Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಡಿಸೆಂಬರ್ 15 ದಿನ ಭವಿಷ್ಯ: ಈ ದಿನ ನಿಮ್ಮ ರಾಶಿಯಲ್ಲಿ ಯಾವ ಫಲವಿದೆ ನೋಡಿ..!
ಜ್ಯೋತಿಷ್ಯ ಪ್ರಕಾರ ಡಿಸೆಂಬರ್ 15 ದ್ವಾದಶ ರಾಶಿಗಳಿಗೆ ಹೇಗಿರಲಿದೆ, ನೋಡೋಣ:
ಮೇಷ ರಾಶಿ
ವೃತ್ತಿಪರ ಜೀವನದಲ್ಲಿ ತೊಂದರೆಗಳನ್ನು ಎದುರಿಸಬಹುದು. ಬಾಕಿಯಿರುವ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು, ಆರ್ಥಿಕವಾಗಿಯೂ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ವೈವಾಹಿಕ ಬದುಕು, ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸುವುದು ಮುಖ್ಯ.

ವೃಷಭ ರಾಶಿ
ಇಂದು ನೀವು ಯಾವುದೇ ನಿರ್ಧಾರವಾದರು ಸರಿ ಆತುರದಿಂದ ತೆಗದುಕೊಳ್ಳಬೇಡಿ. ಒಂದಿಷ್ಟು ಮಾತುಗಳನ್ನು ನೀವು ಕೇಳಬೇಕಾಗಿ ಬರಬಹುದು. ಇನ್ನು ಮನೆಯಲ್ಲಿ ಹೆಚ್ಚು ಕೋಪದಿಂದ ವರ್ತಿಸಬೇಡಿ. ನಿಮ್ಮ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಿ. ಪ್ರಯಾಣ ಮಾಡಬೇಕಾಗಿ ಬರಬಹುದು.
ಮಿಥುನ ರಾಶಿ
ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಆರ್ಥಿಕ ಸಮಸ್ಯೆ ದೂರಾಗಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಮನೆಯಲ್ಲಿನ ಮಸಸ್ಯೆ ಬಗೆಹರಿಯುವ ಸೂಚನೆಯಿದೆ. ಕುಟುಂಬದಲ್ಲಿ ಹಿರಿಯ ಸದಸ್ಯರಿದ್ದರೆ ಅವರ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ. ಎಲ್ಲಾ ಕಡೆಗಳಿಂದ ನಿಮಗೆ ಲಾಭವಾಗುವ ಸೂಚನೆ ಇದೆ.
ಕರ್ಕ ರಾಶಿ
ಇಂದು ನಿಮ್ಮ ಒತ್ತಡ ನಿವಾರಣೆಯಾಗಲಿದೆ, ಬಹುದಿನಗಳ ಸಮಸ್ಯೆಯೊಂದು ದೂರಾಗಲಿದೆ. ಮನೆಯಲ್ಲಿ ಶುಭ ಕಾರ್ಯ ನಡೆಯುವ ಸಾಧ್ಯತೆ ಇರಲಿದೆ. ಕೆಲಸದ ಜಾಗದಲ್ಲಿ ಕೋಪ ನಿಯಂತ್ರಿಸಿದರೆ ಒಳ್ಳೆಯದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಹಣ ಖರ್ಚು ಮಾಡಬೇಡಿ.
ಸಿಂಹ ರಾಶಿ
ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದಾದರೆ ಚೆನ್ನಾಗಿ ಯೋಚಿಸಿ ತೆಗೆದುಕೊಳ್ಳಿ. ನಿಮಗೆ ಹೆಚ್ಚಿನ ಜವಾಬ್ದಾರಿಗಳು ಬರಲಿದೆ. ಪ್ರೀತಿ, ಪ್ರೇಮದಲ್ಲಿರುವವರು ಮತ್ತೊಬ್ಬರ ಮನಸ್ಸು ಗೆಲ್ಲಲಿದ್ದಾರೆ. ಆರ್ಥಿಕವಾಗಿಯೂ ಇಂದು ಉತ್ತಮ ದಿನವಾಗಲಿದೆ. ನಿಮ್ಮ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಕನ್ಯಾ ರಾಶಿ
ಇಂದು ನೀವು ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ವ್ಯಾಪಾರಿಗಳಿಗೆ ಈ ಸಮಯದಲ್ಲಿ ಲಾಭ ಗಳಿಸಲು ಸಾಧ್ಯವಾಗುವುದು. ನಿಮ್ಮ ವೈಯಕ್ತಿಕ ಜೀವನದಲ್ಲಿ ಅಡೆತಡೆಗಳಿದ್ದರೆ ಅದೆಲ್ಲಾ ನಿವಾರಣೆಯಾಗಬಹುದು. ಹೊದ ಕಾರ್ಯಗಳಿಗೆ ನೀವು ಹೊಂದಿಕೊಳ್ಳಬೇಕಾಗುತ್ತದೆ. ಕೆಲಸದಿಂದಾಗಿ ಒಂದಿಷ್ಟು ಅನಾರೋಗ್ಯಕ್ಕೆ ತುತ್ತಾಗಬಹುದು.
ತುಲಾ ರಾಶಿ
ಹೆಚ್ಚಿನ ಕೆಲಸದ ಹೊರೆಯಿಂದ ನೀವು ಸಮಸ್ಯೆಗಳನ್ನು ಎದುರಿಸಬಹುದು. ಆದ್ರೆ ಈ ಚಿಂತೆಗಳು ಶೀಘ್ರವೆ ದೂರಾಗಲಿದೆ. ವ್ಯಾಪಾರವನ್ನು ವಿಸ್ತರಿಸುವ ಯೋಜನೆಗಳು ಕಾರ್ಯರೂಪಕ್ಕೆ ಬರಬಹುದು. ಸಂಗಾತಿ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ.
ವೃಶ್ಚಿಕ ರಾಶಿ
ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿದ್ದರೆ ಸುಧಾರಣೆ ಕಂಡು ಬರುವುದು. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ನಿಮ್ಮ ಸಂಪೂರ್ಣ ಗಮನವು ನಿಮ್ಮ ಕೆಲಸದ ಮೇಲೆ ಇರುತ್ತದೆ. ದೂರ ಪ್ರಯಾಣದ ಸಾಧ್ಯತೆಗಳಿವೆ. ನಿಮ್ಮ ಪ್ರೀತಿ ಪಾತ್ರರಲ್ಲಿ ಹೆಚ್ಚು ಮಾತನಾಡಿ ಮನಸ್ಥಾಪಗಳ ಬಗೆಹರಿಸಿಕೊಳ್ಳಿ.
ಧನು ರಾಶಿ
ಈ ದಿನ ಅತಿಯಾಗಿ ಕೋಪಗೊಳ್ಳಬೇಡಿ, ಅನಗತ್ಯವಾಗಿ ಯಾರೊಂದಿಗೂ ಹೆಚ್ಚು ಮಾತಿಗೆ ಇಳಿಯಬೇಡಿ. ಹಣದ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯವಾಗಿ ತೆಗೆದುಕೊಳ್ಳಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ.
ಮಕರ ರಾಶಿ
ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ.ವೈವಾಹಿಕ ಜೀವನ ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ಹಾಗೆ ನಿಮ್ಮ ಸಂಬಂಧಗಳು ಮತ್ತಷ್ಟು ಗಟ್ಟಿಯಾಗಲಿದೆ.
ಕುಂಭ ರಾಶಿ
ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಲು ದಿನವು ಸೂಕ್ತವಲ್ಲ. ನಿಮ್ಮ ಆರೋಗ್ಯದ ಕಡೆಗೆ ಗಮನವಿಡುವುದು ಮುಖ್ಯ. ಹಳೆಯ ಕೆಲವು ಘಟನೆಗಳಿಂದ ನಿಮಗೆ ಮತ್ತೆ ತೊಂದರೆ ಆಗಬಹುದು. ದೇವಾಲಯ ಭೇಟಿಯ ಸಾಧ್ಯತೆ ಇದೆ. ಕಣ್ಣು, ಮೂಗು, ಮೂಳೆಗೆ ಸಂಬಂಧಿಸಿದ ಸಮಸ್ಯೆಗಳ ಹೊಂದಿದ್ದರೆ ಎಚ್ಚರಿಕೆ ಅಗತ್ಯ.
ಮೀನ ರಾಶಿ
ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಅವಿವಾಹಿತರಿಗೆ ಶುಭ ಸುದ್ದಿ ಕೇಳಬಹುದು. ದಿನದ ಅಂತ್ಯದಲ್ಲಿ ಧನ ಲಾಭದ ಸುದ್ದಿ ಕೇಳುತ್ತೀರಿ. ಪಾಲುದಾರಿಕೆ ವ್ಯವಹಾರ, ರಿಯಲ್ ಎಸ್ಟೇಟ್, ಹೋಟೆಲ್ ಉದ್ಯಮಿಗಳಿಗೆ ಒಳ್ಳೆಯ ದಿನವಾಗಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











