Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಸೆಪ್ಟೆಂಬರ್ 22, ಈ ದಿನ ನಿಮ್ಮ ರಾಶಿಗಳಿಗೆ ಹೇಗಿರಲಿದೆ?
ಶುಭ ದಿನ, ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಮಗೆ ಶುಭವಾಗಿದೆ, ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ಅನಗತ್ಯ ಓಡಾಟವನ್ನು ತಪ್ಪಿಸಿ. ವ್ಯಾಪಾರಿಗಳಿಗೆ ಹಠಾತ್ ದೊಡ್ಡ ಆರ್ಥಿಕ ಲಾಭದ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯಬಹುದು, ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.ಕೆಲಸದ ಸ್ಥಳದಲ್ಲಿ ನಿಮ್ಮ ವಿರೋಧಿಗಳ ಬಗ್ಗೆ ಜಾಗರೂಕರಾಗಿರಿ. ನಿಮ್ಮ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಿ. ಕುಟುಂಬದಲ್ಲಿ ಹಿರಿಯ ಸದಸ್ಯರಿದ್ದರೆ ಅವರ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ. ವೈವಾಹಿಕ ಬದುಕು ಚೆನ್ನಾಗಿರಲಿದೆ.
ಮಿಥುನ ರಾಶಿ
ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಆತುರದಿಂದ ಯಾವುದೇ ಕೆಲಸ ಮಾಡಬೇಡಿ ಆರೋಗ್ಯದ ಬಗ್ಗೆ ಕಾಳಜಿ ಇರುತ್ತದೆ. ಕೆಲಸದ ಜಾಗದಲ್ಲಿ ಕೋಪ ನಿಯಂತ್ರಿಸಿದರೆ ಒಳ್ಳೆಯದು. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯಕ್ಕಾಗಿ ಪ್ರತಿದಿನ ವ್ಯಾಯಾಮ ಮಾಡುವುದು ಒಳ್ಳೆಯದು.
ಕರ್ಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಹಣಕಾಸಿನ ಸಮಸ್ಯೆಗಳು ಬಗೆಹರಿಯಲಿವೆ. ವ್ಯಾಪಾರಿಗಳು ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ನೀವು ಕೆಲವು ತೊಂದರೆಗಳನ್ನು ಎದುರಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ನಿಮ್ಮ ಆಪ್ತರಿಂದ ಸಲಹೆ ಪಡೆಯಬೇಕು. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಿರಬಹುದು, ಕೋಪದಿಂದ ಹೇಳುವ ಪದಗಳು ಆಪ್ತರ ಮನಸ್ಸು ನೋಯಿಸದಂತೆ ಜಾಗ್ರತೆವಹಿಸಿ.
ಸಿಂಹ ರಾಶಿ
ಕೆಲಸದಲ್ಲಿ ಅಡಚಣೆ ಇರಲಿದೆ, ಅನಗತ್ಯ ಕೋಪ ಮತ್ತು ಅಹಂ ನಿಮ್ಮ ಸಮಸ್ಯೆ ಮತ್ತಷ್ಟು ಹೆಚ್ಚಿಸಬಹುದು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಆರೋಗ್ಯದಲ್ಲಿ ಹಠಾತ್ ಕ್ಷೀಣತೆ ಉಂಟಾಗಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ನಿಮ್ಮ ಪಾಲುದಾರರೊಂದಿಗೆ ಉತ್ತಮ ಹೊಂದಾಣಿಕೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ.
ಅನೇಕ ನಕಾರಾತ್ಮಕ ಆಲೋಚನೆಗಳು ಸಹ ಮನಸ್ಸಿನಲ್ಲಿ ಬರುತ್ತವೆ. ಸಂಬಂಧದ ಕಡೆಗೆ ಗಮನಹರಿಸಿ. ಆರೋಗ್ಯ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಮನೆಯಲ್ಲಿ ಧನಾತ್ಮಕ ವಾತಾವರಣ ಇರುತ್ತದೆ. ಕೆಲಸದ ಸ್ಥಳದಲ್ಲಿ ಪ್ರತಿಕೂಲ ಸಂದರ್ಭಗಳನ್ನು ಎದುರಿಸಬೇಕಾಗಬಹುದು, ಆದರೆ ನಿಮ್ಮ ಬುದ್ಧಿವಂತಿಕೆಯಿಂದ ಈ ಸವಾಲುಗಳನ್ನು ಎದುರಿಸಲು ಪ್ರಯತ್ನಿಸಿದರೆ ಒಳ್ಳೆಯದು. ಹಣಕ್ಕೆ ಸಂಬಂಧಿಸಿದ ದೊಡ್ಡ ವಹಿವಾಟುಗಳನ್ನು ಮಾಡುವಾಗ ಹೆಚ್ಚು ಜಾಗರೂಕರಾಗಿರಿ. ವ್ಯಾಪಾರಿಗಳು ಯಾವುದೇ ದೊಡ್ಡ ಹೂಡಿಕೆ ಮಾಡದಿದ್ದರೆ ಒಳ್ಳೆಯದು. ಬೇರೆಯವರ ವಿಷಯಗಳ ಬಗ್ಗೆ ಗಾಸಿಪ್ ಬೇಡ.
.
ತುಲಾ ರಾಶಿ
ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಅದಕ್ಕೆ ಸಮಯ ಅನುಕೂಲಕರವಾಗಿದೆ. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ಕೆಲಸದ ಹೊರೆ ಅಧಿಕವಾಗಿರುತ್ತದೆ , ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಕೆಲಸದ ದೃfಷಟಿಯಿಂದ ಈ ಅವಧಿ ಉತ್ತಮವಾಗಿದೆ.
ವೃಶ್ಚಿಕ ರಾಶಿ
ನಿಮ್ಮ ಎಲ್ಲಾ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ವ್ಯವಹಾರದ ದೃಷ್ಟಿಯಿಂದ ದಿನವು ಉತ್ತಮವಾಗಿಲ್ಲ. ನೀವು ಇಂದು ಯಾವುದೇ ಹೊಸ ಕೆಲಸವನ್ನು ಮಾಡದಿದ್ದರೆ ಉತ್ತಮ.ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.
ಧನು ರಾಶಿ
ಈ ದಿನ ಉತ್ತಮವಾಗಿರಲಿದೆ, ಹಣಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಪೂರ್ಣಗೊಳಿಸಬಹುದು. ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಯಾವುದೇ ಸಾಲದ ವ್ಯವಹಾರ ಮಾಡಬೇಡಿ. ಆರೋಗ್ಯದ ಬಗ್ಗೆ ಯಾವುದೇ ರೀತಿಯಲ್ಲಿ ಅಜಾಗರೂಕರಾಗಬೇಡಿ.
ಮಕರ ರಾಶಿ
ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಸಾಧಿಸುವಲ್ಲಿ ನೀವು ಬಹಳಷ್ಟು ತೊಂದರೆಗಳನ್ನು ಎದುರಿಸಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಇತರರನ್ನು ಕುರುಡಾಗಿ ನಂಬುವ ನಿಮ್ಮ ಅಭ್ಯಾಸವು ಈ ಸಮಯದಲ್ಲಿ ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು, ಜಾಗ್ರತೆವಹಿಸಿ. ಹಣದ ವಿಷಯದಲ್ಲಿ ಈ ವಾರ ನಿಮಗೆ ಸರಾಸರಿಯಾಗಲಿದೆ. ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ದೊಡ್ಡ ಖರ್ಚು ಮಾಡಲು ಇದು ಸರಿಯಾದ ಸಮಯವಲ್ಲ.
ಕುಂಭ ರಾಶಿ
ಕುಟುಂಬದ ಜವಾಬ್ದಾರಿಗಳನ್ನು ನಿರ್ಲಕ್ಷಿಸುವುದನ್ನು ತಪ್ಪಿಸಿ. ವೃತ್ತಿ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ.ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರಿಗೆ ಈ ಸಮಯ ಒಳ್ಳೆಯದಲ್ಲ. ನಿಮ್ಮ ಯಾವುದೇ ಸಮಸ್ಯೆಗೆ ಪರಿಹಾರ ಸಿಗಲಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಲು, ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ.
ಮೀನ ರಾಶಿ
ಮೀನ ರಾಶಿಯವರಿಗೆ ಈ ದಿನ ಉತ್ತಮವಾಗಿದೆ, ಉದ್ಯೋಗವನ್ನು ಬದಲಾಯಿಸಲು ಯೋಜಿಸುತ್ತಿದ್ದರೆ ಈ ಅವಧಿ ಉತ್ತಮವಾಗಿರಲಿದೆ. ಆರ್ಥಿಕವಾಗಿ ಚೆನ್ನಾಗಿರಲಿದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications