ದಿನ ಭವಿಷ್ಯ: ಸೆಪ್ಟೆಂಬರ್ 23, ಈ ದಿನ ನಿಮ್ಮ ರಾಶಿಗಳಿಗೆ ಹೇಗಿರಲಿದೆ?

ಶುಭ ದಿನ, ಈ ದಿನದ ರಾಶಿಫಲ ಪ್ರಕಾರ ನಿಮಗೆ ಹೇಗಿರಲಿದೆ?

ಮೇಷ ರಾಶಿ

ಈ ದಿನ ನಿಮಗೆ ಶುಭವಾಗಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಆದರೆ ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಿರಲಿದೆ. ಕೆಲಸದ ಜಾಗದಲ್ಲಿ ಕೋಪವನ್ನು ನಿಯಂತ್ರಿಸಲು ಸಲಹೆ ನೀಡಲಾಗುವುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನಿದ್ದೆ ಕೆಡಬೇಡಿ.

Dina Bhavishya

ವೃಷಭ ರಾಶಿ

ಈ ದಿನ ಕೆಲಸದ ಜಾಗದಲ್ಲಿ ಏರಳಿತಗಳಿರಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಬಜೆಟ್‌ ಮೀರಿ ಖರ್ಚು ಮಾಡಬೇಡಿ. ಮನೆಯಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನೀವು ತಾಳ್ಮೆ ಮತ್ತು ಬುದ್ದಿವಂತಿಕೆಯಿಂದ ವರ್ತಿಸಬೇಕು. ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ
ನೆಗಡಿ, ಕೆಮ್ಮು, ಜ್ವರ ಈ ಬಗೆಯ ಸಮಸ್ಯೆಗಳಿರಬಹುದು.

ಮಿಥುನ ರಾಶಿ

ಈ ದಿನ ಕೆಲಸದಲ್ಲಿ ಒತ್ತಡವಿರಲಿದೆ, ಈ ದಿನ ಕೆಲಸದ ಕಾರಣ ಆಯಾಸ ಹೆಚ್ಚಿರಲಿದೆ, ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಮತ್ತಷ್ಟು ಹೆಚ್ಚಾಗಬಹುದು.
ವ್ಯಾಪಾರಿಗಳು ಈ ಅವಧಿಯಲ್ಲಿ ಸವಾಲುಗಳು ಹೆಚ್ಚಿರಲಿದೆ. ನಿಮ್ಮ ಹಾಗು ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಕೆಲಸದ ಜೊತೆಗೆ ವಿಶ್ರಾಂತಿ ಕಡೆಗೆ ಗಮನಹರಿಸಿ.

ಕರ್ಕ ರಾಶಿ

ಕೆಲಸದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ, ಆದರೆ ಹಣದ ವಿಷಯದಲ್ಲಿ ಜಾಗ್ರತೆವಹಿಸಬೇಕು. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಬಾರದು. ನಿಮ್ಮ ಆರ್ಥಿಕ ಸ್ಥಿತಿಯು ಸುಧಾರಿಸುವ ಸಾಧ್ಯತೆಯಿದೆ.ಮನೆಯಲ್ಲಿ ಉತ್ತಮ ವಾತಾವರಣ ಇರುತ್ತದೆ. ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೆ ಆರೋಗ್ಯ ನಿರ್ಲಕ್ಷ್ಯ ಮಾಡಬೇಡಿ.

ಸಿಂಹ ರಾಶಿ

ನೀವು ಹಣದ ಬಗ್ಗೆ ಜಾಗ್ರತೆವಹಿಸಬೇಕು, ಖರ್ಚು ಮಿತಿಯಲ್ಲಿದ್ದರೆ ಒಳ್ಳೆಯದು, ಇಲ್ಲದಿದ್ದರೆ ನೀವು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು. ಕೆಲಸದ ಬಗ್ಗೆ ನಿರ್ಲಕ್ಷ್ಯ ಬೇಡ, ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ. ಆರೊಗ್ಯದ ಬಗ್ಗೆ ಹೇಳುವುದಾದರೆ
ನಕಾರಾತ್ಮಕತೆಯು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಕನ್ಯಾ ರಾಶಿ

ನೀವು ಇತ್ತೀಚೆಗೆ ಯಾವುದೇ ಪರೀಕ್ಷೆಯನ್ನು ನೀಡಿದ್ದರೆ ನೀವು ಉತ್ತಮ ಯಶಸ್ಸನ್ನು ಪಡೆಯಬಹುದು. ವ್ಯಾಪಾರಿಗಳಿಗೆ ಈ ಸಮಯ ಉತ್ತಮವಾಗಿರಲಿದೆ, ಧನ ಲಾಭವಾಗಲಿದೆ.
ಕೆಲಸದಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿದ್ದರೆ ಮೌನವಾಗಿರುವುದರ ಬದಲಿಗೆ ಮುಕ್ತವಾಗು ಮಾತನಾಡಿದರೆ ಒಳ್ಳೆಯದು. ಆರೋಗ್ಯ ಉತ್ತಮವಾಗಿರಲಿದೆ.

ತುಲಾ ರಾಶಿ

ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ನೀವು ಕೆಲಸದ ಜೊತೆಗೆ ಕುಟುಂಬದತ್ತ ಗಮನ ಹರಿಸಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ನೋಡುವುದಾದರೆ ತಲೆನೋವಿನ ಸಮಸ್ಯೆಗಳಿರಬಹುದು.

ವೃಶ್ಚಿಕ ರಾಶಿ

ಈ ದಿನ ನಿಮಗೆ ಉತ್ತಮವಾಗಿದೆ, ನಿಮ್ಮ ಎಲ್ಲಾ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ದಿನವು ಉತ್ತಮವಾಗಿಲ್ಲ. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತದೆ.
ಆಹಾರಕ್ರಮದ ಕಡೆಗೆ ಗಮನಹರಿಸಿ.

ಧನು ರಾಶಿ

ಈ ದಿನ ಉತ್ತಮವಾಗಿರಲಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಪೂರ್ಣಗೊಳಿಸಬಹುದು. ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಸಾಲ ಕೊಡುವುದಾಗಲಿ, ಪಡೆಯುವುದಾಗಲಿ ಮಾಡಬೇಡಿ. ನೀವು ಅವಿವಾಹಿತರಾಗಿದ್ದರೆ ಮದುವೆಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರಪಡಬೇಡಿ. ವಿವಾಹಿತರಿಗೆ ಈ ದಿನ ಉತ್ತಮವಾಗಿದೆ.

ಮಕರ ರಾಶಿ

ಅನಗತ್ಯ ಚಿಂತೆಗಳಿಂದ ದೂರವಿರಿ, ನೀವು ಅನಗತ್ಯ ವೆಚ್ಚಗಳನ್ನು ತಪ್ಪಿಸಬೇಕು, ಆರ್ಥಿಕವಾಗಿ ಈ ದಿನ ಉತ್ತಮವಲ್ಲ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಬೇಕು. ನಿಮ್ಮ ಸಂಬಂಧವನ್ನು ಸುಧಾರಿಸಲು, ನಿಮ್ಮ ನಡವಳಿಕೆಯಲ್ಲಿ ನೀವು ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಮದುಮೇಹಿಗಳು ಆಹಾರಕ್ರಮದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.

ಕುಂಭ ರಾಶಿ

ಈ ದಿನ ಅನುಕೂಲಕರವಲ್ಲ, ಅನಗ್ಯತ ವಿಷಯಗಳ ಬಗ್ಗೆ ಚಿಂತನೆ ಮಾಡದೆ ನಿಮ್ಮ ಕೆಲಸದ ಕಡೆಗೆ ಗಮನಹರಿಸಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ, ಬಾಕಿಯಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಸಂಗಾತಿಯು ನಿಮ್ಮನ್ನು ಬೆಂಬಲಿಸುತ್ತಾರೆ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಬೇಡ.

ಮೀನ ರಾಶಿ

ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಂಭವವಿದೆ. ಹಣಕಾಸಿನ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲಿತಾಂಶ ದೊರೆಯದೇ ಇದ್ದಲ್ಲಿ ನಿರಾಸೆ ಬೇಡ, ಎಲ್ಲವೂ ಸರಿಯಾಗಲಿದೆ. ಕೆಲಸದಲ್ಲಿ ಒತ್ತಡವಿರಲಿದೆ. ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಸಲು ಪ್ರಯತ್ನಿಸಿ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Daily Numerology Prediction for September 23: Dina Bhavishya for All Zodiac Signs

Explore Dina Bhavishya (ದಿನ ಭವಿಷ್ಯ) /Daily Numerology Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Monday, September 23, 2024, 5:02 [IST]
X
Desktop Bottom Promotion