Latest Updates
-
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ!
ಡಿಸೆಂಬರ್ ತಿಂಗಳ ಭವಿಷ್ಯ: ವರ್ಷದ ಕೊನೆಯ ತಿಂಗಳು ಈ 4 ರಾಶಿಯವರಿಗೆ ತುಂಬಾ ಚೆನ್ನಾಗಿರಲಿದೆ
ಡಿಸೆಂಬರ್ ಮಾಸ ತುಂಬಾ ವಿಶೇಷವಾದ ತಿಂಗಳು ಅನಿಸಲಾರಂಭಿಸುತ್ತದೆ, ಏಕೆಂದರೆ ವರ್ಷದ ಕೊನೆಯ ತಿಂಗಳು, ಈ ವರ್ಷ ಮಗೀತಾ ಬಂತಲ್ಲಾ ಎಂಬ ಎಮೋಷನಲ್ ಫೀಲಿಂಗ್ ಆದರೆ ಹೊಸ ವರ್ಷ ಬರ್ತಾ ಇದೆಯಲ್ಲಾ ಎಂಬ ಸಂಂಭ್ರಮವೂ ಕೂಡ ಇರುತ್ತದೆ. ಜ್ಯೋತಿಷ್ಯ ಪ್ರಕಾರ 2024ರ ಡಿಸೆಂಬರ್ ಮಾಸದ ಭವಿಷ್ಯ ಪ್ರಕಾರ ಈ 4 ರಾಶಿಗಳಿಗೆ ಅದ್ಭುತವಾಗಿರಲಿದೆ:

ಮೇಷ ರಾಶಿ
ಮೇಷ ರಾಶಿಯವರಿಗೆ ಉದ್ಯೋಗದ ದೃಷ್ಟಿಯಿಂದ ಈ ವಾರ ಅದ್ಭುತವಾಗಿರಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯಲು ಸಾಧ್ಯವಾಗುವುದು. ವ್ಯಾಪಾರಸ್ಥರಿಗೆ ಈ ಮಾಸ ಲಾಭ ದೊರೆಯಲಿದೆ. ಆರ್ಥಿಕ ಜೀವನದಲ್ಲಿ ಪ್ರಗತಿ ಪಡೆಯುತ್ತೀರಿ. ಇನ್ನು ಹೊಸ ಉದ್ಯೋಗಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಮಾಸ ನೀವು ಶುಭ ಸುದ್ದಿ ಪಡೆಯುತ್ತೀರಿ. ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ಆದರೆ ನೀವು ಹಿರಿಯರು ನೀಡಿರುವ ಸಲಹೆಯನ್ನು ನಿರ್ಲಕ್ಷ್ಯ ಮಾಡಬೇಡಿ.
ಕುಟುಂಬ ಜೀವನ ಚೆನ್ನಾಗಿರಲಿದೆ, ಆದರೆ ಅಹಂ ಹಾಗೂ ಅಹಂಕಾರದ ವರ್ತನೆ ಸಂಬಂಧದಲ್ಲಿ ಸಮಸ್ಯೆ ತರಬಹುದು, ಹಾಗಾಗಿ ಈ ಬಗ್ಗೆ ತುಂಬಾನೇ ಜಾಗ್ರತೆವಹಿಸಬೇಕು. ಇಷ್ಟು ಮಾಡಿದರೆ ಡಿಸೆಂಬರ್ ಮಾಸ ನಿಮಗೆ ಅದ್ಭುತವಾಗಿರಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ಮಾಸ ಅದ್ಭುತವಾಗಿರಲಿದೆ, ನೀವು ಅವಧಿಯಲ್ಲಿ ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ ಅಥವಾ ಉದ್ಯೋಗ ಬದಲಾವಣೆಯ ಬಗ್ಗೆ ಆಲೋಚಿಸುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯುತ್ತೀರಿ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಹಲವು ಉದ್ಯೋಗ ಅವಕಾಶಗಳು ಕೂಡ ದೊರೆಯಲಿದೆ.
ಕುಟುಂಬದಲ್ಲಿ ಸಂತೋಚದ ವಾತಾವರಣ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ವಾರ ಉತ್ತಮವಾಗಿರಲಿದೆ.
ತುಲಾ ರಾಶಿ
ಡಿಸೆಂಬರ್ ಮಾಸ ನಿಮಗೆ ಅನುಕೂಲಕರವಾಗಿರಲಿದೆ. ನಿಮ್ಮೆಲ್ಲಾ ಕೆಲಸ ಕಾರ್ಯವನ್ನು ಸುಲಭವಾಗಿ ಮುಗಿಸಲು ಸಾಧ್ಯವಾಗುವುದು. ಇನ್ನು ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಹೊಸ ವರ್ಷದಲ್ಲಿ ಮತ್ತಷ್ಟು ಪ್ರಯೋಜನ ಪಡೆಯುತ್ತೀರಿ. ಆರ್ಥಿಕ ಜೀವನ ತುಂಬಾ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಉಳಿತಾಯ ಮಾಡಲು ಸಾಧ್ಯವಾಗುವುದು. ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ.
ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ,ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
ಮೀನ ರಾಶಿ
ಗ್ರಹಗಳ ಸ್ಥಾನವೂ ಮೀನ ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ. ವ್ಯಾಪಾರಿಗಳು, ಉದ್ಯಮಿಗಳು ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ವೃತ್ತಿ ಸಂಬಂಧಿತ ಸಮಸ್ಯೆ ಬಗೆಹರಿಯಲಿದೆ. ಆರ್ಥಿಕ ಸ್ಥಿತಿಗತಿ ತುಂಬಾ ಚೆನ್ನಾಗಿರಲಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ಡಿಸೆಂಬರ್ ಮಾಸ ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿರಲಿದೆ.
ವೃತ್ತಿ ಬದುಕಿನಲ್ಲಿ ಸವಾಲುಗಳಿದ್ದರೆ ಅದು ದೂರಾಗಲಿದೆ. ವೃತ್ತಿ ಬದುಕಿನಲ್ಲಿ ಸ್ಥಿರತೆ ಕಂಡು ಬರಲಿದೆ, ಹೊಸ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡುತ್ತಿದ್ದರೆ ಅದರಲ್ಲಿ ಯಶಸ್ಸು ಪಡೆಯುತ್ತೀರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications