Latest Updates
-
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ!
ಡಿಸೆಂಬರ್ 11 ದಿನ ಭವಿಷ್ಯ: ಈ ದಿನದ 12 ರಾಶಿಗಳ ರಾಶಿಫಲ
ಜ್ಯೋತಿಷ್ಯ ಪ್ರಕಾರ ಡಿಸೆಂಬರ್ 11ರ ರಾಶಿಫಲ ನೋಡೋಣ...
ಮೇಷ ರಾಶಿ
ಈ ದಿನ ಉತ್ತಮವಾಗಿದೆ, ಈ ದಿನ ಮನೆಯಲ್ಲಿ ಅತಿಥಿಗಳೂ ಬರುವುದರಿಂದ ಸಂತೋಷದ ವಾತಾವರಣ ಇರಲಿದೆ, ಸ್ನೇಹಿತರ ಜೊತೆ ಸಮಯ ಕಳೆಯುತ್ತೀರಿ. ಹಣವನ್ನು ಮಿತಿ ಮೀರಿ ಖರ್ಚು ಮಾಡಲು ಹೋಗಬೇಡಿ.
ವೃಷಭ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಬೇಕು. ಈ ದಿನ ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಕೆಲಸದ ವಿಷಯದಲ್ಲಿ ಒತ್ತಡವಿರಲಿದೆ, ಕೋಪ ನಿಯಂತ್ರಿಸಿ, ಮಾನಸಿಕ ಒತ್ತಡ ಕಡಿಮೆ ಮಾಡುವತ್ತ ಗಮನಹರಿಸಿ.

ಮಿಥುನ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಲ್ಲ, ಖರ್ಚು ಹೆಚ್ಚಿರಲಿದೆ, ಕೆಲಸದಲ್ಲಿ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಬೇರೆಯವರ ಮಾತು ಕೇಳಿ ನಿಮ್ಮ ಮನಸ್ಸು ಹಾಳು ಮಾಡದಂತೆ ಸಲಹೆ ನೀಡಲಾಗುವುದು.
ಕರ್ಕ ರಾಶಿ
ಈ ದಿನ ಆರ್ಥಕವಾಗಿ ಚೆನ್ನಾಗಿರಲಿದೆ, ಕೆಲಸದಲ್ಲಿ ಗಮನ ಹರಿಸಲು ಸಾಧ್ಯವಾಗುವುದು. ಮನೆಯ ವಿಚಾರದಲ್ಲಿ ಸಂತೋಷದ ಸುದ್ದಿ ಸಿಗಲಿದೆ, ನಿಮ್ಮ ಹಾಗೂ ಸಂಗತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ಕೆಲಸ ಕಾರ್ಯದಲ್ಲಿ ಉತ್ಮವಾಗಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಕೊಟ್ಟ ಸಾಲ ಮರಳಿ ಸಿಗಲಿದೆ, ಮನೆಯಲ್ಲಿಯೂ ಸಂತೋಷದ ವಾತಾವರಣ ಇರಲಿದೆ. ಕುಟುಂಬದ ವಿಚಾರದಲ್ಲಿ ಮೂರನೇ ವ್ಯಕ್ತಿ ಹಸ್ತಕ್ಷೇಪ ಮಾಡದಂತೆ ಜಾಗ್ರತೆವಹಿಸಿ.
ಕನ್ಯಾ ರಾಶಿ
ಈ ದಿನ ನೀವು ಖರ್ಚು ವೆಚ್ಚಗಳ ನಡುವೆ ಸಮತೋಲನ ಕಾಪಾಡಿದರೆ ಒಳ್ಳೆಯದು, ಬಜೆಟ್ ಮೀರಿ ಖರ್ಚು ಮಾಡಬೇಡಿ. ವೃತ್ತಿ ಜೀವನದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ನೀವು ಕೆಲಸ ಕಾರ್ಯದ ಕಡೆಗೆ ಗಮನಹರಿಸಬೇಕು, ನೀವು ವೃತ್ತಿ ಸಂಬಂಧಿತ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ, ಅನುಭವಿಗಳ ಸಲಹೆ ಕೇಳಿ. ಕೆಲಸ ಕಾರ್ಯದಲ್ಲಿಈ ದಿನ ಉತ್ತಮವಾಗಿದೆ, ಆರ್ಥಿಕ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಯಾವುದೇ ಒತ್ತಡವಿರಲ್ಲ, ಕೆಲಸ ಕಾರ್ಯಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುವುದು, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ತುಂಬಾ ಚೆನ್ನಾಗಿರಲಿದೆ, ನೀವು ಬೇರೆ ಕಡೆ ಸಂದರ್ಶನ ನೀಡಿದ್ದರೆ ಅದಕ್ಕೆ ಸಂಬಂಧಿಸಿದಂತೆ ಖುಷಿಯ ಸುದ್ದಿ ದೊರೆಯಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ಸ್ವಲ್ಪ ಜಾಗ್ರತೆವಹಿಸಬೇಕು. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ, ಕೆಲಸದ ಕಾರಣಕ್ಕೆ ಮಾನಸಿಕ ಒತ್ತಡ ಹೆಚ್ಚಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಕುಂಭ ರಾಶಿ
ಈ ದಿನ ನಿಮಗೆ ಮಿಶ್ರಫಲ. ವ್ಯಾಪಾರದಲ್ಲಿ ಧನ ಲಾಭವಾಗಲಿದೆ. ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ನಿಮಗೆ ಬರಬೇಕಾಗಿರುವ ಹಣ ನಿಮ್ಮ ಕೈ ಸೇರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವೃತ್ತಿ ಜೀವನದ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳು ವ್ಯಾಪಾರದ ಕಡೆಗೆ ಗಮನಹರಿಸಬೇಕು. ಕುಟುಂಬ ಜವಾಬ್ದಾರಿ ನಿಭಾಯಿಸುವಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications