Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
December 13 Horoscope: ಶನಿವಾರ ಯಾರಿಗೆಲ್ಲಾ ಅಪರೂಪದ ಶುಭ!
ವೈದಿಕ ಶಾಸ್ತ್ರದ ಪ್ರಕಾರ ಡಿಸೆಂಬರ್ 13 (December 13 Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿ ಜನರಿಗೆ ಇಂದು ಬಹಳ ಅನುಕೂಲವಿದೆ. ನಿಮ್ಮ ಹಣಕಾಸು ಪರಿಸ್ಥಿತಿಯು ಸುಧಾರಿಸಲಿದೆ. ಬಹಳ ದೀರ್ಘಕಾಲದಿಂದ ನಿಮಗೆ ಬರಬೇಕಿದ್ದ ಹಣಕಾಸು ವಿಚಾರದಲ್ಲಿ ಶುಭ ಫಲಿತಾಂಶ ನೋಡಬಹುದು. ಆಸ್ತಿ ವಿಚಾರಗಳಲ್ಲಿ ಲಾಭವಿದೆ.
ವೃಷಭ ರಾಶಿ
ವೃಷಭ ರಾಶಿ ಜನರು ಇಂದು ಶ್ರಮದಾಯಕ ಕೆಲಸಗಳಲ್ಲಿ ಭಾಗಿಯಾಗಬಹುದು. ಕೆಲಸದ ಸ್ಥಳದಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಿ. ಸರ್ಕಾರಿ ಕೆಲಸಗಳಲ್ಲಿ ಒತ್ತಡ ಇರಲಿದೆ. ಅವಿವಾಹಿತ ಮಹಿಳೆಯರಲ್ಲಿ ಖರ್ಚು ಹೆಚ್ಚಾಗಲಿದೆ. ಸಭೆ ಸಮಾರಂಭದಲ್ಲಿ ನೀವು ಭಾಗಿಯಾಗಬಹುದು. ಸಂಜೆ ಸಮಯದಲ್ಲಿ ನಿಮ್ಮ ಖರ್ಚು ಹೆಚ್ಚಾಗಬಹುದು.

ಮಿಥುನ ರಾಶಿ
ಮಿಥುನ ರಾಶಿ ಜನರಿಗೆ ಇಂದು ದೊಡ್ಡ ಮಟ್ಟದ ಲಾಭವಿದೆ. ನಿಮಗೆ ಹಣಕಾಸಿನ ವಿಚಾರದಲ್ಲಿ ಶುಭವಿದೆ. ಆರೋಗ್ಯ ವಿಚಾರವಾಗಿ ಇದ್ದಂತಹ ಸಮಸ್ಯೆ ತಾತ್ಕಾಲಿಕವಾಗಿ ನಿವಾರಣೆಯಾಗಲಿದೆ. ಮಕ್ಕಳ ಕುರಿತ ವಿಚಾರವಾಗಿ ಪ್ರಯಾಣ ಮಾಡುವಿರಿ.
ಕರ್ಕ ರಾಶಿ
ಕರ್ಕ ರಾಶಿ ಜನರಿಗೆ ಇಂದು ಮಿಶ್ರ ಫಲವಿದೆ. ಗೃಹಿಣಿಯರಲ್ಲಿ ಈ ದಿನ ಸಂತಸದ ದಿನ ಆಗಿರಲಿದೆ. ಮಕ್ಕಳ ಭವಿಷ್ಯದ ಕುರಿತ ಚಿಂತೆ ದೂರಾಗಬಹುದು. ವ್ಯವಹಾರಗಳಲ್ಲಿ ಮುಂದುವರೆಯುವಾಗ ಎಚ್ಚರಿಕೆ ಇಡಿ. ಬಹಳ ಖರ್ಚು ಮಾಡಬೇಕಾದ ದಿನವಾಗಬಹುದು. ಶಾಪಿಂಗ್ ವಿಚಾರವಾಗಿ ದುಡುಕಬೇಡಿ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಸಮಸ್ಯೆಗಳಿವೆ. ಇಂದು ನಿಮ್ಮ ಕೆಲಸ ಸಂಬಂಧಿತ ವಿಚಾರದಲ್ಲಿ ದೊಡ್ಡ ಸಮಸ್ಯೆಗಳ ಎದುರಿಸಬಹುದು. ಯಾರಿಂದಾದರು ಹಣ ಪಡೆದಿದ್ದರೆ ಅಥವಾ ಸಾಲ ಮಾಡಿದ್ದರೆ ಮರಳಿ ನೀಡಬೇಕಾಗಬಹುದು. ವ್ಯಾಪಾರಿಗಳಿಗೆ ಇಂದು ಉತ್ತಮ ಲಾಭದ ದಿನ. ಮನೆಯ ಹಿರಿಯರ ಆರೋಗ್ಯದ ವಿಚಾರವಾಗಿ ನಿರ್ಲಕ್ಷ್ಯ ಮಾಡಬೇಡಿ.
ಕನ್ಯಾ ರಾಶಿ
ಕನ್ಯಾ ರಾಶಿ ಜನರಿಗೆ ಇಂದು ಬಹಳ ಉತ್ತಮವಾಗಿರಲಿದೆ. ಹಣಕಾಸಿನ ವಿಚಾರವಾಗಿ ಇಂದು ಬಹಳ ಉತ್ತಮ ದಿನ. ನಿಮ್ಮ ಬಹಳ ದಿನಗಳ ನಂತರ ನಿಮ್ಮ ಪ್ರಯಾಣಗಳಲ್ಲಿ ಶುಭವಾಗಲಿದೆ. ದಾಂಪತ್ಯ, ಹಾಗೂ ಕೌಟುಂಬಿಕ ಜೀವನ ಸಂತಸದಿಂದ ಕೂಡಿರಲಿದೆ. ವ್ಯಾಪಾರ ವಿಚಾರದಲ್ಲಿ ನಿಮಗೆ ಶುಭವಿದೆ.
ತುಲಾ ರಾಶಿ
ತುಲಾ ರಾಶಿಯ ಜನರಿಗೆ ಇಂದು ಪ್ರಯಾಣಗಳ ಮಾಡಬೇಕಾದ ದಿನವಾಗುತ್ತಿದೆ. ನಿಮ್ಮ ಕೆಲಸಗಳಲ್ಲಿ ದೊಡ್ಡ ಮಟ್ಟದ ಶುಭವಾಗುತ್ತಿದೆ. ಹಲವು ದಿನದ ಹಣಕಾಸು ಸಮಸ್ಯೆಯಿಂದ ಪರಿಹಾರ ಸಾಧ್ಯತೆ ಇದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿ ಜನರಿಗೆ ಇಂದು ಬಹಳ ಅನುಕೂಲವಿದೆ. ನಿಮ್ಮ ದಾಂಪತ್ಯ ವಿಚಾರವಾಗಿ ಮಧುರ ದಿನ. ನಿಮಗಾಗಿ ದೊಡ್ಡ ಶುಭ ಸುದ್ದಿಯಂದನ್ನು ಕೇಳಬಹುದು. ಪ್ರೀತಿಯ ವಿಚಾರವಾಗಿಯೂ ಶುಭದಿನ. ಯಾರೊಂದಿಗಾದರು ಹಣಕಾಸು ಮನಸ್ತಾಪಗಳಿದ್ದರೆ ಬಗೆಹರಿಸಿಕೊಳ್ಳಿ.
ಧನು ರಾಶಿ
ಧನು ರಾಶಿಯವರು ಇಂದು ನಿಮ್ಮ ಆದಾಯದಷ್ಟೇ ಖರ್ಚು ಕೂಡ ಇರಲಿದೆ. ನಿಮ್ಮ ಆಪ್ತರಿಂದ ಉಂಟಾಗಿರುವ ಸಮಸ್ಯೆಯೊಂದು ಬಗೆಹರಿಯಬಹುದು. ಪ್ರಯಾಣ ಮಾಡಬೇಕಾಗಬಹುದು. ಹಣಕಾಸು ವಿಚಾರದಲ್ಲಿ ಎಚ್ಚರಿಕೆಯಿಂದ ವ್ಯವಹಾರಗಳ ಮಾಡುವುದು ಉತ್ತಮ.
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ಸಕಲ ಪ್ರಯತ್ನಗಳು ಲಾಭ ಅಥವಾ ಶುಭ ತರಬಹುದು. ನವವಿವಾಹಿತರಿಗೆ ಈ ದಿನ ಅನುಕೂಲಕರವಾಗಿರಲಿದೆ. ಸೂಕ್ತ ಕೆಲಸಕ್ಕೆ ಹುಡುಕುತ್ತಿದ್ದವರಿಗೆ ಶುಭಫಲವಿದೆ. ವಿವಾಹಿತರು ಮನೆಗಾಗಿ ಖರ್ಚು ಮಾಡಬೇಕಾಗಿ ಬರಬಹುದು. ಮಹಿಳೆಯರು ವಾಹನ ವಿಚಾರವಾಗಿ ಎಚ್ಚರಿಕೆ ವಹಿಸಬೇಕಿದೆ.
ಕುಂಭ ರಾಶಿ
ಕುಂಭ ರಾಶಿ ಜನರಿಗೆ ಇಂದು ಸವಾಲುಗಳಿವೆ. ನೀವು ಅಂದುಕೊಂಡ ಕೆಲಸ ಅಥವಾ ವಿಚಾರ ನಡೆಯದೆ ಇರಬಹುದು. ಮನೆಯ ನವೀಕರಣ ಸಂಬಂಧ, ಅಲಂಕಾರಿಕ ವಸ್ತು ಖರೀದಿ ವಿಚಾರದಲ್ಲಿ ಖರ್ಚು ಇರಬಹುದು.
ಮೀನ ರಾಶಿ
ಕೆಲವು ಪ್ರಯಾಣಗಳು ನಿಮ್ಮಲ್ಲಿ ಲಾಭಕ್ಕೆ ಕಾರಣವಾಗಬಹುದು. ಅಪೂರ್ಣವಾಗಿರುವ ಕೆಲಸಗಳನ್ನು ಪೂರ್ಣ ಮಾಡುವಿರಿ. ಆರೋಗ್ಯದಲ್ಲಿ ಏರುಪೇರು ಸಂಭವ. ನಿಮ್ಮ ಹಳೆಯ ಕೌಟುಂಬಿಕ ಸಮಸ್ಯೆಯೊಂದು ಮತ್ತೆ ತಲೆನೋವಿಗೆ ಕಾರಣವಾಗಬಹುದು.



Click it and Unblock the Notifications