Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಡಿಸೆಂಬರ್ 12 ದಿನ ಭವಿಷ್ಯ: ಈ ದಿನ ಮೇಷ ರಾಶಿಗೆ ಶುಭ, ಉಳಿದ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಈ ದಿನ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನೀವು ನಿಮ್ಮ ಕೆಲಸದ ಕಡೆಗೆ ಗಮನಹರಿಸಬೇಕು. ವಿದ್ಯಾರ್ಥಿಗಳು ಕೂಡ ಅಷ್ಟೇ ಈ ಅವಧಿಯಲ್ಲಿ ನೀವು ಓದಿನ ಕಡೆಗೆ ಗಮನಹರಿಸಿ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಮನೆಯ ವಾತಾವರಣ ಇರಲಿದೆ.

ವೃಷಭ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿಎ, ಎಲ್ಲಾ ಕೆಲಸ ಕಾರ್ಯಗಳುನಿಮ್ಮ ಯೋಜನೆಯಂತೆ ಪೂರ್ಣಗೊಳ್ಳಲಿದೆ, ಇನ್ನು ಈ ದಿನ ಹೂಡಿಕೆಗೂ ಉತ್ತಮವಾಗಿದೆ, ಈ ದಿನ ಮನೆ ಯ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ದಿನ ನೀವು ಜಾಗ್ರತೆವಹಿಸಬೇಕು, ಈ ದಿನ ಯಾವುದೇ ಹಣದ ವ್ಯವಹಾರ ಮಾಡಲು ಹೋಗಬೇಡಿ. ಇನ್ನು ಕೆಲವು ಕಾರಣಗಳಿಗೆ ಈ ದಿನ ನಿಮಗೆ ಕೋಪ ಬರಬಹುದು, ಆದರೆ ಕೋಪದಿಂದ ಆಡುವ ಮಾತುಗಳ ಕಡೆಗೆ ಗಮನಹರಿಸಿ.
ಕರ್ಕ ರಾಶಿ
ಈ ದಿನ ನೀವು ನಿಮ್ಮ ಕೆಲಸ ಕಾರ್ಯವನ್ನು ಜಾಗ್ರತೆಯಿಂದ ಮಾಡಿ, ಅಲ್ಲದೆ ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಈ ಅವಧಿ ನಿಮಗೆ ತುಂಬಾನೇ ಉತ್ತಮವಾಗಿರಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ನೀವು ಜಾಗ್ರತೆವಹಿಸಬೇಕು, ಯಾರ ಬಗ್ಗೆಯೂ ಗಾಸಿಪ್ ಮಾತನಾಡಬೇಡಿ, ಕುಟುಂಬದ ಸಮಸ್ಯೆ ಹೊರಗಿನವರ ಜೊತೆ ಹಂಚಿಕೊಳ್ಳಬೇಡಿ.
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳಲ್ಲಿ ನಿಮಗೆ ಈ ದಿನ ಅನುಕೂಲಕರವಾಗಿದೆ, ಈ ದಿನ ಹಣದ ಖರ್ಚು ಅಧಿಕವಿರಲಿದೆ, ಮನೆಯ ವಾತಾವರಣ ತುಂಬಾ ಸಂತೋಷದಿಂದ ಕೂಡಿರಲಿದೆ. ಸಂಗಾತಿಯ ಜೊತೆ ಚಿಕ್ಕ ವಿಷಯಕ್ಕೆ ಭಿನ್ನಾಭಿಪ್ರಾಯ ಬಂದರೆ ವಿಷಯವನ್ನು ದೊಡ್ಡದು ಮಾಡಲು ಹೋಗಬೇಡಿ.
ತುಲಾ ರಾಶಿ
ಈ ದಿನ ನೀವು ಪ್ರಮುಖ ಕಾರ್ಯವನ್ನು ಜಾಗ್ರತೆಯಿಂದ ಮಾಡಬೇಕು. ನಿಮಗೆ ಮನೆಯ ಹಿರಿಯರು ನೀಡಿರು ಸಲಹೆ ನಿರ್ಲಕ್ಷ್ಯ ಮಾಡಬೇಡಿ. ಈ ದಿನ ವಾಹನವನ್ನು ಚಲಾಯಿಸುವಾಗ ಜಾಗ್ರತೆವಹಿಸಿ, ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ.
ವೃಶ್ಚಿಕ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ಈ ದಿನ ಯಾವುದೇ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ. ವೈವಾಹಿಕ ಜೀವನದ ಕಡೆಗೆ ಗಮನಹರಿಸಿ, ನಿಮ್ಮ ನಡುವೆ ಕೆಲ ಭಿನ್ನಾಭಿಪ್ರಾಯದ ಸಾಧ್ಯತೆ ಇದೆ. ಆಸ್ತಿ ವ್ಯವಹಾರಮಾಡುವುದಾದರೆ ಈ ದಿನ ಉತ್ತಮವಾಗಿರಲಿದೆ.
ಧನು ರಾಶಿ
ಈ ದಿನ ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ, ಅಲ್ಲದೆ ಈ ದಿನ ನೀವು ಹಣಕ್ಕೆ ಸಂಬಂಧಿಸಿದ ವ್ಯವಹಾರ ಮಾಡಲು ಹೋಗಬೇಡಿ, ಕೆಲಸದಲ್ಲಿ ಹೆಚ್ಚು ಒತ್ತಡವಿರಲಿದೆ, ಇದರಿಂದ ಹೆಚ್ಚು ಆಯಾಸ ಉಂಟಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಈ ದಿನ ಸಂತೋಷದಿಂದ ಕಳೆಯಲು ಸಾಧ್ಯವಾಗುವುದು, ಹಣದ ಹೂಡಿಕೆ ಬಗ್ಗೆ ಜಾಗ್ರತೆ ಮಾಡಿ, ನಿಮ್ಮ ಕೆಲಸವನ್ನು ಸಮಯಕ್ಕೆ ಮಾಡಿ ಮುಗಿಸಲು ಪ್ರಯತ್ನಿಸಿ.
ಕುಂಭ ರಾಶಿ
ಈ ದಿನ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ,ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ನಿಮ್ಮ ಕೆಲಸವು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಸಂಬಂಧದ ಕಡೆಗೆ ಗಮನಹರಿಸಿ, ಚಿಕ್ಕ ವಿಷಯ ದೊಡ್ಡದು ಮಾಡಲು ಹೋಗಬೇಡಿ, ಮನೆಯ ವಾತಾವರಣ ಹಾಳಾಗಬಹುದು, ಎಲ್ಲಾ ಸಮಸ್ಯೆಗೆ ತಾಳ್ಮೆ ದೊಡ್ಡ ಪರಿಹಾರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
