Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಸಂಖ್ಯಾಶಾಸ್ತ್ರ: ನೀವು ಹುಟ್ಟಿದ ದಿನಾಂಕ ಪ್ರಕಾರ ಈ ವಾರ(ಡಿಸೆಂಬರ್ 1-7) ನಿಮಗೆ ಹೇಗಿರಲಿದೆ?
ನೀವು ಜನ್ಮ ತಿಂಗಳು ಯಾವುದೇ ಆಗಿರಲಿ, ಆದರೆ ಯಾವ ದಿನಾಂಕದಲ್ಲಿ ಜನಿಸಿದ್ದೀರಿ ಅದರ ಮೇಲೆ ಈ ಸಂಖ್ಯಾಶಾಸ್ತ್ರ ಭವಿಷ್ಯ ನೀಡಲಾಗಿದೆ. ಡಿಸೆಂಬರ್ ಮೊದಲ ವಾರದ ಸಂಖ್ಯಾಶಾಸ್ತ್ರದ ಪ್ರಕಾರ ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಸಂಖ್ಯೆ 1 ((ಹುಟ್ಟಿದ ದಿನಾಂಕ 1,10,19,28)
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ, ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ, ಈ ವಾರ ತುಂಬಾಆತ್ಮವಿಶ್ವಾಸದಿಂದ ಲವಲವಿಕೆಯಿಂದ ಇರುತ್ತೀರಿ.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ಈ ವಾರ ಸ್ವಲ್ಪ ಜಾಗ್ರತೆವಹಿಸಿ, ಕೆಲಸದ ಕಡೆಗೆ ಗಮನಹರಿಸಿ, ಸವಾಲುಗಳನ್ನು ಉತ್ತಮ ರೀತಿಯಲ್ಲಿ ಎದುರಿಸುತ್ತೀರಿ ಕೂಡ. ಸಂಬಂಧದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುವುದು.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12, 21,30)
ಈ ವಾರ ಕೆಲಸದಲ್ಲಿ ಹೆಚ್ಚಿನ ಶ್ರಮ ಹಾಕಬೇಕಾಗುತ್ತದೆ, ಈ ವಾರ ಆರೋಗ್ಯದ ಕಡೆಯೂ ಗಮನಹರಿಸಿ. ಅಲ್ಲದೆ ಸಂಬಂಧದ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಲ್ಲ, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು. ನೀವು ನಿಮ್ಮ ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು.
ಸಂಖ್ಯೆ 4(ಹುಟ್ಟಿದ ದಿನಾಂಕ 4, 13,22, 31)
ಈ ವಾರ ನಿಮಗೆ ತುಂಬಾನೇ ಅನುಕೂಲಕರವಾಗಿರಲಿದೆ, ವೃತ್ತಿ ಬದುಕು ತುಂಬಾನೇ ಚೆನ್ನಾಗಿರಲಿದೆ, ಹಣಕಾಸಿನ ದೃಷ್ಟಿಯಿಂದಲೂ ಈವಾರ ನಿಮಗೆ ಅನುಕೂಲಕರವಾಗಿರಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ಈ ವಾರ ನಿಮಗೆ ಅನುಕೂಲಕರವಗಿರಲಿದೆ, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲು ಸಾಧ್ಯವಾಗುವುದು, ಹಣಕಾಸಿನ ವಿಚಾರದಲ್ಲಿ ಈ ವಾರ ನಿಮಗೆ ಅನುಕೂಲಕರವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಹಿರಿಯರ ಸಲಹೆ ಪಡೆಯಿರಿ. ಸಂಬಂಧದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ, ಆರ್ಥಿಕವಾಗಿಯೂ ಈ ಅವಧಿ ಅನುಕೂಲಕರವಾಗಿರಲಿದೆ.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16, 25)
ಈ ವಾರ ಸ್ವಲ್ಪ ಜಾಗ್ರತೆವಹಿಸಬೇಕು, ಸಂಬಂಧದ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಲ್ಲ, ಮಾನಸಿಕ ಒತ್ತಡ ಹೆಚ್ಚಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾದರೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ. ವೃತ್ತಿ ಬದುಕಿನಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ಸಂಖ್ಯೆ 8, ಇವರಿಗೆ ಈ ವಾರ ಅನುಕೂಲಕರವಾಗಿರಲಿದೆ, ಕೆಲಸದಲ್ಲಿ ಪ್ರಗತಿ ಕಂಡು ಬರಲಿದೆ, ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ. ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ಈ ವಾರ ನಿಮಗೂ ಅನುಕೂಲಕರವಾಗಿರಲಿದೆ, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ಕುಟುಂಬ ಬದುಕು ಚೆನ್ನಾಗಿರಲಿದೆ, ಆರೋಗ್ಯ ವೃದ್ಧಿಸಲಿದೆ. ನೀವು ಕುಟುಂಬಕ್ಕೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುವುದು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications