ಮಾಡಬೇಕಾಗಬಹುದು. ನಿಮ್ಮ ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು, ಅನಗತ್ಯ ಚಿಂತೆಗಳಿಂದ ದೂರವಿರಿ. ನಿಮ್ಮ ದಿನಚರಿಯಲ್ಲಿ ಧ್ಯಾನವನ್ನು ಸೇರಿಸಿ.


ಮೀನ ರಾಶಿ

ಇಂದು ನಿಮಗೆ ಅತ್ಯಂತ ಮಂಗಳಕರ ದಿನವಾಗಲಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ , ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಕುಟುಂಬದಲ್ಲಿ ಏನಾದರು ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಈ ದಿನ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Horoscope September 27: Effects On 12 Zodiac Signs In Kannada

Daily Horoscope September 27:: Here is how it affects on 12 zodiac signs read on...
Story first published: Thursday, September 26, 2024, 21:12 [IST]
X
Desktop Bottom Promotion